Author: main-admin

ಮಂಗಳೂರು: ಸ್ಕೀಮ್ ಹಾಗೂ ಸೇವಿಂಗ್ ಯೋಜನೆಯ ಇತಿಹಾಸದಲ್ಲೇ ಅತೀ ದೊಡ್ಡ ಬಹುಮಾನವನ್ನು ನೀಡುವ ಮಹತ್ತರ ಯೋಜನೆಗೆ ವಿಷನ್ 2 ಇಂಡಿಯಾ (ಸೀಸನ್ 2) ಚಾಲನೆ ನೀಡಿದೆ. 1ಕೋಟಿ ನಗದು ಹಾಗೂ ಚಿನ್ನಾಭರಣ, ಒಟ್ಟು ಹದಿನೇಳು ಕಾರು, ಹತ್ತು ಸುಸಜ್ಜಿತ ಮನೆ, ನೂರಕ್ಕಿಂತ ಹೆಚ್ಚು ದ್ವಿಚಕ್ರ ವಾಹನ, 50ಕ್ಕಿಂತ ಹೆಚ್ಚು ಐಪೋನ್, ವಿದೇಶ ಪ್ರಯಾಣ ಹಾಗೂ ಸಮಾಧಾನಕರ ಬಹುಮಾನವಾಗಿ ನಗದು, ಚಿನ್ನ ಹಾಗೂ ಇನ್ನಿತರ ಫರ್ನಿಚರ್, ಎಲೆಕ್ಟ್ರಾನಿಕ್, ಗೃಹೋಪಯೋಗಿ ವಸ್ತುಗಳನ್ನು ನೀಡಲಿದೆ ಎಂದು ಸಂಸ್ಥೆಯ ಸಂಸ್ಥಾಪಕರು ತಿಳಿಸಿದ್ದಾರೆ. ಪ್ರತಿ ತಿಂಗಳು ಸಾವಿರ ರೂಪಾಯಿಗಳಂತೆ ಪಾವತಿಸುವ ಉಳಿತಾಯ ಯೋಜನೆ ಇದಾಗಿದ್ದು, ಇದರಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳನ್ನು ಗೆಲ್ಲಬಹುದಾಗಿದೆ. ವಿಷನ್ ಇಂಡಿಯಾ ಮೂಲಕ ತಮ್ಮ ಕನಸಿನ ಮನೆ, ಕಾರು ಹಾಗೂ ನಗದು, ಚಿನ್ನವನ್ನು ಗೆಲ್ಲುವ ಮೂಲಕ ಕನಸನ್ನು ನನಾಗಿಸಲು ಇದೊಂದು ಸುವರ್ಣವಕಾಶವಾಗಿದೆ. ಈಗಾಗಲೇ ಮಡಿಕೇರಿ, ಮೈಸೂರು, ಬೆಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ವಿಷನ್ ಇಂಡಿಯಾ ಸಂಸ್ಥೆಯು ಪುತ್ತೂರು ಭಾಗದ ಜನರಿಗೆ ಉತ್ತಮ ಸೇವೆ…

Read More

ಉಡುಪಿ: ಉಡುಪಿಯಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣದ ಹಿನ್ನೆಲೆ ಮಾದಕ ದ್ರವ್ಯದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮಣಿಪಾಲದಲ್ಲಿ ರಾತ್ರಿ 10ಗಂಟೆಯಿಂದ ಹೊಟೇಲ್ ಬಾರ್ ಸೇರಿದಂತೆ ಎಲ್ಲ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡುವಂತೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಕೆ ಅರುಣ್ ಅವರು ಸೂಚನೆ ನೀಡಿದ್ದಾರೆ. ಕಳೆದೆರಡು ದಿನಗಳಿಂದ ಮಣಿಪಾಲದ ಬಾರ್, ಹೊಟೇಲ್, ಅಂಗಡಿ ಮಾಲಕರಿಗೆ ರಾತ್ರಿ 10ಗಂಟೆಯೊಳಗೆ ಅಂಗಡಿ ಬಂದ್ ಮಾಡುವಂತೆ ಪೊಲೀಸರು ಸೂಚನೆ ನೀಡುತ್ತಿದ್ದಾರೆ. ಬುಧವಾರ ರಾತ್ರಿ ಭಾಗಃಶ ಅಂಗಡಿ ಮುಗ್ಗಟ್ಟುಗಳು ಬಂದ್ ಮಾಡಿದ್ದವು. ಆದರೆ ಕೆಲವು ಬಾರ್‌ಗಳು ರಾತ್ರಿ 11ಗಂಟೆಯವರೆಗೂ ತೆರೆದಿರುವುದು ಕಂಡುಬಂದವು. ಮಣಿಪಾಲದ ಎಲ್ಲ ಅಂಗಡಿಮುಗ್ಗಟ್ಟುಗಳನ್ನು ಬಂದ್ ಮಾಡಿಸಿ ಡ್ರಗ್ಸ್ ಗಾಂಜಾ ಸೇರಿದಂತೆ ಮಾದಕ ದ್ರವ್ಯ ವಿರುದ್ಧ ಕಾರ್ಯಾಚರಣೆ ನಡೆಸಲಾಗುವುದು. ಮಣಿಪಾಲದಲ್ಲಿ ಈ ರೀತಿ ಕಾರ್ಯಾಚರಣೆ ಮಾಡಿದರೆ ಡ್ರಗ್ಸ್ ದಂಧೆಯ ಮೂಲಗಳ ಬಗ್ಗೆ ಮಾಹಿತಿ ಸಿಗಲಿದೆ. ಅದರಂತೆ ಮುಂದೆ ಕಟ್ಟುನಿಟ್ಟಿನ ಕ್ರಮ ಜರಗಿಸಲಾಗುವುದು ಎಂದು ಎಸ್ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ. ಈಗಾಗಲೇ ಬಾರ್, ಹೊಟೇಲ್, ಅಂಗಡಿಗಳ ಮಾಲಕರನ್ನು…

Read More

ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಮೇಲೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಗಿದ್ದು, ಯಾವುದೇ ಲಿಕೇಜ್ ಇಲ್ಲದೇ ಇರುವುದರಿಂದ ಹೆಚ್ಚಿನ ಹಾನಿ ಉಂಟಾಗಿಲ್ಲ. ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಬರುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. ಕೆಲ ಹೊತ್ತು ಟ್ರಾಫಿಕ್ ಜಾಮ್ ಆಗಿದ್ದು ವಾಹನ ಸವಾರರು ಪರದಾಡಿದ್ದಾರೆ. ಬಂಟ್ವಾಳ ಅಗ್ನಿಶಾಮಕ ದಳದವರು, ಸಂಚಾರ ಪೊಲೀಸರು, ಘಟನಾ ಸ್ಥಳಕ್ಕೆ ಆಗಮಿಸಿದ್ದು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.

Read More

ಉಡುಪಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸುತ್ತಿರುವ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಜೊತೆ ಗುರುತಿಸಿಕೊಂಡಿರುವ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್ ಸಹಿತ ನಾಲ್ವರು ಬಿಜೆಪಿ ಪದಾಧಿಕಾರಿಗಳನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್, ಕಾಪು ಮಂಡಲ ಉಪಾಧ್ಯಕ್ಷ ಉಪೇಂದ್ರ ನಾಯಕ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ರೋಷನ್ ಶೆಟ್ಟಿ ಮತ್ತು ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜುನೈದ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಬಂಡಾಯ ಅಭ್ಯರ್ಥಿಗೆ ಮತ ಯಾಚಿಸುತ್ತಿರುವ ವಿಚಾರ ಪಕ್ಷದ ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ನಾಲ್ವರಿಗೂ 48 ಗಂಟೆಗಳ ಒಳಗಾಗಿ ಜಿಲ್ಲಾಧ್ಯಕ್ಷರ ಮುಂದೆ ಸ್ಪಷ್ಟೀಕರಣವನ್ನು ನೀಡುವಂತೆ ನೋಟೀಸ್ ಜಾರಿ ಮಾಡಲಾಗಿದೆ. ಇದರಲ್ಲಿ ಕೆಲವರು ಉತ್ತರ ಕೊಟ್ಟಿದ್ದಾರೆ. ಆದರೆ ಅವರ ಸಬೂಬು ನಮ್ಮ ನೋಟೀಸ್‌ಗೆ ಸರಿಯಾದ ಉತ್ತರ ಆಗಿಲ್ಲ. ಆದುದರಿಂದ ಅವರ ಹೇಳಿಕೆಯನ್ನು ಪರಿಗಣಸದೆ ನೋಟೀಸ್ ಜಾರಿ…

Read More

ಮಂಗಳೂರು: ಮನೆಯಿಂದ ಹೊರಟ ತಾಯಿ ಹಾಗೂ ಮಗು ನಾಪತ್ತೆಯಾಗಿರುವ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಕಂಪಾಡಿ ಮೀನಕಳಿಯ ನಿವಾಸಿ ಶ್ವೇತಾ(31) ಹಾಗೂ ಮಗಳು ಇಶಿಕಾ(6) ನಾಪತ್ತೆಯಾದವರು ಎಂದು ತಿಳಿಯಲಾಗಿದೆ. (ಮೇ 29 ) ಮಧ್ಯಾಹ್ನ 3 ಗಂಟೆ ಹೊತ್ತಿಗೆ ತಾಯಿ ಮನೆಯಿಂದ ಗಂಡನ ಮನೆ ಕುಳೂರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದ ತಾಯಿ ಮಗಳು ಪತ್ತೆಯಾಗಿಲ್ಲ.  ಈಗಾಗಲೇ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಯಾರಿಗಾದರೂ ತಾಯಿ ಮಗಳ ಬಗ್ಗೆ ಮಾಹಿತಿ ಸಿಕ್ಕಿದರೆ ಕೂಡಲೇ ಪಣಂಬೂರು ಪೊಲೀಸರನ್ನು ಸಂಪರ್ಕಿಸಿ 9480805331,0824222053

Read More

ಮಂಗಳೂರು: ಅಪರಿಚಿತನೋರ್ವನ ಮಾತು ನಂಬಿ ಕ್ರಿಪ್ಟೋ ಕರೆನ್ಸಿ ವ್ಯವಹಾರಕ್ಕೆ ಕೈಹಾಕಿ ಉಪ್ಪಿನಂಗಡಿ ಬಳಿಯ ಇಚ್ಲಂಪಾಡಿ ನಿವಾಸಿ ಯುವಕನೊಬ್ಬ ಒಂದು ಕೋಟಿ ರೂ ಗೂ ಅಧಿಕ ದುಡ್ಡು ಕಳಕೊಂಡಿದ್ದಾನೆ ಎಂದು ತಿಳಿಯಲಾಗಿದೆ ‌ ಇಚ್ಲಂಪಾಡಿ ಗ್ರಾಮದ ಕೆಡೆಂಬೈಲು ಪುಲಿಕ್ಕಲ್ ನ 43 ವರ್ಷದ ವ್ಯಕ್ತಿ ಹಣ ಕಳಕೊಂಡವರು ಎಂದು ಮಾಹಿತಿ ತಿಳಿದು ಬಂದಿದೆ. ಮೇ 25ರಂದು ಟೆಲಿಗ್ರಾಮ್ ನಲ್ಲಿ ಅಪರಿಚಿತನೊಬ್ಬ ಪರಿಚಯವಾಗಿದ್ದಾನೆ. ಆತ ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಬರುವುದಾಗಿ ನಂಬಿಸಿದ್ದಾನೆ. ಅದರಂತೆ, ಅಮೆರಿಕದ ಕ್ರಿಪ್ಟೋ ಕರೆನ್ಸಿಗೆ ಹಣ ಹೂಡಿಕೆ ಮಾಡಲು ಬಿನೇನ್ಸ್ ಆ್ಯಪ್ ಮತ್ತು ಡಿಫೈ ಆ್ಯಪ್ ಡೌನ್ಹೋಡ್ ಮಾಡುವಂತೆ ತಿಳಿಸಿದ್ದಾನೆ. ಅಪರಿಚಿತ ಹೇಳಿದಂತೆ ವ್ಯಕ್ತಿ ತಮ್ಮ ಮೊಬೈಲ್ ನಲ್ಲಿ ಎರಡೂ ಆ್ಯಪ್ ಗಳನ್ನು ಡೌನ್ಫೋಡ್ ಮಾಡಿ, ಅಪರಿಚಿತನ ಸೂಚನೆಯಂತೆ ತನ್ನ ಬ್ಯಾಂಕ್ ಖಾತೆಗಳಿಂದ 1,05,79,711 ರೂ ಹಣ ವರ್ಗಾಯಿಸಿದ್ದಾರೆ. ಕ್ರಿಪ್ಟೋ ಕರೆನ್ಸಿಯಲ್ಲಿ ಟ್ರೇಡಿಂಗ್ ಮಾಡುವುದಕ್ಕಾಗಿ ಆ್ಯಪ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ್ದರು. ಆದರೆ, ಆ ಬಳಿಕ ಹಣ ಹಿಂತಿರುಗಿ…

Read More

ಮಂಗಳೂರು: “ನೈರುತ್ಯ ಶಿಕ್ಷಕರ ಕ್ಷೇತ್ರಲ್ಲಿ ಈ ಬಾರಿಯ ಚುನಾವಣೆಯಲ್ಲಿ ಅನೇಕ ಶಿಕ್ಷಕರು ಮತ ಹಾಕಲು ಸಾಧ್ಯವಾಗದಂತಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಲಾಗಿದೆ. ನವೀಕರಣದ ಹೆಸರಲ್ಲಿ ಶಿಕ್ಷಕರ ಗಮನಕ್ಕೆ ಬಾರದೆ ಮತದಾನದ ಹಕ್ಕಿಗೆ ಕತ್ತರಿ ಹಾಕಲಾಗಿದೆ. ಇದನ್ನು ಚುನಾವಣೆ ಆಯೋಗದ ತಪ್ಪು ಎಂದು ಹೇಳಲಾಗುವುದಿಲ್ಲ. ಇದರ ಹಿಂದೆ ಕಾಣದ ಕೈಗಳ ಷಡ್ಯಂತ್ರ ಇರುವುದು ಸ್ಪಷ್ಟ. ಅನೇಕ ಮಂದಿ ಶಿಕ್ಷಕರು ಈ ಬಗ್ಗೆ ನಮ್ಮಲ್ಲಿ ದೂರು ನೀಡಿದ್ದಾರೆ. ಅನೇಕ ಮಂದಿ ಹೊಸದಾಗಿ ಆರ್ಜಿ ಹಾಕಿದ್ದರೂ ಚುನಾವಣಾ ಆಯೋಗ ಅದನ್ನು ಗಮನಿಸಿಲ್ಲ” ಎಂದು ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಚುನಾವಣೆಗೆ ಪಕ್ಷೇತರರಾಗಿ ಸ್ಪರ್ಧಿಸಿರುವ ಭಾಸ್ಕರ್ ಶೆಟ್ಟಿ ಟಿ. ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. “ಹೆಸರು ಮಾತ್ರ ಶಿಕ್ಷಕರ ಕ್ಷೇತ್ರ ಎಂದಾಗಿದ್ದು ಈ ಕ್ಷೇತ್ರವನ್ನು ಆಳುವವರು ಮಾತ್ರ ಬೇರೆಯೇ ಆಗಿದ್ದಾರೆ. ಈ ಕಾರಣಕ್ಕಾಗಿ ಓರ್ವ ಶಿಕ್ಷಕನಾಗಿ ಈ ಕ್ಷೇತ್ರದ ಆಳ ಅರಿವು ಬಲ್ಲ ನಾನು ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಚುನಾವಣೆಯಲ್ಲಿ ಅಕ್ರಮ ಎಸಗಿರುವ ಬಗ್ಗೆ ಈಗಾಗಲೇ ಕರ್ನಾಟಕ ಚುನಾವಣೆ ಆಯೋಗದ ಮುಖ್ಯಸ್ಥರಿಗೆ…

Read More

ಬ್ರಹ್ಮಾವರ: ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್‌ ಉಲ್ಲಾ ಬೇಗ್‌ ಹಾಗೂ ಬಿಲ್‌ ಕಲೆಕ್ಟರ್‌ ಸಂಜಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರವಿ ಡಿಲಿಮಾ ಅವರಿಂದ 13,300 ರೂ. ಪಡೆಯುತ್ತಿದ್ದಾಗ ಈ ಕಾರ್ಯಾಚರಣೆ ನಡೆದಿದೆ. ಲೋಕಾಯುಕ್ತ ಎಸ್‌ಪಿ ನಟರಾಜ್‌ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಕೆ.ಸಿ. ಪ್ರಕಾಶ್‌ ಅವರ ನೇತೃತ್ವದಲ್ಲಿ ಪೊಲೀಸ್‌ ನಿರೀಕ್ಷಕರಾದ ಮಂಜುನಾಥ್‌, ರಫೀಕ್‌ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಇಬ್ಬರಿಗೂ ಜೂನ್ 12ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Read More

ಕಾಪು: ಪಾದೂರು ಐ.ಎಸ್.ಪಿ.ಆರ್.ಎಲ್ ಕಂಪೆನಿ ಬಳಿಯ ಮರದ ಪುಡಿ ದಾಸ್ತಾನು ಘಟಕಕ್ಕೆ ಬೆಂಕಿ ಬಿದ್ದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಮರದ ಪುಡಿ ಹಾಗೂ ಭತ್ತದ ಉಮಿಯನ್ನು ಸಂಗ್ರಹಿಸಿಡುತ್ತಿದ್ದ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕಾರ್ಮಿಕರು ತತ್ ಕ್ಷಣ ಗಮನಿಸಿದ್ದರು. ಕೂಡಲೇ ಐ.ಎಸ್.ಪಿ.ಆರ್.ಎಲ್ ಮತ್ತು ಉಡುಪಿ ಅಗ್ನಿಶಾಮಕ ದಳದ ವಾಹನ ಆಗಮಿಸಿ ಬೆಂಕಿ ನಂದಿಸಿದ್ದು ಯಾವುದೇ ಅಪಾಯಗಳುಂಟಾಗಿಲ್ಲ. ಹೆಚ್ಚಿನ‌ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

Read More

ಮಂಗಳೂರು: ಚಿಕಿತ್ಸೆಗೆಂದು ಯುವತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ಪರಿಚಯಸ್ಥನೇ ಆಸ್ಪತ್ರೆಯಲ್ಲಿ ನಿರಂತರ ಅತ್ಯಾಚಾರ ಎಸಗಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೂಲದ ಸಜಿತ್ ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೈಲ್ಸ್ ಗೆ ಚಿಕಿತ್ಸೆಗೆ ಯುವತಿಯನ್ನು ಮಂಗಳೂರಿನ ಎ.ಜೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ಸಜಿತ್, ಚಿಕಿತ್ಸೆಯ ಬಳಿಕ ಆಸ್ಪತ್ರೆಯ ಕೊಠಡಿಯಲ್ಲಿದ್ದ ವೇಳೆ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದಾನೆ. ಬಳಿಕ ಆಕೆಯ ನಗ್ನ ಫೋಟೋಗಳನ್ನ ತೆಗೆದಿದ್ದು, ಬೆದರಿಕೆ ಹಾಕುತ್ತಿದ್ದ. ಆ ಬಳಿಕ ನಗ್ನ ಫೋಟೋ ಇದೆ ಎಂದು ಬೆದರಿಸಿ, ಆಕೆಯನ್ನು ಮಂಗಳೂರಿನ ಮಹಾರಾಜ ಹೋಟೇಲ್ ಗೆ ಕರೆಸಿಕೊಂಡು‌ ಅಲ್ಲಿನ ಕೊಠಡಿಯಲ್ಲಿ ಅತ್ಯಾಚಾರ ನಡೆಸಿದ್ದಾನೆ. ಅದಾದ ಬಳಿಕ ಯುವತಿ ಫುಡ್ ಫಾಯಿಸನ್ ಆಗಿ ನಗರದ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಾದಾಗ ಅಲ್ಲೂ ಕೊಠಡಿಯಲ್ಲಿ ಅತ್ಯಾಚಾರ ಮಾಡಿದ್ದಾನೆಂದು ಯುವತಿ‌ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು‌ ನೀಡಿದ್ದಾಳೆ ಪ್ರಕರಣ ದಾಖಲಿಸಿಕೊಂಡ ಕದ್ರಿ ಪೊಲೀಸರು (Kadri Police) ಆರೋಪಿಯನ್ನ ಬಂಧಿಸಿದ್ದಾರೆ

Read More