ಉಡುಪಿ : ಸಿಮೆಂಟ್ ಚೀಲಗಳು ಹೇರಿಕೊಂಡು ಹೋಗುತ್ತಿದ್ದ ಟ್ರಕ್ಕೊಂದು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರು ಒತ್ತಿನೆಣೆ ತಿರುವಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಝಾರ್ಖಂಡ್ ಮೂಲದ ದಾಮೋದರ ಯಾದವ್ (55) ಮೃತ ಪಟ್ಟ ಟ್ರಕ್ ಚಾಲಕನಾಗಿದ್ದಾನೆ . ಲೋಕಾಪುರದಿಂದ ಮಂಗಳೂರಿಗೆ ಈ ಟ್ರಕ್ ಸಿಮೆಂಟ್ ಚೀಲಗಳನ್ನು ಸಾಗುತ್ತಿತ್ತು ಎನ್ನಲಾಗಿದೆ. ಒತ್ತಿನೆಣೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿಯಾಗಿದ್ದು ಈ ಸಂದರ್ಭ ಚಾಲಕ ದಾಮೋದರ ಯಾದವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ . ಬೈಂದೂರು ಪೊಲೀಸರು, ಅಗ್ನಿಶಾಮಕ ದಳ ಘಟನಾ ಸ್ಥಳಕ್ಕೆ ತೆರಳಿ ಪರಿಹಾರ ಕಾರ್ಯ ಕೈಗೆತ್ತಿಕೊಂಡಿದ್ದು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: main-admin
ಕಟೀಲು : ಕಳೆದ ದಿನದ ಕಟೀಲು ಸಮೀಪದ ಕೊಂಡೆ ಮೂಲ ನೀರಿನ ಟ್ಯಾಂಕ್ ಬಳಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ತಾರಾನಾಥ (40) ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ವಿವಿಧ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದು ಮೃತನ ಸಹೋದರನನ್ನು ವಶಕ್ಕೆ ಪಡೆದು ತೀವ್ರ ತನಿಖೆ ನಡೆಸಿದ್ದಾರೆ. ಕೊಂಡೆಮೂಲ ನಿವಾಸಿ ತಾರನಾಥ (40) ಎಂಬಾತ ಕೇಬಲ್ ವಯರ್ ಕುತ್ತಿಗೆಗೆ ಬಿಗಿದು ಮೃತಪಟ್ಟು ಅಂಗಾತ ಮಲಗಿದ ಸ್ಥಿತಿಯಲ್ಲಿ ಮನೆಯಿಂದ 100ಮೀ. ದೂರದಲ್ಲಿ ಭಾನುವಾರ ಶವ ಪತ್ತೆಯಾಗಿದ್ದು ಶನಿವಾರ ಸಂಜೆ ಮನೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದ್ದು ಪೊಲೀಸರು. ಪರಿಸರದ ಸಿಸಿ ಕ್ಯಾಮೆರಾ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಪೋಸ್ಟ್ ಮಾಟಂ ಪ್ರಕ್ರಿಯೆ ಅಂತಿಮಗೊಂಡಿಲ್ಲವಾದ ಕಾರಣ ವರದಿ ಪಡೆದ ಬಳಿಕವಷ್ಟೇ ಈ ಅನುಮಾನಾಸ್ಪದ ಸಾವು ಆತ್ಮಹತ್ಯೆಯೋ ? ಕೊಲೆಯೋ ? ಎಂಬುದರ ಬಗ್ಗೆ ಸ್ಪಷ್ಟತೆ ಸಿಗಲಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಪುತ್ತೂರು : ಹಿಂದೂತ್ವದ ಭದ್ರಕೋಟೆ ದಕ್ಷಿಣ ಕನ್ನಡದಲ್ಲಿ ಲವ್ ಜಿಹಾದ್ ಇನ್ನೂ ಜೀವಂತವಿದೆ ಎನ್ನಲಾಗಿದೆ. ಇಂತಹುದೇ ಪ್ರಕರಣ ಪುತ್ತೂರಿನಲ್ಲಿ ಬೆಳಕಿಗೆ ಬಂದಿದ್ದು ಹಿಂದೂ ಹುಡುಗಿಯ ಪೋಷಕರು ಈಗ ನ್ಯಾಯಕ್ಕಾಗಿ ದೇವರ ಮೊರೆ ಹೋಗಿದ್ದಾರೆ. ಹತ್ತೂರ ಓಡೆಯ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವರ ಹುಂಡಿಗೆ ದೂರಿನ ಚೀಟಿ ಬರೆದು ಹಾಕಿರುವ ಯುವತಿಯ ಪೋಷಕರು ನ್ಯಾಯಕ್ಕಾಗಿ ಪ್ರಾರ್ಥನೆ ಮಾಡಿದ್ದಾರೆ. ‘ಸಮೀರ್ ನಿಂದಾಗಿ ನನ್ನ ಮಗಳ ಜೀವನ ಹಾಳಾಗಿದೆ’ ‘ಇವತ್ತು ನಾನು ನನ್ನ ಮಗಳು ಬೀದಿಯಲ್ಲಿ ಇದ್ದೇವೆ’ ‘ನಮ್ಮ ಜೀವನ ಹಾಳು ಮಾಡಿದ ಸಮೀರ್ ನ ಜೀವನ ಕೂಡ ಹಾಳಾಗಬೇಕು. ‘ಸಮೀರ್ ನಿಗೆ ಮದುವೆ ಆಗಲು ಹುಡುಗಿ ಸಿಗಬಾರದು’ ‘ಓ ದೇವರೇ ಇದು ನನ್ನ ಪ್ರಾರ್ಥನೆ’ ಎಂದು ಯುವತಿಯ ಅಸಹಾಯಕ ಪೋಷಕರು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವರ ಹುಂಡಿಗೆ ಚೀಟಿ ಬರೆದು ಹಾಕಿ ಪ್ರಾರ್ಥನೆ ಮಾಡಿದ್ದಾರೆ. ದೇವಳದ ಕಾಣಿಕೆ ಹುಂಡಿಯ ಲೆಕ್ಕ ನಡೆಯುತ್ತಿದ್ದ ಸಂದರ್ಭ ಈ ದೂರಿನ ಚೀಟಿ ಪತ್ತೆಯಾಗಿದೆ.
ಮಂಗಳೂರು: ಮೊಬೈಲ್ ಟವರ್ ಕಳ್ಳತನವಾದ ಘಟನೆ ಮಂಗಳೂರಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಳೂರಿನ ತಿರುವೈಲ್‌ನ ಮೂಡುಬಿದಿರೆ ರಸ್ತೆ ಬದಿಯಲ್ಲಿ ನಿರ್ಮಾಣ ಮಾಡಲಾಗಿದ್ದ ಮುಂಬೈಯ ಜಿ.ಟಿ.ಎಲ್ ಇನ್ಪ್ರಾಸ್ಟ್ರಕ್ಚರ್ ಕಂಪನಿ ಲಿಮಿಟೆಡ್ ಬೆಂಗಳೂರು ಶಾಖೆಯ ಮೊಬೈಲ್ ಟವರನ್ನು ಕಳ್ಳರು ಕದ್ದೊಯ್ದಿದ್ದಾರೆ. ಮೊಬೈಲ್ ಟವರ್ ನಿರ್ವಹಣೆಯ ಉಸ್ತುವಾರಿ ವಹಿಸಿದ್ದ ಟೆಕ್ನಿಷಿಯನ್ ರವರು ಪರಿಶೀಲನೆಗಾಗಿ ಸ್ಥಳಕ್ಕೆ ಭೇಟಿ ನೀಡಿದಾಗ ಮೊಬೈಲ್ ಟವರ್ ಮತ್ತು ಮೊಬೈಲ್ ಟವರ್ ನ ಇತರ ಉಪಕರಣಗಳನ್ನು ಯಾರೋ ಕಳ್ಳತನ ಮಾಡಿರುವುದು ಗಮನಕ್ಕೆ ಬಂದಿದೆ. ಕಳವಾಗಿರುವ ಸೊತ್ತುಗಳ ಒಟ್ಟು ಮೌಲ್ಯ ಸುಮಾರು ರೂ: 19,823,71-00 ಆಗಿದೆ ಎಂದು ಅಂದಾಜಿಸಲಾಗಿದೆ. ಇದೀಗ ಮೊಬೈಲ್ ಟವರ್ ಕಳವಾದ ಬಗ್ಗೆ GTL ಇನ್ಪ್ರಾಸ್ಟ್ರಕ್ಚರ್ ಕಂಪನಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು ಪೊಲೀಸರು ದೂರು ದಾಖಲು ಮಾಡಿ ತನಿಖೆ ಆರಂಭಿಸಿದ್ದಾರೆ.
ಮಂಗಳೂರು: ಕಾರು ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಬಳಿಕ ಬೈಕ್ ಸವಾರ ಕಾರು ಚಾಲಕನಿಗೆ ಲೋಹದ ಪಂಚ್‌ನಿಂದ ಹಲ್ಲೆಗೈದು ಮೆಣಸಿನ ಪುಡಿ ಎರಚಿದ ಘಟನೆ ನಗರದ ಕದ್ರಿ ಶಿವಬಾಗ್‌ನಲ್ಲಿ ನಡೆದಿದೆ. ಬೆಳಗ್ಗೆ ಸುಮಾರು 10.30ರಿಂದ 10.45ರ ಅವಧಿಯಲ್ಲಿ ಕದ್ರಿ ಶಿವಬಾಗ್‌ನ ಪೆಟ್ರೋಲ್ ಬಂಕ್ ಬಳಿ ಆಮ್ನಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಆಗ ರೊಚ್ಚಿಗೆದ್ದ ಬೈಕ್ ಸವಾರ ತನ್ನ ಬಳಿ ಇದ್ದ ಲೋಹದ ಪಂಚ್‌ನಿಂದ ಕಾರು ಚಾಲಕನ ಮುಖಕ್ಕೆ ಗುದ್ದಿ ಕಣ್ಣಿಗೆ ಪೆಪ್ಪರ್ ಸ್ಪ್ರೇ ಮಾಡಿ ಕ್ರೌರ್ಯ ಮೆರೆದಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ತತ್‌ಕ್ಷಣ ಸ್ಥಳೀಯರು ಆತನನ್ನು ಹಿಡಿದು 112 ಪೊಲೀಸ್ ವಾಹನಕ್ಕೆ ಕರೆ ಮಾಡಿದ್ದರು. ಪೊಲೀಸರು ಯುವಕನನ್ನು ವಶಕ್ಕೆ ಪಡೆದರು. ಆತನ ಬಳಿ ಆಯುಧವೂ ಇತ್ತು. ಬೇರೆ ಕೃತ್ಯ ಮಾಡಲು ಸಂಚು ನಡೆಸಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ದೂರು ದಾಖಲಾದ ಬಳಿಕ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕಾಸರಗೋಡು: ಕಳಿಯಾಟ ಮಹೋತ್ಸವ ಸಂದರ್ಭದಲ್ಲಿ ಪಟಾಕಿ ದುರಂತ ಸಂಭವಿಸಿ 154 ಮಂದಿ ಗಾಯಗೊಂಡಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ನೀಲೇಶ್ವರಂನ ವೀರರ್ಕಾವು ದೇವಸ್ಥಾನದ ಉತ್ಸವದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಾಂಪ್ರದಾಯಿಕ ತೆಯ್ಯಂ ಉತ್ಸವಕ್ಕಾಗಿ ಮಧ್ಯರಾತ್ರಿಯ ನಂತರ ಸುಮಾರು 1,500 ಮಂದಿ ದೇವಸ್ಥಾನದಲ್ಲಿ ಜಮಾಯಿಸಿದ್ದರು. ತೆಯ್ಯಂ ಪ್ರದರ್ಶನವನ್ನು ವೀಕ್ಷಿಸಲು ಬಂದಿದ್ದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವಾರು ಮಂದಿ ಗಾಯಗೊಂಡಿದ್ದಾರೆ. ವೀರರ್ಕಾವು ದೇವಸ್ಥಾನದ ಬಳಿಯ ತಾತ್ಕಾಲಿಕ ಶೆಡ್‌ನಲ್ಲಿ ಪಟಾಕಿ ಸಂಗ್ರಹಿಸಿಡಲಾಗಿತ್ತು. ಈ ಶೆಡ್‌ಗೆ ಮೂವಳಂಕುಜಿ ಚಾಮುಂಡಿ ತೆಯ್ಯಂನ ‘ವೆಳ್ಳಟ್ಟಂ ಪುರಪ್ಪಡು’ಗೆ ಸಂಬಂಧಿಸಿದಂತೆ ಪಟಾಕಿ ಸಿಡಿಸುವ ವೇಳೆ ಈ ದುರಂತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ 154 ಮಂದಿ ಪೈಕಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, 8 ಮಂದಿ ಗಂಭೀರವಾಗಿದ್ದಾರೆ. ಹಾಗೂ 97 ಮಂದಿಯನ್ನು ಕಾಸರಗೋಡು, ಕಣ್ಣೂರು ಮತ್ತು ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಂಗಳೂರು: ಮಾದಕ ವಸ್ತು ಸಾಗಾಟ, ಮಾರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿದೇಶಿ ಪ್ರಜೆ ಸಹಿತ 6 ಆರೋಪಿಗಳನ್ನು ಪೊಲೀಸರು ಬಂಧಿದ್ದಾರೆ. ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಣಿಜ್ಯ ಪ್ರಮಾಣದ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಬಂಧಿತರಿಂದ ಮಾದಕ ವಸ್ತುಗಳನ್ನು ಮತ್ತು ಸ್ಕೂಟರ್‌ನ್ನು ವಶಕ್ಕೆ ಪಡೆದಿದ್ದಾರೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೆಐಓಸಿಎಲ್ ಹಿಂಬಾಗದ ಸಮುದ್ರ ಕಡೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ಸ್ಕೂಟರ್ ನಿಲ್ಲಿಸಿಕೊಂಡು ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಪಣಂಬೂರು ಠಾಣಾ ಪಿಎಸ್ಐ ಶ್ರೀಕಲಾ ಕೆ.ಟಿ ರವರಿಗೆ ದೊರೆತ ಖಚಿತ ಮಾಹಿತಿಯಂತೆ ಮೇರೆಗೆ ದಾಳಿ ನಡೆಸಿ, ಆರೋಪಿಗಳಾದ ಚಂದನ್, ಶರತ್ ಮಧುಸೂಧನ ಕೊಂಚಾಡಿ , ಧನುಷ್ ಆಕಾಶ್ ಭವನ, ಮುಖೇಶ್ ದೇರೆಬೈಲ್ ನೈಜಿರಿಯಾ ದೇಶದ ಪ್ರಜೆ, ಮೈಕಲ್ ಬಾಲಾಜಿ@ ಅಝಬೈಕ್ ಜಾನಿ ಯನ್ನು ಬಂಧಿಸಿದ್ದಾರೆ. ಆರೋಪಿಗಳ ದಸ್ತಗಿರಿ ಮಾಡಿ ವಶದಲ್ಲಿದ್ದ 11 ಗ್ರಾಮ್ ಕೋಕೇನ್ ಮತ್ತು ಪ್ಯಾಕೇಟ್ ಸಮೇತ…
ಪುತ್ತೂರು: ಲಾರಿ ಹಾಗೂ ಮಿನಿ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿ ಮಿನಿ ಟಿಪ್ಪರ್ ಚಾಲಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಹೆಚ್ಚುವರಿ ಸಿವಿಲ್ ನ್ಯಾಯಾಲಯ ಲಾರಿ ಚಾಲಕನಿಗೆ 6 ತಿಂಗಳ ಜೈಲು ಶಿಕ್ಷೆ ಮತ್ತು 1ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. 2021ರ ಫೆ.25ರಂದು ಕಡಬ ತಾಲೂಕು ಕೊಣಾಲು ಗ್ರಾಮದ ಕೋಲ್ಪೆ ಮಸೀದಿ ಬಳಿ ಲಾರಿ ಹಾಗೂ ಮಿನಿ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿ, ಟಿಪ್ಪರ್ ಚಾಲಕ ಚೇತನ್ ಗಂಭೀರ ಗಾಯಗೊಂಡು ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎಚ್. ಆರ್. ಶಿವಣ್ಣ ಅವರ ಪೀಠ ಲಾರಿ ಚಾಲಕನಿಗೆ 6 ತಿಂಗಳ ಜೈಲು ಶಿಕ್ಷೆ ಮತ್ತು ಒಂದು ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಸರಕಾರದ ಪರವಾಗಿ ಅಭಿಯೋಜಕ ಕವಿತಾ ವಾದ ಮಂಡಿಸಿದರು.
ಗೋಲ್ ಗಪ್ಪಾ ಪ್ರಿಯರಿಗೆ ಕಾದಿದೆ ಶಾಕ್. ಗೋಲ್ ಗಪ್ಪಾ ಮೇಲೂ ನಿರ್ಬಂಧ ಬರಲಿದೆಯಾ ಅನ್ನೋ ಶಂಕೆ ಶುರುವಾಗಿದೆ. ಆಹಾರ ಇಲಾಖೆಯಿಂದ ಫುಡ್ ಟೆಸ್ಟಿಂಗ್ ಡ್ರೈವ್ ಮುಂದುವರೆದಿದೆ. ಗೋಬಿ ಮಂಚೂರಿ, ರೆಡ್ ವೆಲ್ವೆಟ್ ಕೇಕ್ ಆಯ್ತು ಇದೀಗ ಗೋಲ್ ಗಪ್ಪಾದ ಮೇಲೆ ಆಹಾರ ಇಲಾಖೆ ಹದ್ದಿನ ಕಣ್ಣು ಬಿದ್ದಿದೆ. ಬೀದಿ ಬದಿ ಗೋಲ್ ಗಪ್ಪಾ ತಿನ್ನೋರಿಗೆ ಹುಷಾರ್, ಗೋಲ್ ಗಪ್ಪಾದ ಕ್ವಾಲಿಟಿ ಮೇಲೆ ಆರೋಗ್ಯ ಇಲಾಖೆಗೆ ಸಾಕಷ್ಟು ದೂರು ಬಂದಿದೆಯಂತೆ. ಈ ಹಿನ್ನೆಲೆ ಗೋಲ್ ಗಪ್ಪಾವನ್ನ ಪರೀಕ್ಷೆಗೆ ಒಳಪಡಿಸಲು ಆರೋಗ್ಯ ಇಲಾಖೆ ಮುಂದಾಗಿದ್ದು, ಬೆಂಗಳೂರಿನಲ್ಲಿ ರ್‍ಯಾಂಡಮ್ ಸ್ಯಾಂಪಲ್‌ಗಳನ್ನು ಅಧಿಕಾರಿಗಳು ಸಂಗ್ರಹ ಮಾಡುತ್ತಿದ್ದಾರೆ. ಗೋಲ್ ಗಪ್ಪಾಗೆ ಬಳಸುವ ಪುರಿ ಹೇಗೆ ತಯಾರಿ ಮಾಡ್ತಾರೆ. ಅದಕ್ಕೆ ಏನೆಲ್ಲಾ ಪದಾರ್ಥ ಹಾಕಲಾಗುತ್ತದೆ. ಇದ್ರಿಂದ ಏನೆಲ್ಲಾ ಪರಿಣಾಮ ಬೀರಲಿದೆ ಎಂಬುದನ್ನ ತಿಳಿಯಲು ಇಲಾಖೆ ಮುಂದಾಗಿದೆ. ಈ ಹಿನ್ನೆಲೆ ಕಳೆದ ಎರಡು ದಿನದಿಂದ ತಯಾರಿಕಾ ಘಟಕದ ಮೇಲೆ ಆಹಾರ ಇಲಾಖೆ ದಾಳಿ ನಡೆಸಿ, 200ಕ್ಕೂ ಸ್ಯಾಂಪಲ್ ಗಳನ್ನು ಸಂಗ್ರಹಿಸಿದರೆ. ಇನ್ನು…
ಉಡುಪಿ: ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ ಘಟನೆ ಮಣಿಪಾಲ ಪೆರಂಪಳ್ಳಿಯ ಸಾಯಿರಾಧಾ ಟೌನ್‌ಶಿಪ್ ಬಳಿ ನಡೆದಿದೆ. ಬಂಧಿತ ಆರೋಪಿಯನ್ನು ಉಡುಪಿ ಕೇಳಾರ್ಕಳಬೆಟ್ಟು ನಿವಾಸಿ ಅಬ್ದುಲ್ ಜಬ್ಬಾರ್ (27) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಸುಮಾರು 1,87,500 ಮೌಲ್ಯದ 2 ಕೆಜಿ 344 ಗ್ರಾಂ ತೂಕದ ಗಾಂಜಾ, ಒಂದು ಲಕ್ಷ ಮೌಲ್ಯದ APRILIA ಕಂಪೆನಿಯ ಸ್ಕೂಟರ್, 5.810 ನಗದು, 10 ಸಾವಿರ ಮೌಲ್ಯದ ಮೊಬೈಲ್, ಒಂದು ಚೂರಿ ಸಹಿತ ಒಟ್ಟು 3,04,610 ಲಕ್ಷ ಮೌಲ್ಯದ ಸೊತ್ತುಗಳನ್ನು ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್‌ರವರ ನೇತೃತ್ವದಲ್ಲಿ ಉಪ ನಿರೀಕ್ಷಕರಾದ ಪವನ್ ನಾಯಕ್, ಸಿಬ್ಬಂದಿಯವರಾದ ಪ್ರವೀಣ್ ಕುಮಾರ್, ಪ್ರವೀಣ್, ವೆಂಕಟೇಶ್, ರಾಜೇಶ್, ಯತೀನ್ ಕುಮಾರ್, ಪ್ರಶಾಂತ್ ಮತ್ತು ಚರಣ್‌ರಾಜ್ ರವರನ್ನೊಳಗೊಂಡ ತಂಡ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.