ಕಾಪು ಬೀಚ್‌ನಲ್ಲಿ ಯುವಕನೋರ್ವ ದ್ವಿಚಕ್ರ ವಾಹನ, ಮೊಬೈಲ್ ಜೊತೆಗೆ ಬೆಲೆಬಾಳುವ ವಸ್ತುಗಳನ್ನು ಬಿಟ್ಟು ನಾಪತ್ತೆಯಾಗಿದ್ದು, ನಿನ್ನೆಯಿಂದ ಅವನಿಗಾಗಿ ಬೀಚ್‌ನುದ್ದಕ್ಕೂ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ನಾಪತ್ತೆಯಾಗಿರುವ ಯುವಕನನ್ನು ಕಾಪು ಪಡುಗ್ರಾಮ ನಿವಾಸಿ ತುಳಸಿ ಸಾಲ್ಯಾನ್ ಎಂಬವರ ಪುತ್ರ 20ರ ಹರೆಯದ ಕರಣ್ ಸಾಲ್ಯಾನ್ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿಯಿಂದ ಕರಣ್ ನಾಪತ್ತೆಯಾಗಿದ್ದು, ಶುಕ್ರವಾರ ಬೆಳಗ್ಗೆ ಹುಡುಕಿದಾಗ ಕಾಪು ಬೀಚ್‌ನಲ್ಲಿ ಅವನ ಮೊಬೈಲ್ ಮತ್ತು ಮೊಬೈಲ್, ಪರ್ಸ್ ಅನಾಥ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕರಣ್ ಸಾಲ್ಯಾನ್ ರವರ ತಾಯಿ ತುಳಸಿ ಸಾಲ್ಯಾನ್ ನೀಡಿದ ದೂರಿನ ಪ್ರಕಾರ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹುಡುಕಾಟ ನಡೆಸುತ್ತಿದ್ದಾರೆ.
Author: main-admin
ಚಂಡೀಗಢ: ಸಂಸದೆ ಕಂಗನಾ ರಣಾತವತ್‌ಗೆ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಸಿಂಗ್ ಕೌರ್ ಅವರನ್ನು ಮೇಲಾಧಿಕಾರಿಗಳು ಅಮಾನತು ಮಾಡಿ ಆದೇಶಿಸಿದ್ದಾರೆ. ಅಮಾನತು ಆದೇಶದ ನಂತರ ಕುಲ್ವಿಂದರ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಸಂಸದೆಯ ಕೆನ್ನೆಗೆ ಹೊಡೆದ ಬಗ್ಗೆ ಅವರ ವಿರುದ್ಧ ಪ್ರಕರಣವೂ ದಾಖಲಾಗಿದೆ. ರೈತ ಸಮುದಾಯ ದೆಹಲಿಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ 100ರೂಪಾಯಿ ಕೊಟ್ಟರೆ ರೈತರು ಪ್ರತಿಭಟನೆಗೆ ಭಾಗವಹಿಸುತ್ತಾರೆ ಎಂದು ಈಗ ಸಂಸದೆಯಾಗಿ ಆಯ್ಕೆಯಾಗಿರುವ ನಟಿ ಕಂಗನಾ ಹೇಳಿದ್ದರು. ಈ ಹೇಳಿಕೆ ವಿರೋಧಿಸಿ ನಾನು ಕಂಗನಾಗೆ ಕಪಾಳಮೋಕ್ಷ ಮಾಡಿದ್ದೇನೆ ಎಂದು ಘಟನೆ ನಂತರ ಮಹಿಳಾ ಕಾನ್ಸ್‌ಟೇಬಲ್ ಕುಲ್ವಿಂದರ್ ಕೌರ್ ಹೇಳಿದ್ದರು.
ಬೆಂಗಳೂರು : ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಜಾಮೀನು ಮಂಜೂರಾಗಿದೆ. 2023ರಲ್ಲಿ ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಶೇಕಡಾ 40 ಕಮಿಷನ್ ಮಾಡಿದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಮುಂದೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದರು. ಬಿಜೆಪಿ ವಿರುದ್ಧ ಕಮಿಷನ್ ಪಡೆದ ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದ್ದು ಇದರ ವಿಚಾರಣೆ ಈಗ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಪ್ರಕರಣದ ವಿಚಾರಣೆಗೆ ಕಳೆದ ವಾರ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಜಾಮೀನು ಸಿಕ್ಕಿದನ್ನು ಸ್ಮರಿಸಬಹುದಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಬಜಪೆ ಗ್ರಾಮದ ಶಾಂತಿಗುಡ್ಡೆ ಚೆಕ್ ಪೋಸ್ಟ್ ಬಳಿ ಬಜಪೆ ಕಡೆಯಿಂದ ಇಬ್ಬರು ವ್ಯಕ್ತಿಗಳು ದನಗಳನ್ನು ಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಬಿಳಿ ಬಣ್ಣದ ಗೂಡ್ಸ್ ವಾಹನದಲ್ಲಿ ತುಂಬಿಸಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಬಜಪೆ ಪೊಲೀಸರು ಬೆನ್ನಟ್ಟಿ 7 ದನ, 2 ಕೋಣ, ಹಾಗೂ ಮಿನಿ ಗೂಡ್ಸ್ ವಾಹನವನ್ನು ಜೂ. 5ರಂದು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ವಶಕ್ಕೆ ಪಡೆದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 8 ಲಕ್ಷ ರೂಪಾಯಿ. ದನ ಹಾಗೂ ಕೋಣಗಳನ್ನು ಎಲ್ಲಿಂದಲೋ ಕಳವು ಮಾಡಿ, ಅವುಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಮಿನಿ ಗೂಡ್ಸ್ ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ ಸಾಗಾಟ ಮಾಡುತ್ತಿದ್ದ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಜಪೆ ಪೊಲೀಸರು ಈ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು : ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್ ಆದೇಶದ ಅನ್ವಯ ಜೂನ್ 12ರವರೆಗೆ ಇರಲಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ. 2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕು. ರಾಜ್ಯದಲ್ಲಿ ಇಲ್ಲಿಯವರೆಗೆ ಸುಮಾರು 45 ಲಕ್ಷ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಂಡಿದ್ದು, 1.55 ಕೋಟಿ ವಾಹನಗಳು ಇನ್ನೂ ಅಳವಡಿಸಿಕೊಂಡಿಲ್ಲ ಎಂದು ಮಾಹಿತಿ ನೀಡಿದೆ. ಏಪ್ರಿಲ್.1, 2019ಕ್ಕಿಂತ ನೋಂದಾಯಿಸಿಕೊಂಡ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದು ಕಡ್ಡಾಯವಾಗಿದೆ. ವಾಹನ ಮಾಲೀಕರಾದಂತ ನೀವು ನಿಮ್ಮ ಹಳೆಯ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಹೇಗೆ ಎಳವಡಿಸಬೇಕು ಅನ್ನೋ ಬಗ್ಗೆ ಮುಂದೆ ಓದಿ. ಈ ವಿಧಾನ ಅನುಸರಿಸಿ, ನಿಮ್ಮ ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿ • https://transport.karnataka.gov.in ಅಥವಾ www.siam.in ಜಾಲತಾಣಕ್ಕೆ ಭೇಟಿ ನೀಡಿ,…
ಮಂಗಳೂರು: ಷೇರು ಹೂಡಿಕೆ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 19.50 ಲಕ್ಷ ರೂ. ವಂಚಿಸಿದ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಆಕಾಶ್ ವರ್ನಭಾನಿ ಎಂಬಾತ ಕಳುಹಿಸಿದ ಲಿಂಕ್ ಮೂಲಕ ತಾನು ಎ.7ರಂದು ವಾಟ್ಸ್ಆ್ಯಪ್ ಗ್ರೂಪ್ ಗೆ ಸೇರ್ಪಡೆಗೊಂಡಿದ್ದೆ. ಬಳಿಕ ಆ ಗ್ರೂಪ್ ನಲ್ಲಿ ಸಿಂಗ್ ಎಂಬಾತ ಹಣವನ್ನು ಕಂಪೆನಿಗಳ ಷೇರುಗಳಲ್ಲಿ ಹೂಡಿಕೆ ಮಾಡುವ ವಿಚಾರ ತಿಳಿಸಿದ. ಅದರಂತೆ ತಾನು ಎ.29ರಂದು 1 ಲಕ್ಷ ರೂ.ವರ್ಗಾವಣೆ ಮಾಡಿದ್ದೆ. ಮೇ 3ರಂದು 3 ಲಕ್ಷ ರೂ., ಮೇ 10ರಂದು 1.50 ಲಕ್ಷರೂ., ಮೇ 17ರಂದು 4 ಲಕ್ಷ ರೂ. ಹೀಗೆ ಹಂತ ಹಂತವಾಗಿ 19.50 ಲಕ್ಷ ರೂ. ವರ್ಗಾಯಿಸಿದ್ದೆ. ನಂತರ ಹೂಡಿಕೆ ಮೊತ್ತವನ್ನು ವಾಪಸ್ ನೀಡುವಂತೆ ಕೇಳಿದಾಗ ಆರೋಪಿ ಅನೂಜ್ ಗುಪ್ತಾ ಎಂಬಾತ ಹೆಚ್ಚುವರಿಯಾಗಿ 7.88 ಲಕ್ಷ ರೂ. ಪಾವತಿಸುವಂತೆ ಸೂಚಿಸಿದ. ಆಗ ತಾನು ಮೋಸ ಹೋಗಿರುವುದು ಗೊತ್ತಾಯಿತು ಎಂದು ವಂಚನೆಗೊಳಗಾದ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ.
ಬೆಳ್ತಂಗಡಿ : ಗಲಾಟೆಯ ವೇಳೆ ಅಪ್ರಾಪ್ತೆಯ ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಿ ಧರ್ಮಸ್ಥಳ ಪೊಲೀಸರು ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಎಂಬಾತನ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಬಿಜೆಪಿ ಮುಖಂಡನ ವಿರುದ್ಧ ಮಾನಭಂಗ ಯತ್ನ, ಅವ್ಯಾಚ ಶಬ್ದಗಳಿಂದ ನಿಂದನೆ ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತೆಯ ಮೇಲೆ ಮಾನಭಂಗಕ್ಕೆ ಯತ್ನ ಪ್ರಕರಣ ಸಂಬಂಧ ಆರೋಪಿ ರಾಜೇಶ್ ಎಮ್.ಕೆ ವಿರುದ್ಧ ಜೂ.5ರಂದು ಮಾನಭಂಗ, ಅವ್ಯಾಚ ಶಬ್ದಗಳಿಂದ ನಿಂದನೆ ಹಾಗೂ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬಿಜೆಪಿ ಮುಖಂಡ ಹಾಗೂ ಎಸ್‌ಟಿ ಯುವ ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ (33) ಎಂಬವರ ಮೇಲೆ ಜೂ.4ರಂದು ರಾತ್ರಿ ತಲವಾರು ದಾಳಿ ನಡೆಸಿ ಕೊಲೆ ಯತ್ನ ನಡೆಸಿದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.ಕಳೆಂಜ ನಿವಾಸಿ ಕುಶಲಪ್ಪ ಗೌಡ (48) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.ರಾಜೇಶ್ ಮೇಲೆ ಕುಶಲಪ್ಪ ಗೌಡ ಕ್ಷುಲ್ಲಕ ಕಾರಣಕ್ಕೆ ಜಾತಿ ನಿಂದನೆ ಮಾಡಿ, ಮರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ, ಚಿನ್ನ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕುಶಲಪ್ಪ ಗೌಡ ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಮಂಗಳೂರು ಸೆಷನ್ಸ್ ಕೋರ್ಟ್ ನ್ಯಾಯಧೀಶರ ಮನೆಗೆ ರಾತ್ರಿ ಹಾಜರುಪಡಿಸಿದ್ದು, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಇದೀಗ ರಾಜ್ಯದಲ್ಲಿ 15ರಿಂದ 20 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲುವ ನಿರೀಕ್ಷೆ ಹೊಂದಿದ್ದೆವು. ಆದರೆ, ಒಂದು ಸ್ಥಾನದಿಂದ 9 ಸ್ಥಾನ ಗೆಲ್ಲುವ ಮೂಲಕ ಪಕ್ಷ ಉತ್ತಮ ಸಾಧನೆಯನ್ನೇ ಮಾಡಿದೆ. ಅಲ್ಲದೆ, 2019ಕ್ಕಿಂತ ಈ ಬಾರಿ ಶೇ.14ರಷ್ಟು ಮತ ಗಳಿಕೆ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದೀಗ ಗ್ಯಾರಂಟಿ ಯೋಜನೆಗಳಿಗೆ ಜನ ಮನ್ನಣೆ ದೊರಕಿಲ್ಲ ಅನ್ನೋ ಕಾರಣಕ್ಕೆ ಕಾಂಗ್ರೆಸ್‌ನ ಕೆಲ ನಾಯಕರು ಅನೌಪಚಾರಿಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಗ್ಯಾರಂಟಿ ಯಯೋಜನೆಗಳ ಕುರಿತಂತೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಗ್ಯಾರಂಟಿ ಯೋಜನೆ ಬಗ್ಗೆ ಪುನರ್ ಪರಿಶೀಲನೆ ನಡೆಯಬೇಕು ಎಂಬ ಅಭಿಪ್ರಾಯವನ್ನು ಬಹುತೇಕ ಶಾಸಕರು ಹೊಂದಿದ್ದಾರೆ ಎಂದು ಮುಖ್ಯಮಂತ್ರಿಯವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಇನ್ನು ಇದಕ್ಕೆ ಒಪ್ಪದ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲಾಗದು ಎಂದು ಈ ನಾಯಕರಿಗೆ ತಿಳಿಸಿದರು ಎಂದು ಮೂಲಗಳು ಹೇಳಿವೆ. ರಾಜ್ಯದ ಎಲ್ಲ ಆರ್ಥಿಕ ಸಂಪನ್ಮಲಗಳನ್ನು ಸರ್ಕಾರ ಗ್ಯಾರಂಟಿ ಯೋಜನೆ…
ಉಳ್ಳಾಲ: ಬಜರಂಗದಳ ಕಾರ್ಯಕರ್ತನಿಗೆ ಸ್ಥಳೀಯ ಸಂಘದ ಸದಸ್ಯರೊಬ್ಬರು ಹಲ್ಲೆ ನಡೆಸಿರುವ ಘಟನೆ ಕುಂಪಲ ಕೇಸರಿನಗರ ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ.ಕುಂಪಲ ನಿವಾಸಿ ಬಜರಂಗದಳ ಕಾರ್ಯಕರ್ತ ಪ್ರವೀಣ್ ಪೂಜಾರಿ ಯಾನೆ ಪಿಟ್ಟಿ (39) ಎಂಬವರ ಮೇಲೆ ಹಲ್ಲೆ ನಡೆದಿದೆ. ಇವರಿಗೆ ಸ್ಥಳೀಯ ಕೇಸರಿ ಮಿತ್ರ ವೃಂದದ ಗೌತಮ್ ಎಂಬವರು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಜೂ. 4 ರಂದು ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪಟಾಕಿ ಸಿಡಿಸಿದ ವಿಚಾರದಲ್ಲಿ ಬಜರಂಗದಳ ಹಾಗೂ ಕೇಸರಿ ಮಿತ್ರ ವೃಂದದ ಸದಸ್ಯರ ನಡುವೆ ವಾಗ್ವಾದ ನಡೆದಿತ್ತು. ಈ ಸಂಬಂಧ ಕೆಲಸದಿಂದ ವಾಪಸ್ಸಾಗುತ್ತಿದ್ದ ಪ್ರವೀಣ್ ಪೂಜಾರಿ ಅವರನ್ನು ಅಡ್ಡಗಟ್ಟಿದ ಗೌತಮ್ ಹಲ್ಲೆ ನಡೆಸಿ ದೂಡಿದ್ದು, ಪರಿಣಾಮ ಚರಂಡಿಗೆ ಬಿದ್ದ ಪ್ರವೀಣ್ ತಲೆಗೆ ಗಾಯವಾಗಿದೆ. ಗಾಯಾಳುವನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗಡ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ಗೌತಮ್ ಕಾಂಗ್ರೆಸ್ ಕಾರ್ಯಕರ್ತನಾಗಿದ್ದು, ಇದರಿಂದ ಪಟಾಕಿ ಸಿಡಿಸಿದ ದ್ವೇಷಕ್ಕೆ ಹಲ್ಲೆ ನಡೆಸಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ವೈರಲ್ ಆಗಿದೆ ಉಳ್ಳಾಲ ಠಾಣಾ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.