Author: main-admin

ಕಾಸರಗೋಡು: ಚಲಿಸುತ್ತಿದ್ದ ಟ್ಯಾಂಕರ್ ನಿಂದ ಅನಿಲ ಸೋರಿಕೆ ಉಂಟಾದ ಘಟನೆ ಕಾಸರಗೋಡಿನ ಚಿತ್ತಾರಿಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದ್ದು , ಗಂಟೆಗಳ ಬಳಿಕ ಸೋರಿಕೆ ತಡೆಗಟ್ಟಲಾಗಿದೆ. ಸುತ್ತಲಿನ ಸುಮಾರು 500ಮೀಟರ್ ನಷ್ಟು ದೂರದ ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಈ ರಸ್ತೆಯ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸೋರಿಕೆ ಕಂಡು ಬಂದ ಹಿನ್ನೆಲೆ ಕೂಡಲೇ ಚಾಲಕ ಟ್ಯಾಂಕರ್ ನಿಲುಗಡೆ ಗೊಳಿಸಿ ಕಂಪೆನಿ ಅಧಿಕಾರಿಗಳಿಗೆ ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಟ್ಯಾಂಕರ್ ಮಂಗಳೂರಿನಿಂದ ಕೋಝಿಕ್ಕೋಡ್ ಗೆ ತೆರಳುತ್ತಿತ್ತು ಎನ್ನಲಾಗಿದೆ. ;

Read More

ಬಂಟ್ವಾಳ : ವಿದ್ಯುತ್ ಪರಿವರ್ತಕದ ಬಳಿ ನಿಂತುಕೊಂಡಿದ್ದ ವ್ಯಕ್ತಿಯೋರ್ವನಿಗೆ ಸಿಡಿಲು ಬಡಿದು ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ‌ಪೊಲೀಸ್ ಠಾಣಾ ವ್ಯಾಪ್ತಿಯ ಇರಾದಲ್ಲಿ ನಡೆದಿದೆ. ಇರಾ ಗ್ರಾಮದ ಮುರ್ಕಾಜೆ ನಿವಾಸಿ ಸತೀಶ್ ಚೌಟ ( 43) ಮೃತ ವ್ಯಕ್ತಿ.‌‌‌‌‌ ಸತೀಶ್ ‌ಅವರು ಬಾಕ್ರಬೈಲಿನಲ್ಲಿ ಮರದ ಮಿಲ್ ನಲ್ಲಿ ಕೆಲಸಗಾರನಾಗಿದ್ದು, ನಿನ್ನೆ ಬೆಳಗ್ಗೆ ಕೆಲಸಕ್ಕೆ ತೆರಳುವ ಉದ್ದೇಶದಿಂದ ರಸ್ತೆಯ ಬದಿಯಲ್ಲಿ ಟ್ರಾನ್ಸ್ ಪಾರ್ಮರ್ ಪಕ್ಕದಲ್ಲಿ ನಿಂತುಕೊಂಡಿರುವ ಸಮಯದಲ್ಲಿ ಆಕಸ್ಮಿಕವಾಗಿ ಸಿಡಿಲು ಬಡಿದು, ಒಮ್ಮೆಲೇ ವಿದ್ಯುತ್ ಪ್ರವೇಶಿಸಿ ಮೃತಪಟ್ಟ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಬೆಂಗಳೂರು: ನಗರ ಸಿಟಿ ಪೊಲೀಸರ ಹೆಸರಿನಲ್ಲಿ ವ್ಯಾಟ್ಸಪ್ ಮೂಲಕ ಮೆಸೇಜ್ ಕಳಿಸಿ ದಂಡ ಕಟ್ಟಿಸಿಕೊಳ್ಳುತ್ತಿದ್ದ ಆರೋಪಿಗಳನ್ನು ಈಶಾನ್ಯ ವಿಭಾಗ ಸೆನ್ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ರಂಜನ್ ಕುಮಾರ್ ಪೋರ್ಬಿ, ಇಸ್ಮಾಯಿಲ್ ಅಲಿ, ಸುಭಿರ್ ಮಲ್ಲಿಕ್ ಬಂಧಿತ ನಕಲಿ ಪೊಲೀಸರು. ಮೃತ ಹೆಡ್ ಕಾನ್ಸ್‌ಟೇಬಲ್ ಒಬ್ಬರ ಐಡಿ ಕಾರ್ಡ್ ಬಳಸಿ ವಂಚನೆ ಮಾಡುತ್ತಿದ್ದ ಆರೋಪಿಗಳು ಟ್ರಾಫಿಕ್ ಫೈನ್ ಆ್ಯಪ್, ಸಾರಿಗೆ ಇಲಾಖೆ ವೆಬ್ ಸೈಟ್ ಗಳಿಂದ ಸವಾರರ ಮಾಹಿತಿ ಪಡೆದು ವಂಚನೆ ಮಾಡುತ್ತಿದ್ದರು. ಬಳಿಕ ತಾವು ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಎಂದು ಸವಾರರಿಗೆ ನಕಲಿ ಐಡಿ ಕಾರ್ಡ್ ಕಳಿಸಿ ದಂಡ ವಸೂಲಿ ಮಾಡುತ್ತಿದ್ದರು. ಯುಪಿಐ ಐಡಿ ಕಳಿಸಿ ಆನ್‌ಲೈನ್ ಮೂಲಕವೇ ದಂಡ ಕಟ್ಟಿಸಿ ಕೊಂಡಿದಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ಮೃತ ಹೆಡ್ ಕಾನ್ಸ್‌ಟೇಬಲ್ ಮಗಳು ದೂರು ನೀಡಿದ್ದು, ಈ ಬಗ್ಗೆ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ದೂರಿನ ಅನ್ವಯ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

Read More

ಬೆಂಗಳೂರು : ಮುಂಗಾರು ಪೂರ್ವ ಮಳೆ ಅಬ್ಬರದ ನಡುವೆ ಇದೀಗ ಅರಬ್ಬಿ ಸಮುದ್ರದಲ್ಲಿ ಚಂಡಮಾರುತವೇಳುವ ಸಾಧ್ಯತೆ ಇದ್ದು ಮೇ 26ರ ಮಧ್ಯಾಹ್ನದೊಳಗೆ ಅದು ಕರ್ನಾಟಕ ರಾಜ್ಯವನ್ನು ಪ್ರವೇಶಿಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ಪ್ರಕೋಪ ನಿರ್ವಹಣಾ ಕೇಂದ್ರ (ಕೆಎಸ್ಎನ್ ಡಿಎಂಸಿ) ಹೇಳಿದೆ. ಈ ಕುರಿತಂತೆ ಟ್ವೀಟ್ ಮಾಡಿರುವ ಕೆಎಸ್ಎನ್ ಡಿಎಂಸಿ, “ಕರ್ನಾಟಕ, ಗೋವಾ, ಕರಾವಳಿಯ ಸಮೀಪದಲ್ಲಿ ಚಂಡಮಾರುತ ಚಲಾವಣೆಯಾಗುವ ಸಾಧ್ಯತೆಯಿದ್ದು ಮುಂದಿನ 48 ಗಂಟೆಗಳಲ್ಲಿ ಗೋವಾ ಮತ್ತು ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ’’ ಎಂದು ತಿಳಿಸಿದೆ. ಚಂಡಮಾರುತದ ಪರಿಚಲನೆಯು ದಕ್ಷಿಣ ಕೇರಳದ ಮೇಲೆ ಕೆಳ ಮತ್ತು ಮಧ್ಯಮ ಉಷ್ಣವಲಯದ ಮಟ್ಟದಲ್ಲಿದೆ. ಅದರ ಪ್ರಭಾವದ ಅಡಿಯಲ್ಲಿ ಮುಂದಿನ 5 ದಿನಗಳಲ್ಲಿ (ಮೇ 24ರಿಂದ 28ರವರೆಗೆ) ಗುಡುಗು, ಮಿಂಚು ಮತ್ತು ಬಿರುಗಾಳಿಯು ಗಂಟೆಗೆ 30ರಿಂದ 40 ಕಿ.ಮೀ.ವೇಗದಲ್ಲಿ ಸಾಗುತ್ತಿದೆ. ಅದರ ಪರಿಣಾಮವಾಗಿ, ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಕೇಂದ್ರವು ಪ್ರಕಟಿಸಿದೆ. ಈಗಾಗಲೇ ಮೀನುಗಾರರಿಗೆ…

Read More

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ಕೇಂದ್ರ ಸರ್ಕಾರವು ಆಗಸ್ಟ್ 2019ರಲ್ಲಿ ಆರ್ಟಿಕಲ್ 370 ಅನ್ನು ರದ್ದುಗೊಳಿಸಿತ್ತು. ಈ ನಿರ್ಧಾರವನ್ನು ಎತ್ತಿಹಿಡಿಯುವ ಡಿಸೆಂಬರ್ 2023ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಈ ಸಂಬಂಧ ತನ್ನ ಚೇಂಬರ್‌ನಲ್ಲಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠವು ಅರ್ಜಿಯನ್ನು ವಜಾಗೊಳಿಸಿದೆ. ಮರುಪರಿಶೀಲನಾ ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ದಾಖಲೆಯಲ್ಲಿ ಯಾವುದೇ ದೋಷ ಕಂಡುಬರದ ಹಿನ್ನೆಲೆ ಸುಪ್ರೀಂ ಕೋರ್ಟ್ ನಿಯಮಗಳು 2013ರ ಆದೇಶ XLVII ನಿಯಮ 1ರ ಅಡಿಯಲ್ಲಿ ಪರಿಶೀಲನೆಗೆ ಅಗತ್ಯವಿಲ್ಲ ಎಂದು ಹೇಳಿ, ಅರ್ಜಿಗಳನ್ನು ವಜಾಗೊಳಿಸಿದೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಅಂತಿಮವಾಗಿ ಈ ಪ್ರದೇಶಕ್ಕೆ ರಾಜ್ಯತ್ವವನ್ನು ಪುನಃ ಸ್ಥಾಪಿಸಲಾಗುವುದು ಎಂದು ನೀಡಿದ ಭರವಸೆಯನ್ನು ದಾಖಲಿಸಿದ ಸುಪ್ರೀಂ ಕೋರ್ಟ್ ಕಳೆದ ಡಿಸೆಂಬರ್‌ನಲ್ಲಿ ಆರ್ಟಿಕಲ್ 370 ಅನ್ನು ರದ್ದು…

Read More

ಮಂಗಳೂರು: ಗಡಿ ಭಾಗದ ಕಾಸರಗೋಡು ಮೊಗ್ರಾಲ್‌ ಪುತ್ತೂರು ಪೇಟೆಯ ಮಸೀದಿ ಪರಿಸರದ ಫೈಝಲ್ ಮಂಜಿಲ್‌ನ ಇಬ್ರಾಹಿಂ ಅವರ ಮನೆಯಿಂದ ನಡೆದ ಕಳವು ಪ್ರಕರಣಕ್ಕೆ ದೊಡ್ಡ ತಿರುವು ಲಭಿಸಿದೆ. ಕಳವುಗೈಯ್ಯಲಾಗಿದೆ ಎಂದು ಹೇಳಲಾದ 18.63 ಲಕ್ಷ ರೂ. ಮೌಲ್ಯದ ಚಿನ್ನದ ಒಡವೆಗಳು ಮನೆಯೊಳಗೇ ಭದ್ರವಾಗಿ ಪತ್ತೆಯಾಗಿವೆ. ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಮನೆಯೊಳಗಿದ್ದ ಎಲ್ಲ ಕವಾಟುಗಳನ್ನು ಒಡೆದು ಅದರೊಳಗಿದ್ದ ಸಾಮಗ್ರಿಗಳನ್ನೆಲ್ಲವನ್ನೂ ಹೊರಕ್ಕೆ ಎಸೆದು ಚೆಲ್ಲಾಪಿಲ್ಲಿಗೊಳಿಸಿದ್ದರು. ಆ ಬಗ್ಗೆ ನೀಡಲಾದ ದೂರಿನಂತೆ ಕಾಸರಗೋಡು ಪೊಲೀಸರು ಹಾಗು ಬೆರಳ ಗುರುತು ತಜ್ಞರು ಮ ಚೆಲ್ಲಾಪಿಲ್ಲಿಗೊಳಿಸಿದ ಸಾಮಗ್ರಿಗಳನ್ನು ಪರಿಶೀಲಿಸಿದಾಗ ಕವಾಟುಗಳಿಂದ ಹೊರಕ್ಕೆ ಎಸೆಯಲ್ಪಟ್ಟ ಸಾಮಗ್ರಿಗಳ ಅಡಿ ಭಾಗದಲ್ಲಿ ಕಳವಾಗಿದೆ ಎನ್ನಲಾದ ಚಿನ್ನದ ಒಡವೆ ಪತ್ತೆಯಾಯಿತು. ಚಿನ್ನದ ಒಡವೆಗಳು ಪೆಟ್ಟಿಗೆಯಲ್ಲಿರಿಸಲಾಗಿತ್ತು. ಚಿನ್ನದ ಒಡವೆ ಲಭಿಸಿದರೂ, ಮನೆ ಬಾಗಿಲು ಮುರಿದು ಅಕ್ರಮವಾಗಿ ಒಳಪ್ರವೇಶಿಸಿ ಕಳವಿಗೆ ಯತ್ನಿಸಿದ ಪ್ರಕರಣದ ತನಿಖೆ ನಡೆಸಲಾಗುವುದೆಂದು ಪೊಲೀಸರು ತಿಳಿಸಿದ್ದಾರೆ.

Read More

ಉಡುಪಿ: ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಸಾರಿರುವ ಮಾಜಿ ಶಾಸಕರಾದ ರಘುಪತಿ ಭಟ್‌ ಅವರನ್ನು ಪಕ್ಷದಿಂದ ಕೂಡಲೇ ಉಚ್ಚಾಟಿಸುವಂತೆ ಜಿಲ್ಲಾ ಬಿಜೆಪಿ ರಾಜ್ಯ ಸಮಿತಿಗೆ ಶಿಫಾರಸು ಮಾಡಿದೆ. ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ಅವರು ಬಿಜೆಪಿ ಕಾರ್ಯಕರ್ತರ ಅಭ್ಯರ್ಥಿಯಂತೆ ಬಿಂಬಿಸಿಕೊಳ್ಳುತ್ತಿರುವುದರಿಂದ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ. ಮತದಾರರಲ್ಲೂ ಗೊಂದಲ ಸೃಷ್ಟಿಸುವುದು ಸರಿಯಲ್ಲ. ಹಾಗಾಗಿ ಅವರನ್ನು ಉಚ್ಛಾಟಿಸುವಂತೆ ಶಿಫಾರಸು ಮಾಡಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್‌ ಕುಮಾರ್‌ ತಿಳಿಸಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಪಕ್ಷಕ್ಕೆ ಮುಜುಗರ ಉಂಟು ಮಾಡುವ ಯಾವುದೇ ಪದಾಧಿಕಾರಿಗಳು ಅಥವಾ ಕಾರ್ಯಕರ್ತರ ವರ್ತನೆಯನ್ನು ಸಹಿಸಲಾಗದು. ಪಕ್ಷದ ಸಿದ್ಧಾಂತದಡಿ ಎಲ್ಲರೂ ಸಮಾನರಾಗಿದ್ದು, ಪಕ್ಷ ವಿರೋಧಿ ಚಟುವಟಿಕೆಗಳ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರಗಿಸುವುದಾಗಿ ತಿಳಿಸಿದ್ದಾರೆ.

Read More

ಬೆಳ್ತಂಗಡಿ: ಪೊಲೀಸರು ನೋಟಿಸ್‌ ನೀಡಿದ ವಿಚಾರದಲ್ಲಿ ಶಾಸಕ ಹರೀಶ್‌ ಪೂಂಜ ರಾತ್ರಿ 9.30ಕ್ಕೆ ಠಾಣೆಗೆ ಹಾಜ ರಾದರು. ಬಳಿಕ ಬೆಳ್ತಂಗಡಿ ಠಾಣಾ 58/2024, ಕಲಂ: 143, 147, 341, 504, 506 ಜತೆಗೆ 149 ಐಪಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್‌ ಪೂಂಜರನ್ನು ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಸಿ, ಸ್ಟೇಶನ್‌ ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿರುತ್ತದೆ ಎಂದು ಠಾಣೆಯ ಮೂಲಗಳಿಂದ ತಿಳಿದು ಬಂದಿದೆ. ವಿಚಾರಣೆ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ ಸುನಿಲ್‌ ಕುಮಾರ್‌, ಶಾಸಕರ ಬಂಧನ ಯತ್ನ ಅತ್ಯಂತ ಖಂಡನೀಯ. ಪಾಕಿಸ್ಥಾನಕ್ಕೆ ಜಿಂದಾಬಾದ್‌ ಹಾಕಿದವನಿಗೆ ನೋಟಿಸ್‌ ನೀಡಲು 4 ದಿನ ತೆಗೆದುಕೊಂಡವರು ಓರ್ವ ಜನಪ್ರತಿನಿಧಿಯ ಬಂಧನ ಹುನ್ನಾರ ಕಂಡಾಗ ರಾಜ್ಯ ಯಾವ ಪ್ರಜಾಪ್ರಭುತ್ವದಲ್ಲಿದೆ ಎಂಬ ಪ್ರಶ್ನೆ ಮೂಡುತ್ತದೆ. ನಾವೆಲ್ಲ ಶಾಸಕರು ಈ ಪ್ರಕರಣ ತಾರ್ಕಿಕ ಹಂತ ಕಾಣುವವರೆಗೆ ನಾವು ಬಿಡುವುದಿಲ್ಲ. ನಾಳೆ ನಾಡಿದ್ದರಲ್ಲಿ ಗೃಹಸಚಿವರನ್ನು ಭೇಟಿಯಾಗಿ ಉತ್ತರ ಕೇಳುತ್ತೇವೆ.ರಾಜಕೀಯ ಹುನ್ನಾರವಾದರೆ ವಿಧಾನಸಭೆ ನಡೆಸಲು ಬಿಡುವುದಿಲ್ಲ. ಶಾಸಕರು ಸೌಜನ್ಯದಿಂದ ವರ್ತಿಸಿದರೂ ಪೊಲೀಸರು ಗೂಂಡಾ…

Read More

ಮಂಗಳೂರು: ಮನೆಯ ಬೀಗ ಮುರಿದು ಚಿನ್ನಾಭರಣ ಕಳವು ಮಾಡಿರುವ ಘಟನೆ ನಗರದ ಹೊರವಲಯದ ಕುಲಶೇಖರ ಜ್ಯೋತಿ ನಗರದಲ್ಲಿ ನಡೆದಿದೆ. ಮನೆಯವರು ಮೇ 17ರಂದು ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ತೆರಳಿದ್ದರು. ಮೇ 20ರಂದು ಬಂದು ನೋಡಿದಾಗ ಎದುರು ಬಾಗಿಲಿನ ಬೀಗ ಮುರಿದಿತ್ತು. ಒಳಗೆ ಹೋದಾಗ ಯಾರೋ ಕಳ್ಳರು ಕಪಾಟಿನ ಬಾಗಿಲನ್ನು ಮುರಿದು ಅದರೊಳಗಿದ್ದ 1.3 ಗ್ರಾಂ ತೂಕದ ಚಿನ್ನದ ಒಂದು ಪೆಂಡೆಂಟ್, 5 ಗ್ರಾಂ ತೂಕದ ಚಿನ್ನದ ಬ್ರಾಸ್ಲೆಟ್, 3 ಸಣ್ಣ ಉಂಗುರಗಳು, ಬೆಳ್ಳಿಯ ಪೆಂಡೆಂಟ್, ಕಾಲುಗೆಜ್ಜೆ, 3 ಬೆಳ್ಳಿಯ ಉಂಗುರಗಳು, ವಾಚ್ ಸೇರಿದಂತೆ ಅಂದಾಜು 66,000 ರೂ. ಮೌಲ್ಯದ ಚಿನ್ನಾಭರಣಗಳು ಹಾಗೂ ಅಂದಾಜು 1,000 ರೂ. ಮೌಲ್ಯದ ಬೆಳ್ಳಿಯ ಆಭರಣಗಳು ಕಳವು ಮಾಡಿರುವುದು ಗೊತ್ತಾಗಿದೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು : ಇಡೀ ದೇಶವನ್ನೇ ಬೆಚ್ಚಿಬಿಳಿಸಿದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತಕ್ಕೆ 14 ವರ್ಷ ಸಂದಿದೆ. ಈ ದುರಂತದಲ್ಲಿ ಮಡಿದವರಿಗೆ ದಕ್ಷಿಣಕನ್ನಡ ಜಿಲ್ಲಾಡಳಿತ ಶೃದ್ದಾಂಜಲಿ ಸಲ್ಲಿಸಿತು. ವಿಮಾನ ಅಪಘಾತದಲ್ಲಿ ಮೃತಪಟ್ಟವರ ಪೈಕಿ ಗುರುತು ಹಿಡಿಯಲಾಗದ 12 ಮಂದಿಯ ಮೃತದೇಹಗಳನ್ನು ಕುಳೂರಿನ ನದಿ ಕಿನಾರೆಯಲ್ಲಿ ಸಮಾಧಿ ಮಾಡಲಾಗಿತ್ತು. ಅದೇ ಜಾಗದಲ್ಲಿ ದುರಂತದಲ್ಲಿ ಮಡಿದವರ ನೆನಪಿಗಾಗಿ ಪಾರ್ಕ್ ನಿರ್ಮಾಣ ಮಾಡಲಾಗಿದ್ದು. ವಿಮಾನ ದುರಂತದಲ್ಲಿ ಮಡಿದ 158 ಮಂದಿಯ ನೆನಪಿಗಾಗಿ ಕೂಳೂರು ಸೇತುವೆಯಿಂದ ತಣ್ಣೀರು ಬಾವಿ ರಸ್ತೆಗೆ ತಿರುಗುವಲ್ಲಿ ನಿರ್ಮಿಸಲಾದ ಪಾರ್ಕ್‌ನಲ್ಲಿ ಪ್ರತಿ ವರ್ಷ ಜಿಲ್ಲಾಡಳಿತದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಲಾಗುತ್ತದೆ. ಇಂದು ಜಿಲ್ಲಾಧಿಕಾರಿ ಹಾಗೂ ವಿಮಾನ ದುರಂತದಲ್ಲಿ ಮಡಿದವರ ಕುಟುಂಬದವರು ಶೃದ್ದಾಂಜಲಿ ಸಲ್ಲಿಸಿದರು. ಮೇ 22ರಂದು ಬೆಳಗ್ಗೆ 6:20ಕ್ಕೆ ದುಬೈನಿಂದ ಆಗಮಿಸಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ಹಂತದಲ್ಲಿ ಅಪಘಾತಕ್ಕೀಡಾಗಿ ವಿಮಾನದಲ್ಲಿದ್ದ 166 ಮಂದಿಯ ಪೈಕಿ 158 ಮಂದಿ ಮೃತಪಟ್ಟಿದ್ದರು.…

Read More