Author: main-admin

ಕಾಪು: ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದ ವೇಳೆ ಕಾರು ಪಲ್ಟಿಯಾದ ಪರಿಣಾಮ ಓರ್ವ ಸಾವನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮೂಳೂರು ಸಮೀಪದ ಹಳ್ಳಿ ಮನೆ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ ನಡೆದಿದೆ. ಮೃತರನ್ನು ಬೆಳ್ಮಣ್ ನ ಮಾರ್ವಿನ್ ಮೆಂಡೊನ್ಸಾ ಎಂದು ಗುರುತಿಸಲಾಗಿದೆ. ಸಿನಿಮಾಟೋಗ್ರಾಫರ್ ಆಗಿದ್ದ ಮರ್ವಿನ್ ಡಿ ಜೆ ವೃತ್ತಿಯನ್ನು ಮಾಡುತ್ತಿದ್ದರು. ಗಾಯಾಳುಗಳಾದ ಕಾರು ಚಾಲಕ ಅಂಬಲಪಾಡಿಯ ಪ್ರಜ್ವಲ್, ಕಾರ್ಕಳದ ಪ್ರಸಾದ್ ಮತ್ತು ವಿಘ್ನೇಶ್ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಕಾರಿನಲ್ಲಿ ಅಂಬಲಪಾಡಿಯಿಂದ ಬೆಳ್ಮಣ್ ಗೆ ಹೋಗುತ್ತಿದ್ದಾಗ ನಾಯಿಯೊಂದು ಕಾರಿಗೆ ಅಡ್ಡ ಬಂದಿದೆ ಎನ್ನಲಾಗಿದೆ. ಇದರ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದೆ ಎಂದು ತಿಳಿದು ಬಂದಿದೆ. ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ತಕ್ಷಣ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಚ್ಚಿಲ ಹಾಗೂ ಮೂಳೂರಿನ ಎಸ್‌ಡಿಪಿಐ ಆಂಬುಲೆನ್ಸ್ ಗಳು ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸಿ ದಾಖಲಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಾರ್ವೀನ್…

Read More

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಅನಾಮಿಕ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ. ಧರ್ಮಸ್ಥಳದಲ್ಲಿ ಶವ ಹೂತಿದೆ ಎಂಬ ಮಾಸ್ಕ್‌ಮ್ಯಾನ್‌ನ ದೂರಿನ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆಯ ನಂತರ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಬಂಧನವಾಗಿದೆ. ಮಾಸ್ಕ್​ಮ್ಯಾನ್​ ಸಿಎನ್​ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ಬಂಧಿಸಿದ್ದಾರೆ. ತಲೆಬುರುಡೆ ಕೇಸ್​ನಲ್ಲಿ ಎಸ್​ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಬಂಧಿಸಿದ್ದು, ಆ ಮೂಲಕ ಸಾಕ್ಷಿ ಸಂರಕ್ಷಣಾ ಕಾಯ್ದೆಯಿಂದ ವಿಮುಖಗೊಳಿಸಲಾಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟ್​ಗೆ ಎಸ್​ಐಟಿ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ.

Read More

ಮಂಗಳೂರು: ನಗರದ ಮಣ್ಣಗುಡ್ಡಯಲ್ಲಿರುವ ದ.ಕ. ಜಿಲ್ಲಾ ಕ್ರೀಡಾ ಬಾಲಕ ಮತ್ತು ಬಾಲಕಿಯರ ವಸತಿಗೃಹಕ್ಕೆ ಮಂಗಳೂರು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕಿ ಡಾ. ಗಾನ ಪಿ. ಕುಮಾರ್ ಹಾಗು ಪೊಲೀಸ್ ನಿರೀಕ್ಷಕಿಯರಾದ ಭಾರತಿ ಜಿ, ರವಿ ಪವಾರ್ ನೇತೃತ್ವದ ತಂಡವು ಶುಕ್ರವಾರ ದಾಳಿ ನಡೆಸಿದ್ದಾರೆ. ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ ಸಾಕಷ್ಟು ಲೋಪದೋಷಗಳು ಕಂಡುಬಂದಿದೆ. ಮುಖ್ಯವಾಗಿ ವಸತಿಗೃಹದ ಅಡುಗೆ ಕೋಣೆಯಲ್ಲಿ ಶುಚಿತ್ವ ಇರಲಿಲ್ಲ. ಧವಸಧಾನ್ಯಗಳ ಸ್ಟಾಕ್ ಇರಲಿಲ್ಲ. ಅಕ್ಕಿಯಲ್ಲಿ ಹುಳುಗಳು ಕಂಡುಬಂದಿದೆ. ಸ್ಟಾಕ್ ರಿಜಿಸ್ಟರ್ ಕೂಡ ಇರಲಿಲ್ಲ. ಅಡುಗೆಗೆ ಕಡಿಮೆ ಗುಣಮಟ್ಟದ ಹೆಚ್ಚು ಪ್ಯಾಟ್ ಇರುವ ಪಾಮೋಲಿನ್ ಅಡುಗೆ ಎಣ್ಣೆಯನ್ನು ಬಳಸುವುದು ಕಂಡುಬಂದಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ. ವಸತಿ ಗೃಹದಲ್ಲಿ 33 ಮಕ್ಕಳಿದ್ದರು. ಅವರಿಗೆ ಪೌಷ್ಟಿಕಯುಕ್ತ ಆಹಾರ ನೀಡಿಲ್ಲ. ಊಟದ ಹಾಲ್‌ನಲ್ಲಿ ಹೆಚ್ಚಿನ ಸ್ಥಳವಕಾಶ ಇಲ್ಲದಿದ್ದರೂ ಕೂಡ ಎರಡು ವಸತಿ ಗೃಹದಲ್ಲಿನ ಬಾಲಕ ಮತ್ತು ಬಾಲಕಿಯರಿಗೆ ಒಂದೇ ಕಡೆಯಲ್ಲಿ ಊಟದ ವ್ಯವಸ್ಥೆ ಕಲ್ಪಿಸುವುದು ಕಂಡುಬಂದಿದೆ. ಸ್ಕಾಲರ್‌ಶಿಪ್ ಪಡೆದು ವಿದ್ಯಾಭ್ಯಾಸ ಮಾಡುವ ಹೆಚ್ಚಿನ ಮಕ್ಕಳು…

Read More

ಉಡುಪಿ: ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ನಿರಂತರವಾಗಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳ ವಿರುದ್ದ ಎನ್‌ ಡಿಪಿಎಸ್‌ ಕಾಯ್ದೆಯಡಿ ಗೂಂಡಾ ಕಾಯ್ದೆಯಡಿಯ ಹೈಕೋರ್ಟ್‌ ಬಂಧನ ಆದೇಶವನ್ನು ಎತ್ತಿ ಹಿಡಿದಿದೆ. ಜಿಲ್ಲೆಯಲ್ಲೇ ಮೊದಲ ಬಾರಿಗೆ ಎನ್‌ಡಿಪಿಎಸ್‌ ಕಾಯ್ದೆಯಡಿ ಇಬ್ಬರನ್ನು ಬಂಧಿಸಲಾಗಿದ್ದು, ಕುಖ್ಯಾತ ಗರುಡ ಗ್ಯಾಂಗ್‌ನ ಸಕ್ರೀಯ ಸದಸ್ಯ ಕಬೀರ್‌ ಅಲಿಯಾಸ್ ಕಬೀರ್‌ ಹುಸೇನ್‌ ಮತ್ತು ಕೃಷ್ಣ ಆಚಾರಿ ಅಲಿಯಾಸ್‌ ಕೃಷ್ಣ ಜಲಗಾರ ವಿರುದ್ದ ಗೂಂಡಾ ಕಾಯ್ದೆ ಜಾರಿಗೊಳಿಸಲಾಗಿದೆ. ಗರುಡ ಗ್ಯಾಂಗ್‌ ಸದಸ್ಯ ಹಾಗೂ ಉಡುಪಿ ಸೇರಿ ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಸಹ ತನ್ನ ಅಪರಾಧಿಕ ಚಟುವಟಿಕೆಗಳನ್ನು ನಡೆಸುತ್ತಿದ್ದ ಕುಖ್ಯಾತ ಆರೋಪಿ ಕಬೀರ್‌ ವಿರುದ್ದ ವಿರುದ್ಧ ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಹೊರಡಿಸಲು ಮನವಿ ಸಲ್ಲಿಸಲಾಗಿತ್ತು. ಈತನ ವಿರುದ್ಧ 2005ನೇ ಸಾಲಿನಿಂದ ಇಲ್ಲಿಯವರೆಗೆ ಒಟ್ಟು 17 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ ಎರಡು ಪ್ರಕರಣಗಳಲ್ಲಿ ಸಜೆಯಾಗಿದ್ದು, ಎಂಟು ಪ್ರಕರಣಗಳಲ್ಲಿ ಸಾಕ್ಷಿದಾರರು ಪ್ರತಿಕೂಲ ಸಾಕ್ಷಿ ನುಡಿದದ್ದರಿಂದ ಖುಲಾಸೆ, ಮೂರು ಪ್ರಕರಣಗಳು ರಾಜಿಯಲ್ಲಿ ಮುಕ್ತಾಯವಾಗಿದ್ದು, 02…

Read More

ಉಡುಪಿ: ಬಿಜೆಪಿ ಮುಖಂಡ ಬಿ.ಎಲ್ ಸಂತೋಷ್ ಅವರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದು ಬ್ರಹ್ಮಾವರ ಠಾಣೆಗೆ ಕರೆತರುತ್ತಿರುವ ಸಂದರ್ಭದಲ್ಲಿ ಅವರ ಬೆಂಬಲಿಗರೆನ್ನಲಾದ ಕೆಲವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಕಾರಿಗೆ ಗುದ್ದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಉಜಿರೆಯ ನಿವಾಸಿಗಳಾದ ಸೃಜನ್ ಎಲ್., ಹಿತೇಶ್ ಶೆಟ್ಟಿ, ಸಹನ್ ಎಂದು ಗುರುತಿಸಲಾಗಿದೆ. ಇವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ ಇವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಜೊತೆಗೆ ಆರೋಪಿಗಳು ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಎಲ್ ಸಂತೋಷ್ ಅವರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಹಿನ್ನಲೆ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ಅರೆಸ್ಟ್ ಮಾಡಿದ್ದರು. ಅವರನ್ನು ಉಜಿರೆಯಿಂದ ಬ್ರಹ್ಮಾವರಕ್ಕೆ ಕರೆತರುತಿದ್ದಾಗ, ಅವರ ಬೆಂಬಲಿಗರನ್ನೆಲಾದ ಕೆಲವರು ಪೊಲೀಸ್ ವಾಹನ ಗಳನ್ನು ಹಿಂಬಾಲಿಸಿಕೊಂಡು ಬಂದಿದ್ದು,…

Read More

ಬೆಂಗಳೂರು: ಟ್ರಾಫಿಕ್ ಉಲ್ಲಂಘನೆ ದಂಡ ಪಾವತಿ ಮಾಡಲು ಸಾರಿಗೆ ಇಲಾಖೆ ಮತ್ತೊಮ್ಮೆ ರಿಯಾಯಿತಿ ಘೋಷಿಸಿ ಆದೇಶಿಸಿದೆ. ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಕಟ್ಟದ ವಾಹನ ಮಾಲೀಕರಿಗೆ ಬರೋಬ್ಬರಿ ಶೇಕಡಾ 50ರಷ್ಟು ರಿಯಾಯಿತಿ ನೀಡಲಾಗಿದೆ. ಈ ಕುರಿತು ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅಧಿಕೃತ ಆದೇಶ ಹೊರಡಿಸಿದ್ದು, ದಂಡದ ಅರ್ಧದಷ್ಟು ಹಣ ತುಂಬಲು ವಾಹನ ಸವಾರರಿಗೆ ಅವಕಾಶ ಕಲ್ಪಿಸಲಾಗಿದ್ದು, 50% ರಷ್ಟು ದಂಡ ಪಾವತಿ ಮಾಡಲು ಆಗಸ್ಟ್ 23 ರಿಂದ ಸೆಪ್ಟೆಂಬರ್ 12ರವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಫಿಫ್ಟಿ ಪರ್ಸೆಂಟ್ ಡಿಸ್ಕೌಂಟ್ ಆಫರ್ 2023ರ ಫೆಬ್ರವರಿ 11ರವರೆಗೆ ದಾಖಲಾದ ಪ್ರಕರಣಗಳಿಗೆ ಅನ್ವಯವಾಗಲಿದೆ. 2023ರ ಫೆಬ್ರವರಿ 12ರ ನಂತರದ ಪ್ರಕರಣಗಳಿಗೆ ಇದು ಅನ್ವಯವಾಗುವುದಿಲ್ಲ. ಯಾಕಂದ್ರೆ, ಬಹಳ ವರ್ಷಗಳಿಂದ ಟ್ರಾಫಿಕ್ ದಂಡ ಕಟ್ಟದೇ ಹಾಗೇ ಬಾಕಿ ಉಳಿಸಿಕೊಂಡವರಿಗೆ ಈ ಆಫರ್ ನೀಡಲಾಗಿದೆ. ಇನ್ನುಳಿದಂತೆ 2023ರ ಫೆಬ್ರವರಿ 12ರ ನಂತರದ ಕೇಸ್​ ಗಳಿಗೆ ಮುಂದಿನ ವರ್ಷ ಆಫರ್ ನೀಡುವ ಸಾಧ್ಯತೆಗಳಿವೆ. ದಂಡ…

Read More

ಕಾರ್ಕಳ: ಚಲಿಸುತ್ತಿರುವಾಗಲೇ ಮಾರುತಿ 800 ಕಾರು ಹೊತ್ತಿ ಉರಿದ ಘಟನೆ ಸಾಣೂರು ಪೆಟ್ರೋಲ್ ಬಂಕ್ ಎದುರು ರಸ್ತೆಯಲ್ಲಿ ನಡೆದಿದೆ. ಬಂಗ್ಲೆಗುಡ್ಡೆ ನಿವಾಸಿಯೊಬ್ಬರು ಈ ಹಳೆಯ ಕಾರನ್ನು ಬಳಸುತ್ತಿದ್ದರು. ಇಂಧನ ಟ್ಯಾಂಕಿನಿಂದ ಪೆಟ್ರೋಲ್ ಸೋರಿಕೆ ಆರಂಭವಾಗಿದ್ದು ಅದು ಅವರ ಗಮನಕ್ಕೆ ಬಂದಿರಲಿಲ್ಲಿ. ಸಾಣೂರಿಗೆ ತಲುಪಿದಾಗಿ ಎಂಜಿನಿನ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಸೋರುತ್ತಿದ್ದ ಪೆಟ್ರೋಲ್‌ಗೆ ಬೆಂಕಿ ತಗಲಿದೆ. ತತ್‌ಕ್ಷಣವೇ ಅವರು ಕಾರಿನಿಂದ ಇಳಿದು ಪ್ರಣಾಪಾಯದಿಂದ ಪಾರಾಗಿದ್ದಾರೆ. ಕಾರು ಬೆಂಕಿಗಾಹುತಿಯಾಗಿದೆ. ಮಾಹಿತಿ ತಿಳಿದ ಕೂಡಲೆ ಅಗ್ನಿಶಾಮಕ ದಳದ ಸಿಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಅಗ್ನಿಶಾಮಕ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್, ಸಹಾಯಕ ಠಾಣಾಧಿಕಾರಿ ಚಂದ್ರಶೇಖರ್, ಪ್ರಮುಖರಾದ ಅಚ್ಯುತ ಕರ್ಕೇರ, ಹರಿಪ್ರಸಾದ್, ಜಯ ಮೂಲ್ಯ, ದಿನೇಶ್ ಕಾರ್ಯಾಚರಣೆ ನಡೆಸಿದರು.

Read More

ಮಂಗಳೂರು: ಸಾರ್ವಜನಿಕ ಸಮಾರಂಭಗಳಲ್ಲಿ ಧ್ವನಿವರ್ಧಕಗಳ ಬಳಕೆಗೆ ಷರತ್ತು ವಿದಿಸಿರುವುದನ್ನು ಖಂಡಿಸಿ, ಸಾರ್ವಜನಿಕ ಕಾರ್ಯಕ್ರಮಗಳನ್ನು ಬಹಿಷ್ಕರಿಸುವ ಸಂಘಟನೆಗಳ ನಿರ್ಧಾರದ ಕುರಿತಂತೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಪ್ರತಿಕ್ರಿಯಿಸಿದ್ದು, ಬಹಿಷ್ಕಾರ ಸೇರಿದಂತೆ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲು ಅವರು ಸ್ವತಂತ್ರರಾಗಿದ್ದಾರೆ. ಆದರೆ ಕಾನೂನು ಸ್ಪಷ್ಟವಾಗಿದ್ದು, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ, ಸಾರ್ವಜನಿಕರು, ಹಿರಿಯ ನಾಗರಿಕರು, ರೋಗಿಗಳು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಆಚರಣೆಗಳು ನಡೆಯುವಂತೆ ನೋಡಿಕೊಳ್ಳಲು ಅದಕ್ಕೆ ತಕ್ಕಂತೆ ಹೊಂದಿಕೊಳ್ಳುವ ಕೆಲವು ವ್ಯವಸ್ಥೆಗಳನ್ನು ಮಾಡುತ್ತೇವೆ ಎಂದು ಭರವನೆ ನೀಡಿದ್ದಾರೆ. ಗಣೇಶ ಹಬ್ಬದ ಆಯೋಜಕರ ಸಭೆ ಇಂದು ನಡೆಯಲಿದ್ದು, ಈ ಸಭೆಯಲ್ಲಿ ಡಿಸಿಪಿ, ಹೆಚ್ಚುವರಿ ಎಸ್ಪಿ ಡಿಕೆ ಮತ್ತು ಎಸಿಪಿಗಳು ಭಾಗವಹಿಸಲಿದ್ದು, ಇಲ್ಲಿ ಮಾರ್ಗಸೂಚಿಗಳನ್ನು ಅಂತಿಮಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ನಿಯಮಗಳಿವೆ ನಿಜ, ಆದರೆ ನಿಯಮಗಳಿಗೆ ಕೆಲವು ವಿನಾಯಿತಿಗಳನ್ನು ಸಮರ್ಥನೀಯ ಕಾರಣಗಳಿಗಾಗಿ ನೀಡಬಹುದು. ಆದರೆ ವಿನಾಯಿತಿಗಳೇ ನಿಯಮಗಳಾಗಲು ಸಾಧ್ಯವಿಲ್ಲ ಎಂದು ಕಮೀಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ನಾರ್ವಜನಿಕ ಸಮಾರಂಭಗಳಲ್ಲಿ ಧ್ವನಿವರ್ಧಕಗಳ ಶಬ್ದವನ್ನು 50 ಡೆಸಿಬಲ್‌ಗೆ ಸೀಮಿತಗೊಳಿಸಬೇಕು…

Read More

ಪುತ್ತೂರು: ದೂರು ವಾಪಸ್ ಪಡೆದುಕೊಳ್ಳುವಂತೆ ಹೇಳಿ ವ್ಯಕ್ತಿಯೋರ್ವರಿಗೆ ಬೆದರಿಕೆಯೊಡ್ಡಿರುವ ಕುರಿತು ಪೋಲಿಸರಿಗೆ ದೂರು ನೀಡಲಾಗಿದೆ. ಕಲ್ಲಾರೆ ರಾಘವೇಂದ್ರ ಮಠದ ಬಳಿಯ ನಿವಾಸಿ ಗುರುಪ್ರಸಾದ್ ನಾಯಕ್ ಎನ್(45ವ) ಎಂಬವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಆ.19 ರಂದು ಸಂಜೆ ಆರೋಪಿಗಳಾದ ಸಂತ ಫಿಲೋಮಿನಾ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ರೇಶ್ಮಾ ಮರಿಯಾ ರೆಬೆಲ್ಲೋ ಮತ್ತು ಅದೇ ಶಾಲೆಯ ಶಿಕ್ಷಕ ಪತಿ ಕ್ಲೆಮೆಂಟ್ ಪಿಂಟೊ ಎಂಬವರು ನಮ್ಮ ಮನೆಯ ಆವರಣದೊಳಗೆ ಅಕ್ರಮವಾಗಿ ಪ್ರವೇಶಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ನಿನ್ನ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ಕೊಡುತ್ತೇವೆ, ನೀನು ದೂರನ್ನು ವಾಪಸ್ಸು ಪಡೆಯಬೇಕು ಎಂದು ಹೇಳಿ ಬೆದರಿಕೆ ಒಡ್ಡಿರುವುದಾಗಿ ದೂರಿನಲ್ಲಿ ಆರೋಪಿಸಿದ್ದಾರೆ. ಶಿಕ್ಷಕಿ ರೇಷ್ಮಾ ಮೇರಿ ರೆಬೆಲ್ಲೋರವರು ಪುತ್ತೂರು ಸಂತ ಫಿಲೋಮಿನಾ ಪ್ರೌಢಶಾಲೆಯ ಶಿಕ್ಷಕಿಯಾಗಿದ್ದು , ಇವರು ಕರ್ನಾಟಕ ಸರಕಾರದ ಸುಮಾರು ಎಂಟು ಲಕ್ಚಕ್ಕೂ ಅಧಿಕ ಮೊತ್ತವನ್ನು ವಂಚಿಸಿರುವ ಬಗ್ಗೆ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಕ್ರಮ, ಜೊತೆಗೆ ಅವರ ಸೇವಾ ವಿವರಗಳನ್ನು ಮಾಹಿತಿ…

Read More

ಹಲವು ಪ್ರಕರಣಗಳಲ್ಲಿ ವಿಚಾರಣೆಯನ್ನು ಎದುರಿಸುತ್ತಿರುವ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಯ ಬಂಧನದ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್‌ ನಿಯೋಜಿಸಲಾಗಿದೆ. ಗುರುವಾರ ಉಡುಪಿ ಜಿಲ್ಲೆಯ ಪೊಲೀಸರು ಧರ್ಮಸ್ಥಳಕ್ಕೆ ತೆರಳಿ ವಶಕ್ಕೆ ಬಂಧಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದಿದ್ದೇವೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದು, ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಜಾಮೀನು ರಹಿತ ಪ್ರಕರಣವಿದೆ. ಇಲಾಖೆಯಿಂದ ನೀಡಿದ ಎರಡು ನೋಟಿಸ್‌ಗೆ ಉತ್ತರ ನೀಡಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿ ಇರಲಿಲ್ಲ. ಈತ ಪುನರಾವರ್ತಿತ ಆರೋಪಿ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ. ಇದೀಗ ಅವರ ವಕೀಲರ ಸಮ್ಮುಖದಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು ಠಾಣೆಯ ಸುತ್ತ ಬಿಗಿ ಬಂದೋಬಸ್ತು ಏರ್ಪಡಿಸಲಾಗಿದೆ.

Read More