ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಮಾರು 6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 2017ರಲ್ಲಿ ದಾಖಲಾಗಿದ್ದ ಧರ್ಮಸ್ಥಳ ಪೊಲೀಸ್ ಠಾಣೆಯ ಅಕ್ರಮ ಸಂಖ್ಯೆ 91/2017, ಐಪಿಸಿ ಕಲಂ 380 ಪ್ರಕರಣದಲ್ಲಿ ಆರೋಪಿಯಾಗಿದ್ದ ಬೆಂಗಳೂರು ಕುಂಬಳಗೋಡು ನಿವಾಸಿ ವೆಂಕಟೇಶ್ ಅಲಿಯಾಸ್ ಡಾಬರ್ ವೆಂಕಟೇಶ್ ಎಂಬಾತನು ಹಲವು ವರ್ಷಗಳಿಂದ ಪೊಲೀಸರಿಗೆ ಸಿಕ್ಕದೆ ತಲೆಮರೆಸಿಕೊಂಡಿದ್ದನು.ಆರೋಪಿಯ ಸುಳಿವು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ವೃಷಭ ಮತ್ತು ಚರಣ್ ರಾಜ್ ಅವರು ತುಮಕೂರು ಜಿಲ್ಲೆಯ ತಿಪಟೂರು ಎಂಬಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದರು.ಬಂಧಿತ ಆರೋಪಿಯನ್ನು ದಿನಾಂಕ 05-03-2026 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Author: main-admin
ಉಳ್ಳಾಲ: ಅರಣ್ಯಾಧಿಕಾರಿಯ ಬಾಡಿಗೆ ಮನೆಯಿಂದ ಕಳ್ಳರು ನಗ, ನಗದು ದೋಚಿದ ಘಟನೆ ಅಂಬಿಕಾರೋಡ್‌ನ ಕಾಪಿಕಾಡು ಎಂಬಲ್ಲಿ ನಡೆದಿದೆ. ಕೋಟೆಕಾರು ಉಪ ವಲಯ ಅರಣ್ಯಾಧಿಕಾರಿ ಮೆಹಬೂಬ್ ಸಾಬ್ ಗುಡಿಹೊಲ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಕಳ್ಳರು ಹತ್ತೂವರೆ ಲಕ್ಷ ರೂ ಹಣ, 181 ಗ್ರಾಂ ಚಿನ್ನ, ಬೆಳ್ಳಿಯನ್ನು ಮತ್ತು ಒಂದು ಬೈಕ್ ಅನ್ನು ಹೊತ್ತೊಯ್ದಿದ್ದಾರೆ. ಅವರು ತಮ್ಮ ಹುಟ್ಟೂರು ಕೊಪ್ಪಳಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮೆಹಬೂಬ್ ಸಾಬ್ ಇಂದು ತಮ್ಮ ಬಾಡಿಗೆ ಮನೆಗೆ ವಾಪಾಸ್ಸಾದ ಸಮಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಕಳ್ಳರ ಪಾಲಾಗಿರುವ ಹತ್ತುೂವರೆ ಲಕ್ಷ ರೂ. ಗಳನ್ನು ಅವರು ಬ್ಯಾಂಕಿನಿಂದ ಸಾಲ ಪಡೆದಿದ್ದರು ಎಂದು ತಿಳಿದು ಬಂದಿದೆ. ಕಳ್ಳತನ ಪ್ರಕರಣ ದಾಖಲಿಸಿಕೊಂಡಿರುವ ಉಳ್ಳಾಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕಳ್ಳತನ ಯಾವಾಗ ನಡೆದಿದೆ ಎನ್ನುವುದರ ಸುಳಿವು ಅಕ್ಕಪಕ್ಕದಲ್ಲಿ ಸಾಕಷ್ಟು ಮನೆಗಳಿದ್ದರೂ ಸಿಕ್ಕಿಲ್ಲ. ಹತ್ತಿರದಲ್ಲಿ ಎಲ್ಲೂ…
ಪುತ್ತೂರು: ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಪಿಸ್ತೂಲ್ ತೋರಿಸಿ ಗುಂಡು ಹೊಡೆಯಲು ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.ಪ್ರಕರಣದ ದೂರುದಾರರಾದ ಪುತ್ತೂರು ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ (42) ಅವರು ದಿನಾಂಕ 02-03-2026 ರಂದು ಮಧ್ಯಾಹ್ನ ಪುತ್ತೂರಿನಿಂದ ಕೂರ್ನಡ್ಕಕ್ಕೆ ತಮ್ಮ ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಪುತ್ತೂರು ರಿಲ್ಯಾನ್ಸ್ ಮಾಲ್ ಬಳಿ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಸುಮಾರು 30 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬ ಪಿಸ್ತೂಲ್ ತೋರಿಸಿ ಗುಂಡು ಹೊಡೆಯಲು ಯತ್ನಿಸಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ದೂರುದಾರರು ಹಾಗೂ ಸಾರ್ವಜನಿಕರು ಸೇರಿ ಆರೋಪಿಯನ್ನು ಹಿಡಿಯಲು ಯತ್ನಿಸಿದಾಗ, ಆತನು ಮೋಟಾರ್ ಸೈಕಲ್ ಸಹಿತ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 26/2026ರಂತೆ ಪ್ರಕರಣ ದಾಖಲಿಸಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 351(3) ಹಾಗೂ ಶಸ್ತ್ರಾಸ್ತ್ರ ಕಾಯ್ದೆ 1959ರ ಕಲಂ 3, 25, 27ರಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ತನಿಖೆಯ…
ಉಡುಪಿ : ವೈಯಕ್ತಿಕ ಕಾರಣದಿಂದ ಮನನೊಂದ ನರ್ಸಿಂಗ್ ವಿದ್ಯಾರ್ಥಿನಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಕಡಬ ರೆಂಜಿಲಾಡಿಯ ಲಾರೆನ್ಸ್ ಎಂಬವರ ಮಗಳು ಸ್ವೀಟಿ (18) ಎಂದು ಗುರುತಿಸಲಾಗಿದೆ. ಇವರು ಉಡುಪಿಯ ನರ್ಸಿಂಗ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಆಸ್ಪತ್ರೆಯ ವಸತಿ ನಿಲಯದಲ್ಲಿ ಉಳಿದುಕೊಳ್ಳುತ್ತಿದ್ದರು. ಫೆ.25ರಂದು ರಾತ್ರಿ ವಸತಿ ನಿಲಯದಲ್ಲಿರುವಾಗ ಇಲಿ ಪಾಷಣ ಸೇವಿಸಿದ್ದು, ಕೂಡಲೇ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಗಂಭೀರ ಸ್ಥಿತಿಯಲ್ಲಿದ್ದ ಅವರು ಮಾ.3ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಜತ್ತೂರು ಗ್ರಾಮದ ಮಣಿಕ್ಕಳ ಎಂಬಲ್ಲಿ ಮಾ.3ರಂದು ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸುತೇಶ್ ಕೆ.ಪಿ., ಪೊಲೀಸ್ ಉಪನಿರೀಕ್ಷಕರು (ಕಾ&ಸು) ರವರು ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ರಸ್ತೆ ಬದಿಯಲ್ಲಿ ಜೋರಾಗಿ ಶಬ್ದ ಕೇಳಿಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದರು. ಈ ವೇಳೆ ಅಕ್ರಮ ಕೋಳಿ ಅಂಕ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ದಾಳಿ ನಡೆಸಿದಾಗ ಅಲ್ಲಿದ್ದ ಜನರು ಪರಾರಿಯಾಗಿದ್ದು, ಮೂರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಕಡಬ ನಿವಾಸಿ ಸತೀಶ್ (38), ಬಂಟ್ವಾಳ ನಿವಾಸಿ ಮುರಳಿ (30) ಹಾಗೂ ಪುತ್ತೂರು ನಿವಾಸಿ ಮೋನಪ್ಪ ಕೆ (36) ಎಂದು ಗುರುತಿಸಲಾಗಿದೆ. ವಿಚಾರಣೆಯಲ್ಲಿ ದೇರಣ್ಣ ಮತ್ತು ಉಮೇಶ್ ಎಂಬವರು ಕೋಳಿ ಅಂಕ ನಡೆಸುತ್ತಿರುವುದು ತಿಳಿದುಬಂದಿದೆ.ಸ್ಥಳದಿಂದ ಐದು ಹುಂಜ ಕೋಳಿಗಳು, ಎರಡು ಬಾಲುಗಳು (ಕೋಳಿಗಳ ಕಾಲಿಗೆ ಕಟ್ಟುವ ಸಣ್ಣ ಕತ್ತಿಗಳು), ಪಣವಾಗಿ ಇಟ್ಟಿದ್ದ ರೂ. 2,300 ನಗದು…
ಮಲ್ಪೆ : ಹಿಂದೂ ಸಂಘಟನೆಯ ಮುಖಂಡ ಮಂಜು ಕೊಳ ಅವರಿಗೆ ಯುವಕರ ತಂಡ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸರು 5 ಮಂದಿ ಯುವಕರನ್ನು ವಿಚಾರಣೆ ನಡೆಸುತ್ತಿದ್ದಾರೆ. ಕೃತ್ಯ ವೈಯಕ್ತಿಕ ಕಾರಣಗಳಿಂದ ನಡೆದಿದ್ದಾಗಿ ಉಡುಪಿ ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಮಲ್ಪೆ ಬೀಚ್ ಸಮೀಪ ನಡೆದ ಚಾಕು ದಾಳಿ ಪ್ರಕರಣದಲ್ಲಿ ನಾಲ್ವರನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಕಾನೂನಿನ ಸಂಘರ್ಷಕ್ಕೋಳಗಾದ ಬಾಲಕನನ್ನೂ ವಶಕ್ಕೆ ಪಡೆದು ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸಲಾಗುತ್ತಿದೆ. ಮಾರ್ಚ್ 3ರಂದು ರಾತ್ರಿ ಸುಮಾರು 9.30ಕ್ಕೆ ಉಡುಪಿ ತಾಲೂಕು ಕೊಡವೂರು ಗ್ರಾಮದ ಮಲ್ಪೆ ಬೀಚ್ ಬಳಿ ಇರುವ ಬ್ಲೂ ವೇವ್ಸ್ ಗೆಸ್ಟ್ ಹೌಸ್ ಸಮೀಪ ಈ ಘಟನೆ ನಡೆದಿದೆ. ಆರೋಪಿತರಾದ ಅಮೃತ್ ಭಂಡಾರಿ, ಪ್ರಜ್ಞೇಶ್, ಪುನಿತ್ ಪೂಜಾರಿ ಮತ್ತು ಅಭೀಜಿತ್ ಅವರು ಬಾಲಕನೊಂದಿಗೆ ಸೇರಿ ಒಂದೇ ಉದ್ದೇಶದಿಂದ ಅಕ್ರಮ ಕೂಟ ಸೇರಿಕೊಂಡು, KA19AD1036 ಸಂಖ್ಯೆಯ ಬಿಳಿ ಬೊಲೆರೊ ವಾಹನದಲ್ಲಿ ಸ್ಥಳಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಅಮೃತ್ ಭಂಡಾರಿಯ ತಂಗಿಯ ವಿಚಾರವಾಗಿ ತಗಾದೆ…
ಮಂಗಳೂರು: “Support madi bro Ullal masjid hathira bomb blast madthini” ಇನ್‌ಸ್ಟಾಗ್ರಾಂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಕಾಮೆಂಟ್ ಮಾಡಿ ಧರ್ಮಗಳ ಮಧ್ಯೆ ದ್ವೇಷ ಹಾಗೂ ವೈಮನಸ್ಸು ಉಂಟುಮಾಡುವ ಪ್ರಯತ್ನ ನಡೆಸಿದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ಮಂಗಳೂರು ನಗರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ. 41/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 196(2), 197(2), 299, 353(2) ಅನ್ವಯ ಪ್ರಕರಣ ದಾಖಲಾಗಿದೆ. ಬಂಧಿತನನ್ನು ಶಂಕರ್ ಮಸ್ತಪ್ಪ ಮೊಗೇರ್ (35), ದಿ. ಮಸ್ತಪ್ಪ ಅವರ ಪುತ್ರ, ದೇವಿನಗರ, ಜಾಲಿ, ಭಟ್ಕಳ, ಉತ್ತರ ಕನ್ನಡ ನಿವಾಸಿ ಎಂದು ಗುರುತಿಸಲಾಗಿದೆ. ಮಾ. 3ರಂದು ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡ ಆರೋಪಿಯನ್ನು ದಸ್ತಗಿರಿ ಮಾಡಿ, ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್‌ನ್ನು ವಶಪಡಿಸಿಕೊಂಡಿದೆ.ಆರೋಪಿಯನ್ನು ಮಂಗಳೂರು ನಗರದ 7ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿ: ಹಿಂದೂ ಸಂಘಟನೆಯ ಮುಖಂಡ ಮಂಜು ಕೊಳ ಅವರಿಗೆ ಯುವಕರಿಬ್ಬರು ನಿನ್ನೆ ರಾತ್ರಿ ಚೂರಿ ಇರಿದ ಘಟನೆ ಮಲ್ಪೆಯಲ್ಲಿ ನಡೆದಿದೆ. ಗಾಯಗೊಂಡ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿಂದೂ ಯುವಸೇನೆಯ ಮುಖಂಡ, ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜುಕೊಳ ಅವರು ಇಂದು ಬೀಚ್ ಬಳಿ ಜೋಡಿಯೊಂದರ ಪ್ರೇಮದ ವಿಚಾರವಾಗಿ ರಾಜಿ ಪಂಚಾಯಿತಿಗೆ ಕರೆದಿದ್ದರು. ಈ ಸಂದರ್ಭ ಮಾತಿಗೆ ಮಾತು ಬೆಳೆದಾಗ ಯುವಕ ಚೂರಿ ಇರಿದಿದ್ದಾನೆ ಎಂದು ತಿಳಿದುಬಂದಿದೆ. ಹೊಟ್ಟೆ ಭಾಗಗಕ್ಕೆ ಇರಿದ ಪರಿಣಾಮ ಅಲ್ಲೆ ಕುಸಿದ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆಂದು ಪೊಲೀಸ್ ಮೂಲಗಳು ತಿಳಿಸಿವೆ.
ಸುಳ್ಯ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸ್ ವಶದಿಂದ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಸುಳ್ಯದ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 118/24 (ಕಲಂ 121(1), 132, 262 BNS) ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದ ಸುಳ್ಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ ಅವರು ಸಮಗ್ರ ತನಿಖೆ ನಡೆಸಿ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿ ರಾಘವನ್ @ ಕೋಳಿಕರಣ್ ವಿರುದ್ಧ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ಸುಳ್ಯ ಕೋರ್ಟಿನಲ್ಲಿ ನಡೆದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶ ಬಿ. ಮೋಹನ್ ಬಾಬು ಅವರು ಆರೋಪಿಗೆ ಕೆಳಕಂಡಂತೆ ಶಿಕ್ಷೆ ವಿಧಿಸಿದ್ದಾರೆ: • ಕಲಂ 121(1) ರಡಿಯಲ್ಲಿ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ರೂ.10,000 ದಂಡ. ದಂಡ ಕಟ್ಟಲು ವಿಫಲರಾದಲ್ಲಿ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ. • ಕಲಂ 132 ರಡಿಯಲ್ಲಿ ಸಾರ್ವಜನಿಕ ಕರ್ತವ್ಯಕ್ಕೆ ಅಡ್ಡಿಪಡಿಸಲು ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ 1 ವರ್ಷದ…
ಮನೆಯಿಂದ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯನಗರ ಅಂಬಾಗಿಲಿನ ನಿವಾಸಿ ಸುರೇಶ್ ಪೂಜಾರಿ(54) ಎಂಬವರ ಶವವು ಕೊಡವೂರು ಶಂಕರನಾರಾಯಣ ದೇವಸ್ಥಾನದ ಹಿಂದುಗಡೆ ಡ್ರೈನೇಜ್ ನೀರು ಹರಿಯುವ ಇಂದ್ರಾಣಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುರೇಶ್ ಪೂಜಾರಿ ಅವರು ಕೆಲವು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಉಡುಪಿ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದ್ರಾಣಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ಮೇಲಕ್ಕೆತ್ತಲಾಯಿತು. ಮಲ್ಪೆಯ ಶಬೀರ್, ಮುಸ್ತಾಕ್ ನೆರವಾದರು. ಮಲ್ಪೆ ಪೋಲಿಸ್ ಠಾಣೆಯ ಎ.ಎಸ್. ಐ ಹರೀಶ್ ಕೆ ಅವರು ಮಹಜರು ಪ್ರಕ್ರಿಯೆ ನಡೆಸಿದರು.










