ಮಂಗಳೂರು: ಎನ್ ಐ ಟಿಕೆ ಮತ ಎಣಿಕೆ ಕೇಂದ್ರದ ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿದ ಘಟನೆ ಮಂಗಳವಾರ ಮತ ಎಣಿಕೆ ವೇಳೆ ನಡೆದಿದ್ದು ಮಧ್ಯ ಪ್ರವೇಶಿಸಿದ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಅಂಚೆ ಮತದಾನದಲ್ಲಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ 20708 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸಾರ್ವಜನಿಕರಿಗೆ ಪೊಲೀಸರಿಂದ ಅನಗತ್ಯ ಕಿರಿಕಿರಿ ಆರೋಪ ಸುರತ್ಕಲ್ ಎನ್‌ಐಟಿಕೆ ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಸಾರ್ವಜನಿಕರು ನಿಲ್ಲಲು ಅವಕಾಶ ನೀಡಿದ್ದರೂ ಗೇಟ್ ನಲ್ಲಿ ಪ್ರವೇಶಿಸುವಾಗ ಪೊಲೀಸರು ಅನಗತ್ಯವಾಗಿ ವಿಚಾರಿಸಿ ಗುರುತು ಚೀಟಿ ಕೇಳಿ ಕಿರಿಕಿರಿಯನ್ನುಂಟು ಮಾಡಿದ್ದಾರೆ ಎಂದು ಕೆಲವು ಮಂದಿ ಕಾರ್ಯಕರ್ತರು ದೂರಿದ್ದಾರೆ. ಮತ ಎಣಿಕೆ ಕೇಂದ್ರದ ಬಳಿ ಬಿಜೆಪಿ ಕಾರ್ಯಕರ್ತರು ಜಮಾವಣೆಯಾಗುತ್ತಿದ್ದು ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ ಮುನ್ಮಡೆ ಹಿನ್ನೆಲೆಯಲ್ಲಿ ಕಾರ್ಯಕರ್ತರು ಘೋಷಣೆ ಹಾಕಿ ಸಂಭ್ರಮಾಚರಣೆ ಆರಂಭಿಸಿದ್ದಾರೆ. ಪದ್ಮರಾಜ್ ನಿರ್ಗಮನ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮತದಾನ ಕೇಂದ್ರಕ್ಕೆ ಆಗಮಿಸಿ ನಿರ್ಗಮಿಸಿದರು. ಜಯಗಳಿಸುವ…
Author: main-admin
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ 20 ಸಾವಿರ ಮತಗಳ ಮುನ್ನಡೆಯಲ್ಲಿದ್ದಾರೆ.
ಮಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇವಿಎಂ ಮತ ಎಣಿಕೆಯು ಅಧಿಕಾರಿಗಳ ನೇತೃತ್ವದಲ್ಲಿ ಆರಂಭಗೊಂಡಿದ್ದು, ಉಭಯ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಇವಿಎಂ ಮತ ಎಣಿಕೆಯಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ ಪ್ರಕ್ರಿಯೆಯಲ್ಲಿ ಬಿಜೆಪಿಯ ಕ್ಯಾ.ಬ್ರಿಜೇಶ್ ಚೌಟ ಅವರು, 9,000 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.ಇನ್ನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ ಪ್ರಕ್ರಿಯೆಯಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ 23,378 ಮತಗಳನ್ನು ಕಾಂಗ್ರೆಸ್‌ನ ಜಯಪ್ರಕಾಶ್ ಹೆಗ್ಡೆ 12,560 ಗಳಿಸಿದ್ದಾರೆ. ಈ ಮೂಲಕ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಅವರು ೯೮೧೮ ಮತಗಳ ಮುನ್ನಡೆ ಸಾಧಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 14,09,653 ಇವಿಎಂ ಮತಗಳ ಎಣಿಕೆ ಮಾಡಲಾಗುತ್ತದೆ. ಎಂಟು ವಿಧಾನ ಸಭಾ ಕ್ಷೇತ್ರದ 136 ಸುತ್ತಿನಲ್ಲಿ ಮತ ಎಣಿಕೆ ನಡೆಯಲಿದ್ದು, ಪ್ರತಿ ವಿಧಾನ ಸಭಾ ಕ್ಷೇತ್ರದ 18 ರಿಂದ 19 ಸುತ್ತಿನಲ್ಲಿ ಮತ…
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ 10 ಸಾವಿರ ಮತಗಳ ಮುನ್ನಡೆಯಲ್ಲಿದ್ದಾರೆ.
ಮಂಗಳೂರು: 2007 ರಲ್ಲಿ ಪ್ರಾರಂಭವಾದ ಆಳ್ವಾಸ್ ಪ್ರಗತಿ-ಬೃಹತ್ ಉದ್ಯೋಗ ಮೇಳವು ವೃತ್ತಿ ಆಕಾಂಕ್ಷಿಗಳಿಗೆ ವಿವಿಧ ರೀತಿಯ ಉದ್ಯೋಗಾವಕಾಶಗಳನ್ನು ನೀಡುತ್ತಾ ಬಂದಿದೆ. ಈ ಮೇಳವು ವಿಶೇಷವಾಗಿ ಗ್ರಾಮೀಣ ಮತ್ತು ಸವಲತ್ತುಗಳಿಲ್ಲದ ವರ್ಗಗಳ ಪ್ರತಿಭೆಗಳಿಗೆ ಅವಕಾಶ ಕೊಡಿಸುವ ಮಹತ್ಕಾರ್ಯವನ್ನು ಸಾಂಗವಾಗಿ ನಡೆಸುತ್ತಿದೆ. ಎರಡು ದಶಕಗಳಿಂದ ಪ್ರಗತಿ ಮೇಳವು ತನ್ನ ನಿಖರವಾದ ಯೋಜನೆ, ಉತ್ತಮ ಆತಿಥ್ಯ ಮತ್ತು ಉನ್ನತ ಮಟ್ಟದ ವೃತ್ತಿ ಅವಕಾಶಗಳೊಂದಿಗೆ ಪ್ರತಿಷ್ಠಿತ ಉದ್ಯೋಗ ಮೇಳವಾಗಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ. ಕಳೆದ 13 ಆಳ್ವಾಸ್ ಪ್ರಗತಿ ಹಾಗೂ 7 ಉದ್ಯೋಗ ಮೇಳಗಳಲ್ಲಿ ಒಟ್ಟು 31, 896 ಉದ್ಯೋಗಾವಕಾಶವನ್ನು ನೀಡಿದ ಕೀರ್ತಿ ಈ ಕಾರ್ಯಕ್ರಮಕ್ಕೆ ಸಲ್ಲುತ್ತದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ತನ್ನ ಸಿಎಸ್‍ಆರ್ ಚಟುವಟಿಕೆಯ ಅಡಿಯಲ್ಲಿ ಉದ್ಯೋಗ ಮೇಳದ ಸಂಪೂರ್ಣ ವೆಚ್ಚವನ್ನು ಭರಿಸುತ್ತದೆ. ಈ ಮೇಳವು, ಭಾಗವಹಿಸುವವರಿಗೆ ಮತ್ತು ನೇಮಕಾತಿ ನಡೆಸುವ ಕಂಪನಿಗಳಿಗೆ ಸಂಪೂರ್ಣವಾಗಿ ಉಚಿತವಾಗಿದೆ. ಈ ವರ್ಷ, ನೇಮಕಾತಿ ಕಂಪನಿಗಳ ಪ್ರತಿಕ್ರಿಯೆ ಅಭೂತಪೂರ್ವವಾಗಿದ್ದು, ಇಲ್ಲಿಯವರೆಗೆ 300 ಕ್ಕೂ ಹೆಚ್ಚು ಕಂಪನಿಗಳು ನೋಂದಾಯಿಸಲ್ಪಟ್ಟಿವೆ ಮತ್ತು ಉದ್ಯೋಗ ಮೇಳದ ಸಂಘಟನಾ…
ಉಳ್ಳಾಲ: ರೂಟ್ ಬಸ್ ಮತ್ತು ಮೆಡಿಕಲ್ ಕಾಲೇಜು ಬಸ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಗಾಯಗೊಂಡ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಉರುಮಣೆ ಬಳಿ ನಡೆದಿದೆ. ಪುತ್ತೂರಿನಿಂದ ಮಂಜನಾಡಿ ರಸ್ತೆಯಾಗಿ ಮಂಗಳೂರಿಗೆ ತೆರಳುತ್ತಿದ್ದ ಶಿವಶಂಕರ್ ಬಸ್ ಮತ್ತು ಯೇನಪೋಯ ಮೆಡಿಕಲ್ ಕಾಲೇಜಿನ ಬಸ್ ಪರಸ್ಪರ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಎರಡು ವಾಹನಗಳಿಗೂ ಹಾನಿಯಾಗಿದೆ. ಘಟನೆಯಿಂದ ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಘಟನಾ ಸ್ಥಳಕ್ಕೆ ದಕ್ಷಿಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪುತ್ತೂರು: ನೀರು ತುಂಬಿಸುವ ಡ್ರಮ್‌ಗಳನ್ನು ಸರಬರಾಜು ಮಾಡುವುದಾಗಿ ನಂಬಿಸಿ ಕೃಷಿ ಉತ್ಪನ್ನ ಮಾರಾಟ ಸಂಸ್ಥೆಗೆ ಅಪರಿಚಿತರು ಲಕ್ಷಾಂತರ ರೂ. ವಂಚಿಸಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಪುರುಷರಕಟ್ಟೆಯಲ್ಲಿರುವ ಅಗ್ರೋ ಉತ್ಪನ್ನಗಳನ್ನು ಮಾರಾಟ ಮಾಡುವ ಗಣೇಶ್ ಭಟ್ ವಂಚನೆಗೊಳಗಾದವರು, ಗಣೇಶ್ ಭಟ್ ಅವರನ್ನು Unity Poly Barrels PVT Ltd Ashoka Nagar Shivaji Nagar Pune Maharsasthra ಎಂಬ ಹೆಸರಿನಿಂದ ಸಂಪರ್ಕಿಸಿದ ಅಪರಿಚಿತರು ಆನ್ ಲೈನ್ ಮೂಲಕ ಡ್ರಮ್ ಗಳನ್ನು ಮಾರಾಟ ಮಾಡುವುದಾಗಿ ಹೇಳಿದ್ದರು. ಇದನ್ನು ನಂಬಿದ ಗಣೇಶ್ ಭಟ್ ಅವರು ಮೇ 8ರಿಂದ ಮೇ 10ರ ಒಳಗಡೆ 1,30,500 ರೂ. ಅನ್ನು ಮೂರು ಹಂತಗಳಲ್ಲಿ ಫೋನ್ ಪೇ ಮೂಲಕ ಅಪರಿಚಿತರ ಖಾತೆಗೆ ಕಳುಹಿಸಿದ್ದಾರೆ. ಹಣ ಪಾವತಿಸಿ 20 ದಿನ ಕಳೆದರೂ ಡ್ರಮ್ ಸರಬರಾಜು ಮಾಡಿಲ್ಲ ಎಂದು ಗಣೇಶ್ ಭಟ್ ಪುತ್ತೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬೆಳ್ತಂಗಡಿ: ಅಕ್ರಮವಾಗಿ ಜಾನುವಾರು ಸಾಗಾಟ ಮತ್ತು ಕಸಾಯಿಖಾನೆಗೆ ಖಚಿತ ಮಾಹಿತಿ ಮೇರೆಗೆ ಪುಂಜಾಲಕಟ್ಟೆ ಪೊಲೀಸರು ದಾಳಿ ನಡೆಸಿದ ಘಟನೆ ಪುತ್ತಿಲ ಗ್ರಾಮದ ಪಲ್ಕೆ ಎಂಬಲ್ಲಿ ನಡೆದಿದೆ. ಕರಾಯದ ಸಿರಾಜ್ ಎಂಬಾತ ಅಕ್ರಮವಾಗಿ ಜಾನುವಾರನ್ನು ಕಡಿದು ಮಾಂಸ ಮಾಡುತ್ತಿರುವ ಬಗ್ಗೆ, ಹಾಗೂ ಪುತ್ತಿಲ ಗ್ರಾಮದ ಪಲ್ಕೆ ಎಂಬಲ್ಲಿ, ಅಶ್ರಪ್ ಎಂಬಾತ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಜೂ. 1 ರಂದು ಪುಂಜಾಲಕಟ್ಟೆ ಪೊಲೀಸ್ ಠಾಣಾ ಪಿಎಸ್‌ಐ ಉದಯರವಿ ವೈ ಎಂ ರವರು ಹಾಗೂ ಸಿಬ್ಬಂದಿಗಳು, ಆರೋಪಿ ಅಶ್ರಫ್ ಎಂಬಾತನ ಮನೆಯ ಬಳಿ ತೆರಳಿದಾಗ, ವಾಹನದಿಂದ ಜಾನುವಾರುಗಳನ್ನು ಇಳಿಸುತ್ತಿದ್ದ ಆರೋಪಿಯು ಪೊಲೀಸರನ್ನು ಕಂಡು ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾನೆ. ಪೊಲೀಸರು ಸ್ಥಳದಲ್ಲಿದ್ದ ಎರಡು ಜಾನುವಾರುಗಳನ್ನು ಹಾಗೂ ಸಾಗಾಟ ಮಾಡಲು ಉಪಯೋಗಿಸಿದ ವಾಹವನ್ನು ಮತ್ತು ವಾಹನದಲ್ಲಿದ್ದ ಮೊಬೈಲ್‌ನ್ನು ವಶಪಡಿಸಿಕೊಂಡಿದ್ದಾರೆ.. ಬಳಿಕ ಸ್ಥಳದ ಹತ್ತಿರದಲ್ಲಿಯೇ ಅಕ್ರಮವಾಗಿ ಜಾನುವಾರನ್ನು ಕಡಿದು ಮಾಂಸ ಮಾಡುತ್ತಿದ್ದ, ಸಿರಾಜ್ ಎಂಬಾತನ ಮನೆಯ ಬಳಿ ತೆರಳಿದಾಗ ಸ್ಥಳದಲ್ಲಿದ್ದ ಕರಾಯದ ಸಿರಾಜ್…
ಬೆಂಗಳೂರು: ವಿಧಾನ ಪರಿಷತ್‌ನ ಶಿಕ್ಷಕರು ಮತ್ತು ಪದವೀಧರ 6 ಕ್ಷೇತ್ರಗಳಿಗೆ ಇಂದು (ಸೋಮವಾರ) ಚುನಾವಣೆ ನಡೆಯಲಿದೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೂ ಮತದಾನ ನಡೆಯಲಿದೆ. ಇದಕ್ಕಾಗಿ ಚುನಾವಣೆಗೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ವಿಧಾನ ಪರಿಷತ್ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆದಿದೆ. 6 ಕ್ಷೇತ್ರದಲ್ಲಿ ಕಾಂಗ್ರೆಸ್ ಸ್ಪರ್ಧೆ ಮಾಡುತ್ತಿದ್ದು, ಬಿಜೆಪಿ 4 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿ ಆಡಳಿತ ಪಕ್ಷ ಕಾಂಗ್ರೆಸ್‌ಗೆ ಸವಾಲ್ ಹಾಕಿದೆ. ಮತದಾನ ಮಾಡುವವರು ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ್, ಪಾಸ್ ಪೋರ್ಟ್ ಸೇರಿ ಸರ್ಕಾರದ ಅಧಿಕೃತ ಗುರುತಿನ ಚೀಟಿ ತೋರಿಸಿ ಮತದಾನ ಮಾಡಬಹುದಾಗಿದೆ. ಪದವೀಧರ ಕ್ಷೇತ್ರದಲ್ಲಿ ಒಟ್ಟು 3,63,573 ಮತಗಳಿವೆ. 461 ಒಟ್ಟು ಮತ ಕೇಂದ್ರಗಳಿವೆ. ಇನ್ನು ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 70260 ಮತಗಳಿದ್ದು, 170 ಮತ ಕೇಂದ್ರಗಳಿವೆ. ಒಟ್ಟಾರೆ 78 ಅಭ್ಯರ್ಥಿಗಳಿದ್ದಾರೆ.
ರಾಜ್ಯದಲ್ಲಿ ಲವ್ ಜಿಹಾದ್ಗೆ ಸಿಲುಕಿದ ಹಿಂದೂ ಯುವತಿಯರು ಹಾಗೂ ಮಹಿಳೆಯರ ರಕ್ಷಣೆಗಾಗಿ ಶ್ರೀರಾಮಸೇನೆ ಸಹಾಯವಾಣಿ ಕೇಂದ್ರ ಆರಂಭಿಸಿದೆ. ಆದರೆ, ಈ ಸಹಾಯವಾಣಿ ಕೇಂದ್ರಕ್ಕೆ ಬೆದರಿಕೆ ಕರೆಗಳು ಬಂದಿವೆ. ನಾಲ್ಕು ದಿನದಲ್ಲಿ 17 ಬೆದರಿಕೆ ಕರೆಗಳು ಬಂದಿವೆ ಎಂದು ಶ್ರೀರಾಮಸೇನೆ ಮುಖಂಡ ಗಂಗಾಧರ ಕುಲಕರ್ಣಿ ತಿಳಿಸಿದ್ದಾರೆ. ಲವ್ ಜಿಹಾದ್‌ನಲ್ಲಿ ಸಿಲುಕಿದ ಹಿಂದೂ ಯುವತಿಯರ ರಕ್ಷಣೆಗೆ ಮೇ 29 ರಂದು ಶ್ರೀರಾಮಸೇನೆ ಸಹಾಯವಾಣಿ ಆರಂಭಸಿತ್ತು. ನಾಲ್ಕು ದಿನಗಳಲ್ಲಿ 400ಕ್ಕೂ ಅಧಿಕ ಕರೆಗಳು ಬಂದಿವೆ. 37 ಜನ ತಾಯಂದಿರು, 42 ಪ್ರೋತ್ಸಾಹಕ ಕತೆಗಳು, 52 ಜನ ಲವ್ ಜಿಹಾದ್‌ನಲ್ಲಿ ಸಿಲುಕಿರುವ ಸಂತ್ರಸ್ತೆಯರು ಕರೆ ಮಾಡಿದ್ದಾರೆ. ಅಲ್ಲದೆ ನಮ್ಮ ಕಾರ್ಯಕ್ಕೆ ಅಭಿನಂದಿಸಿ ಮಹಿಳೆಯರು, ವಕೀಲರು ಮತ್ತು ಕೆಲ ಮಾಧ್ಯಮದವರೂ ಕರೆ ಮಾಡಿ ಒಳ್ಳೆ ಕಾರ್ಯ ಮಾಡುತ್ತಿದ್ದೀರಿ ಎಂದು ಹಾರೈಸುತ್ತಿದ್ದಾರೆ. ಆದರೆ ಈ ಮಧ್ಯೆ 17 ಬೆದರಿಕೆ ಕರೆಗಳು ಕೂಡ ಬಂದಿವೆ ಎಂದು ತಿಳಿಸಿದರು. ಅಲ್ಲದೆ, ಸಹಾಯವಾಣಿಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದನ್ನೂ ಕೂಡ ರಿಪೋರ್ಟ್ ಮಾಡಿ…