Author: main-admin

ಮಂಗಳೂರು : ಪ್ರೇಯಸಿಯಿಂದ ಯಾವುದೇ ಕರೆಗಳು ಹಾಗೂ ಮೆಸೇಜ್ ಬರದ ಹಿನ್ನೆಲೆಯಲ್ಲಿ ಪ್ರೇಮ ವೈಫಲ್ಯ ಹಿನ್ನೆಲೆಯಲ್ಲಿ ಮಂಗಳೂರು ಮೂಲದ ಯುವಕನೊಬ್ಬ ವಿದೇಶದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇದೀಗ ವರದಿಯಾಗಿದೆ. ಮೃತ ಯುವಕನನ್ನು ಪುನೀತ್ ಪೂಜಾರಿ (32) ಎಂದು ತಿಳಿದುಬಂದಿದೆ. ಮಂಗಳೂರಿನ ಸೋಮೇಶ್ವರದ ಪುನೀತ್ ಕೆಲಸದ ನಿಮಿತ್ ಒಮನ್ ದೇಶದಲ್ಲಿದ್ದನು. ಕಳೆದ ಒಂದೂವರೆ ವರ್ಷಗಳಿಂದ ಪುನೀತ್ ಪೂಜಾರಿ ಒಮನ್ ದೇಶದಲ್ಲಿ ಲಿಫ್ಟ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದನು. ಪುನೀತ್ ಪೂಜಾರಿ ಒಂದೂವರೆ ತಿಂಗಳ ಹಿಂದೆಯಷ್ಟೇ ಊರಿಗೆ ಬಂದು ಹಿಂದಿರುಗಿದ್ದನು. ಇದೀಗ ಪ್ರೇಮ ವೈಫಲ್ಯದಿಂದ ಆತ್ಮ-ಹತ್ಯೆ ಮಾಡಿಕೊಂಡಿದ್ದಾನೆ. ಕಳೆದ ನಾಲ್ಕು ವರ್ಷಗಳಿಂದ ಉರ್ವಾ ನಿವಾಸಿ ಯುವತಿಯನ್ನು ಪ್ರೀತಿಸುತ್ತಿದ್ದನು. ಸೋಶಿಯಲ್ ಮೀಡಿಯಾ ಖಾತೆಗಳಲ್ಲಿಯೂ ಯುವತಿ ಜೊತೆಗಿನ ಫೋಟೋಗಳನ್ನು ಸಹ ಶೇರ್ ಮಾಡಿಕೊಂಡಿದ್ದನು. ಕಳೆದ ಕೆಲವು ದಿನಗಳಿಂದ ಯುವತಿ ಫೋನ್ ಕರೆಗಳನ್ನು ಸ್ವೀಕರಿಸದೇ, ಸಂದೇಶಗಳಿಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಇದರಿಂದ ಮನನೊಂದು ಪುನೀತ್ ಪ್ರಾಣ ಕಳೆದುಕೊಂಡಿದ್ದಾನೆ.

Read More

ಬೆಳ್ತಂಗಡಿ: ಹಲವು ಸಮಯಗಳಿಂದ ಉಜಿರೆ-ಬೆಳ್ತಂಗಡಿಯ ರಸ್ತೆಗಳಲ್ಲಿ ವಿವಿಧ ಭಂಗಿಗಳಲ್ಲಿ ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ವೀಲಿಂಗ್ ರೀಲ್ಸ್ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಯುವಕನನ್ನು ಬೆಳ್ತಂಗಡಿ ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಜಂಕ್ಷನ್ ರಸ್ತೆಯಲ್ಲಿ ಫೆ.8 ರಂದು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಡ್ಯಾನಿ ಫ್ರಾನ್ಸಿಸ್ ತಾವ್ರೋ ಎಂಬವರು ಕರ್ತವ್ಯದ ವೇಳೆ ಹೆಲ್ಮೆಟ್ ಧರಿಸದೆ ಆಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಸಾರ್ವಜನಿಕರಿಗೆ ಹಾಗೂ ಸಿಬ್ಬಂದಿಯ ಪ್ರಾಣಕ್ಕೆ ಹಾನಿಯಾಗುವಂತೆ ವೀಲಿಂಗ್ ಮಾಡಿಕೊಂಡು ಧರ್ಮಸ್ಥಳ ರಸ್ತೆಯ ಮೂಲಕ ಪರಾರಿಯಾಗಿದ್ದ ಬಗ್ಗೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಘಟನೆಯ ವರದಿಯನ್ನು ಮಾಡಿದ್ದರು. ಬಳಿಕ ಈತ ವಿವಿಧ ಕಡೆಗಳಲ್ಲಿ ಅಪಾಯಕಾರಿಯಾಗಿ ವೀಲಿಂಗ್ ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ವಿಡಿಯೋಗಳನ್ನು ಬೆಳ್ತಂಗಡಿ ಸಂಚಾರಿ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದರು ಅದ್ರೆ ಸವಾರ ಮಾತ್ರ ಪೊಲೀಸರ ಕೈಗೆ ಸಿಗುತ್ತಿರಲಿಲ್ಲ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಕುಮಾರ್ ಪಿ…

Read More

ಮಂಗಳೂರು: ಸರ್ಕಾರಿ ಕಾಮಗಾರಿಯ ಬಿಲ್ ಪಾವತಿಗೆ ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ವಿದ್ಯುತ್ ಉಪವಿಭಾಗ, ಲೋಕೋಪಯೋಗಿ ಇಲಾಖೆ, ಮಂಗಳೂರು ಕಚೇರಿಯ ಎಸ್‌ಡಿಎ ಸಂಪತ್ ಅವರನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದ್ದಾರೆ. ಫಿರ್ಯಾದುದಾರರು ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಪ್ರಥಮ ದರ್ಜೆ ಇಲೆಕ್ಟ್ರಿಕಲ್ ಗುತ್ತಿಗೆದಾರರಾಗಿದ್ದು, 2025ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಾರಿ ದೀಪ ವಿಸ್ತರಣೆಯ ಸರ್ಕಾರಿ ಕಾಮಗಾರಿಗಳನ್ನು ನಿರ್ವಹಿಸಿದ್ದರು. ಈ ಕಾಮಗಾರಿಗಳ ಬಿಲ್ ಪಾವತಿಗಾಗಿ ಶೇ.4ರಂತೆ ಒಟ್ಟು ರೂ.22,600/- ಲಂಚ ನೀಡಬೇಕೆಂದು ಸಂಪತ್ ಅವರು ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಈ ಸಂಬಂಧ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಸಂಪತ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಸೋಮವಾರ ಫಿರ್ಯಾದುದಾರರಿಂದ ರೂ.22,600/- (ಇಪ್ಪತ್ತೆರಡು ಸಾವಿರ ಆರು ನೂರು) ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಸಂಪತ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಅವರ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಂಡು ತನಿಖೆ ಮುಂದುವರಿಸಲಾಗಿದೆ. ಈ…

Read More

ಉಡುಪಿ: ಜಿಲ್ಲೆಯ ಹೆಗ್ಗುಂಜೆ ಗ್ರಾಮದ ಉದಯ ಮರಕಾಲ ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ನ್ಯಾಯಾಧೀಶೆ ಶ್ವೇತಾಕ್ಷಿ ಅವರು ಆರೋಪಿಗೆ ಒಂದು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿ ಹಾಗೂ ದಂಡ ವಿಧಿಸಿ ಆದೇಶಿಸಿದ್ದಾರೆ. ದಂಡದ ಮೊತ್ತ 55,000 ರೂ. ಪಾವತಿಸದಿದ್ದರೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದೆಂದು ಆದೇಶಿಸಿದ್ದಾರೆ. ಪಿರ್ಯಾದಿದಾರ ಶಿರಿಯಾರ ಗ್ರಾಮದ ಬಡಾಕರೆಯ ನಿವಾಸಿ ಸುರೇಂದ್ರ ಶೆಟ್ಟಿ ಪರ ಉಡುಪಿಯ ಹಿರಿಯ ನ್ಯಾಯವಾದಿ ಶಿರಿಯಾರ ಕಲ್ಮರ್ಗಿ ಪ್ರಭಾಕರ ನಾಯಕ್ ವಾದಿಸಿದ್ದರು.

Read More

ಮಂಗಳೂರು : ಇತ್ತೀಚಿನ ದಿನಗಳಲ್ಲಿ ಮಂಗಳೂರಿನಲ್ಲಿ ನಡೆದ ಅತಿದೊಡ್ಡ ವಿದೇಶಿ ಕರೆನ್ಸಿ ವಶಪಡಿಸಿಕೊಳ್ಳುವಿಕೆಯಲ್ಲಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 80 ಲಕ್ಷ ರೂ.ಗೆ ಸಮಾನವಾದ ಕರೆನ್ಸಿಯನ್ನು ವಶಪಡಿಸಿಕೊಳ್ಳಲಾಗಿದೆ. ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸಿದ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಮಂಗಳೂರು ಪ್ರಾದೇಶಿಕ ಘಟಕದ ಅಧಿಕಾರಿಗಳು, ನಿರ್ಗಮನ ಹಾಲ್‌ಗೆ ಆಗಮಿಸಿದಾಗ ಒಬ್ಬ ಪುರುಷ ಪ್ರಯಾಣಿಕ ಮತ್ತು ಇಬ್ಬರು ಮಹಿಳಾ ಪ್ರಯಾಣಿಕರನ್ನು ತಡೆದರು. ಈ ಮೂವರು ಫೆಬ್ರವರಿ 27 ರಂದು ಇಂಡಿಗೋ ವಿಮಾನ 6E 1438 ಮೂಲಕ ಅಬುಧಾಬಿಗೆ ಪ್ರಯಾಣಿಸಬೇಕಿತ್ತು. ತಪಾಸಣೆಯ ಸಮಯದಲ್ಲಿ, ಅಧಿಕಾರಿಗಳು ತಮ್ಮ ಕೈ ಸಾಮಾನುಗಳಲ್ಲಿ ಮತ್ತು ಚೆಕ್-ಇನ್ ಸಾಮಾನುಗಳಲ್ಲಿ ಜಾಣತನದಿಂದ ಬಚ್ಚಿಟ್ಟಿದ್ದ ವಿದೇಶಿ ಕರೆನ್ಸಿಯನ್ನು ಕಂಡುಕೊಂಡರು. ವಶಪಡಿಸಿಕೊಂಡ ಕರೆನ್ಸಿಯಲ್ಲಿ ದೊಡ್ಡ ಪ್ರಮಾಣದ ಯುಎಸ್ ಡಾಲರ್‌ಗಳು, ಸಣ್ಣ ಪ್ರಮಾಣದ ಪೌಂಡ್ ಸ್ಟರ್ಲಿಂಗ್, ಸೌದಿ ರಿಯಾಲ್ ಮತ್ತು ಯುಎಇ ದಿರ್ಹಮ್ ಸೇರಿವೆ. ಕೇರಳ ಮೂಲದ ಮೂವರು ಪ್ರಯಾಣಿಕರನ್ನು 1962 ರ ಕಸ್ಟಮ್ಸ್ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ವಶಕ್ಕೆ ತೆಗೆದುಕೊಂಡು, ನಂತರ ನ್ಯಾಯಾಲಯದ…

Read More

ಬೆಳ್ತಂಗಡಿ: ಚಿನ್ನದ ಒಡವೆಗಳನ್ನು ಪಾಲೀಶ್ ಮಾಡಿ ತೊಳೆದು ಕೊಡುತ್ತೇನೆ ಎಂದು ನಂಬಿಸಿ ವಂಚನೆ ನಡೆಸಿದ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ವೇಣೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕಾಶಿಪಟ್ಣ ಗ್ರಾಮದ ಪಣಿಲಾಜೆ ಪ್ರದೇಶದಲ್ಲಿ ಫೆಬ್ರವರಿ 10, 2026 ರಂದು ಘಟನೆ ನಡೆದಿದೆ. ಸೇಲ್ಸ್‌ಮ್ಯಾನ್‌ ರೂಪದಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬರು ಮನೆಮಂದಿಗೆ ಚಿನ್ನದ ಒಡವೆಗಳನ್ನು ತೊಳೆಯುವ ಹಾಗೂ ಪಾಲೀಶ್ ಮಾಡುವುದಾಗಿ ನಂಬಿಸಿ ಪಡೆದುಕೊಂಡು, ಯಾವುದೋ ರಾಸಾಯನಿಕ ದ್ರಾವಣ ಬಳಸಿ ಚಿನ್ನವನ್ನು ಕರಗಿಸಿ ವಂಚನೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ.13/2026, ಕಲಂ 318(4) ಬಿ.ಎನ್‌.ಎಸ್‌. 2023ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿತನಾದ ಬಿಹಾರ ರಾಜ್ಯದ ಸುಪೌಲ್ ಜಿಲ್ಲೆಯ ನಿವಾಸಿ ಚಂದನ್ ಕುಮಾರ್ (30) ಎಂಬಾತನನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯಿಂದ ಸುಮಾರು ₹75,000 ಮೌಲ್ಯದ 7.00 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.ಆರೋಪಿತರ ಪತ್ತೆಗಾಗಿ ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಅಕ್ಷಯ್…

Read More

ಎo.ಸಿ.ಸಿ. ಬ್ಯಾಂಕಿನ ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಒಂದೇ ವರ್ಷದಲ್ಲಿ ರೂ.10 ಕೋಟಿ ವ್ಯವಹಾರ ಗುರಿಯನ್ನು ಯಶಸ್ವಿಯಾಗಿ ದಾಟಿದ ಮಹತ್ವದ ಸಾಧನೆಯನ್ನು ಶನಿವಾರ, 28ನೇ ಫೆಬ್ರವರಿ 2026 ರಂದು ಬೆಳ್ಮಣ್‌ಶಾಖೆಯಲ್ಲಿ ಸಂಭ್ರಮದಿAದ ಆಚರಿಸಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ, ಪರಪ್ಪಾಡಿಯ ಅವರ್ ಲೇಡಿ ಆಫ್ ಪರ್ಪೆಚುಯಲ್ ಸುಕುರ್ ಚರ್ಚ್ನ ಧರ್ಮಗುರುಗಳಾದ ವಂದನೀಯ ಫಾ| ಡೇನಿಸ್ ಡಿಸೋಜ ಹಾಗೂ ಬೆಳ್ಮಣ್‌ನ ಸಂತ ಜೋಸೆಫರ ಪ್ರೌಢ ಶಾಲೆಯ ಶಿಕ್ಷಕಿ ಶ್ರೀಮತಿ ಲೈಲಾ ಬಬಿತಾ ನೊರೊನ್ಹಾಉಪಸ್ಥಿತರಿದ್ದರು. ವೇದಿಕೆಯಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ಜೆರಾಲ್ಡ್ ಜೂಡ್ ಡಿಸಿಲ್ವಾ, ನಿರ್ದೇಶಕಿ ಡಾ| ಫ್ರೀಡಾ ಡಿಸೋಜ, ಮಹಾಪ್ರಬಂಧಕ ಶ್ರೀ ಸುನಿಲ್ ಮಿನೇಜಸ್ ಮತ್ತು ಬೆಳ್ಮಣ್ ಶಾಖಾ ಪ್ರಬಂಧಕಿ ಶ್ರೀಮತಿ ಶೈನಿ ಲಸ್ರಾದೊ ಹಾಜರಿದ್ದರು.ಒಂದು ವರ್ಷದ ಯಶಸ್ವಿಪೂರ್ಣತೆ ಹಾಗೂ ರೂ 10 ಕೋಟಿಯ ವ್ಯವಹಾರ ಮೈಲಿಗಲ್ಲು ಸಾಧನೆಯನ್ನು ಸಂಕೇತಿಸುವAತೆ ಅಧ್ಯಕ್ಷರು, ಗಣ್ಯ ಅತಿಥಿಗಳು, ಬೆಳ್ಮಣ್ ಶಾಖೆಯ ಎಲ್ಲಾ ಗ್ರಾಹಕರ…

Read More

ಮಂಗಳೂರು : ಅಪರೂಪದ ಪ್ರಕರಣದಲ್ಲಿ ಯಕ್ಷ ಕಲಾವಿದರಿಬ್ಬರು ಜಾತಿನಿಂದನೆ ಆರೋಪದ ಪ್ರಕರಣದಲ್ಲಿ ಬಿಡುಗಡೆಗೊಂಡಿದ್ದಾರೆ. ಮಂಗಳೂರಿನ ಮಾನ್ಯ ಎರಡನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿದೆ.ಪ್ರಕರಣದ ಹಿನ್ನೆಲೆ: ಕರ್ನಾಟಕ ಮೇಳದ ಪ್ರಸಿದ್ದ ಪ್ರಸಂಗ ಬ್ರಹ್ಮ ಬಲಾಂಡಿ ಎನ್ನುವ ಪ್ರಸಂಗವನ್ನು ಯಕ್ಷ ಕಲಾವಿದ ಸಂಘಟಕ ಪೂರ್ಣೇಶ್ ಎಂಬವರು ಪುರಭವನದಲ್ಲಿ ಸಂಯೋಜಿಸಿದ್ದರು. ಆ ಪ್ರಸಂಗದಲ್ಲಿ ಅದರ ರಚನೆಕಾರರು ಅನಂತರಾಮ ಬಂಗಾಡಿಯವರು ಸೃಷ್ಟಿಸಿದ ಲಾತ್ರಗಳ ಹೆಸರನ್ನು ಯಥಾವತ್ತಾಗಿ ಕರಪತ್ರಗಳಲ್ಲಿ ಮುದ್ರಿಸಿ ಹಂಚಲಾಗಿತ್ತು ಮತ್ತು ಆ ಪಾತ್ರಗಳ ಹೆಸರಿನ ಉಲ್ಲೇಖ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾಯಿದೆಯ ಅಡಿಯಲ್ಲಿ ಜಾತಿ ನಿಂದನೆ ಎಂದು ದಲಿತ ಸಂಘಟನೆಗಳು ಪೋಲೀಸರಿಗೆ ದೂರು ನೀಡಿದ್ದರು. ಅದರಂತೆ ಪೋಲೀಸರು ಪೂರ್ಣೇಶ್ ಮತ್ತು ಮಿಜಾರು ತಿಮ್ಮಪ್ಪ ಎಂಬವರ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಲಮು 3 (1) (r) (u) (s) ರ ಅಡಿಯಲ್ಲಿ ಜಾತಿನಿಂದನೆ ಕೇಸು ದಾಖಲಿಸಿ ಮಾನ್ಯ ಎರಡನೆ ಹೆಚ್ಚುವರಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.…

Read More

ಕುಂದಾಪುರ: ಹೊಸಂಗಡಿಯ ಭಾಗಿಮನೆ ಬಳಿ ಟ್ರೆಕ್ಕಿಂಗ್ ಹೋಗಿದ್ದ ಮಹಿಳೆಯೊಬ್ಬರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಾ.1ರ ರವಿವಾರ ನಡೆದಿದೆ. ಕುಂದಾಪುರದ ಮೆಡಿಕಲ್ ಶಾಪ್ ವೊಂದರ ಮಾಲಕಿ ಶುಭಶ್ರೀ ಕಾರಂತ್ ( 53) ಸಾವನ್ನಪ್ಪಿದವರು. ಕುಂದಾಪುರದಿಂದ 8-10 ಜನರ ತಂಡ ಹೊಸಂಗಡಿಯ ಮೆಟ್ಕಲ್ ಗುಡ್ಡ ಕಡೆಗೆ ಟ್ರೆಕ್ಕಿಂಗ್ ಹೋಗಿದ್ದರು ಎಂದು ತಿಳಿದು ಬಂದಿದೆ. ಮೃತದೇಹವನ್ನು ಕುಂದಾಪುರಧ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು ಅಮಾಸೆಬೈಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಕಲೆಹಾಕಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Read More

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಉಡುಪಿಯಲ್ಲಿ ರವಿವಾರ ಬೆಳಗ್ಗೆ ಹಮ್ಮಿಕೊಳ್ಳಲಾದ ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ಕುಂದಾಪುರ ಗ್ರಾಮಾಂತರ ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ. ನಮ್ಮ ಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ ಫಿಟ್ನೆಸ್ ಡಬ್ ಫ್ರೀ ಕರ್ನಾಟಕ ಸೈಬರ್ ಜಾಗೃತಿಗಾಗಿ 5 ಕಿ.ಮೀ ಮ್ಯಾರಥಾನ್ ಓಟವನ್ನು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಎಸ್ಐ ನಾಸೀರ್ ಹುಸೇನ್ ಸೇರಿದಂತೆ ನೂರಾರು ಪೊಲೀಸರು ಪಾಲ್ಗೊಂಡಿದ್ದರು. ಮ್ಯಾರಥಾನ್ ಓಡುತ್ತಿದ್ದ ನಾಸೀರ್ ಹುಸೇನ್ ಒಮ್ಮೆಲೆ ಕುಸಿದು ಬಿದ್ದು ತೀವ್ರವಾಗಿ ಅಸ್ವಸ್ಥ ಗೊಂಡರೆನ್ನಲಾಗಿದೆ. ಕೂಡಲೇ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಮೃತ ಪಟ್ಟಿರದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ

Read More