ನಲ್ಗೊಂಡ : ನಲ್ಗೊಂಡ ಜಿಲ್ಲೆಯ ಕೊಂಡಮಲ್ಲೇಪಲ್ಲಿ ಮಂಡಲ ಕೇಂದ್ರದಲ್ಲಿರುವ ನಾಗಾರ್ಜುನ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಕೆ. ರೂಪಾ ರೆಡ್ಡಿ ಅವರ ಹತ್ಯೆ ಪ್ರಕರಣದಲ್ಲಿ ಆಘಾತಕಾರಿ ಸತ್ಯ ಬೆಳಕಿಗೆ ಬಂದಿದ್ದು, ಅವರು ನಡೆಸುತ್ತಿದ್ದ ಶಾಲೆಯ 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳೇ ಈ ಕೃತ್ಯ ಎಸಗಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ವರ್ಗಾವಣೆ ಪ್ರಮಾಣಪತ್ರ (TC) ನೀಡಿ ಶಾಲೆಯಿಂದ ವಜಾಗೊಳಿಸಿದ್ದಕ್ಕಾಗಿ ಆಕ್ರೋಶಗೊಂಡಿದ್ದ ವಿದ್ಯಾರ್ಥಿ, ರೂಪಾ ರೆಡ್ಡಿ ಅವರ ವಿರುದ್ಧ ತೀವ್ರ ದ್ವೇಷ ಹೊಂದಿದ್ದನು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಅಗಸ್ಟ್ 11 ರಂದು ಮುಖವಾಡ ಹಾಗೂ ಹೂಡಿ ಧರಿಸಿದ್ದ ಇಬ್ಬರು ವಿದ್ಯಾರ್ಥಿಗಳು ರೂಪಾ ರೆಡ್ಡಿ ಅವರ ಮನೆಗೆ ತೆರಳಿದ್ದರು. ಒಬ್ಬ ವಿದ್ಯಾರ್ಥಿ ಮನೆಗೆ ನುಗ್ಗಿ ಹಣ ನೀಡುವಂತೆ ಬೆದರಿಕೆ ಹಾಕಿದಾಗ ಪ್ರಾಂಶುಪಾಲೆ ವಿರೋಧಿಸಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ಮುಖವಾಡ ಕಳಚಿ ಬಿದ್ದಾಗ, ವಿದ್ಯಾರ್ಥಿಯನ್ನು ಗುರುತಿಸಿದ ರೂಪಾ ರೆಡ್ಡಿ ಕಿರುಚಾಡಿದ್ದಾರೆ. ತನ್ನ ಗುರುತು ಸಿಕ್ಕಿಬೀಳುವ ಭಯದಿಂದ ವಿದ್ಯಾರ್ಥಿಯು ತಂದಿದ್ದ ಚಾಕುವಿನಿಂದ ಆಕೆಗೆ ಇರಿದು ಕೊಲೆ ಮಾಡಿದ್ದಾನೆ. ಕೊಲೆಯ ನಂತರ…
Author: main-admin
ಉಡುಪಿ: ಬ್ರಹ್ಮಾವರ ಸಮೀಪ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದ್ದು, ಬಸ್‌ನಲ್ಲಿದ್ದ ಏಳು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿಯಿಂದ ಸಾಗರದತ್ತ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಬಳಿಕ ಬಸ್‌ನ ಎಲೆಕ್ಟ್ರಿಕಲ್ ಬಾಕ್ಸ್ (EDC Box) ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಿಸಲು ಆರಂಭಿಸಿದೆ ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ನಿರ್ವಾಹಕರು ತಕ್ಷಣ ಸಮಯಪ್ರಜ್ಞೆ ಮೆರೆದು ಬಸ್ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾನೆ. ನಿರ್ವಾಹಕನ ತ್ವರಿತ ಕ್ರಮದಿಂದ ಸಂಭವಿಸಬಹುದಾಗಿದ್ದ ದೊಡ್ಡ ದುರಂತ ತಪ್ಪಿದೆ. ಬೆಂಕಿ ಕಾಣಿಸಿಕೊಂಡ ವಿಷಯ ತಿಳಿಯುತ್ತಿದ್ದಂತೆಯೇ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಬಳಿಕ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ
ಮಂಗಳೂರು: ನಗರದಲ್ಲಿ ಮಾದಕ ವಸ್ತುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲಗಳ ವಿರುದ್ಧ ಕಾರ್ಯಾಚರಣೆ ಚುರುಕುಗೊಳಿಸಿರುವ ಮಂಗಳೂರು ನಗರ ಪೊಲೀಸರು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ MDMA ಹಾಗೂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ 1: ಪಂಪ್‌ವೆಲ್‌ನಲ್ಲಿ ಆಟೋದಲ್ಲಿ MDMA ಮಾರಾಟ – ಕೇರಳದ ವ್ಯಕ್ತಿ ಬಂಧನ ಆಗಸ್ಟ್ 18 ರಂದು ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಂಪ್‌ವೆಲ್‌ನಿಂದ ನಂತೂರು ಕಡೆಗೆ ತೆರಳುವ ಸರ್ವಿಸ್ ರಸ್ತೆಯಲ್ಲಿ ಆಟೋ ರಿಕ್ಷಾದಲ್ಲಿ ವ್ಯಕ್ತಿಯೊಬ್ಬ MDMA ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತಿತ್ತು. ತಕ್ಷಣ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಕೇರಳ ರಾಜ್ಯದ ಮಂಜೇಶ್ವರದ ವರ್ಕಾಡಿ ನಿವಾಸಿ ಮೊಹಮ್ಮದ್ ಇರ್ಷಾದ್ (30) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯಿಂದ ₹1,36,000 ಮೌಲ್ಯದ 13.69 ಗ್ರಾಂ MDMA, ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ್ದ ಆಟೋ ರಿಕ್ಷಾ ಸೇರಿದಂತೆ ಒಟ್ಟು ₹2,94,500 ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿ…
ಅಪ್ರಾಪ್ತ ವಯಸ್ಸಿನ ಬಾಲಕನೊಂದಿಗೆ ಅಸಭ್ಯವಾಗಿ ವರ್ತಿಸಿ ಬೆದರಿಕೆ ಹಾಕಿದ ಆರೋಪದಡಿ ವಿಟ್ಲ ಪೊಲೀಸರು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ವಿಟ್ಲ ಕೊಂಡಗಾಯಿ ನಿವಾಸಿ ಉಮೇಶ್ (53) ಬಂಧಿತ ಆರೋಪಿ. ಆ.15ರಂದು ಅಪ್ರಾಪ್ತ ಬಾಲಕನೊಬ್ಬ ವಿಟ್ಲ ಠಾಣಾ ವ್ಯಾಪ್ತಿಯ ಅಳಿಕೆಯಿಂದ ಪುತ್ತೂರು ಕಡೆಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಬಾಲಕನ ಪಕ್ಕದಲ್ಲಿ ಕುಳಿತು ಅನುಚಿತವಾಗಿ ವರ್ತಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಳಿಕ ಬಾಲಕ ಮನೆಗೆ ತೆರಳಿದ ಸಂದರ್ಭದಲ್ಲಿ ಅದೇ ವ್ಯಕ್ತಿ ಬಾಲಕನ ಮನೆಗೆ ಬಂದು ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 179/2026ರಂತೆ ಪೋಕ್ಸೋ ಕಾಯ್ದೆ 2012ರ ಕಲಂ 4(2) ಹಾಗೂ ಬಿಎನ್‌ಎಸ್ 2023ರ ಕಲಂ 351(2) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ವಿಟ್ಲ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಮಂಗಳೂರು: ನಗರದ ಕೋಡಿಕ್ಕಲ್‌ನಲ್ಲಿ ಮನೆಯ ಎದುರು ನಿಲ್ಲಿಸಿದ್ದ ಹೊಂಡಾ ಡಿಯೋ ಸ್ಕೂಟರ್ ಕಳವು ಮಾಡಿದ್ದ ಆರೋಪಿಯನ್ನು ಉರ್ವಾ ಪೊಲೀಸರು ಬಂಧಿಸಿ, ಕಳವಾಗಿದ್ದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಉಳ್ಳಾಲದ ಕೋಡಿ ನಿವಾಸಿ ಮಹಮ್ಮದ್ ಫೈಜಲ್ ಅಲಿಯಾಸ್ ತೋಟ ಫೈಜಲ್ (40) ಎಂದು ಗುರುತಿಸಲಾಗಿದೆ. ಕೋಡಿಕ್ಕಲ್‌ನಲ್ಲಿ ಮನೆಯೊಂದರ ಎದುರು ಪಾರ್ಕ್ ಮಾಡಲಾಗಿದ್ದ KA-19-EB-2226 ನೋಂದಣಿ ಸಂಖ್ಯೆಯ ಹೊಂಡಾ ಡಿಯೋ ಸ್ಕೂಟರ್ ಕಳವಾಗಿರುವ ಬಗ್ಗೆ ಜುಲೈ 24ರಂದು ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಭಾರತೀಯ ನ್ಯಾಯ ಸಂಹಿತೆ-2023ರ ಕಲಂ 303(2)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದರು. ತನಿಖೆಯ ವೇಳೆ ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಿ, ಆರೋಪಿಯ ಚಹರೆಯನ್ನು ಗುರುತಿಸಿದ್ದರು. ಬಳಿಕ ಬಾತ್ಮೀದಾರರಿಂದ ಮಾಹಿತಿ ಸಂಗ್ರಹಿಸಿ ಆರೋಪಿಯ ಜಾಡು ಪತ್ತೆಹಚ್ಚಿದ ಪೊಲೀಸರು, ಆಗಸ್ಟ್ 18ರಂದು ಆರೋಪಿಯನ್ನು ಬಂಧಿಸಿ ಕಳವಾಗಿದ್ದ ಸ್ಕೂಟರ್‌ನ್ನೂ ಪತ್ತೆಹಚ್ಚಿದ್ದಾರೆ. ಪೊಲೀಸ್ ಮಾಹಿತಿಯ ಪ್ರಕಾರ, ಬಂಧಿತ ಆರೋಪಿಯ ವಿರುದ್ಧ ಕರ್ನಾಟಕ ಹಾಗೂ ಕೇರಳದ ವಿವಿಧ ಪೊಲೀಸ್ ಠಾಣೆಗಳಲ್ಲಿ 40ಕ್ಕೂ ಅಧಿಕ…
ಮಂಗಳೂರು: ಸುಮಾರು 15 ವರ್ಷಗಳಿಂದ ನ್ಯಾಯಾಲಯದ ಎಲ್‌ಪಿಸಿ (LPC) ವಾರೆಂಟ್‌ಗೆ ತಲೆಮರೆಸಿಕೊಂಡಿದ್ದ ಆರೋಪಿತೆಯನ್ನು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮಂಗಳೂರು ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ 2011ರಲ್ಲಿ ಅನೈತಿಕ ಮಾನವ ಸಾಗಣೆ ತಡೆ ಕಾಯ್ದೆ ಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವು ಮಂಗಳೂರಿನ 3ನೇ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ SPLIT CC ನಂ. 02/2014ರಂತೆ ವಿಚಾರಣೆಯಾಗಿ, LPC ನಂ. 10/2019ರಂತೆ ದೀರ್ಘಕಾಲದಿಂದ ಬಾಕಿ ಉಳಿದಿತ್ತು. ಪ್ರಕರಣದ ಎಲ್‌ಪಿಸಿ ವಾರೆಂಟ್ ಆರೋಪಿತೆಯಾಗಿದ್ದ ಆಯಿಷಾ (36), ಪತಿ ಹಸನಬ್ಬ, ಬಂಗ್ಲಗುಡ್ಡೆ ಮನೆ, ಗುರುಪುರ, ಮಂಗಳೂರು ಎಂಬ ವಿಳಾಸವನ್ನು ನೀಡಿದ್ದರು. ಪ್ರಕರಣ ದಾಖಲಾಗಿ ದಸ್ತಗಿರಿಯಾದ ಸಂದರ್ಭದಲ್ಲಿ ತಮ್ಮ ನಿಜವಾದ ಹೆಸರು, ಪತಿಯ ಹೆಸರು ಹಾಗೂ ವಿಳಾಸವನ್ನು ಮರೆಮಾಚಿ ಸುಳ್ಳು ಮಾಹಿತಿ ನೀಡಿದ್ದರೆಂದು ಪೊಲೀಸರು ತಿಳಿಸಿದ್ದಾರೆ. ನಂತರ ಆರೋಪಿತೆಯ ನಿಜವಾದ ಹೆಸರು ಸೆಫಿಯಾ (53), ಪತಿ ದಿವಂಗತ ಅಬೂಬುಕ್ಕರ್, ಹಂಡೇಲ ಮಸೀದಿ ಬಳಿ, ಪುತ್ತಿಗೆ ಗ್ರಾಮ, ಬಡಗಮಿಜಾರು, ಮಿಜಾರು, ಮೂಡಬಿದರೆ ತಾಲೂಕು,…
ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ಬಸ್ ನಿಲ್ದಾಣದ ಬಳಿಯ ಬಾರೊಂದರ ಎದುರುಗಡೆ ವೃದ್ಧರೊಬ್ಬರ ಮೃತದೇಹ ಮಂಗಳವಾರ(ಆ.18) ಬೆಳಗ್ಗೆ ಪತ್ತೆಯಾಗಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚಾಳ ನಿವಾಸಿ ಮರಿಯಪ್ಪ(70) ಎಂದು ಪೊಲೀಸ್ ತನಿಖೆಯಿಂದ ಗುರುತಿಸಲಾಗಿದೆ. ಈ ವ್ಯಕ್ತಿ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.
ಮೂಡಬಿದ್ರೆ – ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಮೀಪದ ಗುರುಪುರ- ಕೈಕಂಬ ಪೊಳಲಿ ದ್ವಾರದ ರಸ್ತೆಯ ಬಳಿ ದಿನಾಂಕ: 15-08-2026 ರಂದು 1.214 ಗ್ರಾಂ ತೂಕದ ಮಾದಕವಸ್ತು ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡಲೆತ್ನಿಸಿದ ಬೆಂಜನಪದವು, ಕಲ್ಲಿಗೆ ಎಂಬಲ್ಲಿಯ ನಿವಾಸಿಗಳಾದ ರಕ್ಷಿತ್ ಹಾಗೂ ಅಕ್ಷಯ್ ಬಿ. ಎಂಬವರನ್ನು ಬಜಪೆ ಪೊಲೀಸ್ ನಿರೀಕ್ಷಕರಾದ ಬಾಲಕೃಷ್ಣ ಎಚ್.ಎನ್ ನೇತ್ರತ್ವದ ಪೊಲೀಸರ ತಂಡ ದಾಳಿ ನಡೆಸಿ, ವಶಕ್ಕೆ ಪಡೆದು ಆರೋಪಿಗಳಿಂದ ಸುಮಾರು 65 ಸಾವಿರ ರೂಪಾಯಿ ಮೌಲ್ಯದ 1.214 ಕೆ.ಜಿ ತೂಕದ ಮಾದಕ ವಸ್ತು ಗಾಂಜಾ, ಗಾಂಜಾ ತುಂಬಿಸಿದ ಸಣ್ಣ ಜಿಪ್ ಲಾಕ್, ಪ್ಲಾಸ್ಟಿಕ್ ಕವರ್ ಗಳು, ತೂಕ ಮಾಡಲು ತಂದಿದ್ದ ಡಿಜಿಟಲ್ ತೂಕ ಮಾಪಕ, ಎರಡು ಮೊಬೈಲ್ ಪೋನ್ ಹಾಗೂ ಕೃತ್ಯಕ್ಕೆ ಬಳಸಿದ್ದ ಸ್ಕೂಟರ್ ವಾಹನ ಸಹಿತ ಒಟ್ಟು ಸುಮಾರು 1.65 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ. ಈ ಬಗ್ಗೆ ಬಜಪೆ ಬಜಪೆ ಪೊಲೀಸ್ ಠಾಣೆಯಲ್ಲಿ ಅ.ಕ್ರ.ಸಂ: 132/2026 ರಂತೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯದ…
ಉಡುಪಿ: ಅಮೆಜಾನ್ ಕಂಪನಿಯ ಆನ್‌ಲೈನ್ ಡೆಲಿವರಿ ಹಬ್ ಪ್ರಾಂಚಸಿ ಕೊಡಿಸುವುದಾಗಿ ನಂಬಿಸಿ 4,20,000 ರೂ. ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ 5 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ನಾಲ್ಕೂರು ಗ್ರಾಮದ ರವಿಚಂದ್ರ ಇವರಿಗೆ ದಿನಾಂಕ: 29/06/2026 ರಂದು ಎಮ್. ಸಾಯಿಕೃಷ್ಣ ಎಂಬುವವರು ಮೊಬೈಲ್ ಕರೆ ಮಾಡಿದ್ದರು. ಉಡುಪಿ-ಮಣಿಪಾಲ ಅಲೆವೂರು ರಸ್ತೆಯ ಬಾಳಿಗಾ ಕಾಂಪ್ಲೆಕ್ಸ್‌ನಲ್ಲಿ ಅಮೆಜಾನ್ ಆನ್‌ಲೈನ್ ಹಬ್ ಪ್ರಾಂಚಸಿ ಮಾಡಿಸಿಕೊಡುವುದಾಗಿ ಹೇಳಿದ್ದಾರೆ. ಮೊದಲಿಗೆ ನಿರಾಕರಿಸಿದ ರವಿಚಂದ್ರ ಅವರು, ಮತ್ತೆ ಬಂದ ಕರೆಯಲ್ಲಿ “ಮೊದಲು ಆನ್‌ಲೈನ್ ರಿಜಿಸ್ಟ್ರೇಶನ್ ಮಾಡಿಕೊಳ್ಳಬೇಕು. ನಂತರ ಕಂಪನಿಯ ಫೀಲ್ಡ್ ಆಫೀಸರ್ ಬಂದು ಒಪ್ಪಂದ ಮತ್ತು ಏರಿಯಾ ಪಿನ್ ಕೋಡ್ ಲಾಕ್ ಮಾಡಿಕೊಡುತ್ತಾರೆ” ಎಂಬ ನಂಬಿಕೆಗೆ ಒಳಗಾಗಿದ್ದಾರೆ. ಆರೋಪಿಗಳು ಎಮ್. ಸಾಯಿಕೃಷ್ಣ , ಎಮ್. ಗುರುಸ್ವಾಮಿ, ಸುರೇಶ್ ಕುಮಾರ್ ,ರಾಜ್ ಕುಮಾರ್ , ಮಹೇಶ್ ಎಂದು ಗುರುತಿಸಲಾಗಿದೆ. ಈ ಐವರು ಸೇರಿ ಉಡುಪಿ-ಮಣಿಪಾಲದಲ್ಲಿ ಡೆಲಿವರಿ ಹಬ್ ಪ್ರಾಂಚಸಿ ಮಾಡಿಕೊಡುವುದಾಗಿ ಹೇಳಿ, ಹಂತಹಂತವಾಗಿ ರವಿಚಂದ್ರ ಅವರಿಂದ…
ಕಾಸರಗೋಡು : ಸ್ನ್ಯಾಪ್‌ಚಾಟ್ ಸಾಮಾಜಿಕ ಜಾಲತಾಣದ ಮೂಲಕ ಪರಿಚಯ ಮಾಡಿಕೊಂಡು, 14 ಹಾಗೂ 16 ವರ್ಷದ ಇಬ್ಬರು ಶಾಲಾ ಬಾಲಕಿಯರನ್ನು ಮಂಗಳೂರು ಸಮೀಪದ ಉಳ್ಳಾಲದ ಲಾಡ್ಜ್‌ಗೆ ಕರೆದೊಯ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಮೂಲದ ರಿಜ್ವಾನ್ (23) ಹಾಗೂ ಮುಹಮ್ಮದ್ ಸಾದ್ (19) ಬಂಧಿತ ಆರೋಪಿಗಳು. ಇವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ – POCSO) ಕಾಯ್ದೆಯ ಸೆಕ್ಷನ್ 3 ಮತ್ತು 4 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೊಸದುರ್ಗ ಪೊಲೀಸ್ ಇನ್ಸ್‌ಪೆಕ್ಟರ್ ಮಾಹಿತಿಯಂತೆ, ಘಟನೆ ನಡೆಯುವ ಮೂರು ದಿನಗಳಷ್ಟೇ ಮುಂಚೆ ಬಾಲಕಿಯರಿಗೆ ಸ್ನ್ಯಾಪ್‌ಚಾಟ್‌ನಲ್ಲಿ ಆರೋಪಿಗಳ ಪರಿಚಯವಾಗಿತ್ತು. ಆಗಸ್ಟ್ 16 ರ ಭಾನುವಾರ ಇಬ್ಬರು ಆರೋಪಿಗಳು ಕಾರಿನಲ್ಲಿ ಕಾಂಞಂಗಾಡ್‌ಗೆ ಬಂದು, ಮನೆ ಸಮೀಪದಿಂದಲೇ ಬಾಲಕಿಯರನ್ನು ಕರೆದುಕೊಂಡು ಹೋಗಿದ್ದರು. ಬಾಲಕಿಯರು ತಮ್ಮ ಸ್ನೇಹಿತರನ್ನು ಭೇಟಿಯಾಗಲು ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದರು. ಸಂಜೆಯಾದರೂ ಬಾಲಕಿಯರು ಮನೆಗೆ ಹಿಂತಿರುಗದಿದ್ದಾಗ ಆತಂಕಗೊಂಡ ಪೋಷಕರು ತಕ್ಷಣ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ…










