ಉಜಿರೆ : ಬಂಟರ ಸಂಘ, ಗ್ರಾಮ ಸಮಿತಿ ಉಜಿರೆ ಇವರ ನೇತೃತ್ವದಲ್ಲಿ ತುಳುನಾಡಿನ ಸಂಸ್ಕೃತಿ ಆಹಾರ ಕ್ರಮ ಆಚಾರ ವಿಚಾರಗಳನ್ನು ಬಿಂಬಿಸುವ ಮತ್ತು ಮುಂದಿನ ಪೀಳಿಗೆಗೆ ಅದನ್ನು ತಿಳಿಯಪಡಿಸುವ ಸಲುವಾಗಿ “ಆಟಿಡೊಂಜಿ ದಿನ” ಎಂಬ ವಿಶೇಷ ಕಾರ್ಯಕ್ರಮ ಉಜಿರೆಯ ಶಾರದಾ ಮಂಟಪದಲ್ಲಿ ಸಮಸ್ತ ಬಂಟ ಸಮಾಜದ ಬಾಂಧವರ ಕೂಡುವಿಕೆಯಿಂದ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀಯುತ ಚಿತ್ರೇಶ್ ಶೆಟ್ಟಿ ಉಜಿರೆ ಅಧ್ಯಕ್ಷರು, ಗ್ರಾಮ ಸಮಿತಿ, ಬಂಟರ ಸಂಘ ಉಜಿರೆ ಇವರು ಕಾರ್ಯಕ್ರಮದ ಉದ್ದೇಶದ ಬಗ್ಗೆ ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು ಹಾಗೂ ಅತಿಥಿ ಅಭ್ಯಾಗತರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಶ್ರೀಯುತ ಪ್ರಕಾಶ್ ಶೆಟ್ಟಿ ನೊಚ್ಚ, ಅಧ್ಯಕ್ಷರು, ಬಂಟರ ಸಂಘ (ರಿ)ಬೆಳ್ತಂಗಡಿ ತಾಲೂಕು ಇವರು ಮಾತನಾಡಿ, ಇಂದಿನ ಮಕ್ಕಳಿಗೆ ನಮ್ಮ ಸಂಸ್ಕೃತಿ, ಸಂಸ್ಕಾರ, ಪರಂಪರೆಯ ಬಗ್ಗೆ ತಿಳುವಳಿಕೆಯ ಅಗತ್ಯತೆ ತುಂಬಾ ಇದೆ. ಅದನ್ನು ನಮ್ಮ ಮಕ್ಕಳಲ್ಲಿ ಜಾಗೃತಗೊಳಿಸುವ ವಿಶೇಷ ಪ್ರಯತ್ನ ನಾವು ನೀವೆಲ್ಲರೂ ಸೇರಿ…
Author: main-admin
ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮತ್ತೊಮ್ಮೆ ಸುದ್ದಿಯಲ್ಲಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಫೋನ್ ಪತ್ತೆಯಾದ ಬೆನ್ನಲ್ಲೇ ಇದೀಗ ಮತ್ತೊಂದು ಮೊಬೈಲ್ ಪತ್ತೆಯಾಗಿರುವುದು ಕಾರಾಗೃಹ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ. ಇತ್ತೀಚೆಗೆ ಸಿಸಿಬಿ ಅಧಿಕಾರಿಗಳು ನಡೆಸಿದ ದಾಳಿ ವೇಳೆ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಹಾಗೂ ಪೆನ್‌ಡ್ರೈವ್ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಅದೇ ದಿನ ಜೈಲು ಅಧಿಕಾರಿಗಳು ನಡೆಸಿದ ತಪಾಸಣೆ ವೇಳೆ ಮತ್ತೊಂದು ಮೊಬೈಲ್ ಪತ್ತೆಯಾಗಿದೆ.ದೇವರ ಫೋಟೊದ ಹಿಂದೆ ಇರಿಸಲಾಗಿದ್ದ ವಿವೋ ಕಂಪನಿಯ ಮೊಬೈಲ್ ಅಧಿಕಾರಿಗಳ ಕೈಗೆ ಸಿಕ್ಕಿದೆ. ಸಿಮ್ ಕಾರ್ಡ್ ಇಲ್ಲದೆ, ಸ್ವಿಚ್‌ಆಫ್ ಸ್ಥಿತಿಯಲ್ಲಿದ್ದ ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಮೊಬೈಲ್‌ನ್ನು ಯಾರು ಬಳಸುತ್ತಿದ್ದರು? ಜೈಲಿನೊಳಗೆ ಮೊಬೈಲ್ ಹೇಗೆ ಪ್ರವೇಶಿಸಿತು? ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬೆಳ್ತಂಗಡಿ: ಕೇರೆ ಹಾವನ್ನು ತಿನ್ನಲು ಅಟ್ಟಾಡಿಸಿಕೊಂಡು ಬಂದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಏಕಾಏಕಿ ಮನೆಯೊಳಗೆ ನುಗ್ಗಿದ ಘಟನೆ ತಾಲೂಕಿನ ಕಿಲ್ಲೂರು ಎಂಬಲ್ಲಿ ನಡೆದಿದೆ. ಕಿಲ್ಲೂರಿನ ಖಾಸಗಿ ಮನೆಯೊಂದರ ಬಳಿ ಕೇರೆ ಹಾವನ್ನು ಕಬಳಿಸಲು ಕಾಳಿಂಗ ಸರ್ಪ ಬೆನ್ನಟ್ಟಿಕೊಂಡು ಬಂದಿದೆ. ಪ್ರಾಣಭಯದಿಂದ ಕೇರೆ ಹಾವು ಮನೆಯೊಳಗೆ ನುಗ್ಗಿದ್ದು, ಅದರ ಬೆನ್ನಲ್ಲೇ ಬೃಹತ್ ಕಾಳಿಂಗ ಸರ್ಪವೂ ಮನೆ ಪ್ರವೇಶಿಸಿದೆ. ಇದನ್ನು ಕಂಡು ಆತಂಕಗೊಂಡ ಮನೆ ಮಂದಿ ತಕ್ಷಣವೇ ಸ್ಥಳೀಯ ಉರಗ ತಜ್ಞ ಬೆಳ್ತಂಗಡಿಯ ಅಶೋಕ್ ಲಾಯಿಲಾ ಅವರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಲಭಿಸುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಶೋಕ್ ಲಾಯಿಲಾ ಅವರು ಸುದೀರ್ಘ ಕಾರ್ಯಾಚರಣೆ ನಡೆಸಿ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಕೈಗೆ ಸಿಕ್ಕ ಆಹಾರ (ಕೇರೆ ಹಾವು) ಕೈತಪ್ಪಿದ ಕೋಪದಲ್ಲಿ ಕಾಳಿಂಗ ಸರ್ಪ ಹಲವು ಬಾರಿ ಉರಗ ತಜ್ಞ ಅಶೋಕ್ ಅವರ ಮೇಲೆಯೇ ಬುಸುಗುಟ್ಟಿ ದಾಳಿಗೆ ಯತ್ನಿಸಿದೆ. ಕೊನೆಗೂ ಹರಸಾಹಸ ಪಟ್ಟು ಹಾವನ್ನು ಸೆರೆಹಿಡಿದ ಅಶೋಕ್ ಲಾಯಿಲಾ, ಅದನ್ನು…
ಸುಬ್ರಹ್ಮಣ್ಯ: ನಾಗರ ಪಂಚಮಿ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡು ಪುಣ್ಯ ಪುರಾಣ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ಭಕ್ತರನ್ನು ವಂಚಿಸಲು ಯತ್ನಿಸಿರುವ ಆರೋಪ ಕೇಳಿಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ವಿಡಿಯೋವೊಂದರ ವಿರುದ್ಧ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸ್ ಠಾಣೆಗೆ ದೂರು ನೀಡಿದೆ. ನಾಗರ ಪಂಚಮಿ ಹಿನ್ನೆಲೆಯಲ್ಲಿ ಪ್ರಸಾರವಾಗುತ್ತಿರುವ ವಿಡಿಯೋದಲ್ಲಿ, ₹750 ಮುಂಗಡ ಹಣ ಪಾವತಿಸಿದರೆ ದೇವಸ್ಥಾನದ ಸೇವೆ ನೆರವೇರಿಸಿ ಪ್ರಸಾದವನ್ನು ಭಕ್ತರ ಮನೆಗೆ ಕಳುಹಿಸಿಕೊಡಲಾಗುವುದು ಎಂಬ ಸಂದೇಶ ನೀಡಲಾಗಿದೆ. ಈ ವಿಡಿಯೋವನ್ನು ನಂಬಿ ಭಕ್ತರು ಹಣ ಕಳೆದುಕೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತ ಎಚ್ಚರಿಕೆಯ ಮಾಹಿತಿ ರವಾನಿಸಿದೆ. ನಕಲಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಗಮನಕ್ಕೆ ಬಂದ ತಕ್ಷಣ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಸಂಬಂಧಪಟ್ಟ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ. ದೇವಸ್ಥಾನದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರಿಂದ ಹಣ ಪಡೆಯಲು ಯತ್ನಿಸಿರುವವರ ವಿರುದ್ಧ ತನಿಖೆ ನಡೆಸಿ…
ಕಾಸರಗೋಡು : ತಂದೆ ಹಾಗೂ ಮಗಳು ಕೋಣೆಯಲ್ಲಿ ಒಂದೇ ಕೊಕ್ಕೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಚೆಮ್ನಾಡ್ ಕೋಳಿಯಡ್ಕ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ. ಮೀಪುಗಿರಿ ಮೂಲದ ಗಣೇಶನ್ ಹಾಗೂ ಅವರ ಮಗಳು ವೈಷ್ಣವಿ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು. ಕೌಟುಂಬಿಕ ಸಮಸ್ಯೆಗಳೇ ಈ ಆತ್ಮಹತ್ಯೆಗೆ ಪ್ರಮುಖ ಕಾರಣವೆಂದು ಶಂಕಿಸಲಾಗಿದೆ. ಮೂಲಗಳ ಪ್ರಕಾರ, ನಿನ್ನೆ ರಾತ್ರಿ ಮಗಳು ವೈಷ್ಣವಿ ಮಲಗುವ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ಇದನ್ನು ಗಮನಿಸಿದ ತಂದೆ ಗಣೇಶನ್ ತಕ್ಷಣವೇ ಸ್ಥಳೀಯರಿಗೆ ಮಾಹಿತಿ ನೀಡಿದ್ದರು. ಆದರೆ, ವಿಷಯ ತಿಳಿದು ನೆರೆಹೊರೆಯವರು ಮನೆಗೆ ಧಾವಿಸುವಷ್ಟರಲ್ಲಿ ತಂದೆ ಗಣೇಶನ್ ಕೂಡ ಮಗಳು ನೇಣು ಬಿಗಿದುಕೊಂಡಿದ್ದ ಅದೇ ಕೊಕ್ಕೆಗೆ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮೇಲ್ಪರಂಬ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ವಶಕ್ಕೆ ಪಡೆದು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಘಟನೆಗೆ ನಿಖರ ಕಾರಣವೇನು ಹಾಗೂ ಕೌಟುಂಬಿಕ ಸಮಸ್ಯೆಯ ಹಿನ್ನೆಲೆಯೇನು ಎಂಬುದರ…
ಬಂಟ್ವಾಳ: 1,05,59,450 ರೂ. ಮೌಲ್ಯದ ಎಂಡಿಎಂಎ, ಕೊಕೇನ್ ಸೇರಿದಂತೆ ಇತರ ವಸ್ತುಗಳನ್ನು ಸಾಗಿಸುತ್ತಿದ್ದ ಬೆಂಗಳೂರು ಮೂಲದ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಕೆಂಗೇರಿ ನಿವಾಸಿ ಮಹಮ್ಮದ್ ಅಮೀರ್ ಜರ್ತಾಬ್ (35) ಬಂಧಿತ ಆರೋಪಿ.ಆ.16 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಮಂಜುನಾಥ ಟಿ ಅವರಿಗೆ ಹಾಸನ ಕಡೆಯಿಂದ ಮಂಗಳೂರು ಕಡೆಗೆ ಮಾದಕವಸ್ತು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದಿತ್ತು. ಮಾಹಿತಿ ಮೇರೆಗೆ, ಸಿಬ್ಬಂದಿಗಳೊಂದಿಗೆ ತಡರಾತ್ರಿ ಕಾರೊಂದನ್ನು ತಡೆದು ವಾಹನ ಚಾಲಕನನ್ನು ವಿಚಾರಿಸಿದ್ದಾರೆ.ಈ ವೇಳೆ ಆತನು ಕಾರಿನಲ್ಲಿ ಮಾದಕವಸ್ತು ಸಾಗಿಸುತ್ತಿರುವುದಾಗಿ ಒಪ್ಪಿಕೊಂಡಿರುತ್ತಾನೆ. ಕಾರನ್ನು ತಪಾಸಣೆ ನಡೆಸಿದಾಗ ಒಟ್ಟು 3538.63 ಗ್ರಾಂ ಎಂಡಿಎಂಎ ಮತ್ತು 99.12 ಗ್ರಾಂ ಕೊಕೈನ್ ಹಾಗೂ ಖಾಲಿ ಪ್ಲಾಸ್ಟಿಕ್ ಡಬ್ಬಿಗಳು, ಡಿಜಿಟಲ್ ತೂಕದ ಯಂತ್ರ, ಸೇರಿದಂತೆ ಇತರೆ ಸೊತ್ತುಗಳು ಪತ್ತೆಯಾಗಿರುತ್ತದೆ. ಪೊಲೀಸರು ಅವುಗಳನ್ನು ವಶಕ್ಕೆ ಪಡೆದಿದ್ದಾರೆ.53,86,300 ರೂ. ಮೌಲ್ಯದ ಎಂಡಿಎಂಎ, 49,56,000 ರೂ. ಮೌಲ್ಯದ ಕೊಕೈನ್ ಹಾಗೂ ಇತರೆ ವಶಪಡಿಸಿಕೊಂಡ ಸ್ವತ್ತುಗಳ ಮೌಲ್ಯ ಸೇರಿದಂತೆ ಒಟ್ಟು 1,05,59,450…
ಮಂಗಳೂರು: ಪ್ರಿಸನ್ ಮಿನಿಸ್ಟ್ರಿ ಇಂಡಿಯಾ (ಪಿಎಂಐ), ಮಂಗಳೂರು ಘಟಕದ ವತಿಯಿಂದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು, ಮಂಗಳೂರು ಸಹಯೋಗದಲ್ಲಿ ನಗರದ ಜೈಲ್ ರಸ್ತೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಗುರುವಾರ ಕೈದಿಗಳಿಗಾಗಿ ಸಾಮಾನ್ಯ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು. ಶಿಬಿರ ಉದ್ಘಾಟಿಸಿ ಮಾತನಾಡಿದ ಜೈಲು ಅಧೀಕ್ಷಕ ಶರಣಬಸಪ್ಪ ಅವರು, ಜೈಲನ್ನು ಕೇವಲ ಶಿಕ್ಷೆಯ ಸ್ಥಳವಾಗಿ ನೋಡದೆ ‘ತಿದ್ದುಪಡಿ ಕೇಂದ್ರ’ವಾಗಿ ಪರಿಗಣಿಸಬೇಕು. ತಮ್ಮ ತಪ್ಪುಗಳನ್ನು ಅರಿತುಕೊಂಡು ಜೀವನವನ್ನು ಸುಧಾರಿಸಿಕೊಂಡು ಸಮಾಜಕ್ಕೆ ಜವಾಬ್ದಾರಿಯುತ ವ್ಯಕ್ತಿಗಳಾಗಿ ಮರಳಲು ಇಲ್ಲಿ ಅವಕಾಶ ಕಲ್ಪಿಸಲಾಗುತ್ತದೆ ಎಂದರು. ಕೆಲವೊಮ್ಮೆ ವಿವಿಧ ಸಂದರ್ಭಗಳು ಅಥವಾ ಕಾನೂನಿನ ಅರಿವಿನ ಕೊರತೆಯಿಂದ ಜನರು ತಪ್ಪುಗಳನ್ನು ಮಾಡುತ್ತಾರೆ. ಇಂತಹವರು ತಮ್ಮ ಜೀವನವನ್ನು ಸರಿಪಡಿಸಿಕೊಳ್ಳಲು ಇಲ್ಲಿ ಬರುತ್ತಾರೆ. ದೈಹಿಕ ಹಾಗೂ ಮಾನಸಿಕ ಆರೋಗ್ಯವೂ ತಿದ್ದುಪಡಿ ಪ್ರಕ್ರಿಯೆಯ ಪ್ರಮುಖ ಭಾಗವಾಗಿದೆ. ದೇಹ ಮತ್ತು ಮನಸ್ಸು ಆರೋಗ್ಯವಾಗಿದ್ದಾಗ ವ್ಯಕ್ತಿಯು ಉತ್ತಮವಾಗಿ ಆಲಿಸಲು, ಚಿಂತಿಸಲು ಹಾಗೂ ತನ್ನನ್ನು ತಾನು ಬದಲಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಕೈದಿಗಳ ಪುನರ್ವಸತಿ ಮತ್ತು ಸಬಲೀಕರಣಕ್ಕಾಗಿ ಪ್ರಿಸನ್ ಮಿನಿಸ್ಟ್ರಿ…
ಮಂಗಳೂರ: ಪಿ.ಎ. ಎಜುಕೇಶನ್ ಟ್ರಸ್ಟ್‌ನ ವಿವಿಧ ಶಿಕ್ಷಣ ಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮಂಗಳೂರಿನ ಪೇಸ್ ನಾಲೆಡ್ಜ್ ಸಿಟಿ ಆವರಣದಲ್ಲಿ ಶನಿವಾರ ದೇಶಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಿ.ಎ. ಎಜುಕೇಶನ್ ಟ್ರಸ್ಟ್ ಸಂಸ್ಥೆಗಳ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಇಕ್ಬಾಲ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಡಾ. ಇಕ್ಬಾಲ್, ಸ್ವಾತಂತ್ರ್ಯದ ಮಹತ್ವವನ್ನು ವಿವರಿಸಿ, ದೇಶದ ಸ್ವಾತಂತ್ರ್ಯವನ್ನು ಅರ್ಥಪೂರ್ಣವಾಗಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕತೆ, ನಿಷ್ಠೆ ಹಾಗೂ ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಕರೆ ನೀಡಿದರು. ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯುತ ಕಾರ್ಯನಿರ್ವಹಣೆ ದೇಶದ ಅಭಿವೃದ್ಧಿ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡುತ್ತದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಪಿ.ಎ. ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲ ಡಾ. ಸಲೀಮುಲ್ಲಾ ಖಾನ್, ಪಿ.ಎ. ಫಸ್ಟ್ ಗ್ರೇಡ್ ಕಾಲೇಜಿನ ಪ್ರಾಂಶುಪಾಲ ಡಾ. ಸರ್ಫರಾಜ್ ಜೆ. ಹಾಶಿಂ ಹಾಗೂ ಪಿ.ಎ. ಕಾಲೇಜ್ ಆಫ್ ಎಂಜಿನಿಯರಿಂಗ್‌ನ ಉಪಪ್ರಾಂಶುಪಾಲೆ ಡಾ. ಶರ್ಮಿಳಾ ಕುಮಾರಿ ಅವರು…
ಮಂಗಳೂರು: ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಕೆಎಫ್‌ಸಿ (KFC) ಮಳಿಗೆಯಿಂದ ಆನ್‌ಲೈನ್ ಮೂಲಕ ತರಿಸಿಕೊಂಡ ಚಿಕನ್ ದುರ್ವಾಸನೆ ಬೀರುತ್ತಿದೆ ಎಂಬ ಗ್ರಾಹಕರ ದೂರಿನ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಶನಿವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಂಕಿತಾಧಿಕಾರಿ ಡಾ. ಪ್ರವೀಣ್ ಕುಮಾರ್ ಸಿ.ಎಚ್. ಅವರ ನೇತೃತ್ವದ ಅಧಿಕಾರಿಗಳ ತಂಡವು ಮಳಿಗೆಯ ಅಡುಗೆ ಕೋಣೆ, ಕೋಲ್ಡ್ ಸ್ಟೋರೇಜ್, ಡೀಪ್ ಫ್ರೀಜರ್ ಹಾಗೂ ಚಿಕನ್ ಕರಿಯಲು ಬಳಸುವ ಎಣ್ಣೆಯ ಗುಣಮಟ್ಟವನ್ನು ಕೂಲಂಕಷವಾಗಿ ತಪಾಸಣೆ ನಡೆಸಿತು. ಆಗಸ್ಟ್ 15ರಂದು ಗ್ರಾಹಕರೊಬ್ಬರು ಈ ಮಳಿಗೆಯಿಂದ ಆನ್‌ಲೈನ್ ಮೂಲಕ ‘ಪೆರಿ ಪೆರಿ ಚಿಕನ್’ ಆರ್ಡರ್ ಮಾಡಿದ್ದರು. ಮನೆಗೆ ತಲುಪಿದ ಚಿಕನ್ ದುರ್ವಾಸನೆ ಬೀರುತ್ತಿದ್ದು, ಆಹಾರ ಹಾಳಾಗಿರುವ ಶಂಕೆ ವ್ಯಕ್ತಪಡಿಸಿ ಅವರು ತಕ್ಷಣವೇ ಆಹಾರ ಸುರಕ್ಷತಾ ಇಲಾಖೆಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಮಳಿಗೆಯಲ್ಲಿದ್ದ ಫ್ರೋಝನ್ ಲೆಗ್ ಪೀಸ್…
ಪುತ್ತೂರು: ಅಕ್ರಮವಾಗಿ ಮರ ಕಡಿದು ಲಾರಿಯಲ್ಲಿ ಸಾಗಿಸುತ್ತಿದ್ದ ಪ್ರಕರಣವನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಪತ್ತೆಹಚ್ಚಿ, ಲಾರಿ ಹಾಗೂ ಮರದ ದಿಮ್ಮಿಗಳ ಸಮೇತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮಾಡಾವು ನಿವಾಸಿ ಇಸ್ಮಾಯಿಲ್ ಬಂಧಿತ ಆರೋಪಿ. ಆಗಸ್ಟ್ 14ರಂದು ನೆಟ್ಟಾರು ಎಂಬಲ್ಲಿ ಅಕ್ರಮವಾಗಿ ಕಡಿದ ಕಿರಾಲು ಭೋಗಿ ಜಾತಿಯ ಮರದ ದಿಮ್ಮಿಗಳನ್ನು ಲಾರಿಯಲ್ಲಿ ಸಾಗಿಸಲಾಗುತ್ತಿತ್ತು. ಬೆಳ್ಳಾರೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಲಾರಿಯನ್ನು ಕೆಯ್ಯೂರು ಗ್ರಾಮದ ಸಂತೋಷ್ ನಗರದಲ್ಲಿ ಅರಣ್ಯ ಅಧಿಕಾರಿಗಳು ತಡೆದು ತಪಾಸಣೆ ನಡೆಸಿದಾಗ ಅಕ್ರಮ ಮರ ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ. ಕಾರ್ಯಾಚರಣೆಯಲ್ಲಿ ಲಾರಿ ಹಾಗೂ ಮರದ ದಿಮ್ಮಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇವುಗಳ ಒಟ್ಟು ಮೌಲ್ಯ ಸುಮಾರು 5 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಮಂಗಳೂರು ಅರಣ್ಯ ಸಂಚಾರಿ ದಳದ ವಲಯ ಅರಣ್ಯಾಧಿಕಾರಿ ಸಂತೋಷ್ ರೈ, ಉಪವಲಯ ಅರಣ್ಯಾಧಿಕಾರಿಗಳಾದ ಶಿವಾನಂದ ಹಾಗೂ ಸೋಮನಾಥ್ ಮತ್ತು ಚಾಲಕ ಜಯಪ್ರಕಾಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ರೋಶಿನಿ ಎ.ಜೆ. ಅವರ ಮಾರ್ಗದರ್ಶನದಲ್ಲಿ ಸಹಾಯಕ…










