ಕೊಟ್ಟಾಯಂ(ಕೇರಳ): ಗೂಗಲ್ ಮ್ಯಾಪ್ ಹಾಕಿಕೊಂಡು ಪ್ರಯಾಣಿಸುತ್ತಿದ್ದ ಹೈದರಾಬಾದ್ ಮೂಲದ ಪ್ರವಾಸಿಗರಿದ್ದ ಕಾರು ದಕ್ಷಿಣ ಕೇರಳ ಜಿಲ್ಲೆಯ ಕುರುಪ್ಪಂಥಾರ ಸಮೀಪ ಹೊಳೆಗೆ ಬಿದ್ದಿದೆ. ಈ ಘಟನೆ ಶನಿವಾರ ರಾತ್ರಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಓರ್ವ ಮಹಿಳೆ ಸೇರಿದಂತೆ ನಾಲ್ವರು ಪ್ರವಾಸಿಗರು ಕಾರಿನಲ್ಲಿ ಅಲಪ್ಪುಳ ಕಡೆಗೆ ತೆರಳುತ್ತಿದ್ದರು. ಇವರು ಪ್ರಯಾಣಿಸುತ್ತಿದ್ದ ರಸ್ತೆ ಮಾರ್ಗದಲ್ಲಿ ಹೊಳೆ ನೀರು ಉಕ್ಕಿ ಹರಿಯುತ್ತಿತ್ತು. ಪ್ರವಾಸಿಗರಿಗೆ ಈ ಪ್ರದೇಶದ ಪರಿಚಯವಿರಲಿಲ್ಲ. ಹೀಗಾಗಿ ಮ್ಯಾಪ್ ಬಳಸಿ ಸಂಚರಿಸುತ್ತಿದ್ದರು. ಈ ವೇಳೆ, ವೇಗವಾಗಿ ಚಲಿಸುತ್ತಿದ್ದ ಕಾರು ಹೊಳೆಗೆ ಬಿದ್ದಿದೆ. ವಿಷಯ ತಿಳಿದ ಪೊಲೀಸರು, ಸ್ಥಳೀಯ ನಿವಾಸಿಗಳು ಕಾರಿನಲ್ಲಿದ್ದ ನಾಲ್ವರನ್ನು ರಕ್ಷಿಸಿದ್ದಾರೆ. ಕಾರು ಸಂಪೂರ್ಣವಾಗಿ ಹೊಳೆ ನೀರಿನಲ್ಲಿ ಮುಳುಗಿದ್ದು, ಹೊರತೆಗೆಯುವ ಪ್ರಯತ್ನ ನಡೆಯುತ್ತಿದೆ ಎಂದು ಕಡುತುರುತಿ ಪೊಲೀಸ್ ಠಾಣೆಯ ಅಧಿಕಾರಿ ಮಾಹಿತಿ ನೀಡಿದರು. ಕೇರಳದಲ್ಲಿ ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಇಬ್ಬರು ಯುವ ವೈದ್ಯರು ಇದೇ ರೀತಿಯ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಆನ್‌ಲೈನ್ ಮ್ಯಾಪ್ ಸಹಾಯದಿಂದ ಪ್ರಯಾಣಿಸುತ್ತಿದ್ದಾಗ ಇವರಿದ್ದ ಕಾರು ನದಿಗೆ ಬಿದ್ದಿತ್ತು. ಈ ಘಟನೆಯ…
Author: main-admin
ಬಾಗಲಕೋಟೆ ಜಿಲ್ಲೆ ಜಮಖಂಡಿಯ ಲೋಕೋಪಯೋಗಿ ಇಲಾಖೆಯ ನಿರೀಕ್ಷಣಾ ಮಂದಿರದಲ್ಲಿ ಕಚೇರಿ ವೇಳೆ ಪಾರ್ಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಧಿಕಾರಿಗಳನ್ನು ಜಿಲ್ಲಾ ಚುನಾವಣಾ ಅಧಿಕಾರಿ ಕೆ.ಎಂ. ಜಾನಕಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಪಂಚಾಯತ್ ರಾಜ್ ಜಮಖಂಡಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್.ಎಂ. ನಾಯಕ್, ಸಹಾಯಕ ಇಂಜಿನಿಯರ್ ಗಳಾದ ಜಗದೀಶ ನಾಡಗೌಡ, ರಾಮಪ್ಪ ರಾಥೋಡ, ಕಿರಿಯ ಎಂಜಿನಿಯರ್ ಗಜಾನನ ಪಾಟೀಲ್ ಅಮಾನತುಗೊಂಡವರು. ನಿರೀಕ್ಷಣಾ ಮಂದಿರದ ಬೀಗಗಳನ್ನು ಪಂಚಾಯತ್ ರಾಜ್ ಇಂಜಿನಿಯರ್ ಗಳಿಗೆ ನೀಡಲು ನಿರ್ದೇಶನ ನೀಡಿದ ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ಎಸ್.ಆರ್. ಜಂಬಗಿ ಅವರನ್ನು ಅಮಾನತು ಮಾಡಲಾಗಿದೆ. ಗುತ್ತಿಗೆದಾರರೊಂದಿಗೆ ಸೇರಿ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಕಚೇರಿ ವೇಳೆಯಲ್ಲಿ ನಿರೀಕ್ಷಣಾ ಮಂದಿರದಲ್ಲಿ ಮದ್ಯ ಸೇವನೆ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಅಮಾನತು ಆದೇಶ ಹೊರಡಿಸಿದ್ದಾರೆ. ಮೇ 22 ರಂದು ಜಮಖಂಡಿ ಪ್ರವಾಸಿ ಮಂದಿರದಲ್ಲಿ ಗುತ್ತಿಗೆದಾರರೊಂದಿಗೆ ಮದ್ಯದ ಪಾರ್ಟಿ ಮಾಡಿದ್ದರು. ಕೆಲಸಕ್ಕೆ ಗೈರುಹಾಜರಾಗಿ ನೀತಿ…
ಕರ್ನಾಟಕ ವಿಧಾನಮಂಡಲದ “ಮೇಲ್ಮನೆ ” ಎನಿಸಿದ ವಿಧಾನಪರಿಷತ್ತಿನ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಇದೇ ಬರುವ ಜೂನ್ 3 ರಂದು ನಡೆಯಲಿದೆ . ಈ ಚುನಾವಣೆಯಲ್ಲಿ ಡಾ. ನರೇಶ್ಚಂದ್ ಹೆಗ್ಡೆ, ಹೆಬ್ರಿಬೀಡು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣ ಕಣಕ್ಕೆ ಇಳಿದಿದ್ದಾರೆ. ಈಗಾಗಲೇ ಮೇ -16 ರಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಅಧಿಕೃತವಾಗಿ ನನ್ನ ಉಮೇದ್ವಾರಿಕೆ ಯ ನಾಮಪತ್ರವನ್ನು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ “ಸುಶಿಕ್ಷಿತರ ,ಮೇಧಾವಿಗಳ ಮತ್ತು ಬುದ್ದಿವಂತರ ಈ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಓರ್ವ ವಿದ್ಯಾವಂತ ಮತ್ತು ಸ್ವತಃ ಶಿಕ್ಷಕನೇ ಆಗಿರುವ ಅಭ್ಯರ್ಥಿಯೇ ಬೇಕು ಎಂಬ ಪರಿಕಲ್ಪನೆಯಡಿ ಹೃದ್ರೋಗ ಶಸ್ತ್ರ ಚಿಕಿತ್ಸಾ ತಜ್ಞ ಮತ್ತು ಮೆಡಿಕಲ್ ಕಾಲೇಜಿನಲ್ಲಿ ಪ್ರೊಫೆಸರ್ ಆಗಿರುವ ನಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಮನಸ್ಸು ಮಾಡಿದ್ದೇನೆ.” “ಕರಾವಳಿ ಮತ್ತು ಮಲೆನಾಡಿನ ಸಂಗಮ ಸ್ಥಾನವಾದ ನಿಸರ್ಗ ರಮಣೀಯ ಹೆಬ್ರಿಯ ಪ್ರತಿಷ್ಠಿತ ಹೆಬ್ರಿಬೀಡು ಮನೆತನದಲ್ಲಿ ಜನಿಸಿರುವುದು ನನ್ನ ಸೌಭಾಗ್ಯ. ಉಡುಪಿ, ಮಣಿಪಾಲ ಮತ್ತು ಮಂಗಳೂರಿನಲ್ಲಿ ವಿದ್ಯಾಭ್ಯಾಸ ಪಡೆದು…
ಮಂಗಳೂರು : ಮಂಗಳೂರು ರಾತ್ರಿ ಸುರಿದ ಮಳೆಗೆ ಕೊಟ್ಟಾರ ಬಳಿ ರಾಜಕಾಲುವೆಯಲ್ಲಿ ರಿಕ್ಷಾವೊಂದು ಕೊಚ್ಚಿ ಹೋಗಿ ಚಾಲಕ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ ನಡೆದಿದ್ದು, ಇದೀಗ ರಾಜಕಾಲುವೆ ಸರಿಯಾಗಿ ಕ್ಲಿನ್ ಮಾಡದೆ ನಿರ್ಲಕ್ಷ ತೋರಿಸಿರುವ ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ದ ಎಫ್ಐಆರ್ ದಾಖಲಾಗಿದೆ. ನಗರದಲ್ಲಿ ಶುಕ್ರವಾರ ರಾತ್ರಿ ಇಡೀ ಧಾರಾಕಾರ ಮಳೆಯಾಗಿದ್ದು ಕೊಟ್ಟಾರ ಚೌಕಿಯಲ್ಲಿ ತಗ್ಗು ಪ್ರದೇಶದ 20ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ. ಮಳೆ ನೀರು ಹರಿಯುವ ಕಾಲುವೆಯಲ್ಲಿ ರಿಕ್ಷಾವೊಂದು ಕೊಚ್ಚಿ ಹೋಗಿದ್ದು, ಚಾಲಕ ಕೊಟ್ಟಾರ ನಿವಾಸಿ ದೀಪಕ್ ಆಚಾರ್ಯ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದರು. ಇದೀಗ ಮಹಾನಗರಪಾಲಿಕೆಯ ಅಧಿಕಾರಿಗಳ ನಿರ್ಲಕ್ಷದ ವಿರುದ್ದ ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಚರಂಡಿಯನ್ನು ಕ್ಲಪ್ತ ಸಮಯದಲ್ಲಿ ಸ್ವಚ್ಚಗೊಳಿಸದೇ ಇದ್ದ ಕಾರಣ ಚರಂಡಿಯಲ್ಲಿ ಮಳೆ ನೀರು ತುಂಬಿ ಬ್ಲಾಕ್ ಆಗಿ ರಸ್ತೆ ಮೇಲೆ ಹರಿದಿದ್ದು, ಇದರಿಂದಾಗಿ ಚರಂಡಿ ಕಾಣಿಸದೇ ಇದ್ದದರಿಂದಾಗಿ ಈ ಅಪಘಾತವಾಗಿದ್ದು, ರಸ್ತೆ ತಿರುವಿನಲ್ಲಿ ಚರಂಡಿಗೆ ಮುಂಜಾಗೃತ ಕ್ರಮವಾಗಿ ತಡೆಗೋಡೆಯನ್ನು ನಿರ್ಮಿಸದೇ…
ಪುತ್ತೂರು: ಕೆಲ ದಿನಗಳ ಹಿಂದೆ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಬಕ ಸಮೀಪದ ಕೂವೆತ್ತಿಲದಲ್ಲಿ ಈ ಅಪಘಾತ ಸಂಭವಿಸಿತ್ತು. ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ, ಮಂಜುಶ್ರೀ (20) ಮೃತ ವಿದ್ಯಾರ್ಥಿನಿಯಾಗಿದ್ದು, ಈಕೆ ಮಂಜುಶ್ರೀ ವಿವೇಕಾನಂದ ಕಾಲೇಜಿನಲ್ಲಿ ಪದವಿ ಓದುತ್ತಿದ್ದರು.ಅಲ್ಟೋ ಕಾರು ಹಾಗೂ ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಮಂಜುಶ್ರೀ ಗಂಭೀರ ಗಾಯಗೊಂಡಿದ್ದರು. ಆ ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಯಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಮೃತಪಟ್ಟಿದ್ದಾರೆ.
ಮಂಗಳೂರು: ನಗರದ ರಾವ್ ಆ್ಯಂಡ್ ರಾವ್ ಸರ್ಕಲ್ ಸರ್ವಿಸ್ ಬಸ್ ತಂಗುದಾಣದ ಬಳಿ ಸಾರ್ವಜನಿಕರಿಂದ ಮಟ್ಕಾ ಜೂಜಾಟಕ್ಕೆ ಹಣವನ್ನು ಸಂಗ್ರಹಿಸುತ್ತಿದ್ದ ಇಬ್ಬರನ್ನು ಪಾಂಡೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ವಶಕ್ಕೆ ಪಡೆದ ಆರೋಪಿಗಳು ಹರೀಶ್ ಕುಮಾರ್ ಶೆಟ್ಟಿ ಮತ್ತು ದಿನೇಶ್ ಪಾವೂರು ಎಂದು ತಿಳಿದು ಬಂದಿದೆ. ಆರೋಪಿಗಳಿಂದ ಜೂಜಾಟಕ್ಕೆ ಸಂಗ್ರಹಿಸಿದ 5,720 ರೂ. ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಮಂಗಳೂರು: ಭಾರೀ ಮಳೆಯಿಂದಾಗಿ ನಗರದಲ್ಲಿ ದುರಂತವೊಂದು ಸಂಭವಿಸಿದ್ದು, ಉಕ್ಕಿ ಹರಿಯುತ್ತಿದ್ದ ರಾಜಕಾಲುವೆಗೆ ಆಟೋ ರಿಕ್ಷಾ ಉರುಳಿ ಅದರ ಚಾಲಕ ಸಾವನ್ನಪ್ಪಿದ ಘಟನೆ ನಗರದ ಕೊಟ್ಟಾರದ ಅಬ್ಬಕ್ಕ ನಗರದಲ್ಲಿ ಮೇ ೨೪ ರ ಶುಕ್ರವಾರ ರಾತ್ರಿ ನಡೆದಿದೆ. ಮೃತರನ್ನು ಅಟೋ ಚಾಲಕ ದೀಪಕ್ (40) ಎಂದು ಗುರುತಿಸಲಾಗಿದೆ.ಮಂಗಳೂರಿನಲ್ಲಿ ಶುಕ್ರವಾರ ರಾತ್ರಿ ಭಾರೀ ಮಳೆ ಸುರಿಯುತ್ತಿದ್ದು, ಹೀಗಾಗಿ ಕೊಟ್ಟಾರದಲ್ಲಿದ್ದ ರಾಜಕಾಲುವೆ ತುಂಬಿ ಹರಿಯುತ್ತಿತ್ತು. ಈ ರಾಜಕಾಲುವೆಗೆ ಯಾವುದೇ ತಡೆಗೋಡೆ ಇಲ್ಲದ ಕಾರಣ ನೀರು ರಸ್ತೆಗೂ ಬಂದಿತ್ತು. ರಾಜಕಾಲುವೆಯು ಉಕ್ಕಿದ ಪರಿಣಾಮ ರಸ್ತೆಯ ವ್ಯತ್ಯಾಸ ತಿಳಿಯದೆ ಸಮಾನವಾಗಿ ನೀರು ಹರಿಯುತ್ತಿತ್ತು.ರಾತ್ರಿ ವೇಳೆ ಆ ರಸ್ತೆಯಲ್ಲಿ ಸಂಚರಿಸೋ ವೇಳೆ ರಸ್ತೆ ಹಾಗೂ ಕಾಲುವೆಯ ವ್ಯತ್ಯಾಸ ತಿಳಿಯದೆ ರಾಜಕಾಲುವೆಗೆ ಆಟೋ ಉರುಳಿದ್ದು, ನೀರಿನಲ್ಲಿ ಮುಳುಗಿ ಚಾಲಕ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳೀಯರು ಹಾಗೂ ದಾರಿಹೋಕರು ಮೃತದೇಹ ಮೇಲೆತ್ತಿದ್ದಾರೆ.ಕಾಲುವೆಗೆ ತಡೆಗೋಡೆ ನಿರ್ಮಿಸದೇ ಇರುವುದು ಭಾರೀ ಅನಾಹುತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿದ್ದು, ಮಂಗಳೂರು ಮಹಾನಗರ ಪಾಲಿಕೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರವಾರ: ಹೆಲ್ಮೆಟ್ ಧರಿಸಿಲ್ಲವೆಂದು ಟಿಪ್ಪರ್ ಲಾರಿ ಚಾಲಕರೊಬ್ಬರಿಗೆ ಹೊನ್ನಾವರ ಸಂಚಾರ ಠಾಣೆ ಪೊಲೀಸರು ದಂಡ ಹಾಕಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ವಿನುತಾ ವಿನೋದ್ ನಾಯ್ಕ ಎಂಬುವವರಿಗೆ ಸೇರಿದ ಟಿಪ್ಪರ್ ಲಾರಿಗೆ ಚಂದ್ರಕಾಂತ್ ಹಳ್ಳೇರ ಎನ್ನುವರು ಮರಳು ತುಂಬಿದ ಟಿಪ್ಪರ್ ಲಾರಿಯನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಟಿಪ್ಪರ್ ಲಾರಿಯನ್ನು ಹೊನ್ನಾವರ ಸಂಚಾರಿ ಪೊಲೀಸರು, ಅಳ್ಳಂಕಿ ಎಂಬಲ್ಲಿ ತಡೆದು 500 ರೂಪಾಯಿ ದಂಡ ಹಾಕಿ ರಶೀದಿ ನೀಡಿದ್ದಾರೆ. ಬಳಿಕ ಚಾಲಕ ರಶೀದಿಯನ್ನು ನೋಡಿ ಒಂದು ಕ್ಷಣ ಶಾಕ್ ಆಗಿದ್ದಾರೆ. ಯಾಕಂದ್ರೆ ರಶೀದಿಯಲ್ಲಿ ಹಾಕಿರುವ ದಂಡ ವಿಥೌಟ್ ಹೆಲ್ಮೆಟ್ಗೆ. ಈ ಬಗ್ಗೆ ಚಾಲಕ ಚಂದ್ರಕಾಂತ್, ಸರ್ ನಾನು ಬೈಕ್ ಓಡಿಸುತ್ತಿಲ್ಲ. ಟಿಪ್ಪರ್ ಚಾಲನೆ ಮಾಡುತ್ತೇನೆ ಎಂದು ಪೊಲೀಸರನ್ನ ಪ್ರಶ್ನಿಸಿದ್ದಾರೆ. ಹೇ ಅದೆಲ್ಲಾ ಇರುತ್ತೆ ಎಂದು ಹೇಳಿ ರಶೀದಿ ಕೊಟ್ಟು ಕಳುಹಿಸಿದ್ದಾರೆ. ಪೊಲೀಸರು ಸಮವಸ್ತ್ರ ಧರಿಸದಕ್ಕೆ ದಂಡ ಹಾಕುವ ಬದಲು ಹೆಲ್ಮೆಟ್ ಧರಿಸಿಲ್ಲ ಎಂದು ದಂಡ ಹಾಕಿ ಎಡವಟ್ಟು ಮಾಡಿಕೊಂಡಿದ್ದಾರೆ. ಇದೀಗ…
ಸುಳ್ಯ: ಕಂಪ್ಯೂಟರ್ ತರಗತಿ ಮುಗಿಸಿ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಹಿಂಬಾಲಿಸಿಕೊಂಡು ಬಂದ ಯುವಕನೊಬ್ಬ ಯುವಕ ಕಿರುಕುಳ ನೀಡಿರುವ ಬಗ್ಗೆ ದೂರು ದಾಖಲಾಗಿದೆ. ಸುಳ್ಯದ ಕಲ್ಲುಮುಟ್ಲುವಿನ ಯುವತಿ ಪೇಟೆಯಿಂದ ಗಾಂಧಿನಗರದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಅಪರಿಚಿತ ಯುವಕ ಹಿಂಬಾಲಿಸಿದ್ದಲ್ಲದೆ ಪ್ರೀತಿಸುವುದಾಗಿ ಹೇಳಿದ್ದ.ಯುವತಿಯು ಈ ವಿಚಾರವನ್ನು ಪೇಟೆಯಲ್ಲಿಯೇ ಇದ್ದ ತನ್ನ ತಂದೆಗೆ ತಿಳಿಸಿದಳು. ಅವರು ಬಂದ ಕೂಡಲೇ ಯುವಕ ಹೊಟೇಲೊಂದಕ್ಕೆ ನುಗ್ಗಿ ಹಿಂಬಾಗಿಲಿನ ಮೂಲಕ ತಪ್ಪಿಸಿಕೊಂಡನೆನ್ನಲಾಗಿದೆ. ಸುಳ್ಯ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು: ಜೂನ್ 1 ರಿಂದ 6ರ ರವರೆಗೆ ವೈನ್ ಶಾಪ್, ಎಂಆರ್‌ಪಿ ಔಟ್‌ಲೇಟ್‌ಗಳು ಬಂದ್ ಆಗಲಿದೆ. ರಾಜ್ಯದಲ್ಲಿ ನಡೆಯುತ್ತಿರೋ ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ ಇರುವುದರಿಂದ ಬೆಂಗಳೂರು ಜಿಲ್ಲಾಡಳಿತ ಮದ್ಯ ಮಾರಾಟವನ್ನು ಬಂದ್ ಮಾಡುವಂತೆ ಆದೇಶ ನೀಡಿದೆ. ಜೂನ್ 3 ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯುವುದರಿಂದ ಜೂನ್ 1ರ ಸಂಜೆ 4 ಗಂಟೆಯಿಂದಲೇ ಬಾರ್ ಬಂದ್ ಆಗಲಿದ್ದು, ಜೂನ್ 3 ರವರೆಗೆ ಬಂದ್ ಮಾಡಬೇಕಾಗುತ್ತೆ. ಇನ್ನೂ ಜೂನ್ 4 ರಂದು ದೇಶದ್ಯಾಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಹಾಗಾಗಿ ಅಂದೂ ಸಹ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ. ಜೂನ್ 6 ರಂದು ಎಂಎಲ್‌ಸಿ ಮತ ಎಣಿಕೆ ಇರುವುದರಿಂದ ಬಾರ್ ಬಂದ್ ಮಾಡುವಂತೆ ಬೆಂಗಳೂರು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ