ರಾಜ್ಯದಲ್ಲಿ ಲವ್ ಜಿಹಾದ್ಗೆ ಸಿಲುಕಿದ ಹಿಂದೂ ಯುವತಿಯರು ಹಾಗೂ ಮಹಿಳೆಯರ ರಕ್ಷಣೆಗಾಗಿ ಶ್ರೀರಾಮಸೇನೆ ಸಹಾಯವಾಣಿ ಕೇಂದ್ರ ಆರಂಭಿಸಿದೆ. ಆದರೆ, ಈ ಸಹಾಯವಾಣಿ ಕೇಂದ್ರಕ್ಕೆ ಬೆದರಿಕೆ ಕರೆಗಳು ಬಂದಿವೆ. ನಾಲ್ಕು ದಿನದಲ್ಲಿ 17 ಬೆದರಿಕೆ ಕರೆಗಳು ಬಂದಿವೆ ಎಂದು ಶ್ರೀರಾಮಸೇನೆ ಮುಖಂಡ ಗಂಗಾಧರ ಕುಲಕರ್ಣಿ ತಿಳಿಸಿದ್ದಾರೆ. ಲವ್ ಜಿಹಾದ್‌ನಲ್ಲಿ ಸಿಲುಕಿದ ಹಿಂದೂ ಯುವತಿಯರ ರಕ್ಷಣೆಗೆ ಮೇ 29 ರಂದು ಶ್ರೀರಾಮಸೇನೆ ಸಹಾಯವಾಣಿ ಆರಂಭಸಿತ್ತು. ನಾಲ್ಕು ದಿನಗಳಲ್ಲಿ 400ಕ್ಕೂ ಅಧಿಕ ಕರೆಗಳು ಬಂದಿವೆ. 37 ಜನ ತಾಯಂದಿರು, 42 ಪ್ರೋತ್ಸಾಹಕ ಕತೆಗಳು, 52 ಜನ ಲವ್ ಜಿಹಾದ್‌ನಲ್ಲಿ ಸಿಲುಕಿರುವ ಸಂತ್ರಸ್ತೆಯರು ಕರೆ ಮಾಡಿದ್ದಾರೆ. ಅಲ್ಲದೆ ನಮ್ಮ ಕಾರ್ಯಕ್ಕೆ ಅಭಿನಂದಿಸಿ ಮಹಿಳೆಯರು, ವಕೀಲರು ಮತ್ತು ಕೆಲ ಮಾಧ್ಯಮದವರೂ ಕರೆ ಮಾಡಿ ಒಳ್ಳೆ ಕಾರ್ಯ ಮಾಡುತ್ತಿದ್ದೀರಿ ಎಂದು ಹಾರೈಸುತ್ತಿದ್ದಾರೆ. ಆದರೆ ಈ ಮಧ್ಯೆ 17 ಬೆದರಿಕೆ ಕರೆಗಳು ಕೂಡ ಬಂದಿವೆ ಎಂದು ತಿಳಿಸಿದರು. ಅಲ್ಲದೆ, ಸಹಾಯವಾಣಿಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದನ್ನೂ ಕೂಡ ರಿಪೋರ್ಟ್ ಮಾಡಿ…
Author: main-admin
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಗೆ ನೀರು ಪೂರೈಕೆ ವ್ಯವಸ್ಥೆಯ ಕಾಮಗಾರಿಯ ಹಿನ್ನೆಲೆಯಲ್ಲಿ ಜೂ. 3ರಂದು ಬೆಳಗ್ಗೆ 6ರಿಂದ ಜೂ. 4ರ ಬೆಳಗ್ಗೆ 6ರವರೆಗೆ ನೀರು ಪೂರೈಕೆಯಲ್ಲಿ ಹಲವೆಡೆ ವ್ಯತ್ಯಯ ಉಂಟಾಗಲಿದೆ ಎಂದು ಪಾಲಿಕೆ ಪ್ರಕಟನೆ ತಿಳಿಸಿದೆ. ತುಂಬೆ 18 ಎಂಜಿಡಿ ರೇಚಕ ಸ್ಥಾವರದಿಂದ ಪಣಂಬೂರು ಕಡೆಗೆ ಪಂಪಿಂಗ್ ಮಾಡುವ 900 ಎಂ.ಎಂ ವ್ಯಾಸದ ಕೊಳವೆಯನ್ನು ಕೊಟ್ಟಾರ ಚೌಕಿಯಿಂದ ಗೋಲ್ಡ್ ಫಿಂಚ್ ಗ್ರಂಡ್ ತನಕ ಮರುಜೋಡಣೆ ಕಾಮಗಾರಿ ಕೆಯುಐಡಿಎಫ್‌ಸಿ ವತಿಯಿಂದ ನಡೆಯಲಿದೆ. ಈ ಕಾರಣ 24 ಗಂಟೆ ಅವಧಿಯಲ್ಲಿ ಸುರತ್ಕಲ್, ಕಾಟಿಪಳ್ಳ ಎನ್‌ಐಟಿಕೆ, ಎಂಸಿಎಫ್, ಕಾಪಿಕಾಡ್, ಕೂಳೂರು, ಜಲ್ಲಿಗುಡ್ಡೆ, ಕಾವೂರು ಭಾಗಶಃ, ಕೋಡಿಕಲ್ ಭಾಗಶಃ, ಪಚ್ಚನಾಡಿ, ಅಶೋಕ ನಗರ, ಮೂಡ ಪಂಪ್ ದೇರೆಬೈಲ್, ಕುಳಾಯಿ, ಮುಕ್ಕ ಪಣಂಬೂರು ಮುಂತಾದ ಪ್ರದೇಶಗಳಲ್ಲಿ ನೀರು ನಿಲುಗಡೆಗೊಳಿಸಲಾಗುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನಲ್ಲಿ ಬಾಲಕಿ ಮೇಲೆ ಬೇರೆ ಬೇರೆ ಸಮಯದಲ್ಲಿ ಮೂವರು ಯುವಕರು ಬಲತ್ಕಾರ ಮಾಡಿ ಅತ್ಯಾಚಾರ ಎಸಗಿ ಆಕೆ ಆರು ತಿಂಗಳ ಗರ್ಭಿಣಿಯಾಗಲು ಕಾರಣವಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಗ್ಯಾಂಗ್ ರೇಪ್ ಹಾಗೂ ಪೋಕ್ಸೋ ಅಡಿಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಮೂವರು ಮೂಡಬಿದ್ರೆ ನಿವಾಸಿಗಳಾದ ಮಹಮ್ಮದ್ ಇಕ್ಬಾಲ್(26), ಫಾರೂಕ್(19) ಹಾಗೂ 18 ವರ್ಷದ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ.ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 18.5 ವಯಸ್ಸಿನ ಬಾಲಕಿಗೆ ಮೂವರು ಯುವಕರು ಬೇರೆ ಬೇರೆ ಸಮಯದಲ್ಲಿ ಬಲತ್ಕಾರ ಮಾಡಿ ಅತ್ಯಾಚಾರ ಎಸೆದಿದ್ದಾರೆ. ಇದೀಗ ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಾಲಕಿ ಮೇ.31 ರಂದು ನೀಡಿದ ದೂರಿನ ಮೇರೆಗೆ ಮೂವರ ವಿರುದ್ಧ ಗ್ಯಾಂಗ್ ರೇಪ್ ಮತ್ತು ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಇಂದು ಮೂವರನ್ನು ಬಂಧಿಸಲಾಗಿದೆ. ಈ ಪೈಕಿ ಇಬ್ಬರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ…
ಕಾಪು: ದರೋಡೆಗೆ ಸಂಚು ರೂಪಿಸಿ ಅದಕ್ಕಾಗಿ ಹೊಂಚು ಹಾಕಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರಿನಲ್ಲಿ ಸಂಚರಿಸುತ್ತಿದ್ದ ಆರೋಪಿಗಳನ್ನು ಕಾಪು ಪೊಲೀಸರು ಶನಿವಾರ ರಾತ್ರಿ ಸಿನಿಮೀಯ ರೀತಿಯ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಅಮಿತ್ ರಾಜ್, ಪ್ರಕಾಶ್ ಸುರತ್ಕಲ್, ವರುಣ್ ನೀರುಮಾರ್ಗ, ಕಾರ್ತಿಕ್ ಶೆಟ್ಟಿ ಸುರತ್ಕಲ್, ಅಭಿಷೇಕ್, ಶ್ರೀಕಾಂತ್ ಶ್ರೀಪತಿ ಫರಂಗಿಪೇಟೆ ಬಂಧಿತ ಆರೇಪಿಗಳು. ಕಾಪು ಸಿಐ ಜಯಶ್ರೀ ಮಾನೆ ಮತ್ತು ಕಾಪು ಎಸ್ ಐ ಅಬ್ದುಲ್ ಖಾದರ್ ಹಾಗೂ ಸಿಬಂದಿ ಯಶಸ್ವೀ ಕಾರ್ಯಾಚರಣೆ ಮೂಲಕ ಆರೋಪಿಗಳನ್ನು ಬಂಧಿಸಿದ್ದು, ಸ್ಕಾರ್ಪಿಯೋ ಕಾರು ಮತ್ತು ಅದರಲ್ಲಿದ್ದ ಡ್ರ್ಯಾಗನ್, ಚೂರಿ, ಕಬ್ಬಿಣದ ಪೈಪ್ ಮತ್ತು ಮರಳು ಮಿಶ್ರಿತ ಮೆಣಸಿನ ಪುಡಿಯನ್ನು ವಶಪಡಿಸಿಕೊಂಡಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
ಮಂಗಳೂರು: ಅಧಿಕ ಲಾಭಾಂಶ ನೀಡುವುದಾಗಿ ಹೇಳಿ ಹಣ ಹೂಡಿಕೆ ಮಾಡಿಸಿ 120 ಮಂದಿಗೆ ಒಟ್ಟು 55,81,582 ರೂ. ವಂಚಿಸಿರುವ ಬಗ್ಗೆ ಬಲ್ಮಠದ ಕೆನರಾ ಫಿಶ್ ಆ್ಯಂಡ್ ಫಾರ್ಮಸ್ ಸಂಸ್ಥೆಯ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಸ್ಥೆಯ ರೀಜನಲ್ ಮ್ಯಾನೇಜರ್ ಮತ್ತು ಬ್ರಾಂಚ್ ಮ್ಯಾನೇಜರ್ ಸಂಪರ್ಕಿಸಿ ಅಧಿಕ ಲಾಂಭಾಂಶ ನೀಡುವುದಾಗಿ ಭರವಸೆ ನೀಡಿ ಹಣ ಹೂಡಿಕೆ ಮಾಡಿಸಿದ್ದರು. ಹಣದ ಬಾಂಡ್ ಅವಧಿ ಮುಕ್ತಾಯವಾದರೂ ಹೂಡಿಕೆ ಮಾಡಿದ ಹಣವನ್ನಾಗಲಿ, ಲಾಭಾಂಶವನ್ನಾಗಲಿ ನೀಡದೆ ವಂಚಿಸಿದ್ದಾರೆ ಎಂದು ವಂಚನೆಗೊಳಗಾದ ವ್ಯಕ್ತಿ ಕದ್ರಿ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪುತ್ತೂರು ಹುಲಿವೇಷದ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಆರೋಪಿಗಳ ಜಾಮೀನು ನಿರಾಕರಣೆ ಬೆನ್ನಲ್ಲೇ ನೇರ ನಡೆಯ ನ್ಯಾಯವಾದಿ ಮಹೇಶ್ ಕಜೆ ಅವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ರಾಜ್ಯ ಸರಕಾರ ನೇಮಕ ಮಾಡಿ ಅದೇಶ ಮಾಡಿದೆ. ಮಹೇಶ್ ಕಜೆ ಪ್ರಸ್ತುತ ಜಾರಿ ನಿರ್ದೇಶನಾಲಯ ( ಇಡಿ ) ಇದರ ಕೇಂದ್ರ ಸರಕಾರದ ಸರಕಾರಿ ಅಭಿಯೋಜಕರು ಹಾಗೂ ಹಿರಿಯ ನ್ಯಾಯಾಲಯಗಳೂ ಹೌದು. ಇವರನ್ನು ನೇಮಕ ಮಾಡಿರುವುದು ಈಗಾಗಲೇ ಈ ಪ್ರಕರಣವನ್ನು ಸಮರ್ಥವಾಗಿ ನಿರ್ವಹಣೆ ಮಾಡಿ ಜಾಮೀನು ನಿರಾಕರಣಯಾಗುವಂತೆ ಮಾಡಿದ ಸರಕಾರಿ ಅಭಿಯೋಜಕರಾದ ಜಯಂತಿಯವರಿಗೆ ಆನೆಭಲ ಬಂದಂತಾಗಿದ್ದು, ಆರೋಪಿಗಳ ಎದೆಯಲ್ಲಿ ನಡುಕ ಹುಟ್ಟುವಂತೆ ಮಾಡಿದೆ.
ಕಾಪು: ಉಡುಪಿ ಜಿಲ್ಲೆಯ ಕಾಪು ಸಮೀಪ ಹೊಳೆಯಲ್ಲಿ ಬಲೆ ಬೀಸುತ್ತಿದ್ದಾಗ ದೋಣಿಯ ವಾಡಿ ಮೇಲೆ ಬಿದ್ದು ಮೀನುಗಾರ ಮೃತಪಟ್ಟ ಘಟನೆ ಉದ್ಯಾವರ ಪಿತ್ರೋಡಿಯಲ್ಲಿ ಸಂಭವಿಸಿದೆ. ಪಿತ್ರೋಡಿಯ ವಾಸು ಅವರಿಗೆ ಸೇರಿದ ದೋಣಿಯಲ್ಲಿ ಪಿತ್ರೋಡಿ ಪಾಪನಾಶಿನಿ ಹೊಳೆಯಲ್ಲಿ ಮೀನು ಹಿಡಿಯಲೆಂದು ತೆರಳಿದ್ದ ಉದ್ಯಾವರ ನಿವಾಸಿ ಅನಿಲ್ (46) ಮೃತ ಮೀನುಗಾರ ಎಂದು ತಿಳಿಯಲಾಗಿದೆ. ಹೊಳೆಯಲ್ಲಿ ಬಲೆ ಬೀಸುತ್ತಿದ್ದಾಗ ಆಯತಪ್ಪಿ ದೋಣಿಯೊಳಗೆ ಅಳವಡಿಸಿರುವ ವಾಡಿ ಮೇಲೆ ತಲೆಕೆಳಗಾಗಿ ಬಿದ್ದು ಗಂಭೀರ ಗಾಯಗೊಂಡಿದ್ದು,ಅವರ ಜತೆಗಿದ್ದ ಭರತೇಶ್ ಅನಿಲ್ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಗಾಯಾಳು ಮೃತಪಟ್ಟಿರುವುದಾಗಿ ತಿಳಿಸಿದ್ದರು. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ
ಲೋಕಸಭೆ ಚುನಾವಣೆ ಮತ ಎಣಿಕೆ ಜೂ.4ರಂದು ನಡೆಯಲಿದ್ದು ದಕ್ಷಿಣ ಕನ್ನಡದಲ್ಲಿಯೂ ಸಕಲ ತಯಾರಿ ನಡೆಸಿರುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಇಂದು ಅವರು ಮತ ಎಣಿಕೆ ಕೇಂದ್ರದ ಸಿದ್ದತೆ ಕುರಿತು ಪಕ್ಷಗಳ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು. ಜೂ.4ರಂದು ಬೆಳಗ್ಗೆ ಸ್ಟ್ರಾಂಗ್ ರೂಮ್ ತೆರೆಯುವುದರಿಂದ ಹಿಡಿದು EVM ಮಷಿನ್ ಭದ್ರತಾ ಕೊಠಡಿಗೆ ಇರಿಸುವವರೆಗಿನ ಎಲ್ಲ ಹಂತಗಳನ್ನು ಪ್ರತಿನಿಧಿಗಳಿಗೆ ವಿವರಿಸಿದರು. ಪ್ರತಿ ಪಕ್ಷಗಳು ತಮ್ಮ ಚುನಾವಣಾ ಏಜೆಂಟ್, ಮತ ಎಣಿಕಾ ಏಜೆಂಟರಿಗೆ ಕಡ್ಡಾಯವಾಗಿ ಆಯೋಗ ನೀಡಿರುವ ಮಾರ್ಗಸೂಚಿ ಪಾಲಿಸುವುದಕ್ಕೆ ಸೂಚಿಸಿದರು.
ನವದೆಹಲಿ: ಜೂನ್ 1ರ ಇಂದಿನಿಂದ ದೇಶಾದ್ಯಂತ ಡ್ರೈವಿಂಗ್ ಲೈಸೆನ್ಸ್ ನಿಯಮದಲ್ಲಿ ಹಲವು ಬದಲಾವಣೆಗಳು ಆಗಲಿದ್ದು, ರಸ್ತೆ ಸಾರಿಗೆ ಸಚಿವಾಲಯವು ಡ್ರೈವಿಂಗ್ ಲೈಸೆನ್ಸ್ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಮತ್ತು ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (RTO) ಉದ್ದನೆಯ ಸರತಿ ಸಾಲುಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಹೊಸ ನಿಯಮಗಳನ್ನು ಪ್ರಕಟಿಸಿದೆ. ಜೂನ್ 1 ರಿಂದ, ಅರ್ಜಿದಾರರು ಸರ್ಕಾರಿ ಸ್ವಾಮ್ಯದ ಆರ್ಟಿಒಗಳಿಗೆ ಹೋಗುವ ಬದಲು ಖಾಸಗಿ ಚಾಲನಾ ತರಬೇತಿ ಕೇಂದ್ರಗಳಲ್ಲಿ ಚಾಲನಾ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿರುತ್ತಾರೆ. ಈ ಬದಲಾವಣೆಯು ಪ್ರಕ್ರಿಯೆಯನ್ನು ಸುಗಮಗೊಳಿಸುತ್ತದೆ ಮತ್ತು ಹೆಚ್ಚಿನ ಜನಸಂಖ್ಯೆಗೆ ಹೆಚ್ಚು ಪ್ರವೇಶಿಸುವಂತೆ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ. ʻಡ್ರೈವಿಂಗ್ ಲೈಸೆನ್ಸ್ʼ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗಳು ಅತ್ಯಂತ ಗಮನಾರ್ಹ ಬದಲಾವಣೆಯೆಂದರೆ ಅರ್ಜಿದಾರರು ಈಗ ಖಾಸಗಿ ತರಬೇತಿ ಕೇಂದ್ರಗಳಲ್ಲಿ ತಮ್ಮ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು, ಇದು ಪರವಾನಗಿ ಅರ್ಹತೆಗಾಗಿ ಪ್ರಮಾಣಪತ್ರಗಳನ್ನು ನೀಡಲು ಸಹ ಅಧಿಕಾರ ನೀಡುತ್ತದೆ. ಈ ಕ್ರಮವು ಸರ್ಕಾರಿ ಸ್ವಾಮ್ಯದ ಆರ್ಟಿಒಗಳ ಮೇಲಿನ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಮತ್ತು ಅನೇಕರಿಗೆ ಹತಾಶೆಯ…
ಪುತ್ತೂರು : ನಿನ್ನೆ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಸುರಿದ ಭಾರಿ ಮಳೆ ಅವಾಂತರ ಸೃಷ್ಟಿಸಿದೆ. ಸೇತುವೆ ಮೇಲೆ ಸಂಚರಿಸುತ್ತಿದ್ದ ಪಿಕಪ್ ವಾಹನವೊಂದು ಹಠಾತ ಏರಿಕೆಯಾದ ಹೊಳೆಯ ನೀರಿಗೆ ಸಿಲುಕಿದ ಘಟನೆ ಸುಬ್ರಹ್ಮಣ್ಯ ಸಮೀಪದ ಕಲ್ಮಕಾರಿನಲ್ಲಿ ನಡೆದಿದೆ. ನಿನ್ನೆ ಸಂಜೆ ಸುಬ್ರಹ್ಮಣ್ಯ ಪರಿಸದಲ್ಲಿ ಬಾರೀ ಮಳೆಯಾಗಿತ್ತು, ಒಂದೇ ಸಮನೆ ಸುರಿದ ಮಳೆಗೆ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಹೊಳೆಯ ನೀರು ಏರಿಕೆಯಾಗಿತ್ತು. ಈ ನಡುವೆ ಸುಬ್ರಹ್ಮಣ್ಯ ಸಮೀಪದ ಕಲ್ಮಕಾರಿನಲ್ಲಿ ಸುರಿದ ಭಾರೀ ಮಳೆಗೆ ಕಲ್ಮಕಾರು ಹೊಳೆಗೆ ನಿರ್ಮಿಸಲಾದ ಸೇತುವೆ ಮೇಲೆ ಹಠಾತ ಪ್ರವಾಹ ಬಂದಿತ್ತು. ಈ ವೇಳೆ ಸೇತುವೆ ದಾಟುತ್ತಿದ್ದ ಪಿಕಪ್ ವಾಹನವೊಂದು ಸಿಕ್ಕಿಹಾಕಿಕೊಂಡಿತ್ತು. ತೆಂಗಿನಕಾಯಿ ಲೋಡ್ ಮಾಡಿಕೊಂಡು ಹೊಳೆ ದಾಟುತ್ತಿದ್ದ ಪಿಕ್ ಅಪ್ ವಾಹನ ಹೊಳೆಯಲ್ಲಿ ಏಕಾಏಕಿ ನೀರು ಹರಿದ ಪರಿಣಾಮ ಕೊಚ್ಚಿಹೋಗು ಸ್ಥಿತಿಗೆ ತಲುಪಿತ್ತು, ಈ ವೇಳೆ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ವಾಹನದಿಂದ ತೆಂಗಿನ ಕಾಯಿಯನ್ನು ತೆಗೆದು, ವಾಹನ ಮತ್ತು ಚಾಲಕನನ್ನು ರಕ್ಷಣೆ ಮಾಡಿದ್ದಾರೆ. ಕಳೆದ ಎರಡು ವರ್ಷಗಳಿಂದ ಪ್ರವಾಹದಿಂದಾಗಿ ಕಲ್ಮಕಾರು…