ಮಂಗಳೂರು : ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಅವರ ಪತ್ನಿಯ ಬಗ್ಗೆ ಅಧಿವೇಶನದಲ್ಲಿ ಅರಸೀಕೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಆಡಿದ್ದಾರೆ ಎನ್ನಲಾದ ಮಾತನ್ನು ಉಲ್ಲೇಖಿಸಿ ವ್ಯಕ್ತಿಯೊಬ್ಬ ಫೇಸ್ಟುಕ್ ನಲ್ಲಿ ಪೋಸ್ಟ್ ಮಾಡಿದ್ದು ಶಾಸಕರ ಪತ್ನಿಯನ್ನು ಅವಮಾನಿಸಿದ ಬಗ್ಗೆ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧಿಸಿ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಬಂಟ್ವಾಳ ತಾಲೂಕಿನ ಶರಣ್ ರೈ(29) ಎಂಬಾತನನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ಶರಣ್ ರೈ ಅಮ್ಮಾಡಿ ನಿವಾಸಿಯಾಗಿದ್ದು ರಿಯಲ್ ಎಸ್ಟೇಟ್ ಕೆಲಸ ಮಾಡಿಕೊಂಡಿದ್ದಾನೆ. ಆರೋಪಿ ಫೇಸ್ಟುಕ್ ನಲ್ಲಿ ಶಾಸಕ ವೇದವ್ಯಾಸ ಕಾಮತ್ ಪತ್ನಿಯನ್ನು ಅವಮಾನಿಸುವ ರೀತಿ ಪೋಸ್ಟ್ ಮಾಡಿದ್ದು ಈ ಬಗ್ಗೆ ಮಹಿಳೆಯೊಬ್ಬರು ಪೊಲೀಸ್ ದೂರು ನೀಡಿದ್ದರು. ಇಂತಹ ಹೇಳಿಕೆಯಿಂದ ಗೃಹಿಣಿಯಾಗಿರುವ ಶಾಸಕರ ಪತ್ನಿಯ ಬಗ್ಗೆ ಸಮಾಜದಲ್ಲಿ ಅಗೌರವ ಉಂಟಾಗಿದೆ, ಮಹಿಳೆಯರ ಬಗ್ಗೆ ಕೀಳು ಅಭಿರುಚಿಯಿಂದ ಪೋಸ್ಟ್ ಮಾಡಿದ್ದಾಗಿದೆ ಎಂಬ ದೂರಿನಂತೆ ಬಂದರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
Author: main-admin
ಕೊಣಾಜೆ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಪುಣಿ ಗ್ರಾಮದ ನವಗ್ರಾಮ ಸೈಟ್ ನಾರ್ಯಗುತ್ತು ಗುಡ್ಡ ಪ್ರದೇಶದಲ್ಲಿ ನಿಷೇಧಿತ ಎಮ್ ಡಿಎಮ್ ಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶ್ರೀರಂಗಪಟ್ಟಣ ಹುಲಿಕೆರೆ ನಿವಾಸಿ ಜೋರ್ಡನ್,(21 ) ಎಂದು ಗುರುತಿಸಲಾಗಿದೆ. ಈತ ಪ್ರಸ್ತುತ ಬಾಳೆ ಪುಣೆ ಗ್ರಾಮದ ಕುಕ್ಕುದ ಕಟ್ಟೆ ಸೈಟ್ ನಲ್ಲಿ ರುವ ಸೆಫಿಯಾ ಎಂಬವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ ಬಂಧಿತನಿಂದ 55 ಗ್ರಾಂ ಎಮ್ ಡಿಎಮ್ ಎ ಮಾದಕ ವಸ್ತು, ಒಂದು ಮೊಬೈಲ್ ಫೋನ್, ಡಿಜಿಟಲ್ ತೂಕದ ಮಾಪನ ಯಂತ್ರ ಸಹಿತ ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಜ.19ರಂದು 53,03,000 ರೂ .ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾದ ವ್ಯಕ್ತಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಆರೋಪಿಗಳಿಗೆ ಹಣ ಮತ್ತು ವಾಹನದ ವ್ಯವಸ್ಥೆಯನ್ನು ಮಾಡಿದ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ.ಕೆ (27) ಹಾಗೂ ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ (42) ಒಡಿಶಾದ ದೀಪಕ್ ಪಾತ್ರ (37) ಎಂಬವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಒಡಿಶಾದ ದೀಪಕ್ ಪಾತ್ರ ಎಂಬಾತನನ್ನು ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಮೋದ್ ಕುಮಾರ್ ನೇತೃತ್ವದ ತನಿಖಾ ತಂಡ ಒಡಿಶಾ ರಾಜ್ಯಕ್ಕೆ ತೆರಳಿ ಬಂಧಿಸಿದೆ. ಈ ವೇಳೆ ಆತನಿಂದ ರೂ 80,000 ಮೌಲ್ಯದ, 1 ಕೆ.ಜಿ 788 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಈ ಕಾರ್ಯಾಚರಣೆಯಲ್ಲಿ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಮೋದ್ ಕುಮಾರ್…
ಮಂಗಳೂರು: ನಗರದ ನಂತೂರು ಬಳಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪ್ತಿಯ ಮೃತದೇಹವನ್ನು ಖಾಸಗಿ ಆಸ್ಪತ್ರೆಯಿಂದ ಕದ್ರಿ ಪೊಲೀಸ್ ಠಾಣೆಯ ಬಳಿ ತಂದು ಪ್ರತಿಭಟನೆ ನಡೆಸಿದ ಆರೋಪದಡಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಬಲ್ಲಾಳ್‌ಬಾಗ್ ಸಮೀಪದ ವಿವೇಕನಗರದ ಅಮೀತ್, ಕೀರ್ತನ್, ನವೀತ್, ಭರತ್‌ರಾಜ್, ಪವನ್, ಲೋಕೇಶ್ ಮಂಗಳಾದೇವಿ, ಮನ್ವೀತ್ ಬಲ್ಲಾಳ್‌ಬಾಗ್, ಅನಿಲ್ ಕುಮಾರ್ ಕಂಕನಾಡಿ, ಪ್ರೇಮನಾಥ ಬಲ್ಲಾಳ್‌ಬಾಗ್ ಹಾಗೂ ಇತರ ಸುಮಾರು 50 ಮಂದಿ ದ್ವಿಚಕ್ರ ವಾಹನ ಮತ್ತು ಕಾರಿನಲ್ಲಿ ಆಂಬುಲೆನ್ಸ್‌ನೊಂದಿಗೆ ಬಂದು ಕದ್ರಿ ಪೊಲೀಸ್ ಠಾಣೆಯ ಬಳಿ ಅಕ್ರಮಕೂಟ ಸೇರಿ ಪ್ರತಿಭಟನೆ ನಡೆಸಿದ್ದಾರೆ. ಈ ರೀತಿ ಪ್ರತಿಭಟನೆ ಮಾಡುವುದು ಸರಿಯಲ್ಲವೆಂದು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರತಿಭಟನಾಕಾರರಿಗೆ ಮನವರಿಕೆ ಮಾಡಿದರೂ ಕೇಳದೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಸಾರ್ವಜನಿಕ ವಾಹನ ಸಂಚಾರಕ್ಕೂ ಇದರಿಂದ ಅಡಚಣೆಯಾಗಿದೆ ಎಂದು ಆರೋಪಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಟ್ಲ: ಸಾಲೆತ್ತೂರು-ವಿಟ್ಲ ರಸ್ತೆಯ ಕಡಂಬು ಎಂಬಲ್ಲಿ ವಿಟ್ಲದ ಕಡೆಗೆ ತೆರಳುತ್ತಿದ್ದ ಹೋಂಡಾ ಡಿಯೋ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಮಾರುತಿ ಓಮ್ನಿ ಕಾರನ್ನು ಸಾರ್ವಜನಿಕರು ಪತ್ತೆಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ ಘಟನೆ ನಡೆದಿದೆ. ಎರಡು ದಿನದ ಹಿಂದೆ ಕೆ.ಎ.19ಎಮ್.ಹೆಚ್ 1518 ನಂಬರಿನ ಮಾರುತಿ ಓಮ್ನಿ ಕಾರು ಕಡಂಬು ಸಮೀಪ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಘಟನೆಯ ಮಾಹಿತಿ ಸಹಿತ ಓಮ್ನಿ ಕಾರಿನ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಫೆ.6ರಂದು ವಿಟ್ಲ-ಸಾಲೆತ್ತೂರು ರಸ್ತೆಯಲ್ಲಿ ಓಮ್ನಿ ಕಾರನ್ನು ಕಂಡ ಸಾರ್ವಜನಿಕರು ಬೆನ್ನಟ್ಟಿದ್ದು, ಆದರೆ ಕಾರು ಸಾರ್ವಜನಿಕರ ಕಣ್ತಪ್ಪಿಸಿ ಹೋಗಿದೆ. ಹುಡುಕಾಟ ಮುಂದುವರಿಸಿದಾಗ, ತಾಮರಾಜೆ ಎಂಬಲ್ಲಿ ಮನೆಯೊಂದರ ಅಂಗಳದಲ್ಲಿ ಕಾರು ಕಂಡುಬಂದಿದ್ದು, ಬೀಡಿ ಗುತ್ತಿಗೆದಾರ ಇಸ್ಮಾಯಿಲ್ ಮಾಲಿಕತ್ವದ ಕಾರು ಎಂದು ತಿಳಿದು ಬಂದಿದೆ. ಸಾರ್ವಜನಿಕರು ಮಾಹಿತಿಯ ಮೇರೆಗೆ ತಕ್ಷಣ ಪೊಲೀಸರು ವಾಹನವನ್ನು ಪರಿಶೀಲನೆ ನಡೆಸಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಕಾರ್ಕಳ: ತಾಲೂಕು ಕುಕ್ಕುಂದೂರು ಗ್ರಾಮದ ನಕ್ರೆ ಹಾಂಕ್ರಾಡಿ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸ್ಪೋಟಕ ಬಳಸಿ ಕಲ್ಲು ಬಂಡೆಗಳನ್ನು ಒಡೆದಿರುವ ಘಟನೆಗೆ ಸಂಬಂಧಿಸಿದಂತೆ ಕಾರ್ಕಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕುಕ್ಕುಂದೂರು ಗ್ರಾಮ ಅಯ್ಯಪ್ಪ ನಗರ ನಿವಾಸಿ ಟಿ. ರವಿಚಂದ್ರ (55) ಹಾಗೂ ಆತನ ಮಗ ಪವನ್ ಕುಮಾರ್ (31) ಬಂಧಿತರು. ಇವರು ಜ.21ರಂದು ಅಕ್ರಮವಾಗಿ ಯಾವುದೇ ಪರವಾನಿಗೆ ಹೊಂದದೇ ಸ್ಪೋಟಕ ಬಳಸಿ ಕಲ್ಲುಗಳನ್ನು ಸ್ಫೋಟಿಸಿದ್ದರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯನ್ನು ಕೈಗೊಂಡ ವೇಳೆ ಕಾರ್ಕಳ ನಗರ ಪೊಲೀಸ್ ಠಾಣಾ ಪಿಎಸ್‌ಐ ಮುರುಳೀಧರ ನಾಯ್ಕ ಹಾಗೂ ಸಿಬ್ಬಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗಳಿಗೆ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಮಂಗಳೂರು: ವಿಶ್ವವಿದ್ಯಾನಿಲಯವು ಅರ್ಥಶಾಸ್ತ್ರ ವಿಭಾಗದಲ್ಲಿ ನಡೆಸಿದ ಸಂಶೋಧನೆಗಾಗಿ ವೆಂಕಟೇಶ ನಾಯಕ್ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್.ಡಿ.) ಪದವಿಯನ್ನು ಪ್ರದಾನ ಮಾಡಿದೆ. ವೆಂಕಟೇಶ ನಾಯಕ್ ಅವರು “ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದಲ್ಲಿ ಹಣಕಾಸು ಒಳಗೊಳ್ಳುವಿಕೆ – ಒಂದು ಪ್ರಕರಣ ಅಧ್ಯಯನ” ಎಂಬ ವಿಷಯದ ಮೇಲೆ ತಮ್ಮ ಸಂಶೋಧನಾ ಪ್ರೌಢ ಪ್ರಬಂಧವನ್ನು ಸಲ್ಲಿಸಿದ್ದರು. ಈ ಅಧ್ಯಯನವು ವಿಶೇಷವಾಗಿ ಅತೀ ಅಸುರಕ್ಷಿತ ಜನಾಂಗ (PVTG) ಆಗಿರುವ ಕೊರಗ ಸಮುದಾಯದಲ್ಲಿ ಹಣಕಾಸು ಒಳಗೊಳ್ಳುವಿಕೆ ಕಾರ್ಯಕ್ರಮಗಳ ವ್ಯಾಪ್ತಿ, ಸವಾಲುಗಳು ಹಾಗೂ ಪರಿಣಾಮಗಳನ್ನು ವಿಶ್ಲೇಷಿಸಿ, ಸಮಾವೇಶಿತ ಅಭಿವೃದ್ಧಿಗೆ ಸಂಬಂಧಿಸಿದ ನೀತಿಪೂರಕ ಫಲಿತಗಳನ್ನು ನೀಡಿದೆ. ಈ ಸಂಶೋಧನೆಯನ್ನು ಡಾ . ಜಯವಂತ ನಾಯಕ್, ಪ್ರಾಧ್ಯಾಪಕರು, ಅರ್ಥಶಾಸ್ತ್ರ ವಿಭಾಗ, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇವರು ಮಾರ್ಗದರ್ಶಕರಾಗಿದ್ದರು. ಪ್ರಬಂಧವನ್ನು ಬಾಹ್ಯ ಪರೀಕ್ಷಕರಾಗಿ ಡಾ ಎಸ್ ಎನ್ ಯೋಗೀಶ್, ಪ್ರಾಧ್ಯಾಪಕರು ಹಾಗೂ ಅಧ್ಯಕ್ಷರು, ಸ್ನಾತಕೋತ್ತರ ಅರ್ಥಶಾಸ್ತ್ರ ಅಧ್ಯಯನ ವಿಭಾಗ, ಕುವೆಂಪು ವಿಶ್ವವಿದ್ಯಾಲಯ ಮತ್ತು ತಮಿಳುನಾಡಿನ ಗಾಂಧಿಗ್ರಾಮ ರೂರಲ್ ಇನ್ಸ್ಟಿಟ್ಯೂಟ್ ನ ಹಿರಿಯ ಪ್ರಾಧ್ಯಾಪಕರು…
ಮಂಗಳೂರು: : ದೀರ್ಘ ಕಾಲದಿಂದ ತಲೆಮರೆಸಿಕೊಂಡಿದ್ದ ವಾರಂಟು ಅಸಾಮಿಯಾದ ಲಕ್ಷ್ಮೀಶಬಾಬು(48) ಎಂಬಾತನನ್ನು ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ನಗರದ ಉಳ್ಳಾಲ ಪೊಲೀಸ್ ಠಾಣಾ ಅ.ಕ್ರ: 183/2011 ಕಲಂ 405, 420, 406, 120(ಬಿ) ಐಪಿಸಿ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು, ದೀರ್ಘ ಕಾಲದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಬಂಧಿಸಿ, ಮಂಗಳೂರು ನಗರದ ಮಾನ್ಯ 7 ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.
ಮಂಗಳೂರು: ನಗರದ ನಂತೂರಿನಲ್ಲಿ ಬಸ್ಸು ಚಾಲಕನ ಬೇಜವಾಬ್ದಾರಿಯಿಂದ ಯುವತಿ ಸಾವನ್ನಪ್ಪಿದ್ದಾಳೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಗರ ಖಾಸಗಿ ಬಸ್ಸುಗಳ ಓಡಾಟದ ಧಾವಂತಕ್ಕೆ ಒಂದು ಜೀವ ಹೋಗಿದೆ. ಆರೋಪಿ ಬಸ್ಸು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ನಡೆಸಿ ಆರೋಪಿಗೆ ಶಿಕ್ಷೆ ಆಗುತ್ತಿದೆ ಎಂದರು. ಇನ್ನು ಮೃತಳ ಪಾರ್ಥೀವ ಶರೀರವನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುವುದು ಸರಿಯಲ್ಲ. ಎಲ್ಲವೂ ಕಾನೂನುಬದ್ಧವಾಗಿಯೇ ಆಗುತ್ತದೆ. ನಿರ್ಲಕ್ಷ್ಯಕ್ಕೆ ಏನು ಶಿಕ್ಷೆ ಇದೆ ಅದು ಚಾಲಕನಿಗೆ ಆಗೇ ಆಗುತ್ತದೆ. ಇದರ ಜೊತೆಗೆ ಕಾನೂನು ವಿರುದ್ಧವಾಗಿ ಇವತ್ತು ಪ್ರತಿಭಟನೆ ನಡೆಸಿದವರ ವಿರುದ್ಧವೂ ಪ್ರಕರಣ ದಾಖಲಾಗುತ್ತದೆ. ಪ್ರತಿಭಟನೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. ಬಸ್ಸು ಚಾಲಕರಿಗೆ ನೀಡಲಾದ ಟೈಮಿಂಗ್ಸ್ ವಿಚಾರದಲ್ಲೂ ಈ ದುರಂತ ಸಂಭವಿಸುವ ಸಾಧ್ಯತೆ ಇದೆ ಎಂದರು.
ಬೆಳ್ತಂಗಡಿ: ಒಡಿಲ್ನಾಳ ಗ್ರಾಮದ ಸಂಬೋಳ್ಯದಲ್ಲಿ ನಡೆದ ಸುಮಂತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದಂತೆ, ಮೃತ್ಯುವಿನ ಕಾರಣ ಮುಳುಗು ಆಗಿದೆ. ಆದರೆ ತಲೆಯಲ್ಲಿದ್ದ ಗಾಯದಿಂದ ಸಂಶಯ ಉಂಟಾದ ಕಾರಣ ಪ್ರಕರಣವನ್ನು ಸಂಪೂರ್ಣ ಹಾಗೂ ಸಮಗ್ರವಾಗಿ ತನಿಖೆ ನಡೆಸುವ ಉದ್ದೇಶದಿಂದ ಹತ್ಯೆ ಕಲಂನ್ನು ಸೇರಿಸಲಾಗಿದೆ. ವೈದ್ಯಕೀಯ ನ್ಯಾಯವಿಜ್ಞಾನ ಹಾಗೂ ಅಂತಿಮ ಮರಣೋತ್ತರ ಪರೀಕ್ಷಾ ವರದಿ ಇನ್ನೂ ಬರಬೇಕಿದ್ದು, ಇದು ಹತ್ಯೆಯೇ ಅಥವಾ ಅಸಹಜ ಮರಣವೇ ಎಂಬುದರ ಬಗ್ಗೆ ಈವರೆಗೆ ಯಾವುದೇ ನಿರ್ಧಾರಕ್ಕೆ ಬರಲಾಗುವುದಿಲ್ಲ. ಈ ಮಧ್ಯೆ, ಕೆಲವರು ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಸಿದ್ಧಾಂತಗಳನ್ನು ರೂಪಿಸಿ ಆರೋಪಿಗಳನ್ನು ಕುರಿತು ಊಹಾಪೋಹಗಳನ್ನು ಹರಡುತ್ತಿದ್ದಾರೆ. ತನಿಖೆ ಎಲ್ಲ ಸಾಧ್ಯತೆಗಳನ್ನು ಪರಿಶೀಲಿಸುವ ದಿಸೆಯಲ್ಲಿ ನಡೆಯುತ್ತಿದೆ; ಆದರೆ ವಿಚಾರಣೆಗೊಳಪಡಿಸಲಾದ ಪ್ರತಿಯೊಬ್ಬರೂ ಆರೋಪಿಗಳೇ ಎನ್ನುವುದಿಲ್ಲ. ಈ ಪ್ರಕರಣದ ಎಲ್ಲ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಲು ನಾಲ್ಕು ವಿಶೇಷ ತನಿಖಾ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಇದಲ್ಲದೆ ಆಗಸ್ಟ್ 2025 ರ ಒಂದು ಅಸಹಜ ಮರಣ (UDR) ಪ್ರಕರಣವನ್ನು ಈ ಪ್ರಕರಣದೊಂದಿಗೆ ಸಂಪರ್ಕಿಸಲಾಗಿದೆ…










