ಕಾರ್ಕಳ : ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದ ದನ ಕಳ್ಳತನ ಪ್ರಕರಣದ ಆರೋಪಿ ಕುಕ್ಕುಂದೂರು ಜಯಂತಿ ನಗರ ನಾಲ್ಕನೇ ಕ್ರಾಸ್‌ನ ನಿವಾಸಿ ಮೊಹಮ್ಮದ್ ರಫೀಕ್ (33) ಎಂಬಾತನನ್ನು ಕಾರ್ಕಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2021ರಲ್ಲಿ ವಿದೇಶಕ್ಕೆ ಪಲಾಯನ ಮಾಡಿದ್ದ ರಫೀಕ್ ವಿರುದ್ಧ ನ್ಯಾಯಾಲಯ ಬಂಧನ ವಾರಂಟ್ ಜಾರಿ ಮಾಡಿತ್ತು. ಇತ್ತೀಚೆಗೆ ಈತವಿದೇಶದಿಂದ ಬಂದಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸ್ ನಿರೀಕ್ಷಕ ನಾಗೇಶ್ ಕೆ. ಹಾಗೂ ಉಪನಿರೀಕ್ಷಕಧನಂಜಯ್ ಮತ್ತು ಲೋಲಾಕ್ಷ ಅವರ ಮಾರ್ಗದರ್ಶನದಲ್ಲಿ ಕಾರ್ಕಳ ನಗರ ಠಾಣೆ ಸಿಬ್ಬಂದಿ ರಮೇಶ್ ಹಾಗೂ ವಿಶ್ವಜಿತ್ ಬ್ರಹ್ಮಾವರಪೊಲೀಸರ ಸಹಾಯದೊಂದಿಗೆ ಬ್ರಹ್ಮಾವರ ಬೈಕಾಡಿಯಿಂದ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ 14ದಿನಗಳವರೆಗೆ ನ್ಯಾಯಾಂಗ ಬಂಧಿನ ವಿಧಿಸಿದೆ.ರಫೀಕ್ ವಿರುದ್ಧ ಹೆಬ್ರಿ ಠಾಣೆಯಲ್ಲಿ 1, ಬಜ್ಪೆ ಠಾಣೆಯಲ್ಲಿ 2 ದನ ಕಳ್ಳತನ ಪ್ರಕರಣ ಹಾಗೂ ಚಿಕ್ಕಮಗಳೂರಿನ ಲಿಂಗದಹಳ್ಳಿ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.
Author: main-admin
ಶಿರ್ವ : ಕಾರು ಡಿಕ್ಕಿ ಹೊಡೆದು ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳ್ಳೆ ಗ್ರಾಮದ ಪಾಜಕ ಕ್ಷೇತ್ರದ ದ್ವಾರದ ಬಳಿ ಸಂಭವಿಸಿದೆ. ಮೃತ ಮಹಿಳೆಯನ್ನು ಸುರೇಶ್ ಎಂಬವರ ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಆಗ್ನೇಸ್ ನೊರೊನ್ಹಾ (76) ಎಂದು ಗುರುತಿಸಲಾಗಿದೆ. ಆಗ್ನೇಸ್ ನೊರೊನ್ಹಾ ತಮ್ಮ ಅಕ್ಕನ ಮಗಳಾದ ಜೆಸಿಂತಾ ಮೆನೇಜಸ್ ಅವರೊಂದಿಗೆ ಪಡುಬೆಳ್ಳೆಯಿಂದ ಸುಬಾಸ್ ನಗರಕ್ಕೆ ಹೋಗುತ್ತಿರುವಾಗ ಎದುರಿನಿಂದ ಪಡುಬೆಳ್ಳೆ ಕಡೆಗೆ ಹೋಗುತ್ತಿದ್ದ ಕಾರಿನ ಚಾಲಕ ಮನೋಜ್ ಎಂಬಾತ ವಾಹನವನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಕಾರನ್ನು ಚಲಾಯಿಸಿಕೊಂಡು ಬಂದು ಬೆಳ್ಳೆ ಗ್ರಾಮದ ಪಾಜಕ ಕ್ಷೇತ್ರದ ದ್ವಾರದ ಬಳಿ ಅಟೋ ರಿಕ್ಷಾಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಆಗ್ನೇಸ್ ನೊರೊನ್ಹಾ ರಿಕ್ಷಾದಿಂದ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ಉಡುಪಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಇತರೆ ಪ್ರಯಾಣಿಕರೂ ಹಾಗೂ ಚಾಲಕ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಈ ಬಗ್ಗೆ ಶಿರ್ವಾ ಪೊಲೀಸ್ ಠಾಣೆಯಲ್ಲಿ…
ಉಪ್ಪಿನಂಗಡಿ: ಸೈಬರ್ ಕ್ರೈಮ್ ನಡಿ ಹಲವು ವಂಚನಾ ಜಾಲ ಕಾರ್ಯಾಚರಿಸುತ್ತಿದೆ. ಈಗ ‘ಮೀಶೋ’ ಹೆಸರಲ್ಲಿ ವಂಚನಾ ಜಾಲವೊಂದು ಇದೇ ಗುಂಪಿಗೆ ಸೇರಿಕೊಂಡಿದೆ. ಈ ಜಾಲವು ಈಗ ಉಪ್ಪಿನಂಗಡಿ ಸಮೀಪದ 34 ನೆಕ್ಕಿಲಾಡಿ ನಿವಾಸಿ, ಉದ್ಯಮಿ ಜಿ.ಎಂ. ಮುಸ್ತಾಫ ಅವರಿಗೂ ಜಾಲ ಬೀಸಿದೆ. ಆದರೆ ಅವರು ಜಾಗೃತರಾಗಿದ್ದರಿಂದಾಗಿ ಅಪಾಯದಿಂದ ತಪ್ಪಿಸಿಕೊಂಡರು. ಈ ಬಗ್ಗೆ ವಿವರಿಸಿರುವ ಮುಸ್ತಾಫ, ಎಲ್ಲರೂ ಇಂತಹ ವಂಚನಾ ಜಾಲಗಳ ಬಗ್ಗೆ ಜಾಗೃತರಾಗುವಂತೆ ಎಚ್ಚರಿಸಿದ್ದಾರೆ. ನನ್ನ ಪತ್ನಿಯ ಹೆಸರಿನಲ್ಲಿ ರಿಜಿಸ್ಟರ್ಡ್ ಪೋಸ್ಟ್ ವೊಂದು ಮನೆಗೆ ಬಂದಿತು. ಅದನ್ನು ತೆರೆದು ನೋಡಿದಾಗ’ಮೀಶೋ’ಸಂಸ್ಥೆಎಂಬ ಉಲ್ಲೇಖವಿತ್ತು. ಸಂಸ್ಥೆಯ 8ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಕಂಪೆನಿಯು ನೋಂದಾಯಿತ ಗ್ರಾಹಕರಿಗೆ ಲಕ್ಕಿ ಡ್ರಾ ಸ್ಪರ್ಧೆಯನ್ನು ಆಯೋಜಿಸಿದ್ದು, ಅತ್ಯಾಕರ್ಷಕ 20 ಬಹುಮಾನಗಳಿವೆ. ಅವುಗಳಲ್ಲಿ ಮೂರು ದೊಡ್ಡ ಬಹುಮಾನಗಳಾಗಿದ್ದು, ಉಳಿದವು ಸಣ್ಣ ಬಹುಮಾನಗಳು. ನಿಮಗೆ ಕಳುಹಿಸಿದ ಕಾರ್ಡ್ ಅನ್ನು ಸ್ಕಾಚ್ ಮಾಡಿ ನೋಡಿ. ನೀವು ಬಹುಮಾನ ಗೆದ್ದರೆ ಪರಿಶೀಲನೆ ಪ್ರಕ್ರಿಯೆಗಾಗಿ ನೀವು ಕೆಲವು ದಾಖಲೆಗಳನ್ನು ಅದರಲ್ಲಿ ಕೊಟ್ಟಿರುವ ನಂಬರ್ಗೆಗೆ ಕಳುಹಿಸಬೇಕು ಎಂದು…
ನವದೆಹಲಿ: ನೀವು ಮನೆ ಖರೀದಿಸಲು ಬಯಸಿದರೆ ಮತ್ತು ಪ್ರಧಾನ್ ಮಂತ್ರಿ ಆವಾಸ್ ಯೋಜನೆಯ ಲಾಭವನ್ನು ಪಡೆಯಲು ಬಯಸಿದರೆ ಅದು ತುಂಬಾ ಸುಲಭ. ಇದಕ್ಕಾಗಿ ನೀವು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಸರ್ಕಾರಿ ಯೋಜನೆಯಿಂದ ನೀವು ಅನೇಕ ಪ್ರಯೋಜನಗಳನ್ನು ಪಡೆಯುತ್ತೀರಿ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ನಿಮಗೆ ಆಧಾರ್ ಸಂಖ್ಯೆಯೂ ಅತ್ಯಗತ್ಯ. ಅಲ್ಲದೆ ಅರ್ಜಿದಾರನು ಸಂಪೂರ್ಣ ಮಾಹಿತಿಯನ್ನು ನಿಖರವಾಗಿ ನೀಡಬೇಕಾಗುತ್ತದೆ. ಎಲ್ಲ ಬಡವರಿಗೆ ಕೈಗೆಟುಕುವ ದರದಲ್ಲಿ ವಸತಿ ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಆರಂಭಿಸಿದೆ. ಈ ಯೋಜನೆಯನ್ನು 2015ರ ಜೂನ್ 1ರಂದು ಮೊದಲ ಬಾರಿಗೆ ಪರಿಚಯಿಸಲಾಯಿತು. ಈ ಯೋಜನೆಯಡಿ ವಾರ್ಷಿಕ ಶೇ.6.50ರ ಬಡ್ಡಿದರದಲ್ಲಿ ಸಾಲ ಲಭ್ಯವಾಗುತ್ತದೆ. PMAY ಯೋಜನೆಯಡಿ ಪ್ರಯೋಜನಗಳೇನು? • PMAY ಯೋಜನೆಯಡಿ, ಎಲ್ಲಾ ಫಲಾನುಭವಿಗಳಿಗೆ ಕೇವಲ ವಾರ್ಷಿಕ ಶೇ. 6.50 ಬಡ್ಡಿದರದಲ್ಲಿ 20 ವರ್ಷಗಳವರೆಗೆ ವಸತಿ ಸಾಲ ನೀಡಲಾಗುತ್ತದೆ. • ನೆಲ ಮಹಡಿಯಲ್ಲಿರುವ ಮನೆಗಳು ಅಂಗವಿಕಲರಿಗೆ ಮತ್ತು ಹಿರಿಯ ನಾಗರಿಕರಿಗೆ ಮಾತ್ರ ಮೀಸಲಾಗಿದೆ •…
ಉಳ್ಳಾಲ: ಕುತ್ತಾರು ದೆಕ್ಕಾಡಿನ ಶ್ರೀ ಕೊರಗಜ್ಜ ದೈವದ ಆದಿ ಸ್ಥಳಗಳ ಆಡಳಿತ ಮಂಡಳಿಯ ಸುಪರ್ದಿಯಲ್ಲಿ ನಡೆಯುವ ಎಲ್ಲ ಕಾರ್ಯಕ್ರಮಗಳು ಭಕ್ತರ ಸಮ್ಮುಖದಲ್ಲಿ ನಡೆಯುತ್ತಿದ್ದು ಇದರ ವಿರುದ್ಧ “ಡಿವೋಟಿಸ್ ಆಫ್ ಕುತ್ತಾರು ಕೊರಗಜ್ಜ’ ಎಂಬ ಶಿರೋನಾಮೆಯಲ್ಲಿ ಖಾತೆ ತೆರೆದು ಸಾರ್ವಜನಿಕರಿಂದ ದೇಣಿಗೆಯನ್ನು ಸಂಗ್ರಹಿಸುತ್ತಿರುವ ಸಂಸ್ಥೆಯ ವಿರುದ್ಧ ಸೈಬರ್ ಎಕಾನಾಮಿಕ್ ಎಂಡ್ ನಾರ್ಕೊಟಿಕ್ (ಸೆನ್) ಪೊಲೀಸ್ ಠಾಣೆಗೆ ಕುತ್ತಾರು ಆಡಳಿತ ಮಂಡಳಿ ದೂರು ನೀಡಿದೆ. ಕೊರಗಜ್ಜನ ಆಡಳಿತ ಮಂಡಳಿಯು ಯಾವುದೇ ಉದ್ದೇಶಕ್ಕಾಗಿ ಆನ್‌ಲೈನ್ ಮುಖಾಂತರ ಸಾರ್ವಜನಿಕರಿಂದ ದೇಣಿಗೆಯನ್ನು ಸಂಗ್ರಹಿಸುತ್ತಿಲ್ಲ. ಕೊರಗಜ್ಜ ದೈವದ ಮೇಲೆ ಸಾರ್ವಜನಿಕರಿಗೆ ಇರುವ ಭಕ್ತಿಯನ್ನೇ ಪ್ರಧಾನವಾಗಿರಿಸಿಕೊಂಡು “ಡಿವೋಟಿಸ್ ಆಫ್ ಕುತ್ತಾರು ಕೊರಗಜ್ಜ’ ಎಂಬ ಫೇಸ್‌ಬುಕ್ ಖಾತೆಯಲ್ಲಿ ಸಾರ್ವಜನಿಕರಿಂದ ದೇಣಿಗೆಯನ್ನು ಸಂಗ್ರಹಿಸಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಶ್ರೀ ಕ್ಷೇತ್ರದ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುವುದು ಕೂಡ ಕಾನೂನು ಬಾಹಿರವಾಗಿದ್ದು, ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ. ಸೆನ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಕಾಸರಗೋಡು: ವಿಷ ಸೇವನೆಯಿಂದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ. ಉಪ್ಪಳ ಐಲ ಕುದುಪುಳು ವಿನ ಹರಿಣಾಕ್ಷಿ ಸುರೇಶ್ ರವರ ಪುತ್ರಿ ಧನ್ಯಶ್ರೀ ( 19) ಮೃತಪಟ್ಟವರು. ಮಂಗಳೂರು ಕಾಲೇಜಿನ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು.ಹನ್ನೆರಡು ದಿನಗಳ ಹಿಂದೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು ತಪಾಸಣೆ ನಡೆಸಿದಾಗ ವಿಷ ಸೇವನೆ ಮಾಡಿರುವ ಬಗ್ಗೆ ತಿಳಿದುಬಂದಿತ್ತು . ಗಂಭೀರ ಸ್ಥಿತಿಗೆ ತಲಪಿದ್ದ ಧನ್ಯಶ್ರೀಳನ್ನು ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆಗೆ ಸ್ಪಂದಿಸದ ಹಿನ್ನಲೆಯಲ್ಲಿ ವೈದ್ಯರ ಸಲಹೆಯಂತೆ ಕಾಸರಗೋಡಿಗೆ ಕರೆದುಕೊಂಡು ಬಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪೊಲೀಸರು ಮಹಜರು ನಡೆಸಿ ಮೃತದೇಹ ವನ್ನು ಸಂಬಂಧಿಕರಿಗೆ ಬಿಟ್ಟುಕೊಡಲಾಗಿದೆ.ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ
ಬೆಂಗಳೂರು : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಇದೀಗ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ ಬೆಂಗಳೂರಿನ ಒಂದನೇ ತ್ವರಿತಗತಿ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್ ತಿಂಗಳಲ್ಲಿ ಎಫ್ಐಆರ್ ದಾಖಲಾಗಿತ್ತು. ಫೆಬ್ರವರಿಯಲ್ಲಿ ಮಗಳ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ ದೂರು ನೀಡಿದ್ದರು. ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ಬಿಸಿನೆಸ್ ಮ್ಯಾನ್‌ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ಧ ಸಂತ್ರಸ್ತ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದರು. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದ ಸಂದರ್ಭದಲ್ಲೇ ಪ್ರಕರಣ ಸದ್ದುಮಾಡಿತ್ತು.
ಮಂಗಳೂರು : ಹಾರ್ಡ್‌ವೇರ್ ಅಂಗಡಿಯಿಂದ ವಸ್ತುಗಳನ್ನು ಪಡೆದು ಹಣ ಪಾವತಿಸದೆ 12.70 ಲಕ್ಷ ರೂ. ವಂಚಿಸಿರುವುದಾಗಿ ಆರೋಪಿಸಿ ಎರಡು ಅಂಗಡಿಗಳ ಮಾಲಕರ ವಿರುದ್ದ ಪೊಲೀಸರಿಗೆ ದೂರು ನೀಡಿರುವ ಘಟನೆ ವರದಿಯಾಗಿದೆ. ಪ್ರಕರಣದಲ್ಲಿ ನಗರದ ಅಝೀಝುದ್ದೀನ್ ರಸ್ತೆಯಲ್ಲಿರುವ ಬಾಲಾಜಿ ಹಾರ್ಡ್‌ವೇರ್‌ನ ಮಾಲಕ ವಿಕ್ರಮ್ ಪಿ. ಮಾಲಿ ಎಂಬವರು, ವಿಠಲ್ ಕುಲಾಲ್ ಕೊಣಾಜೆ ಮತ್ತು ವಿನುತಾ ಬಿ. ಎಂಬವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ವಿಠಲ್ ಕುಲಾಲ್ ಕೊಣಾಜೆ ಮನಿಸ್ಕ್ ಎಂಟರ್ ಪ್ರೈಸಸ್ ಹಾಗೂ ವಿನುತಾ ಬಿ.ವಿ.ಕೆ. ಸೋಫಾ ಮೇಕರ್ಸ್ ನ ಮಾಲಕರಾಗಿದ್ದು, ಕಳೆದ ಸುಮಾರು ವರ್ಷಗಳಿಂದ ವಿಕ್ರಮ್ ಪಿ ಮಾಲಿ ಅವರ ಗ್ರಾಹಕರಾಗಿದ್ದಾರೆ. ಇವರು ಸಾಲದ ರೂಪದಲ್ಲಿ ವಸ್ತುಗಳನ್ನು ಖರೀದಿಸುತ್ತಿದ್ದು, ನಂತರ ಚೆಕ್ ಮುಖಾಂತರ ಹಣ ಪಾವತಿಸುತ್ತಿದ್ದರು. ವಿಕ್ರಮ್ ಅವರು ಆರೋಪಿತರ ಮನಿಸ್ಕ್ ಎಂಟರ್ಪ್ರೈಸಸ್ 2019ರಿಂದ 31-03-2023 ರವರೆಗೆ 40,93,570.43 ರೂ ಹಾಗೂ ಬಿ.ವಿ.ಕೆ. ಸೋಫಾ ಮೇಕರ್ಸ್ ಗೆ 16-04-2018 ರಿಂದ 19-03-2023 ರ ವರೆಗೆ 3,98,058 ರೂ. ಗಳ ವಸ್ತುಗಳನ್ನು ಮಾರಾಟ…
ಉಡುಪಿ: 2023ರ ಜುಲೈ ತಿಂಗಳಲ್ಲಿ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಪೋಕ್ಸೊ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೊಕ್ಸೋ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಇಂದು ಆದೇಶ ನೀಡಿದೆ. ಬೈಂದೂರು ನಿವಾಸಿ ಮಧುಕರ ಮರಾಠಿ(24) ಶಿಕ್ಷೆಗೆ ಗುರಿಯಾದ ಆರೋಪಿ. ನೊಂದ ಬಾಲಕಿಯು ಆರೋಪಿಯ ಸಂಬಂಧಿಕನಾಗಿದ್ದು, ತನ್ನ ಮನೆಗೆ ಬಂದ ನೊಂದ ಬಾಲಕಿಯನ್ನು ಮಧುಕರ ಮರಾಠಿ ಬೆದರಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ವಿಚಾರ ಬೇರೆಯವರಲ್ಲಿ ಹೇಳಿದರೆ ನಿನ್ನ ಬಗ್ಗೆ ಅಪ್ರಚಾರ ಮಾಡುವುದಾಗಿ ಆತ ಬಾಲಕಿಗೆ ಬೆದರಿಕೆಯೊಡ್ಡಿದ್ದನು. ನಂತರ ಮಧುಕರ, ಯಾರು ಇಲ್ಲದ ಸಮಯ ಆಕೆಯ ಮನೆಗೆ ಹೋಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ವಿಚಾರವನ್ನು ಯಾರಲ್ಲಿಯೂ ಕೂಡ ಹೇಳದಂತೆ ಬೆದರಿಕೆಯೊಡ್ಡಿದ್ದನು ಎಂದು ದೂರಲಾಗಿದೆ. ನಂತರ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಮನೆಯವರು ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಆಕೆ ಗರ್ಭಿಣಿ ಆಗಿದ್ದಾಳೆ ಎನ್ನುವುದು…
ಬೆಂಗಳೂರು: ವಾಹನ ಸವಾರರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಸೆಪ್ಟೆಂಬರ್ ವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸೋದಕ್ಕೆ ಅನುಮತಿ ನೀಡಿದೆ. ಹೀಗಾಗಿ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದಕ್ಕೆ ಸೆಪ್ಟೆಂಬರ್ ವರೆಗೆ ಗಡುವು ವಿಸ್ತರಣೆಯಾದಂತೆ ಆಗಿದೆ. ಬಿಎನ್ ಡಿ ಎನರ್ಜಿ ಲಿಮಿಟೆಡ್ ಮತ್ತಿತರರು ಹೈಕೋರ್ಟ್ ಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆ ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು, ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ ಅರವಿಂದ ಅವರನ್ನೊಳಗೊಂಡಂತ ನ್ಯಾಯಪೀಠವು ವಿಚಾರಣೆ ನಡೆಸಿತು. ಈ ಅರ್ಜಿಯ ವಿಚಾರಣೆಯ ಬಳಿಕ ಹೈಕೋರ್ಟ್ ನ್ಯಾಯಪೀಠವು, ಮೇ 21ರಂದು ಎಚ್‌ಎಸ್‌ಆರ್‌ಪಿ ಅಳವಡಿಸದಿರುವುದಕ್ಕೆ ಅರ್ಜಿದಾರರ ವಿರುದ್ಧ ಯಾವುದೇ ದುರುದ್ದೇಶಿತ ಕ್ರಮಕೈಗೊಳ್ಳಬಾರದು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಈಗ ರಾಜ್ಯ ಸರ್ಕಾರವು ಆಗಸ್ಟ್-ಸೆಪ್ಟೆಂಬರ್‌ವರೆಗೆ ಎಚ್‌ಎಸ್‌ಆರ್‌ಪಿ ಅಳವಡಿಕೆ ಗಡುವು ವಿಸ್ತರಿಸಲಾಗುವುದು ಎಂದು ತಿಳಿಸಿದೆ. ಹೀಗಾಗಿ, ಮೇ 21ರ ಆದೇಶದಲ್ಲಿ…