ಮಂಗಳೂರು: ಚಿಕಿತ್ಸೆಗೆಂದು ಯುವತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ಪರಿಚಯಸ್ಥನೇ ಆಸ್ಪತ್ರೆಯಲ್ಲಿ ನಿರಂತರ ಅತ್ಯಾಚಾರ ಎಸಗಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೂಲದ ಸಜಿತ್ ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೈಲ್ಸ್ ಗೆ ಚಿಕಿತ್ಸೆಗೆ ಯುವತಿಯನ್ನು ಮಂಗಳೂರಿನ ಎ.ಜೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ಸಜಿತ್, ಚಿಕಿತ್ಸೆಯ ಬಳಿಕ ಆಸ್ಪತ್ರೆಯ ಕೊಠಡಿಯಲ್ಲಿದ್ದ ವೇಳೆ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದಾನೆ. ಬಳಿಕ ಆಕೆಯ ನಗ್ನ ಫೋಟೋಗಳನ್ನ ತೆಗೆದಿದ್ದು, ಬೆದರಿಕೆ ಹಾಕುತ್ತಿದ್ದ. ಆ ಬಳಿಕ ನಗ್ನ ಫೋಟೋ ಇದೆ ಎಂದು ಬೆದರಿಸಿ, ಆಕೆಯನ್ನು ಮಂಗಳೂರಿನ ಮಹಾರಾಜ ಹೋಟೇಲ್ ಗೆ ಕರೆಸಿಕೊಂಡು ಅಲ್ಲಿನ ಕೊಠಡಿಯಲ್ಲಿ ಅತ್ಯಾಚಾರ ನಡೆಸಿದ್ದಾನೆ. ಅದಾದ ಬಳಿಕ ಯುವತಿ ಫುಡ್ ಫಾಯಿಸನ್ ಆಗಿ ನಗರದ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಾದಾಗ ಅಲ್ಲೂ ಕೊಠಡಿಯಲ್ಲಿ ಅತ್ಯಾಚಾರ ಮಾಡಿದ್ದಾನೆಂದು ಯುವತಿ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ ಪ್ರಕರಣ ದಾಖಲಿಸಿಕೊಂಡ ಕದ್ರಿ ಪೊಲೀಸರು (Kadri Police) ಆರೋಪಿಯನ್ನ ಬಂಧಿಸಿದ್ದಾರೆ
Author: main-admin
ತಿರುವನಂತಪುರಂ: ಮಹಿಳೆಯೊಬ್ಬರು ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ವೇಳೆ ಹೆರಿಗೆ ನೋವು ಕಾಣಿಸಿಕೊಂಡು ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಕೇರಳದಲ್ಲಿ ಬುಧವಾರ ನಡೆದಿದೆ. ಕೇರಳದ ಮಲಪ್ಪುರಂ ಮೂಲದ 37 ವರ್ಷದ ಮಹಿಳೆಯೊಬ್ಬರು ಬುಧವಾರ ಮಧ್ಯಾಹ್ನ ತ್ರಿಶೂರ್‌ನಿಂದ ಕೋಝಿಕೋಡ್‌ನ ತೊಟ್ಟಿಲ್‌ಪಾಲಮ್‌ಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು ಈ ವೇಳೆ ಬಸ್ಸು ಪೆರಮಂಗಲಂ ಬಳಿ ಸಂಚರಿಸುತ್ತಿದ್ದಾಗ ಮಹಿಳೆಗೆ ಹೆರಿಗೆ ನೋವು ಶುರುವಾಗಿದೆ ಈ ವಿಚಾರವನ್ನು ಬಸ್ ಚಾಲಕನ ಬಳಿ ಹೇಳಿದಾಗ ಚಾಲಕ ಕೂಡಲೇ ಬಸ್ಸನ್ನು ಆಸ್ಪತ್ರೆ ಕಡೆಗೆ ಚಲಾಯಿಸಿದ್ದಾರೆ ಅಲ್ಲದೆ ಆಸ್ಪತ್ರೆ ಸಿಬಂದಿಗೆ ಮಾಹಿತಿಯನ್ನೂ ನೀಡಿದ್ದಾರೆ ಬಸ್ಸು ಆಸ್ಪತ್ರೆ ಬಳಿ ಹೋಗುತ್ತಿದ್ದಂತೆ ಹೆರಿಗೆ ನೋವು ಜಾಸ್ತಿಯಾದ ಕಾರಣ ಬಸ್ಸಿನಲ್ಲಿದ್ದ ಇತರ ಪ್ರಯಾಣಿಕರನ್ನು ಇಳಿಸಿದ ಆಸ್ಪತ್ರೆ ಸಿಬಂದಿ ಬಸ್ಸಿನಲ್ಲೇ ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ. ಬಸ್ ಸಿಬ್ಬಂದಿ ಮತ್ತು ಅಮಲಾ ಆಸ್ಪತ್ರೆಯ ಆರೋಗ್ಯ ಕಾರ್ಯಕರ್ತರ ಸಕಾಲಿಕ ನೆರವಿನಿಂದ ಮಹಿಳೆ ಬಸ್‌ನೊಳಗೆ ಆರೋಗ್ಯವಂತ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದು, ಸಕಾಲಕ್ಕೆ ಸ್ಪಂದಿಸಿದ ಬಸ್ ಸಿಬಂದಿಗಳು ಹಾಗೂ…
ಕಾಸರಗೋಡು : ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಾಸರಗೋಡು ಶಾಲೆಯ ಶಿಕ್ಷಕಿಯೊಬ್ಬರು ಅನ್ಯಕೋಮಿನ ಯುವಕನ ಜೊತೆ ಪತ್ತೆಯಾಗಿದ್ದು,ಇದು ಲವ್ ಜಿಹಾದ್ ಎಂಬ ಆರೋಪ ಕೇಳಿಬಂದಿದೆ. ಮೇ.23 ರಂದು ಮನೆಯಿಂದ ಹೊರಟಿದ್ದ ಶಿಕ್ಷಕಿ ಯುವತಿ ನಾಪತ್ತೆಯಾಗಿದ್ದರು. ಈ ಬಗ್ಗೆ ಬದಿಯಡ್ಕ ಠಾಣೆಯಲ್ಲಿ ಯುವತಿಯ ತಂದೆ ದೂರು ದಾಖಲಿಸಿದ್ದರು. ಇದೀಗ ಯುವತಿ ಅನ್ಯಕೋಮಿನ ಯುವಕನ ಜೊತೆ ಪತ್ತೆಯಾಗಿದ್ದು, ಇಬ್ಬರೂ ವಿವಾಹವಾಗಿದ್ದಾರೆ ಎನ್ನಲಾಗುತ್ತಿದೆ. ಬದಿಯಡ್ಕ ರಿಜಿಸ್ಟ್ರಾರ್ ಕಚೇರಿಯಲ್ಲಿ ಇಬ್ಬರ ಭಾವಚಿತ್ರವಿರುವ ನೋಟಿಸ್ ಪತ್ತೆಯಾಗಿದ್ದು, ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹವಾಗಿ ಮೇ.27 ರಂದು ಬದಿಯಡ್ಕ ಪೊಲೀಸ್ ಠಾಣೆಗೆ ಬಂದು ಜೋಡಿ ಹಾಜರಾಗಿದೆ. ಇದೊಂದು ಲವ್ ಜಿಹಾದ್ ಪ್ರಕರಣವಾಗಿದ್ದು, ಮಾಹಿತಿ ಇದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಲವ್ ಜಿಹಾದ್ ಗೆ ಕೇರಳದ ಮುಸ್ಲಿಂ ಲೀಗ್ ನೇತಾರನೊಬ್ಬನ ತಂತ್ರ ಅಡಗಿದೆ ಎಂದು ಹಿಂದೂ ಪರ ಸಂಘಟನೆಗಳು ಆರೋಪಿಸುತ್ತಿವೆ
ಮಂಗಳೂರು: ಲವ್ ಜಿಹಾದ್ ತಡೆಯಲು ಶ್ರೀ ರಾಮ ಸೇನೆಯು ಸಹಾಯವಾಣಿ ಆರಂಭಿಸಿದೆ. ದಿನದ 24 ಗಂಟೆ ಕಾರ್ಯನಿರ್ವಹಣೆ ನಡೆಸಲಾಗುವುದು, ಕಾನೂನು ಸಲಹೆ ಲಭ್ಯವಿರುತ್ತದೆ ಎಂದು ಶ್ರೀರಾಮ ಸೇನೆ ಮಾಹಿತಿ ನೀಡಿದೆ. 9090443444 ದೂರವಾಣಿ ಸಂಖ್ಯೆಯ ಸಹಾಯವಾಣಿ ಅರಂಭಿಸಲಾಗಿದೆ. ರಾಜ್ಯದ ಯಾವುದೇ ಮೂಲೆಯಿಂದ ಕರೆ ಮಾಡಬಹುದು, ಲವ್ ಜಿಹಾದ್ ಕರೆಗಳನ್ನು ಮಾತ್ರ ಸ್ವೀಕಾರ ಮಾಡಲಾಗುತ್ತದೆ. ಸಹಾಯವಾಣಿ ತಂಡದಲ್ಲಿ ನುರಿತ ವಕೀಲರು, ಹಿರಿಯ ಪೊಲೀಸ್ ಅಧಿಕಾರಿಗಳು ಇರುತ್ತಾರೆ. ಕರೆ ಮಾಡಿದವರ ಮಾಹಿತಿ ಗೌಪ್ಯವಾಗಿಡಲಾಗುವುದು ಎಂದು ಮಂಗಳೂರಿನಲ್ಲಿ ಸಹಾಯವಾಣಿ ಉದ್ಘಾಟಿಸಿ ಶ್ರೀರಾಮ ಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಅಡ್ಯಾರ್ ಮಾಹಿತಿ ನೀಡಿದರು.
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಬಿದ್ದ ಪರಿಣಾಮ ಮಹಿಳೆಯೋರ್ವರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ನೀರಕಟ್ಟೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ತೋಡಿಗೆ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ಮಹಿಳೆಯೊಬ್ಬರಿಗೆ ಗಾಯವಾಗಿದ್ದು, ಉಳಿದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಮಂಗಳೂರು:ಕೆಎಸ್‌ಆರ್‌ಟಿಸಿ – | ಮಂಗಳೂರು ವಿಭಾಗ ಮಂಗಳೂರು ಮತ್ತು ಧರ್ಮಸ್ಥಳ ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸುಗಳನ್ನು ಪ್ರಾರಂಭಿಸಿದೆ. ಬಿಜೈಯಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಿಂದ ಕಾರ್ಯನಿರ್ವಹಿಸಲಿರುವ ಬಸ್ಸುಗಳು ಬಂಟ್ವಾಳ, ಕಾರಿಂಜ ಕ್ರಾಸ್, ಪುಂಜಾಲಕಟ್ಟೆ ಮಡಂತ್ಯಾರು, ಗುರುವಾಯನಕೆರೆ, ಬೆಳ್ತಂಗಡಿ ಮತ್ತು ಉಜಿರೆಯಲ್ಲಿ ನಿಲ್ಲಲಿದೆ. ಕೆಎಸ್‌ಆರ್‌ಟಿಸಿ ಬಸ್ಸುಗಳು ಬಿಜೈ ನಿಲ್ದಾಣದಿಂದ ಬೆಳಗ್ಗೆ 6.15, 6.40,7.15, 10, 10.45, 11.35, ಮಧ್ಯಾಹ್ನ12.15, 4.30,ಸಂಜೆ 5.15 ಮತ್ತು ಸಂಜೆ 6 ಗಂಟೆಗೆ ಹೊರಡಲಿದೆ. ಧರ್ಮಸ್ಥಳದಿಂದ ಬೆಳಗ್ಗೆ 7.45, 8.15, 8.45, 9.10ಕ್ಕೆ ಮಧ್ಯಾಹ್ನ1,2 2 1, 2.15, 3 ಹಾಗೂ ಸಂಜೆ 4, 6, 6.30ಕ್ಕೆ ಹೊರಡಲಿವೆ. ಮಂಗಳೂರಿನಿಂದ ಕಾರಿಂಜ ಕ್ರಾಸ್‌ಗೆ 51ರೂ, ಪುಂಜಾಲಕಟ್ಟೆಗೆ – 56ರೂ, ಗುರುವಾಯನಕೆರೆಗೆ 62ರೂ, ಬೆಳ್ತಂಗಡಿಗೆ 66ರೂ, ಉಜಿರೆಗೆ 71ರೂ, ಮತ್ತು ಧರ್ಮಸ್ಥಳಕ್ಕೆ 86 ರೂಗಳ ದರ ನಿಗದಿಪಡಿಸಲಾಗಿದೆ.
ಮಂಗಳೂರು : ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಜೂನ್ 3 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಜೂನ್ 01 ರಂದು ಸಂಜೆ 4 ಗಂಟೆಯಿಂದ ಜೂನ್ 3 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶಿಸಿದ್ದಾರೆ. ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತ, ನಿಷ್ಪಕ್ಷಪಾತ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮ್ಯದದಂಗಡಿಗಳನ್ನು, ಮದ್ಯಮಾರಾಟ ಡಿಪೋಗಳು, ಮದ್ಯ ತಯಾರಿಕಾ ಡಿಸ್ಪಿಲರಿಗಳು, ಸ್ಟಾರ್ ಹೊಟೇಲ್‍ಗಳು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶ ಹೊರಡಿಸಿದ್ದಾರೆ.
ಬೆಳ್ತಂಗಡಿ ಸಮೀಪ ನಾಲ್ಕು ವರ್ಷದ ಹಿಂದೆ ಕಲ್ಮಂಜ ಗ್ರಾಮದ ನಿವಾಸಿ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಅವರ ಮನೆಗೆ ನುಗ್ಗಿ ಮನೆಯವರನ್ನು ಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣದ ಆರೋಪಿಗಳನ್ನು ಜಿಲ್ಲಾ ಪೊಲೀಸರು ಬಂಧಿಸಿ ಅವರಿಂದ ದರೋಡೆ ಮಾಡಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಯಲಾಗಿದೆ ಬಂಧಿತ ಆರೋಪಿಗಳು ಮುಂಡಾಜೆ ಗ್ರಾಮ ನಿವಾಸಿಗಳಾದ ನವಾಝ್ (38) ರಿಯಾಝ್ ಹಾಗೂ ಬೆಂಗಳೂರಿನ ಕೃಷ್ಣ ಎಂದು ಗುರುತಿಸಲಾಗಿದೆ. ಧರ್ಮಸ್ಥಳದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಈ ಮಾಹಿತಿ ನೀಡಿದರು. ಬಂಧಿತ ಆರೋಪಿಗಳಿಂದ ಕಳ್ಳತನ ಮಾಡಲಾಗಿದ್ದ 104 ಗ್ರಾಂ ಚಿನ್ನಾಭರಣಗಳನ್ನು, 288 ಗ್ರಾಂ ಬೆಳ್ಳಿಯ ವಸ್ತುಗಳನ್ನು ಹಾಗೂ 25,000 ರೂ. ನಗದು ಹಾಗು ಒಂದು ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. 2020 ಜೂನ್ 6ರಂದು ಕಲ್ಮಂಜ ಗ್ರಾಮದ ನಿವಾಸಿಯಾಗಿರುವ ಅಚ್ಯುತ ಭಟ್ ಎಂಬವರ ಮನೆಗೆ ನುಗ್ಗಿದ ದರೋಡೆ ಕೋರರು ಮನೆಯಲ್ಲಿದ್ದ ಅಚ್ಯುತ ಭಟ್ ಅವರನ್ನು ಹಾಗು ಅವರ ತಾಯಿ, ತಮ್ಮನ ಪತ್ನಿಯನ್ನು ಕಟ್ಟಿ ಹಾಕಿ ಮನೆಯಲ್ಲಿದ್ದ…
ಮಂಗಳೂರು ಹಾಗೂ ಮುಲ್ಕಿಯಲ್ಲಿ ದುಬಾರಿ ಬೆಲೆ ಬಾಳುವ ಬೈಕ್ ಗಳನ್ನು ಕಳ್ಳತನ ಮಾಡಿದ ಗ್ಯಾಂಗ್ ಉಡುಪಿಯತ್ತ ಪರಾರಿಯಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೂಲ್ಕಿ ಬಪ್ಪನಾಡು ಪರಿಸರದ ನಿವಾಸಿ ನಿತೀಶ್ ಭಂಡಾರಿ ಅವರು ಬಪ್ಪನಾಡು ದೇವಸ್ಥಾನದ ಹತ್ತಿರ ನಿಲ್ಲಿಸಿದ್ದ ಬೈಕ್ ಕದ್ದಿರುವುದರ ತನಿಖೆ ನಡೆಸಿದ ಪೊಲೀಸರು ಹೆಜಮಾಡಿ ಟೋಲ್ ಗೇಟ್‌ನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಆ ಮೂಲಕ ಕಳ್ಳರು ಸಾಗಿದ್ದು ಗೊತ್ತಾಗಿದೆ. ಪಡುಬಿದ್ರಿ, ಎರ್ಮಾಳ್ ಮೂಲಕ ಕಳ್ಳರು ಸಾಗಿದ್ದಾರೆ. ಮಂಗಳೂರಿನಿಂದ ಬೈಕ್ ಕದ್ದವರು ಕೂಡ ಮೂಲ್ಕಿಯಲ್ಲಿ ಕದ್ದ ತಂಡದ ಜೊತೆಯಲ್ಲೇ ಸಾಗುತ್ತಿರುವುದು ಕಂಡು ಬಂದಿರುವುದರಿಂದ ಪ್ರಕರಣದಲ್ಲಿ ಭಾರಿ ಅನುಮಾನ ಉಂಟಾಗಿದೆ. ಕಳ್ಳರ ಕಾಪು ಮಜೂರು ಮತ್ತು ಉದ್ಯಾವರ ಕಡೆಗೆ ತೆರಳಿರುವುದರ ಮಾಹಿತಿ ಆಧರಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಮೂಲ್ಕಿಯಿಂದ ಕಳವಾದ ಬೈಕ್‌ನಲ್ಲಿ ಇಬ್ಬರು ಮತ್ತು ಮಂಗಳೂರಿನಿಂದ ಕದ್ದ ಬೈಕ್‌ನಲ್ಲಿ ಒಬ್ಬನೇ ಇದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಒಂದೇ ತಂಡ ಸರಣಿ ಕಳ್ಳತನ ನಡೆಸಿದ್ದು ರಾಷ್ಟ್ರೀಯ ಹೆದ್ದಾರಿ 66ರ ಮೂಲಕ ಉಡುಪಿ ಜಿಲ್ಲೆಯತ್ತ ಸಾಗಿದ್ದು…
ಮಂಗಳೂರು: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪಿಯಲ್ಲಿ 9 ವರ್ಷಗಳ ಹಿಂದೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿ ಮುಹಮ್ಮದ್ ಅರ್ಫಾಝ್(31) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಅರ್ಫಾಝ್ ವಿರುದ್ಧ ದಸ್ತಗಿರಿ ಬಗ್ಗೆ ಲುಕ್ ಔಟ್ ನೋಟಿಸ್ ಹೊರಡಿಸಿದ್ದು, ಬೆಳಗ್ಗೆ ದುಬೈನಿಂದ ಮಂಗಳೂರು ಏರ್‌ಪೋರ್ಟ್‌ಗೆ ಬಂದವನನ್ನು ವಾರೆಂಟ್ ಆಧಾರದಲ್ಲಿ ದಸ್ತಗಿರಿ ಮಾಡಿ, ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.