ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ತಿದ್ದುಪಡಿ ಮಾಡಿ ಗಾಂಧೀಜಿ ಹೆಸರು ಅಳಿಸುತ್ತಿರುವುದು ಕೇಂದ್ರ ಸರ್ಕಾರದ ಘೋರ ಅಪರಾಧವನ್ನು ಖಂಡಿಸುವುದಾಗಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಯುಪಿಎ ಆಡಳಿತಾವಧಿಯಲ್ಲಿ ನೀಡಲಾದ ಮಹತ್ತರ ಯೋಜನೆ ಇದಾಗಿದ್ದು, ಜಗತ್ತು ಈ ಕಾರ್ಯಕ್ರಮವನ್ನು ಮೆಚ್ಚಿದೆ. ಈ ಯೋಜನೆ ಮಂಡಿಸಲಾದ ಸಂದರ್ಭ ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಭ್ರಷ್ಟಾಚಾರ ಕಾರ್ಯಕ್ರಮ ಎಂದು ಹೇಳಿದ್ದವು. ಮಹಾತ್ಮಗಾಂಧಿ ಹೆಸರಿನಲ್ಲಿ ಜಾರಿಗೆ ಬಂದಿದ್ದ ಈ ಯೋಜನೆ ಸಮಾಜದ ಬಡ, ರೈತ, ಕಾರ್ಮಿಕ ವರ್ಗಕ್ಕೆ ಅನುಕೂಲವಾಗಿದೆ. ಇದೀಗ ಮಹಾತ್ಮ ಗಾಂಧಿ ಹೆಸರನ್ನು ಕೈಬಿಡುವ ಮೂಲಕ ಅವಮಾನ ಮಾಡಲಾಗಿದೆ. ಈಗಾಗಲೇ ಮಹಾತ್ಮಗಾಂಧಿ ವಿರುದ್ಧ ಸಂಘ ಪರಿವಾರದ ಶಕ್ತಿಗಳಿಂದ ನಡೆಯುತ್ತಿರುವ ಮಹಾತ್ಮಗಾಂಧಿ ವಿರುದ್ಧದ ಅವಹೇಳನದ ಭಾಗ ಇದಾಗಿದೆ ಎಂದು ಅವರು ಆರೋಪಿಸಿದರು. ಹಿಂದೆ ಈ ಯೋಜನೆಯಡಿ ವೇತನವನ್ನು ಕೇಂದ್ರ ಸರಕಾರದಿಂದ ಪಾವತಿಸಲಾಗುತ್ತಿತ್ತು. ಈಗ ಕೇಂದ್ರ ಶೇ.60, ರಾಜ್ಯ ಶೇ.40…
Author: main-admin
ವಂಚನೆ ಪ್ರಕರಣವೊಂದರಲ್ಲಿ ಸುಮಾರು 4 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಡೂರು ಗ್ರಾಮದ ನಿವಾಸಿ ನಾಗೇಶ್ ಬಂಧಿತ ಆರೋಪಿ. ಸುಳ್ಯ ಪೊಲೀಸ್ ಠಾಣಾ ಅ.ಕ್ರ 47/2022, ಕಲಂ: 406, 420 ಐಪಿಡಿ ಅಡಿಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಸುಳ್ಯ ಪೊಲೀಸ್ ಠಾಣಾ ಹೆಡ್ ಕಾನ್ಸ್ಟೇಬಲ್ ರಮೇಶ್ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಶ್ರೀಶೈಲ ಅವರು ಡಿ. 18ರಂದು ಬೆಂಗಳೂರಿನ ಚಿಕ್ಕಬಿದರಿಕಲ್ಲು ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಮಂಗಳೂರು: ಇನ್‌ಸ್ಟಾಗ್ರಾಂ ಪುಟವೊಂದರಲ್ಲಿ ಪೊಲೀಸ್ ಇಲಾಖೆಯ ವಿರುದ್ಧ ಸುಳ್ಳು ಆರೋಪ ಹೊರಿಸಿ, ಪ್ರಚೋದನಕಾರಿ ಸಂದೇಶ ಹರಿಬಿಟ್ಟಿದ್ದ ಆರೋಪಿಯನ್ನು ಮಂಗಳೂರು ನಗರ ಸಿ.ಇ.ಎನ್ (CEN) ಪೊಲೀಸರು ಬಂಧಿಸಿದ್ದಾರೆ. ಕಾಟಿಪಳ್ಳ ನಿವಾಸಿ ಅಭಿಷೇಕ್ ಎಂ. (23) ಬಂಧಿತ ಆರೋಪಿ. ಈತ ಈ ಹಿಂದೆ ಕೊಲೆ, ಕೊಲೆಯತ್ನ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಳೆ ಆರೋಪಿಯಾಗಿದ್ದಾನೆ. ಬಂಧಿತ ಆರೋಪಿ ಅಭಿಷೇಕ್ ‘mr_a_titude’ ಎಂಬ ಹೆಸರಿನ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಬಜ್ಪೆಯ ಹೋಟೆಲ್ ನಿಸರ್ಗದ ಫೋಟೋವನ್ನು ಹಂಚಿಕೊಂಡಿದ್ದ. ಅದರೊಂದಿಗೆ, “ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳಿಗೆ ಪೊಲೀಸರು ರಾಜಾತಿಥ್ಯ ನೀಡುತ್ತಿದ್ದಾರೆ. ಪ್ರತಿದಿನ ನಿಸರ್ಗ ಹೋಟೆಲ್‌ನಿಂದ ಬೀಫ್ ಊಟ ತರಿಸಿ ಕೊಡುತ್ತಿದ್ದಾರೆ. ರಕ್ಷಣೆ ಮಾಡಬೇಕಾದ ಇಲಾಖೆಯೇ ಅಪರಾಧಿಗಳ ಜೊತೆ ಕೈಜೋಡಿಸಿದೆ” ಎಂಬ ಆಧಾರರಹಿತ ಮತ್ತು ಪ್ರಚೋದನಕಾರಿ ಬರಹವನ್ನು ಪೋಸ್ಟ್ ಮಾಡಿದ್ದ. ಪೊಲೀಸ್ ಇಲಾಖೆಯ ಘನತೆಗೆ ಕುಂದು ತರುವ ಮತ್ತು ಸಾರ್ವಜನಿಕರಲ್ಲಿ ತಪ್ಪು ಸಂದೇಶ ರವಾನಿಸುವ ಈ ಕೃತ್ಯದ ವಿರುದ್ಧ ಮೇ 8ರಂದು ಬಜ್ಪೆ ಪೊಲೀಸ್…
ಬೆಂಗಳೂರಲ್ಲಿ ಎಟಿಎಂಗೆ ಹಣ ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿ ಹಾಡಹಗಲೇ ದರೋಡೆ ಸೇರಿ, ಕೋರಮಂಗಲದ ಕಾಲ್ಸೆಂಟರ್ನ ಉದ್ಯೋಗಿಗಳ ಕಿಡ್ನ್ಯಾಪ್ ಕೇಸ್ಗಳಲ್ಲಿಯೂ ಪೊಲೀಸ್ ಸಿಬ್ಬಂದಿಯೇ ಆರೋಪಿಗಳಾಗಿದ್ದರು. ಇದೀಗ ಕರ್ನಾಟಕದಲ್ಲಿ ಕಳೆದ 3 ವರ್ಷಗಳಲ್ಲಿ 88 ಪೊಲೀಸರು ದರೋಡೆ, ಅಪಹರಣ ಸೇರಿ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವುದು ಬಹಿರಂಗವಾಗಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ನ ಜೆಡಿಎಸ್ ಸದಸ್ಯ ಶರವಣ ಅವರ ಪ್ರಶ್ನೆಗೆ ಉತ್ತರಿಸಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್, ರಾಜ್ಯದಲ್ಲಿ ಕಳೆದ 3 ವರ್ಷಗಳ ಅವಧಿಯಲ್ಲಿ ಒಟ್ಟು 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂದು ಅಂಕಿ-ಅಂಶ ಸಮೇತ ಮಾಹಿತಿ ನೀಡಿದ್ದಾರೆ. ಗೃಹಸಚಿವರ ಉತ್ತರದ ಬೆನ್ನಲ್ಲೇ ಈ ಬಗ್ಗೆ ಶರವಣ ಅವರು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಪೊಲೀಸರೇ ದರೋಡೆ, ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದಾರೆ. ರಕ್ಷಕರೇ ಭಕ್ಷಕರಾಗುತ್ತಿರುವ ಕಾರಣ ಪೊಲೀಸರ ಮೇಲೆ ಜನ ವಿಶ್ವಾಸವನ್ನೇ ಕಳೆದುಕೊಳ್ಳುತ್ತಿದ್ದಾರೆ ಎಂದಿದ್ದಾರೆ. ಜೊತೆಗೆ ಅಪರಾಧ ಪ್ರಕರಣದಲ್ಲಿ ಭಾಗಿಯಾದ ಪೊಲೀಸರನ್ನು ಅಮಾನತು ಮಾಡುವುದಲ್ಲ, ಕೆಲಸದಿಂದಲೇ ವಜಾಗೊಳಿಸಬೇಕು ಎಂದು…
ಪುತ್ತೂರು: ಸೌಜನ್ಯಾ ಪರ ಹೋರಾಟಗಾರ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಎರಡನೇ ಬಾರಿ ಪುತ್ತೂರು ಸಹಾಯಕ್ತ ಆಯುಕ್ತೆ ಆದೇಶ ಹೊರಡಿಸಿದ್ದಾರೆ. ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್ ಡಿ.17 ರಂದು ಈ ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿಯನ್ನು ಈ ಹಿಂದೆ ಗಡಿಪಾರು ಮಾಡಿ ಪುತ್ತೂರು ಎ.ಸಿ. ಆದೇಶ ಹೊರಡಿಸಿದ್ದರು. ಇದನ್ನು ಮರು ಪರಿಶೀಲಿಸಲು ಹೈಕೋರ್ಟ್ ಸೂಚಿಸಿತ್ತು. ಹೈಕೋರ್ಟ್ ಆದೇಶದಂತೆ ಮರು ಪರಿಶೀಲನೆ ಮಾಡಿ ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಗಡಿಪಾರು ಆದೇಶದ ಪ್ರತಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದ ಹಿನೆಲೆಯಲ್ಲಿ ಡಿ.18ರಂದು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಬೆಳ್ತಂಗಡಿ ಪೊಲೀಸರು ತೆರಳಿ ನೋಟಿಸ್ ಜಾರಿ ಮಾಡಲು ಮುಂದಾಗಿದ್ದಾರೆ. ಆದರೆ ತಿಮರೋಡಿ ಈ ಸಂದರ್ಭ ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.
ಧರ್ಮಸ್ಥಳ ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡಿದ್ದಾನೆ. ಜಾಮೀನು ಸಿಕ್ಕಿದ 24 ದಿನಗಳ ಬಳಿಕ ಚಿನ್ನಯ್ಯನಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ನವೆಂಬರ್ 24ರಂದು ಬೆಳ್ತಂಗಡಿ ನ್ಯಾಯಾಲಯ 12 ಷರತ್ತುಗಳನ್ನು ವಿಧಿಸಿ ಒಂದು ಲಕ್ಷ ಬಾಂಡ್ ಇಬ್ಬರು ಸ್ಥಳೀಯ ಶ್ಯೂರಿಟಿ ಪಡೆಯಬೇಕು ಎಂದು ಜಾಮೀನು ಮಂಜೂರು ಮಾಡಿತ್ತು. ಆದರೆ ಜಾಮೀನು ಮಂಜೂರಾಗಿ 24 ದಿನ ಕಳೆದರೂ ಜಾಮೀನು ನೀಡಲು ಯಾರೂ ಮುಂದೆ ಬಾರದ ಕಾರಣ ಬಿಡುಗಡೆ ಭಾಗ್ಯ ಸಿಕ್ಕಿರಲಿಲ್ಲ. ಇಂದು ಬೆಳಗ್ಗೆ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹಕ್ಕೆ ಇನ್ನೋವಾ ಕಾರಿನಲ್ಲಿ ಚಿನ್ನಯ್ಯನ ಪತ್ನಿ ಮಲ್ಲಿಕಾ ಸೇರಿದಂತೆ ಐದು ಜನರು ಆಗಮಿಸಿದ್ದರು. ಶಿವಮೊಗ್ಗ ಕಾರಾಗೃಹದಲ್ಲಿ ಒಂದು ಗಂಟೆಗೂ ಅಧಿಕ ಕಾಲ ಬಿಡುಗಡೆ ಪ್ರಕ್ರಿಯೆ ನಡೆಯಿತು. ಬೆಳಗ್ಗೆ 8.30ರ ವೇಳೆಗೆ ಚಿನ್ನಯ್ಯನನ್ನು ಶಿವಮೊಗ್ಗ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ.
ಮಂಗಳೂರು: ಪಾದಚಾರಿಗಳಿಗೆ ಕಾರು ಡಿಕ್ಕಿ ಹೊಡೆದ ಕಾರ್‌ನ ಚಾಲಕನಿಗೆ ನ್ಯಾಯಾಲಯ ದಂಡ ವಿಧಿಸಿದೆ. ಆರೋಪಿ ಚಾಲಕ ಎಂ.ಶ್ರೀಕಷ್ಣ 2023ರ ಡಿ.24ರಂದು ಪಡೀಲ್ ಕಡೆಯಿಂದ ಬಿಕರ್ಣಕಟ್ಟೆ ಕಡೆಗೆ ಹಾದು ಹೋಗಿರುವ ರಸ್ತೆಯಲ್ಲಿ ಕಾರನ್ನು ಚಲಾಯಿಸಿಕೊಂಡು ಹೋಗಿ ಇಬ್ಬರು ಪಾದಚಾರಿಗಳಿಗೆ ಢಿಕ್ಕಿ ಹೊಡೆಯಲು ಕಾರಣರಾಗಿರುವುದಾಗಿ ಆರೋಪಿಸಲಾಗಿತ್ತು. ಆರೋಪಿ ಚಾಲಕ ಎಂ.ಶ್ರೀಕಷ್ಣ ಸ್ಕೂಟರೊಂದನ್ನು ಎಡಬದಿಯಿಂದ ಓವರ್ ಟೇಕ್ ಮಾಡಿ ರಸ್ತೆಯ ಎಡಬದಿಗೆ ಹೋಗುವ ಭರದಲ್ಲಿ ನಿರ್ಲಕ್ಷ್ಯತನದಿಂದ ರಸ್ತೆಯ ತೀರಾ ಎಡಬದಿಗೆ ಚಲಾಯಿಸಿಕೊಂಡು ಹೋದ ಪರಿಣಾಮ ಇಬ್ಬರು ಪಾದಚಾರಿಗಳಿಗೆ ಢಿಕ್ಕಿಯಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತ ಸಂದರ್ಭದಲ್ಲಿ ಕಾರು ಚಾಲಕನ ಚಾಲನಾ ಅನುಜ್ಞಾಪತ್ರದ ಅವಧಿ ಮುಕ್ತಾಯಗೊಂಡಿತ್ತು. ಅಪಘಾತ ಪಡಿಸಿದ ಕಾರಿನ ವಾಯುಮಾಲಿನ್ಯ ಪ್ರಮಾಣ ಪತ್ರದ ಅವಯು ಊರ್ಜಿತದಲ್ಲಿ ಇರಲಿಲ್ಲ. ವಿಚಾರಣೆ ನಡೆಸಿದ ಮಂಗಳೂರು ಜೆಎಂಎಫ್ ಸಿ 8ನೇ ನ್ಯಾಯಾಲಯದ ನ್ಯಾಯಾಧೀಶ ಫವಾಜ್ ಪಿ.ಎ ಅವರು ಡಿ.15ರಂದು ಆರೋಪಿಗೆ 8,500 ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ.ಈ ಘಟನೆಗೆ ಸಂಬಂಧಿಸಿ ಸಂಚಾರ ಪೂರ್ವ ಪೊಲೀಸ್ ಠಾಣೆಯ ಅಂದಿನ ಪೊಲೀಸ್ ಉಪನಿರೀಕ್ಷಕ…
ಮಂಗಳೂರು : ಮಂಗಳೂರಿನ ಜಿಲ್ಲಾ ಕಾರಾಗೃಹದೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದಾಗ ಜೈಲಿನ ಕೊಠಡಿಯೊಳಗೆ 4 ಮೊಬೈಲ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಾಗಹ ಅಧೀಕ್ಷಕ ಶರಣಬಸಪ್ಪ ಸೋಮವಾರ ಅನಿರೀಕ್ಷಿತ ತಪಾಸಣೆಗೆ ಹೋದಾಗ ವಿಚಾರಣಾಧೀನ ಕೈದಿಗಳು ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಅದೇ ದಿನ ಮತ್ತೆ ಅನಿರೀಕ್ಷಿತ ತಪಾಸಣೆ ಮಾಡಲಾಗಿತ್ತು. ಸಂಜೆ ಕೈದಿಗಳು ಎರಡು ವಿಭಾಗಗಳ ಕಬ್ಬಿಣದ ಗೇಟ್‌ಗಳನ್ನು ಅಲ್ಲಾಡಿಸುತ್ತಾ ಮುರಿಯುವ ರೀತಿಯಲ್ಲಿ ಜೋರಾಗಿ ಕೂಗಾಡುತ್ತಾ ಗಲಾಟೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಕೂಡಲೇ ಮಂಗಳೂರು ನಗರ ಪೊಲೀಸರು, ವಿಶೇಷ ಕಾರ್ಯಪಡೆ ಹಾಗೂ ಠಾಣೆಯ ಅಧಿಕಾರಿ, ಸಿಬ್ಬಂದಿ ಕಾರಾಗಹದಲ್ಲಿನ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದರು. ಇದೇ ಸಮಯದಲ್ಲಿ ಪೊಲೀಸರು ತಪಾಸಣೆ ನಡೆಸಿದಾಗ 2 ಕೊಠಡಿಗಳಲ್ಲಿ ಗಲಾಟೆಗೆ ಸಂಬಂಸಿದಂತೆ ಪರಿಸ್ಥಿತಿ ನಿಯಂತ್ರಣಗೊಂಡ ಅನಂತರ ಸಿ.ಸಿ.ಟಿ.ವಿ ದಶ್ಯಾವಳಿಗಳನ್ನು ಪರಿಶೀಲಿಸಿದಾಗ ಗಲಾಟೆಯಲ್ಲಿ ‘ಎ’ ವಿಭಾಗದ ಮೊಯಿದ್ದಿನ್ ಫರಾದ್, ಸರ್ಫರಾಜ್, ಮೊಹಮ್ಮದ್ ಅಲ್ತಾಫ್, ಇಮ್ತಿಯಾಜ್, ಅಬ್ದುಲ್ ನೌಜೀದ್, ಮೊಹಮ್ಮದ್ ಸಾಯಿಲ್ ಅಕ್ರಂ ಮತ್ತು ಮಹಮ್ಮದ್…
ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಪ್ರಕರಣಗಳ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ . ತೋಟ ಪೈಸಲ್ ಮತ್ತು ಮೈಸೂರಿನ ವಿನಾಯಕ ನಗರದ ನಿತೀನ್ ಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳಿಂದ ಸುಮಾರು 1,20,000 ರೂ. ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಿಸಿದ 45 ಸಾವಿರ ರೂ. ಮೌಲ್ಯದ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡಿ.12ರಂದು ಮಂಗಳೂರಿನ ಯೆಯ್ಯಾಡಿಯ ಶ್ರೀ ಹರಿ ಕಾಂಪ್ಲೆಕ್ಸ್ ನ ಪಾರ್ಕಿಂಗ್ ಬಳಿ ನಿಲ್ಲಿಸಿದ್ದ ಬೈಕ್ ಕಳವು ಆಗಿರುವ ಬಗ್ಗೆ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ಕದ್ರಿ ಅಫರಾಧ ವಿಭಾಗದ ಸಿಬ್ಬಂದಿಗೆ ದೊರೆತ ಖಚಿತ ಮಾಹಿತಿಯಂತೆ ಡಿ.16ರಂದು ಪ್ರಕರಣದ ಪ್ರಮುಖ ಆರೋಪಿ ಪೈಸಲ್ ಅಲಿಯಾಸ್ ತೋಟ ಪೈಸಲ್ ಮತ್ತು ನಿತೀನ್ ಕುಮಾರ್ ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆರೋಪಿಗಳು ಡಿ.13ರಂದು ಭಟ್ಕಳ ಗ್ರಾಮಿಣ ಪೊಲೀಸ್ ಠಾಣಾ ಸರಹದ್ದಿನ ಗರ್ಡಿ ಹಿತ್ಲು ಬೆಳಕೆ ಎಂಬಲ್ಲಿ ವಯೋವೃದ್ಧೆ ಹೊನ್ನಮ್ಮ ಮಹಾದೇವ ನಾಯ್ಕ್…
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯವರು ಕೆಲವೊಂದು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಹೊಸ ವರ್ಷಾಚರಣೆ ಆಯೋಜಿಸುವ ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಹಾಗೂ ಇತರ ಸಂಸ್ಥೆಗಳು ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸಹಾಯ ಆಯುಕ್ತರ ಕಚೇರಿಯಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು. ಕಾರ್ಯಕ್ರಮವು ರಾತ್ರಿ 12.30ರ ಒಳಗೆ ಪೂರ್ಣಗೊಳ್ಳಬೇಕು. ಅದಕ್ಕಾಗಿ ಡಿ. 23ರಂದು ಸಂಜೆ 5 ಗಂಟೆಯ ಒಳಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು ಎಂದು ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಪೂರ್ವ ಅನುಮತಿ ಇಲ್ಲದ ಹೊಸ ವರ್ಷದ ಆಚರಣೆಗಳನ್ನು ಆಯೋಜಿಸಲು ಅನುಮತಿ ನೀಡಲಾಗುವುದಿಲ್ಲ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕೈಗೊಳ್ಳಲಾಗುತ್ತದೆ. ಹೊಸ ವರ್ಷದ ಕಾರ್ಯಕ್ರಮವು ರಾತ್ರಿ 12:30 ಒಳಗಾಗಿ ಪೂರ್ಣಗೊಳ್ಳಬೇಕು. ಈ ಸಮಯದ ಬಳಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಮತಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಧ್ವನಿಮುದ್ರಣ ವ್ಯವಸ್ಥೆಗಳು, ಲೌಡ್ ಸ್ಪೀಕರ್‌ಗಳನ್ನು ಬಳಸಲು ಸಂಬAಧಪಟ್ಟ ಪ್ರಾಧಿಕಾರದಿಂದ ಪೂರ್ವ ಅನುಮತಿಯನ್ನು ಪಡೆಯಬೇಕು. ಧ್ವನಿಯ ಮಟ್ಟವು ಶಬ್ದ…










