ಹಾಸನ: ಜನಸಾಮಾನ್ಯರು ಆನ್‌ಲೈನ್ ವಂಚಕರ ಬಲೆಗೆ ಬಿದ್ದು ಬ್ಯಾಂಕ್ ಖಾತೆಯಲ್ಲಿನ ಹಣ ಕಳೆದುಕೊಂಡು ಪೊಲೀಸರ ಮೊರೆ ಹೋಗುವುದನ್ನು ದಿನನಿತ್ಯ ಕೇಳುತ್ತೇವೆ. ಆದರೆ ಇಲ್ಲಿ ಖದೀಮರು ಡಿವೈಎಸ್‌ಪಿ ದರ್ಜೆಯ ಅಧಿಕಾರಿಯ ಖಾತೆಗೆ ಕನ್ನ ಹಾಕಿ 16 ಲಕ್ಷ ರೂ. ಎಗರಿಸಿದ್ದಾರೆ! ಹೌದು, ಹಾಸನ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ಬ್ಯಾಂಕ್ ಖಾತೆಗಳಿಂದ ಅಪರಿಚಿತ ಖದೀಮರು ತಮ್ಮ ಬ್ಯಾಂಕ್ ಖಾತೆಗಳಿಗೆ 15,98,761 ರೂ. ಹಣವನ್ನು ವರ್ಗಾವಣೆ ಮಾಡಿಕೊಂಡು ವಂಚನೆ ಮಾಡಿದ್ದಾರೆ. ಈ ಸಂಬಂಧ ಡಿವೈಎಸ್ಪಿ ಪಿ.ಕೆ.ಮುರಳೀಧರ್ ಅವರು ನಗರದ ಸಿಇಎನ್ ಠಾಣೆಗೆ ನಿನ್ನೆ ದೂರು ನೀಡಿದ್ದಾರೆ. ಅವರು, ಕೆನರಾಬ್ಯಾಂಕ್ ನ ಮಡಿಕೇರಿ ಮುಖ್ಯ ಶಾಖೆ ಹಾಗೂ ಭಾಗಮಂಡಲ ಶಾಖೆಯಲ್ಲಿ ಖಾತೆಗಳನ್ನು ಹೊಂದಿದ್ದಾರೆ. ಮೇ 20 ರಂದು ಮಧ್ಯಾಹ್ನ 1.30ಕ್ಕೆ ಅವರ ಮೊಬೈಲ್ ಗೆ ಬಂದ ಬ್ಯಾಂಕ್ ಎಸ್ಸೆಮ್ಮೆಸ್ ಗಳಿಂದ ಅವರ ಖಾತೆಯಿಂದ ಹಣ ವರ್ಗಾವಣೆಯಾಗಿರುವ ವಿಷಯ ಗೊತ್ತಾಗಿದೆ. ಬೆಳಗ್ಗೆ 10.28 ರಿಂದ ಮಧ್ಯಾಹ್ನ 12.56ರವರೆಗೆ 10 ವರ್ಗಾವಣೆಗಳ ಮೂಲಕ ಹಣ ಅಪರಿಚಿತ ವಂಚಕರ ಬೇರೆ…
Author: main-admin
ಮಂಗಳೂರು: ಭಾರೀ ಗಾತ್ರದ ಮರದ ಕೊಂಬೆ ಮುರಿದು ಬಿದ್ದು ಪಾರ್ಕ್ ಮಾಡಿರುವ ಎರಡು ಕಾರುಗಳು ಜಖಂಗೊಂಡ ಘಟನೆ ನಗರದ ಕರಂಗಲಪಾಡಿ ಬಳಿಯ ಕೋರ್ಟ್ ಸಂಪರ್ಕ ರಸ್ತೆಯ ಬಳಿ ನಡೆದಿದೆ. ಈ ಘಟನೆ ಮಂಗಳವಾರ ರಾತ್ರಿ 9.30ವೇಳೆಗೆ ನಡೆದಿದೆ. ಕರಂಗಲಪಾಡಿಯಿಂದ ಕೋರ್ಟ್ ಸಂಪರ್ಕ ರಸ್ತೆಯ ಬುಡದಲ್ಲಿಯೇ ಆಮ್ಲೇಟ್ ಅಂಗಡಿಯಿದ್ದು, ಈ ವೇಳೆ ಅಲ್ಲಿ ಹೆಚ್ಚಿನ ಗ್ರಾಹಕರೂ ಇದ್ದರು. ಅಲ್ಲಿಯೇ ಪಕ್ಕದಲ್ಲಿರುವ ಭಾರೀ ಗಾತ್ರದ ಆಲದ ಮರದ ಕೊಂಬೆ ಮುರಿದುಬಿದ್ದಿದೆ. ವಾಹನಗಳನ್ನು ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದು, ವಾಹನಗಳ ಒಳಗಡೆ ಯಾರೂ ಇರಲಿಲ್ಲ. ಆದ್ದರಿಂದ ಯಾವುದೇ ಸಾವು-ನೋವು ಸಂಭವಿಸಿಲ್ಲ. ಅಲ್ಲದೆ ಕೊಂಬೆ ಮುರಿದುಬೀಳುವ ವೇಳೆಗೆ ರಸ್ತೆಯಲ್ಲಿ ಯಾವುದೇ ವಾಹನಗಳು ಸಂಚರಿಸದ ಪರಿಣಾಮ ಭಾರೀ ಅನಾಹುತ ತಪ್ಪಿದಂತಾಗಿದೆ. ತಕ್ಷಣ ಸ್ಥಳಕ್ಕೆ ಹೊಯ್ಸಳ ವಾಹನ ದೌಡಾಯಿಸಿದೆ. ಅಲ್ಲದೆ ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರು ಸೇರಿ ಮರವನ್ನು ತೆರವುಗೊಳಿಸಿದ್ದಾರೆ. ಘಟನೆಯಿಂದ ಎರಡು ಕಾರುಗಳು ಜಖಂಗೊಂಡಿದೆ.
ಬೆಂಗಳೂರು: ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರು ಸದ್ಯಕ್ಕೆ ಬೀಸುವ ದೊಣ್ಣೆಯಿಂದ ಪಾರಾಗಲಿದ್ದಾರೆ. ಹೆಚ್‌ಎಸ್‌ಆರ್‌ಪಿ ಅಳವಡಿಸದವರ ವಿರುದ್ಧ ಜೂನ್ 12ರ ವರೆಗೂ ಯಾವುದೇ ಕಠಿಣ ಕ್ರಮ ಕೈಗೊಳ್ಳುವುದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಂಗಳವಾರ ತಿಳಿಸಿದೆ. ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಸಿದ್ದಪಡಿಸುವ ಕಂಪನಿಗಳಲ್ಲಿ ಒಂದಾದ ಬಿಎನ್‌ಡಿ ಎನಾರ್ಜಿ ಲಿಮಿಟೆಡ್ ನಂಬರ್ ಫಲಕ ಅಳವಡಿಸಲು ವಿಧಿಸಿರುವ ಮೇ 31ರ ಗಡುವು ವಿಸ್ತರಿಸಬೇಕು ಎಂದು ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿತ್ತು. ಅರ್ಜಿಯನ್ನು ನ್ಯಾಯಮೂರ್ತಿ ಎಂಜೆಎಸ್ ಕಮಲ್ ಅವರಿದ್ದ ರಜಾಕಾಲದ ನ್ಯಾಯಪೀಠ ವಿಚಾರಣೆ ನಡೆಸಿತು. ಜೂ.11ರಂದು ವಿಚಾರಣೆ: ಸರ್ಕಾರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ರೋಬಿನ್ ಜೇಕಬ್, ಅರ್ಜಿ ವಿಚಾರಣೆ ಜೂನ್ 11ರಂದು ಪಟ್ಟಿಯಾಗಿದೆ. ಹೀಗಾಗಿ ಈ ಸಂಬಂಧ ಯಾವುದೇ ಆದೇಶ ಹೊರಡಿಸಬಾರದು ಎಂದು ಮನವಿ ಮಾಡಿದರು. ಈ ವೇಳೆ ನ್ಯಾಯಪೀಠ, ಅಲ್ಲಿಯವರೆಗೂ ಕಾಲಾವಕಾಶ ನೀಡಬಹುದೇ? ಎಂದು ಪ್ರಶ್ನಿಸಿದರು. ಇದಕ್ಕೆ ಸರ್ಕಾರಿ ವಕೀಲರು, ಜೂನ್ 12ರ ವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು…
ಬಂಟ್ವಾಳ: ಬಾರಿ ಗಾಳಿ ಮಳೆಗೆ ರಸ್ತೆ ಬದಿಯಲ್ಲಿದ್ದ ದೊಡ್ಡ ಗಾತ್ರದ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಇಬ್ಬರು ಗಾಯಗೊಂಡ ಘಟನೆ ಮಾಣಿ ಮೈಸೂರು ರಸ್ತೆಯ ಮಿತ್ತೂರು ಸಮೀಪದ ಕುಕ್ಕರಬೆಟ್ಟು ಎಂಬಲ್ಲಿ ಇದೀಗ ನಡೆದಿದೆ. ಮಂಗಳೂರು ಹಂಪನಕಟ್ಟೆ ನಿವಾಸಿಗಳು ಎಂದು ಹೇಳಲಾಗಿದ್ದು, ಇವರ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.ಕಾರಿನಲ್ಲಿ ಒಟ್ಟು ನಾಲ್ಕು ಜನಪ್ರಯಾಣಿಕರಿದ್ದು, ಮೈಸೂರಿಗೆ ತೆರಳುತ್ತಿದ್ದರು ಎನ್ನಲಾಗಿದೆ.ಚಲಿಸುತ್ತಿದ್ದಾಗಲೇ ಮರ ಮುರಿದು ಬಿದ್ದ ಕಾರಣ ಕಾರು ಜಖಂಗೊಂಡಿದೆ. ಘಟನೆಯಿಂದ ಕೆಲಹೊತ್ತು ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ.ಮರ ವಿದ್ಯುತ್ ಕಂಬದ ಮೇಲೆ ಬಿದ್ದು ಕಂಬ ಮುರಿದು ಬಿದ್ದಿದೆ,ಹಾಗೂ ವಿದ್ಯುತ್ ತಂತಿಗಳು ಕಡಿದು ನಷ್ಟವುಂಟಾಗಿದೆ.ಸ್ಥಳೀಯರು ಕೂಡಲೇ ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ, ಮತ್ತು ಸಂಚಾರಕ್ಕೆ ಅಡಚಣೆಯಾಗಿದ್ದ ಮರವನ್ನು ತೆರವುಮಾಡಿದ್ದಾರೆ.
ಮಂಗಳೂರು: ಮೊಬೈಲ್ ಹಾಗೂ ಹಣ ಕದ್ದಿರುವ ಶಂಕೆಯಲ್ಲಿ ಯುವಕನೋರ್ವನಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಬಳಿ ಸೋಮವಾರ ಸಂಜೆ ಸಂಭವಿಸಿದೆ. ಬಂಟ್ವಾಳ ಪುಣಚದ ಸಚಿನ್ (31) ಗಾಯಗೊಂಡ ಯುವಕ. ಕೇರಳ ಕೊಲ್ಲಂನ ನೌಫಾಲ್ ಆರೋಪಿ. ನೌಫಾಲ್ ಮತ್ತು ಆತನ ಸ್ನೇಹಿತ ಅನಾಸ್ ಕೇರಳದಿಂದ ಮಂಗಳೂರಿಗೆ ಬಂದಿದ್ದರು. ಅಲ್ಲಿ ಸಚಿನ್ ನೊಂದಿಗೆ ಸೇರಿ ಊಟ ಮಾಡಿ ರೈಲು ನಿಲ್ದಾಣದ ಬಳಿ ಮಲಗಿದ್ದರು. ಸೋಮವಾರ ಬೆಳಗ್ಗೆ ನೌಫಾಲ್ ಆತನ ಮೊಬೈಲ್ ಮತ್ತು ಒಂದು ಸಾವಿರ ನಗದನ್ನು ಸಚಿನ್ ಕದ್ದಿದ್ದಾನೆ ಎಂದು ಆರೋಪಿಸಿದ್ದಾನೆ. ಪರಿಣಾಮ ಇಬ್ಬರ ನಡುವೆ ವಾಗ್ವಾದ ನಡೆದು ನೌಫಾಲ್, ಸಚಿನ್‌ಗೆ ಹೊಟ್ಟೆಗೆ ಚೂರಿಯಿಂದ ಇರಿದಿದ್ದಾನೆ. ಸದ್ಯ ಸಚಿನ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾ ಪಾಯದಿಂದ ಪಾರಾಗಿದ್ದಾನೆ. ಆರೋಪಿ ನೌಫಾಲ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಕಂಟೈನರ್ ಲಾರಿ ಮತ್ತು ಇನ್ನೋವಾ ಕಾರು ಢಿಕ್ಕಿಯಾಗಿ ತಾಯಿ-ಮಗ ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಘಾಟ್ ನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ಪಾಣೆಮಂಗಳೂರು ಸಮೀಪದ ಬೊಂಡಾಲ ನಿವಾಸಿ ಶಬೀರ್ ಎಂಬವರ ಪತ್ನಿ ಸಫಿಯಾ(50) ಮತ್ತು ಪುತ್ರ ಮುಹಮ್ಮದ್ ಶಫೀಕ್(20) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೈನರ್ ಲಾರಿ ಶಿರಾಡಿ ಘಾಟ್ ನ ಕೆಂಪುಹೊಳೆ ಸಮೀಪ ಢಿಕ್ಕಿ ಹೊಡೆದಿದೆ. ಅನಾರೋಗ್ಯ (ಕ್ಯಾನ್ಸರ್)ದಿಂದ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಬೀರ್ ಅವರನ್ನು ಸಂದರ್ಶಿಸಿ, ಸಂಬಂಧಿಕರೋರ್ವರ ಮದುವೆ ಔತಣಕೂಟದಲ್ಲಿ ಭಾಗವಹಿಸಿ, ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಮಕ್ಕಳ ಸಹಿತ ಇತರರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಮೃತದೇಹವನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
ಉಳ್ಳಾಲ : ಶಾಲೆಯ ಆವರಣಗೋಡೆ ಕುಸಿದ ಪರಿಣಾಮ ಶಾಲೆಯ ವಿಧ್ಯಾರ್ಥಿನಿಯೊಬ್ಬಳು ಸಾವನಪ್ಪಿದ ಘಟನೆ ಹರೇಕಳದ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. ಮೃತರನ್ನು ನ್ಯೂಪಡ್ಪು ನಿವಾಸಿ ಸಿದ್ದೀಕ್– ಜಮೀಲಾ ದಂಪತಿಯ ಪುತ್ರಿ ಶಾಜಿಯಾ (7) ಎಂದು ಗುರುತಿಸಲಾಗಿದೆ. ಈ ಶಾಲೆಯಲ್ಲಿ ಮುಡಿಪು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್) ಶಿಬಿರ ನಡೆಯುತ್ತಿತ್ತು. ನ್ಯೂಪಡ್ಪು ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಶಾಜಿಯಾ ಶಿಬಿರ ನಡೆಯುತ್ತಿದ್ದ ಸ್ಥಳಕ್ಕೆ ಹೋಗಿದ್ದಳು. ಬಾಲಕಿಯು ಗೇಟಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಆವರಣ ಗೋಡೆಯು ಆಕೆಯ ಮೇಲೆ ಕುಸಿದು ಬಿದ್ದಿತ್ತು. ಮಳೆಯಿಂದಾಗಿ ಆವರಣಗೋಡೆ ಒದ್ದೆಯಾಗಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ದುರ್ಘಟನೆ ಸಂಭವಿಸಿದ ಸ್ಥಳದಲ್ಲಿ ಜನ ಗುಂಪುಗೂಡಿದ್ದರು.
ಮಂಗಳೂರು: ಅಕ್ರಮ ಪಿಸ್ತೂಲು ಹೊಂದಿದ್ದ ಆರೋಪದಲ್ಲಿ ಇಬ್ಬರು ವ್ಯಕ್ತಿಗಳನ್ನು ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಬಳಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡು ಮೂಲದ ಮುಹಮ್ಮದ್ ಅಸ್ಗರ್ ಮತ್ತು ನಿಸಾರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಕಾರಿನಲ್ಲಿ ತಲಪಾಡಿ ಕಡೆ ಬಂದಿದ್ದರು ಎಂದು ತಿಳಿದು ಬಂದಿದೆ. ಬಂಧಿತರಿಂದ ಒಂದು ಪಿಸ್ತೂಲು, ಎರಡು ಮೊಬೈಲ್ ಪೋನ್, ಕೇರಳ ನೋಂದಣಿಯ ಕಾರನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ
ಮಂಗಳೂರು: ಹೆಚ್ಚಿನ ಲಾಭದ ಆಮಿಷವೊಡ್ಡಿ ಹೂಡಿಕೆ ಹೆಸರಿನಲ್ಲಿ 40,000 ರೂ. ವರ್ಗಾಯಿಸಿಕೊಂಡು ವಂಚಿಸಿದ ಬಗ್ಗೆ ಮಂಗಳೂರು ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾನು ಫೇಸ್‌ಬುಕ್‌ನಲ್ಲಿ ಜಾಹೀರಾತು ನೋಡಿ ಗ್ರೂಪ್‌ವೊಂದಕ್ಕೆ ಸೇರ್ಪಡೆ ಗೊಂಡಿದ್ದೆ. ಅದರಲ್ಲಿ ಬರುವ ಷೇರು ಮಾರುಕಟ್ಟೆ ಹೂಡಿಕೆ ಕುರಿತ ಮಾಹಿತಿಗಳನ್ನು ನೋಡುತ್ತಿದ್ದೆ. ಆ ಗ್ರೂಪ್‌ನ ಅಡ್ಮಿನ್ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ದೊರೆಯುತ್ತದೆ ಎಂದು ತಿಳಿಸಿದ್ದನ್ನು ನಂಬಿದ ತಾನು ಎ.24ರಿಂದ ಮೇ 15ರವರೆಗೆ ತನ್ನ ಬ್ಯಾಂಕ್ ಖಾತೆಯಿಂದ 30.40 ಲಕ್ಷ ರೂ. ಗಳನ್ನು ಆರೋಪಿಗಳ ವಿವಿಧ ಬ್ಯಾಂಕ್ ಗೆ ವರ್ಗಾಯಿಸಿ ಮೋಸ ಹೋಗಿದ್ದೇನೆ ಎಂದು ಲಕ್ಷ್ಮೀನಾರಾಯಣ ಸೆನ್ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಕಾರ್ಕಳ : ಪಳ್ಳಿ ಗರಡಿ ರಸ್ತೆಯಲ್ಲಿ ಟಿಪ್ಪರ್ ಹಾಗೂ ಸ್ಕೂಟಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡ ಘಟನೆ ಮೇ 20ರ ಬೆಳಿಗ್ಗೆ ಸಂಭವಿಸಿದೆ. ಪಳ್ಳಿ ಗರಡಿಗೆ ಸಾಗುವ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ಪರಿಣಾಮವಾಗಿ ಸ್ಕೂಟಿ ಸವಾರ ನೇಪಾಳಿ ಮೂಲದ ಕಮಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಸನ್ನ ಮತ್ತು ಬಚ್ಚನ್ ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇವರಲ್ಲಿ ಓರ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಅಜ್ಜರಕಾಡಿಗೆ ದಾಖಲಿಸಲಾಗಿದೆ. ಕಾರ್ಕಳ ನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.