ಮಂಗಳೂರು : ಅಭಿವ್ಯಕ್ತಿ ಸ್ವಾತಂತ್ರ್ಯ ನೆಪದಲ್ಲಿ ಸತ್ಯಗಳನ್ನು ಮರೆಮಾಚಿಸಬೇಡಿ. ಪ್ರಚೋದನಾಕಾರಿ ಭಾಷಣ ಮೂಲಕ ಮುಗ್ಧ ಜನರಲ್ಲಿ ಗೊಂದಲ ಸೃಷ್ಟಿಸಬೇಡಿ. ನಾವು ಯಾವುದೇ ಘಟನೆಯಲ್ಲೂ ಸಮುದಾಯಗಳ ಆಧಾರದ ಮೇಲೆ ಪ್ರಕರಣಗಳನ್ನು ದಾಖಲಿಸುವುದಿಲ್ಲ. ವಾಸ್ತವಾಂಶಗಳ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತೇವೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಕೊಳತ್ತಮಜಲು ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ದ.ಕ.ಜಿಲ್ಲಾ ಎಸ್‌ಡಿಪಿಐ ನಗರದ ಕ್ಲಾಕ್ ಟವರ್ ಬಳಿ ಶುಕ್ರವಾರ ನಡೆಸಿದ ಪ್ರತಿಭಟನೆಯ ವೇಳೆ ಭಾಷಣಕಾರರು ಪೊಲೀಸರು ಪ್ರಕರಣ ದಾಖಲಿಸುವಾಗ ತಾರತಮ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೆ ಸಂಘ ಪರಿವಾರ ಮತ್ತು ಎಸ್‌ಡಿಪಿಐ ಕಾರ್ಯಕರ್ತರ ಬಂಧನ ವಿಚಾರದಲ್ಲಿ ಆರ್‌ಟಿಐ ದಾಖಲೆಗಳನ್ನು ಪಡೆದು ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ತಿಳಿಸಿದ್ದರು. ಆ ಹಿನ್ನಲೆಯಲ್ಲಿ ಸ್ಪಷ್ಟನೆ ನೀಡಿದ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ “ನೀವು ಆರ್‌ಟಿಐನಲ್ಲಿ ಕೇಳುವ ಅಗತ್ಯವಿಲ್ಲ, ನಾನೇ ಮಾಹಿತಿ ಕೊಡುವೆ. ನೀವು 30 ದಿನಗಳನ್ನು ಏಕೆ ವ್ಯರ್ಥ ಮಾಡುತ್ತೀರಿ” ಎಂದಿದ್ದಾರೆ. ಶಾಂತಿ ಭಂಗ ಅಥವಾ ಯಾವುದೇ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸುವ ಹಕ್ಕು…
Author: main-admin
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಠಿಸಿ, ಭಕ್ತರಿಂದ ಮುಂಗಡ ರೂಮ್ ಬುಕಿಂಗ್ ಹೆಸರಿನಲ್ಲಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ಆಲ್ವಾರ್ ಜಿಲ್ಲೆಯ ತಿಜಾರಾ ತಾಲ್ಲೂಕಿನ ದಾಖಾಪುರಿ ನಿವಾಸಿ ನಾಸೀರ್ ಹುಸೇನ್ (21) ಬಂಧಿತ ಆರೋಪಿ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯವರು ನೀಡಿದ ದೂರಿನ ಮೇರೆಗೆ, ಕಳೆದ ನವೆಂಬರ್ 3ರಂದು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಹೆಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಬೈಂದೂರು ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ.ಬಿ ಹಾಗೂ ಕುಂದಾಪುರ ಗ್ರಾಮಾಂತರ ವೃತ್ತದ ಸಿಪಿಐ ಸಂತೋಷ ಎ. ಕಾಯ್ಕಿಣಿ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ರಾಜಸ್ಥಾನದಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಲಾಗಿದೆ. ವಂಚನೆಗೆ ಬಳಸಿದ ಲ್ಯಾಪ್‌ಟಾಪ್ ಅನ್ನು ಪೊಲೀಸರು ಪಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಇಂದು ಬೈಂದೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ವಿಶೇಷ ತನಿಖಾ ತಂಡದಲ್ಲಿ…
ವಿಟ್ಲ : ಕೇಪು ಗ್ರಾಮದಲ್ಲಿ ಅನುಮತಿ ರಹಿತ ಕೋಳಿ ಅಂಕ ನಡೆದಿದ್ದು, ಅಕ್ರಮಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಹಿತ 17 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೇಪು ಗ್ರಾಮದ ಉಳ್ಳಾಲ್ತಿ ಜಾತ್ರೆಯ ಪ್ರಯುಕ್ತ ಸಾಂಪ್ರದಾಯಿಕ ಕೋಳಿ ಅಂಕವು ಮುರಳಿಧರ ರೈ ಎಂಬವರ ಗದ್ದೆಯಲ್ಲಿ ನಡೆಯುತ್ತಿತ್ತು. ಅನುಮತಿ ರಹಿತ ಕೋಳಿ ಅಂಕ ನಡೆಸುತ್ತಿದ್ದಾರೆಂದು ಆರೋಪಿಸಿ ವಿಟ್ಲ ಠಾಣಾ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಶಾಸಕ ಅಶೋಕ ಕುಮಾರ್ ರೈ ಕೋಳಿ ಅಂಕ ನಡೆಸುವಂತೆ ತಿಳಿಸಿದ್ದರು. ಹಾಗಾಗಿ ಪೊಲೀಸರ ಎಚ್ಚರಿಕೆಯ ನಡುವೆಯೂ ಕೋಳಿ ಅಂಕ ನಡೆದಿತ್ತು. ಪೊಲೀಸರ ಆರೋಪದ ಪ್ರಕಾರ, ಶಾಸಕ ಅಶೋಕ್ ಕುಮಾರ್ ರೈ ಅಕ್ರಮಕ್ಕೆ ದುಷ್ಪ್ರೇರಣೆ ನೀಡಿದ್ದಾರೆ ಎನ್ನಲಾಗಿದೆ. ಸಂಜೆ 5ಗಂಟೆ ವೇಳೆಗೆ ಪೊಲೀಸರು ಸ್ಥಳದಲ್ಲಿದ್ದ 16 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಅಂಕಕ್ಕೆ ತಂದಿದ್ದ 22 ಕೋಳಿಗಳನ್ನು ವಶಪಡಿಸಿಕೊಂಡಿದ್ದಾರೆ.…
ಬೆಂಗಳೂರು : ರಾಜ್ಯ ಸರ್ಕಾರದ ಕಛೇರಿಗಳಲ್ಲಿ ಸರ್ಕಾರಿ ನೌಕರರು ಚಲನವಲನ ವಹಿ (Movement Register) ಮತ್ತು ನಗದು ಘೋಷಣೆ ವಹಿ (Cash Declaration Register) ಯನ್ನು ನಿರ್ವಹಣೆ ಮಾಡದಿರುವುದು, ಸಭ್ಯ ಉಡುಗೆ ತೊಡುಗೆಗಳನ್ನು ಧರಿಸದಿರುವ ಕುರಿತು ಸಾರ್ವಜನಿಕರಿಂದ/ಸಂಘ ಸಂಸ್ಥೆಗಳಿಂದ ಹಲವಾರು ದೂರುಗಳು ಸ್ವೀಕೃತವಾಗುತ್ತಿವೆ. ಈ ಕುರಿತು ಈ ಹಿಂದೆ ಹಲವು ಸುತ್ತೋಲೆಗಳನ್ನು ಹೊರಡಿಸಲಾಗಿರುತ್ತದೆ. ಆದಾಗ್ಯೂ ಸದರಿ ಸುತ್ತೋಲೆಗಳನ್ನು ಪಾಲನೆ ಮಾಡದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಈ ಕೆಳಕಂಡ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶಿಸಿದೆ. ಚಲನಾ ನೋಂದಣಿ ಕಚೇರಿ ವೇಳೆಯಲ್ಲಿ ಸರ್ಕಾರಿ ನೌಕರರ ಚಲನವಲನವನ್ನು ನಿಯಂತ್ರಿಸಲು ಚಲನವಲನ ವಹಿಯ ನಿರ್ವಹಣೆ ಬಗ್ಗೆ ಸುತ್ತೋಲೆ ಸಂಖ್ಯೆ: ಸಿಆಸುಇ 02 ತಎಇ 2016, ದಿನಾಂಕ: 12.04.2016, ಸಿಆಸುಇ 05 ಕತವ 2020, ໖:07.02.2020 ಹಾಗೂ /4464335/2025, ໖:25.07.2022 , 03, ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಚಲನವಲನ ವಹಿ (Movement Register) ಯನ್ನು ಕಡ್ಡಾಯವಾಗಿ ನಿರ್ವಹಿಸುವಂತೆ ಸೂಚಿಸಿದೆ. ಎಲ್ಲಾ ಅಧಿಕಾರಿ/ಸಿಬ್ಬಂದಿಗಳು ಸರ್ಕಾರಿ ಕಚೇರಿಗಳ ನಿಗದಿತ ಪ್ರಾರಂಭ ಸಮಯವಾದ…
ಉಡುಪಿ: ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪಿಂಪ್‌ಗಳನ್ನು ಪಡುಬಿದ್ರೆ ಪೊಲೀಸರು ಬಂಧಿಸಿ ಮಹಿಳೆಯರನ್ನು ರಕ್ಷಿಸಿದ ಘಟನೆ ಕಾಪು ಠಾಣಾ ವ್ಯಾಪ್ತಿಯ ನಡ್ಸಾಲು ಎಂಬಲ್ಲಿ ನಡೆದಿದೆ. ಉಚ್ಚಿಲ ಪೊಲ್ಯದ ಯತಿರಾಜ ಪೊಲ್ಯ ಶೆಟ್ಟಿ(48), ಮತ್ತು ಕಾಡಿಪಟ್ಣ ನವೀನ್ ಪೂಜಾರಿ(39) ಬಂಧಿತ ಆರೋಪಿಗಳು. ಕಾಪು ತಾಲೂಕು ನಡ್ಸಾಲು ಗ್ರಾಮದ ರಾ.ಹೆ 66ರ ಪಕ್ಕದಲ್ಲಿರುವ ಮಹಾದೇವಿ ಟೂರಿಸ್ಟ್ ಹೋಮ್ ಲಾಡ್ಜ್‌ನಲ್ಲಿ ಮಹಿಳೆಯರನ್ನು ಇರಿಸಿಕೊಂಡು ವೈಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿಯಂತೆ ಪಡುಬಿದ್ರಿ ಪೊಲೀಸರು ಕಾಪು ಪೊಲೀಸರೊಂದಿಗೆ ದಾಳಿ ನಡೆಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಬೆಳ್ತಂಗಡಿ: ಧರ್ಮಸ್ಥಳ ವಿರುದ್ಧ ಷಡ್ಯಂತರ ಹಾಗೂ ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಶಿವಮೊಗ್ಗ ಸೆಂಟ್ರಲ್ ಜೈಲಿನಿಂದ ಆರೋಪಿ ಚಿನ್ನಯ್ಯ ಬಿಡುಗಡೆಯಾಗಿದ್ದಾನೆ ಬಿಡುಗಡೆ ಬಳಿಕ ಆರೋಪಿ ಚಿನ್ನಯ್ಯ ಐವರ ವಿರುದ್ಧ ಜೀವ ಬೆದರಿಕೆ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಠಾಣೆಗೆ ಇದೀಗ ದೂರ ನೀಡಿದ್ದಾನೆ. ತನಗೆ ಹಾಗೂ ತನ್ನ ಪತ್ನಿಗೆ ಜೀವ ಬೆದರಿಕೆ ಅಂತ ಚಿನ್ನಯ್ಯ ದೂರು ನೀಡಿದ್ದಾನೆ ಮಹೇಶ ಶೆಟ್ಟಿ ತಿಮರೋಡಿ, ಗಿರೀಶ ಮಟ್ಟಣ್ಣನವರ, ವಿಠಲಗೌಡ, ಟಿ ಜಯಂತ್ ಹಾಗೂ ಸಮೀರ್ ಎಂಡಿ ವಿರುದ್ಧ ಆರೋಪಿ ಚಿನ್ನಯ್ಯ ದೂರು ನೀಡಿದ್ದಾನೆ. ಈ ವೇಳೆ ಬೆಳ್ತಂಗಡಿ ಠಾಣೆಗೆ ಮನವಿ ಸಲ್ಲಿಸಲು ಧರ್ಮಸ್ಥಳ ಪೊಲೀಸರು ಸೂಚನೆ ನೀಡಿದ್ದಾರೆ.
ಮಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳಿಗೆ ಸಂಬಂಧಿಸಿ ವಾಹನ ಮಾಲಕರು ಪರಿವಾಹನ್ ವೆಬ್ ಸೈಟ್ ಅಥವಾ ಕರ್ನಾಟಕ ವನ್ ಕೇಂದ್ರಗಳ ಮೂಲಕ ದಂಡ ಪಾವತಿ ಮಾಡಬಹುದು. ದಂಡ ಪಾವತಿಗೆ ಯಾವುದೇ ಆ್ಯಪ್ ಗಳು ಇಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಸೈಬರ್ ವಂಚಕರು ಸಕ್ರಿಯ: ಸರಕಾರ ದಂಡವನ್ನು ರಿಯಾಯತಿ ದರದಲ್ಲಿ ಪಾವತಿಸುವ ಯೋಜನೆ ಜಾರಿಗೊಳಿಸುತ್ತಿದ್ದಂತೆ ಕೆಲವು ಸೈಬರ್‌ವಂಚಕರು ಸಕ್ರಿಯರಾಗಿದ್ದು, ಲಿಂಕ್ ಗಳನ್ನು ಕಳುಹಿಸಿ ನಿಮ¬¾ ದಂಡವನ್ನು ಎಪಿಕೆ ಫೈಲ್ ಇನ್ ಸ್ಟಾಲ್ ಮಾಡಿ ಅದರ ಮೂಲಕ ಪಾವತಿಸಬಹುದು ಎಂದು ಕೆಲವರಿಗೆ ಲಿಂಕ್ ಕಳುಹಿಸಿದ್ದಾರೆ. ಆ್ಯಪ್ ಡೌನ್ ಲೋಡ್ ಮಾಡುತ್ತಿದ್ದಂತೆ ಮೊಬೈಲ್ ಹ್ಯಾಕ್ ಆಗುತ್ತದೆ. ಮೊಬೈಲ್ ನಲ್ಲಿರುವ ಎಲ್ಲ ಮಾಹಿತಿಗಳು ವಂಚಕರಿಗೆ ದೊರೆಯುವುದು ಮಾತ್ರವಲ್ಲದೆ, ಒಟಿಪಿ ಮೂಲಕ ಬ್ಯಾಂಕ್ ಖಾತೆಯಿಂದ ಹಣವನ್ನೂ ತಾವೇ ವರ್ಗಾವಣೆ ಮಾಡಿಕೊಂಡು ವಂಚಿಸುತ್ತಾರೆ. ನಗರದ ವ್ಯಾಪ್ತಿಯಲ್ಲಿ ಈಗಾಗಲೇ ಇಬ್ಬರು ಆ್ಯಪ್ ಡೌನ್ ಲೋಡ್ ಮಾಡಿ ಹಣ ಕಳೆದುಕೊಂಡಿದ್ದಾರೆ. ವಂಚಕರು ನಕಲಿ ವೆಬ್‌ಸೈಟ್‌ಗಳು ಮತ್ತು ನಕಲಿ ಪಾವತಿ…
ಬಾಲಕೃಷ್ಣ ಅವರು ಪುತ್ರಿ ಚೈತ್ರಾ ಕುಂದಾಪುರ ಅವರಿಂದ ಅನ್ಯಾಯ ಆಗುತ್ತಿದೆ. ನನ್ನ ಮನೆಯಲ್ಲಿ ವಾಸಿಸಲು ಅವಕಾಶ ನೀಡಬೇಕೆಂದು ಕೋರಿ ಹಿರಿಯ ನಾಗರಿಕರ ಪಾಲನೆ ಹಾಗೂ ಕಲ್ಯಾಣ ಕಾಯ್ದೆ ಅನ್ವಯ ಪರಿಹಾರ ಕೋರಿ ನ್ಯಾಯಮಂಡಳಿಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧದ ಕೋರ್ಟ್ ತೀರ್ಪು ನೀಡಿದೆ.ತಂದೆಗೆ ಮಗಳು ಯಾವುದೇ ರೀತಿ ದೈಹಿಕ, ಮಾನಸಿಕ ಹಿಂಸೆ ನೀಡುವಂತಿಲ್ಲ. ಅವರ ಮನೆಯಲ್ಲಿ ನಿರ್ಭೀತಿಯಿಂದ ಇರಲು ಅವಕಾಶ ಮಾಡಿಕೊಡಬೇಕು. ಅವರ ಸ್ವತ್ತಿನ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸೂಕ್ತ ಮುಚ್ಚಳಿಕೆ ನೀಡಬೇಕು ಎಂದು ಎಂದು ಇಲ್ಲಿನ ಉಪವಿಭಾಗಾಧಿಕಾರಿಗಳ ನ್ಯಾಯಾಲಯ ಆದೇಶ ಮಾಡಿದೆ. ಕೆಲ ಸಮಯ ಹಿಂದಷ್ಟೇ ಚೈತ್ರಾ ಕುಂದಾಪುರ ಅವರು ಮದುವೆಯಾದ ಬಳಿಕ ಅವರ ತಂದೆ ಬಾಲಕೃಷ್ಣ ನಾಯಕ್ ಮಗಳ ವಿರುದ್ಧವೇ ಸಾಲು ಸಾಲು ಆರೋಪಗಳನ್ನು ಮಾಡಿದ್ದರು. ಚೈತ್ರಾ ಅವರ ಅವ್ಯವಹಾರದಿಂದ ಬೇಸತ್ತು 71 ವರ್ಷದ ತಾನು ಮನೆ ಬಿಟ್ಟು ಮಂಗಳೂರಿನಲ್ಲಿ ಹೋಟೆಲ್ ಕೆಲಸಕ್ಕೆ ಸೇರಿದ್ದು ಇನ್ನೊಬ್ಬ ಮಗಳನ್ನು ಭೇಟಿ ಮಾಡಲು ಆಗಾಗ ಮನೆಗೆ ಬರುತ್ತಿದ್ದೆ. ಆಗ…
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಮತ್ತೆ ಗಡಿ ಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ರಾಯಚೂರು ಜಿಲ್ಲೆ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರಾಗಿರುವ ಆದೇಶವನ್ನು ಬೆಳ್ತಂಗಡಿ ಪೊಲೀಸರು ಧ್ವನಿವರ್ಧಕದ ಮೂಲಕ ಸಾರ್ವಜನಿಕರಿಗೆ ತಿಳಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸರು ಗುರುವಾರ ನೋಟಿಸ್ ನೀಡಲು ಉಜಿರೆಯ ಅವರ ಮನೆಗೆ ತೆರಳಿದಾಗ ಮಹೇಶ್ ಶೆಟ್ಟಿ ಮನೆಯಲ್ಲಿ ಇರಲ್ಲಿಲ್ಲ. ಈ ನಡುವೆ, ಬೆಳ್ತಂಗಡಿ ಪೊಲೀಸರು ಮಹೇಶ ಶೆಟ್ಟಿ ಅವರ ಗಡೀಪಾರು ಆದೇಶವನ್ನು ಧ್ವನಿವರ್ಧಕದ ಮೂಲಕ ಉಜಿರೆ ಪೇಟೆಯಲ್ಲಿ ಗುರುವಾರ ಮುಸ್ಸಂಜೆ ಸಾರ್ವಜನಿಕರಿಗೆ ತಿಳಿಸುವ ಕಾರ್ಯ ಮಾಡಿದರು. ನ್ಯಾಯಾಲಯದ ಮತ್ತು ಪುತ್ತೂರು ಉಪ ವಿಭಾಗಾಧಿಕಾರಿ ಆದೇಶವನ್ನು ಮೈಕ್ ಮೂಲಕ ಪೊಲೀಸರು ಓದಿ ಸಾರ್ವಜನಿಕರಿಗೆ ತಿಳಿಸಿದರು.
ಮಂಗಳೂರು: ರೈತ ಕುಡ್ಲ ಪ್ರತಿಷ್ಟಾನದ ನೇತೃತ್ವದಲ್ಲಿ ಪಿಲಿಕುಳ ಅಭಿವೃದ್ದಿ ಪ್ರಾಧಿಕಾರ ಮಂಗಳೂರು ಹಾಗೂ ಶ್ರೀ ಮಹಾಮಾಯಿ ಸ್ಪೋರ್ಟ್ಸ್ ಕ್ಲಬ್ ಉಳಾಯಿಬೆಟ್ಟು ಸಹಯೋಗದೊಂದಿಗೆ ಪಿಲಿಕುಳದಲ್ಲಿ ಡಿ.20ರಿಂದ ಜ.4ರವರೆಗೆ ಪಿಲಿಕುಳ ಹಬ್ಬ ನಡೆಯಲಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ತಿಳಿಸಿದ್ದಾರೆ. ಕರಾವಳಿ ಉತ್ಸವ ಡಿಸೆಂಬರ್ 20 ರಿಂದ ಪ್ರಾರಂಭವಾಗಲಿದ್ದು, ಜನವರಿ 31 ವರೆಗೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಆಕರ್ಷಕ ಸಾಂಸ್ಕೃತಿಕ ಮತ್ತು ಸಾಹಸಮಯ ಕಾರ್ಯಕ್ರಮ ಗಳನ್ನುಆಯೋಜಿಸಲಾಗುತ್ತಿದೆ. ಪ್ರತೀ ವರ್ಷದಂತೆ ಈ ವರ್ಷವೂ ಕೂಡ ವೈವಿಧ್ಯಮಯವಾದ ವಸ್ತು ಪ್ರದರ್ಶನ, ಆಹಾರೋತ್ಸವ, ಕ್ರೀಡೆ ಹಾಗೂ ಸಾಂಸ್ಕೃತಿಕ, ಮನರಂಜನೆ ಯನ್ನು ಹಮ್ಮಿಕೊಳ್ಳಲಾಗಿದ್ದು, ಇದೇ ವೇಳೆ ಪಿಲಿಕುಳದಲ್ಲಿ ಡಿ.20ರಿಂದ ಜ.4ರವರೆಗೆ ಪಿಲಿಕುಳ ಹಬ್ಬ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ಧಾರೆ.










