ಉಳ್ಳಾಲ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ಯಾ ರೆಹಮತ್ ನಗರ ಕಜೆ ಬಾಕಿಮಾರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಜೋಡಿಯನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ ಆಂಟಿ ಡ್ರಗ್ ಟೀಂ ನೇತೃತ್ವದ ಪೊಲೀಸ್ ತಂಡ ಬಂಧಿಸಿ, ಆರೋಪಿತರಿಂದ 2,04,000 ರೂ ಬೆಲೆಯ 8 ಕೆ.ಜಿ ಗಾಂಜಾ ವಶಪಡಿಸಿಕೊಂಡಿದೆ.ಮಾಡೂರು ನಿವಾಸಿ ನಜೀರ್ ಹುಸೈನ್ (50) ಮತ್ತು ಕಿನ್ಯಾ ರೆಹಮತ್ ನಗರ ದ ಅಫ್ಸಾತ್ (37) ಎಂಬವರನ್ನು ಬಂಧಿಸಲಾಗಿದೆ.ಖಚಿತ ಮಾಹಿತಿ ಮೇರೆಗೆ ಪೊಲೀಸ್ ತಂಡ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದೆ ಗಾಂಜಾ ಸಹಿತ ಮಾರಾಟಕ್ಕೆ ಯತ್ನಿಸುತ್ತಿದ್ದ ರೆನಾಲ್ಟ್ ಕ್ವಿಡ್ ಕಾರು ಹಾಗೂ ಎರಡು ಮೊಬೈಲುಗಳನ್ನು ವಶಪಡಿಸಿಕೊಂಡಿದೆ. ಒಟ್ಟು ರೂ. 5,14,810 ಬೆಲೆಯ ವಸ್ತುಗಳನ್ನು ವಶಪಡಿಸಿಕೊಂಡಿದೆ.ಇಬ್ಬರ ವಿರುದ್ಧ 195/2024 ಕಲಂನಡಿ ಎನ್ ಡಿಪಿಎಸ್ ಆಕ್ಟ್ 1985 ಮತ್ತು ಬಿಎನ್ ಎಸ್ ಕಾಯಿದೆಗಳಡಿ ಪ್ರಕರಣಗಳು ದಾಖಲಾಗಿವೆ.
Author: main-admin
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬೋಳಾರ ಎಮ್ಮೆಕೆರೆಯ ಅಪಾರ್ಟ್‌ಮೆಂಟ್ ಒಂದರಲ್ಲಿ ವಾಸವಾಗಿದ್ದ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿನಿ ಮೆಹರ್ ಬಾನು (18) ಎಂದು ತಿಳಿದು ಬಂದಿದೆ. ಮಂಗಳೂರಿನ ಕೊಡಿಯಾಲಬೈಲ್‌ನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ಕಲಿಯುತ್ತಿದ್ದ ಅವರು 10 ದಿನಗಳಿಂದ ಕಾಲೇಜಿಗೆ ಹೋಗದೆ ಮನೆಯಲ್ಲಿದ್ದಳು. ಅ. 24ರಂದು ಸಂಜೆ 4 ಗಂಟೆಗೆ ತಾಯಿ ಹೊರಗೆ ಹೋಗಿದ್ದು, 6 ಗಂಟೆಗೆ ವಾಪಸು ಬಂದು ನೋಡಿದಾಗ ಮಗಳು ಮನೆಯಲ್ಲಿ ಇರಲಿಲ್ಲ. ಈ ಬಗ್ಗೆ ಎಲ್ಲ ಕಡೆ ವಿಚಾರಿಸಿದ್ದು, ಎಲ್ಲಿಯೂ ಪತ್ತೆಯಾಗಿಲ್ಲ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉಡುಪಿ: ಮಣ್ಣು ತುಂಬಿದ ಮಿನಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಇದೆ ವೇಳೆ ಎದುರಿನಿಂದ ಸ್ಕೂಟಿ ಚಲಾಯಿಸಿಕೊಂಡು ಬರುತ್ತಿದ್ದ ಮಹಿಳೆಯು ವಾಹನ ಸಹಿತ ಲಾರಿಯಿಂದ ಬಿದ್ದ ಮಣ್ಣಿನಡಿ ಸಿಲುಕಿಕೊಂಡ ಘಟನೆ ಕಿರಿಮಂಜೇಶ್ವರ ಗ್ರಾಮದ ನಾಗೂರು – ಉಪ್ಪಳ್ಳಿ ರಸ್ತೆಯಲ್ಲಿನ ತಿರುವಿನಲ್ಲಿ ಬುಧವಾರ ನಡೆದಿದೆ. ಮಣ್ಣಿನಲ್ಲಿ ಸಿಲುಕಿಕೊಂಡಿದ್ದ ಮಹಿಳೆ ಆರತಿ ಶೆಟ್ಟಿ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೇರೂರು ಕಡೆಯಿಂದ ನಾಗೂರಿಗೆ ತೆರಳುತ್ತಿದ್ದ ಮಣ್ಣು ತುಂಬಿದ ಮಿನಿ ಲಾರಿಯೊಂದು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿದೆ. ಇದೇ ವೇಳೆ ನಾಗೂರಿನಿಂದ ನೂಜಾಡಿಗೆ ತೆರಳುತ್ತಿದ್ದ ಮಹಿಳೆಯ ಮೇಲೆ ಲಾರಿಯಲ್ಲಿದ್ದ ಮಣ್ಣು ಬಿದ್ದಿದೆ. ಲಾರಿ ಬೀಳುವ ವೇಳೆ ಸ್ಕೂಟಿಯನ್ನು ಸಾಕಷ್ಟು ಎಡಬದಿಗೇ ತಿರುಗಿಸಿದ್ದರಿಂದ ಲಾರಿ ಮೈಮೇಲೆ ಬಿಳುವ ದೊಡ್ಡ ಅಪಾಯದಿಂದ ಮಹಿಳೆ ಪಾರಾದರು. ಘಟನೆಯ ಪ್ರತ್ಯಕ್ಷದರ್ಶಿ ಇನ್ನೊಂದು ವಾಹನದಲ್ಲಿದ್ದ ಕೋಡಿ ಅಶೋಕ ಪೂಜಾರಿ ಎಂಬುವವರು ತಕ್ಷಣ ಮಹಿಳೆಯ ಮೇಲೆ ಬಿದ್ದಿದ್ದ ಮಣ್ಣನ್ನು ಸರಿಸಿ ಅವರ ಮುಖವನ್ನು ಮೇಲಕ್ಕೆತ್ತಿದ್ದಾರೆ. ಅಷ್ಟರಲ್ಲಿ ಸ್ಥಳೀಯರಾದ ಚಂದ್ರಶೀಲ ಶೆಟ್ಟಿ,…
ಉಡುಪಿ: ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ಪ್ರಕರಣದ 10 ಮಂದಿ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿಯನ್ನು ಉಡುಪಿ ನ್ಯಾಯಾಲಯ ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಆದೇಶಿಸಿದೆ. ಉಡುಪಿಯ ಹೂಡೆ, ಸಂತೆಕಟ್ಟೆ, ಕಾರ್ಕಳದ ಮಾಳದಲ್ಲಿ ಬಂಧಿಸಲ್ಪಟ್ಟ 10 ಮಂದಿ ಆರೋಪಿಗಳನ್ನು ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಉಡುಪಿಯ ಪ್ರಧಾನ ಎರಡನೇ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶ ಯೋಗೀಶ್ ಅವರು ಎಲ್ಲ 10 ಮಂದಿ ಆರೋಪಿಗಳಿಗೆ ನವಂಬರ್ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು. ಬಂಧಿತ 10 ಮಂದಿ ಆರೋಪಿಗಳಿಗೆ ಜಾಮೀನು ನೀಡುವಂತೆ ಕೋರಿ ಆರೋಪಿಗಳ ಪರ ವಕೀಲ ಅಸಾದುಲ್ಲಾ ಕಟಪಾಡಿ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯ ವಾದ ಪ್ರತಿವಾದ ನಡೆದ ಬಳಿಕ ಅಂತಿಮ ಆದೇಶವನ್ನು ನವಂಬರ್ 5ಕ್ಕೆ ನಿಗದಿಪಡಿಸಿ ನ್ಯಾಯಾಲಯ ಆದೇಶ ನೀಡಿದೆ.
ಬಂಟ್ವಾಳ: ಕರ್ನಾಟಕ ಸರ್ಕಾರ ಕೊಡಮಾಡುವ ಜಾನಪದ ಕ್ಷೇತ್ರದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ದೈವನರ್ತಕ-ಪಾತ್ರಿ ಲೋಕಯ್ಯಸೇರಾ ಆಯ್ಕೆಯಾಗಿದ್ದಾರೆ. ಅಂಗು ಮತ್ತು ಅಕ್ಕು ದಂಪತಿಗಳ ಪ್ರಥಮ ಪುತ್ರನಾಗಿ ಜನಿಸಿದ ಇವರು, ಹಿರಿಯರಿಂದ ದೈವಾರಾಧನೆ ಮತ್ತು ದೈವನರ್ತನವನ್ನು ಕಲೆಯನ್ನೇ ಬದುಕಾಗಿಸಿಕೊಂಡವರು. ಕಳೆದ 57 ವರ್ಷಗಳಿಂದ ಜಾನಪದ ಕಲಾವಿದನಾಗಿ, ದೈವಾರಾಧನೆಯ ಕ್ಷೇತ್ರದಲ್ಲಿ ಭೂತಕಟ್ಟುವ ನರ್ತಕ-ಪಾತ್ರಿಯಾಗಿ ಗಣನೀಯ ಸೇವೆ ಸಲ್ಲಿಸಿರುತ್ತಾರೆ. ತುಳುನಾಡಿನ ಕಾರಣಿಕ ದೈವಗಳಾದ ಕಲ್ಲುರ್ಟಿ, ಕಲ್ಕುಡ, ಪಂಜುರ್ಲಿ, ಚಾಮುಂಡಿ, ಧೂಮಾವತಿ, ರಕೇಶ್ವರಿ ಇತ್ಯಾದಿಗಳಿಗೆ ನೇಮಗಳನ್ನು ಆಚಾರದಲ್ಲಿ ಕಟ್ಟಿರುತ್ತಾರೆ. ವರ್ಷದಲ್ಲಿ ಸರಿಸುಮಾರು ನೂರರಂತೆ ಇದುವರೆಗೆ ಸಾವಿರಾರು ಭೂತಗಳನ್ನು ನೇಮ ಕಟ್ಟಿರುತ್ತಾರೆ. ಕುಲದೈವ, ಸೀಮೆದೈವ, ರಾಜನ್ ದೈವಗಳ ನೇಮ ವಹಿಸಿರುವುದಲ್ಲದೆ ಹತ್ತು-ಹಲವು ಊರ ಜಾತ್ರೆಗಳಲ್ಲೂ ಪ್ರಧಾನ ದೈವಗಳ ಪಾತ್ರಿಯಾಗಿ ಸೇವೆಸಲ್ಲಿಸಿದ್ದಾರೆ. ತುಳುನಾಡಿನ ಮೌಖಿಕ ಸಾಹಿತ್ಯವೆನಿಸಿದ ಸಂಧಿ, ದೈವಪುರಾಣಗಳನ್ನು ಪರಂಪರಾನುಗತವಾಗಿ ಅಭ್ಯಾಸಿಸಿ, ದೈವಾರಾಧನೆಯ ಸಂದರ್ಭದಲ್ಲಿ ಆಯಾಯ ದೈವಗಳಿಗೆ ಸಂಬಂಧಿಸಿದ ಸಂಧಿ, ಮದಿಪುಗಳನ್ನು ಬಾಯಿಪಾಠವಾಗಿ ಒಪ್ಪಿಸುವಷ್ಟು ಪ್ರಭುತ್ವವನ್ನು ಹೊಂದಿರುತ್ತಾರೆ. ಭೂತನರ್ತನ ಸೇವೆಯಲ್ಲಿ ಜನರ ನಂಬಿಕೆಗೆ ಚ್ಯುತಿ ಬಾರದಂತೆ ಹೊಸ ಆಯಾಮವನ್ನು ತಂದು ಹಲವು…
ಉಳ್ಳಾಲ: ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಸಿಪಿ ಧನ್ಯ ನೇತೃತ್ವದ ಉಳ್ಳಾಲ ಪೊಲೀಸರ ಹಾಗೂ ಉಳ್ಳಾಲ ತಹಶೀಲ್ದಾರ್ ನೇತೃತ್ವದ ತಂಡ ದಂಪತಿಯನ್ನು ಬಂಧಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕಿನ್ಯ ಗ್ರಾಮದ ರಹ್ಮತ್ ನಗರದ ಎಲ್ಡ್ ಪಡ್ಡು ಎಂಬಲ್ಲಿ ನಡೆದಿದೆ. ಬಂಧಿತ ದಂಪತಗಳನ್ನು ನಝೀರ್ ಹಾಗೂ ಆತನ ಪತ್ನಿ ಅಸ್ಮ ಎಂದು ಗುರುತಿಸಲಾಗಿದೆ. ಅವರು ಕಾರಿನಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳಿಂದ 6.800 ಕೆಜಿ ಗಾಂಜಾ ಹಾಗೂ ಕಾರನ್ನು ಉಳ್ಳಾಲ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗಾಂಜಾವನ್ನು ದಂಪತಿ ಮನೆ ಮತ್ತು ಕಾರಿನಲ್ಲಿ ಶೇಖರಿಸಿ ಇಟ್ಟು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರು ಹೊರಗಿನಿಂದ ಬಂದು ಬಾಡಿಗೆಗೆ ಕುಳಿತುಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಪೊಲೀಸರು ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ 10 ಲಕ್ಷ ರೂ.ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಟ್ಲ : ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೋಲೀಸರ ತಂಡ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿತರಿಂದ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೊಳಿಯಾರು ಗ್ರಾಮದ ಮಹಮ್ಮದ್ ರಿಯಾಜ್ ಹಸನಬ್ಬ ಯಾನೆ ರಿಯಾಜ್ (38) ಮತ್ತು ಉಳ್ಳಾಲ ಕೋಟೆ ನಿವಾಸಿ ಮೊಹಮ್ಮದ್ ಇಂಮ್ತಿಯಾಜ್ ( 38) ಬಂಧಿತ ಆರೋಪಿಗಳು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ರೂ 1,35,000/–ರೂ ಮೌಲ್ಯದ ಗ್ಯಾಸ್ ಸಿಲಿಂಡರ್ ಹಾಗೂ ಮನೆ ಸಾಮಗ್ರಿಗಳು , ಹಾಗೂ ಕಳ್ಳತನಕ್ಕೆ ಉಪಯೋಗಿಸಿದ 1,50,000/- ರೂ ಮೌಲ್ಯದ KA-19-AD-0585 ನೊಂದಣಿ ನಂಬ್ರದ ಅಟೊ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ.ಪೋಲೀಸರು ಸ್ವಾದೀನಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 2,85,000/- ರೂ ಎಂದು ತಿಳಿಸಿದ್ದಾರೆ. ಆರೋಪಿತರು ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದಲ್ಲಿ, ವಿಟ್ಲ ಪೋಲೀಸ್ ಠಾಣೆಯ ಮಿತ್ರರು, ಕೊಡಾಜೆ ಎರಡು ಮನೆ ಕಳವು ಪ್ರಕರಣಗಳಲ್ಲಿ ಹಾಗೂ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿನ ಶಾಲೆ ಹಾಗೂ ಅಂಗನವಾಡಿ ಕಳವು ಪ್ರಕರಣಗಳಲ್ಲಿ ಭಾಗಿಯಾಗಿರುವ ವಿಚಾರ ಬೆಳಕಿಗೆ…
ಮಂಗಳೂರು: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸ್ನೇಹಮಿಲನ-ಸಿನಿರಂಗ ಪುರಸ್ಕಾರದಲ್ಲಿ ಹಿರಿಯ ಪತ್ರಕರ್ತ, ರಂಗಚಾವಡಿ ಸಂಸ್ಥೆಯ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ ಅವರನ್ನು “ರಂಗಮಿತ್ರ ಪತ್ರಕರ್ತ” ಪ್ರಶಸ್ತಿ ನೀಡಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಬಾಳ ಅವರು ನೂರಕ್ಕೂ ಮಿಕ್ಕಿದ ತುಳು ಮತ್ತು ಕನ್ನಡ ಸಿನಿಮಾಗಳಿಗೆ PRO ಆಗಿ ಕರ್ತವ್ಯ ನಿರ್ವಹಣೆ ಮತ್ತು ತುಳುಸಿನಿಮಾರಂಗದ ಸಮಗ್ರ ಮಾಹಿತಿಯುಳ್ಳ ತುಳು ಸಿನಿಮಾವಲೋಕನ ಕೃತಿಯನ್ನು ರಚಿಸಿರುವುದನ್ನು ಸನ್ಮಾನ ಸಮಾರಂಭದಲ್ಲಿ ಸ್ಮರಿಸಲಾಯಿತು.
ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾಗಿವೆ. ಇಂದು ಬುಧವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದೆ. ಇಲ್ಲಿನ ಟಿಕೆಟ್ ಕೌಂಟರ್ ಬಳಿಯ ವರ್ಕ್ ಶಾಪ್ ನಲ್ಲಿ ಚಾರ್ಜ್ ಗೆ ಹಾಕಿದ್ದ ಒಂದು ಎಲೆಕ್ಟ್ರಿಕ್ ವಾಹನದಲ್ಲಿ ಸಾರ್ಟ್ ಸರ್ಕಿಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು ಇದರಿಂದ ಹೊತ್ತಿದ್ದ ಬೆಂಕಿ ವ್ಯಾಪಿಸಿ ಪಕ್ಕದಲ್ಲಿದ್ದ ಮತ್ತೊಂದು ವಾಹನವನ್ನೂ ಸುಟ್ಟು ಹಾಕಿದೆ. ಒಟ್ಟು ಎರಡು ವಾಹನಗಳು ಸಂಪೂರ್ಣ ಭಸ್ಮವಾಗಿದೆ. ಪಾರ್ಕಿಂಗ್ ಸ್ಥಳದಲ್ಲಿ ಹತ್ತಕ್ಕೂ ಅಧಿಕ ಎಲೆಕ್ಟ್ರಿಕ್ ವಾಹನಗಳಿದ್ದರೂ ಅದೃಷ್ಟವಶಾತ್ ಭಾರೀ ದೊಡ್ಡ ಅನಾಹುತ ತಪ್ಪಿದೆ. ಎರಡು ವಾಹನಗಳು ಹೊತ್ತಿ ಉರಿಯುತ್ತಿದ್ದರೂ ಅಗ್ನಿ ಶಾಮಕ ದಳ ಕ್ಲಪ್ತ ಸಮಯಕ್ಕೆ ಸ್ಥಳಕ್ಕೆ ಆಗಮಿಸಿರಲಿಲ್ಲ ಎಂಬ ಆರೋಪ ಕೂಡ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಪಿಲಿಕುಳದ ಸಿಬ್ಬಂದಿಗಳೇ ಧಾವಿಸಿ ಬಂದು ಬೆಂಕಿ ನಂದಿಸುವ ಕಾರ್ಯ ನಡೆಸಿದ್ದರು. ಘಟನಾ ಸ್ಥಳಕ್ಕೆ ಕಾವೂರು ಠಾಣೆ, ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿ ಸುಮಾರು ಐದು ತಿಂಗಳಿನಿಂದ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಅವರಿಗೆ ಕೊನೆಗೂ ಸೆರೆಮನೆ ವಾಸದಿಂದ ಮುಕ್ತಿ ಸಿಕ್ಕಿದೆ. ಹೈಕೋರ್ಟ್ ಪೀಠ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ವೈದ್ಯಕೀಯ ಚಿಕಿತ್ಸೆಯ ಆಧಾರದಲ್ಲಿ ಹೈಕೋರ್ಟ್ ನ್ಯಾಯಾಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಬಳ್ಳಾರಿ ಸೆಂಟ್ರಲ್ ಜೈಲ್‌ನಲ್ಲಿ ಬೆನ್ನು ನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಚಿಕಿತ್ಣೆ ಪಡೆಯಲು ನಟ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ನೀಡುವಂತೆ ದರ್ಶನ್ ಪರ ವಕೀಲರಾದ ಸಿ.ವಿ ನಾಗೇಶ್ ಪೀಠದ ಮುಂದೆ ಮನವಿ ಸಲ್ಲಿಸಿದ್ದರು. ದರ್ಶನ್ ಜಾಮೀನು ಅರ್ಜಿಗೆ ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ) ಪ್ರಸನ್ನ ಕುಮಾರ್ ಆಕ್ಷೇಪ ಮಾಡಿದ್ದರು. ವಾದ ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿಗಳು ಇಂದಿಗೆ ಆದೇಶವನ್ನು ಕಾಯ್ದಿರಿಸಿದ್ದರು. ಇಂದು ಬೆಳಗ್ಗೆ ಆದೇಶ ಪ್ರಕಟಿಸಿದ ನ್ಯಾಯಮೂರ್ತಿಗಳು ದರ್ಶನ್ ಅವರಿಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದರು.…