ಬಂಟ್ವಾಳ : ಖೋಟಾ ನೋಟುಗಳನ್ನು ವಿನಿಮಯ ಮಾಡಲು ಬಂದಿದ್ದ ಕೇರಳ ಮೂಲದ ತಂಡವನ್ನು ಭೇದಿಸಿದ್ದ ಬಂಟ್ವಾಳ ನಗರ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಬಳಿಕ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿ ಕೇರಳದಲ್ಲಿ ಸ್ವಾಧೀನದಲ್ಲಿಟ್ಟು ಕೊಂಡಿದ್ದ ಒಟ್ಟು 506 ನೋಟುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮೇ 10 ರಂದು ಬಿ.ಸಿ.ರೋಡಿನಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಸಾರ್ವಜನಿಕರು ನೀಡಿದ ಮಾಹಿತಿಯಂತೆ ಕಾರ್ಯಚರಣೆ ನಡೆಸಿದ ಬಂಟ್ವಾಳ ನಗರ ಠಾಣಾ ಪೋಲೀಸ್ ನಿರೀಕ್ಷಕ ಆನಂತಪದ್ಮನಾಭ ನೇತೃತ್ವದ ಪೋಲೀಸರ ತಂಡ ಕೇರಳ ಮೂಲದ ಇಬ್ಬರನ್ನು ಬಂಧಿಸಿದ್ದರು. ಕಾಸರಗೋಡಿನ ಕೂಡ್ಲು ಗ್ರಾಮದ ಚೂರಿ ನಿವಾಸಿಗಳಾದ ಮೊಹಮ್ಮದ್ ಸಿ.ಎ.(61) ಹಾಗೂ ಕಮರುನ್ನೀಸಾ (41) ಬಂಧಿತ ಆರೋಪಿಗಳಾಗಿದ್ದು, ಪೊಲೀಸ್ ಕಾರ್ಯಾಚರಣೆ ವೇಳೆ ಇನ್ನೋರ್ವ ಆರೋಪಿ ಶರೀಫ್ ಪರಾರಿಯಾಗಿದ್ದನು. ಆರೋಪಿಗಳಿಂದ 500 ರೂ. ಮುಖ ಬೆಲೆಯ 46 ಖೋಟಾ ನೋಟುಗಳು, 5,300 ರೂ.ನಗದು ಹಾಗೂ 3 ಮೊಬೈಲ್, ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಪೊಲೀಸರು…
Author: main-admin
ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವಸ್ಥಾನ ಬಳಿ ಸಂಭವಿಸಿದೆ. ಕಿನ್ಯ ನಿವಾಸಿ ಮನೋಜ್ ಆಚಾರ್ಯ (31) ಚೂರಿ ಇರಿತಕ್ಕೊಳಗಾದ ವ್ಯಕ್ತಿ. ಶರತ್ ಎಂಬಾತ ಚೂರಿಯಿಂದ ಇರಿದ ಆರೋಪಿ ಎಂದು ತಿಳಿಯಲಾಗಿದೆ. ಘಟನೆ ವಿವರ: ಮನೋಜ್ ಮತ್ತು ಶರತ್ ಗೆ ಕುಟುಂಬ ಹಾಗೂ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಹಳೇ ದ್ವೇಷ ಇತ್ತು ಎನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಶರತ್ ಮನೋಜ್ ಆಚಾರ್ಯ ಎಂಬಾತನನ್ನು ಆಗಾಗ ತಗಾದೆ ಎತ್ತುತ್ತಿದ್ದ. ರವಿವಾರ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮನೋಜ್ ಗೆ ಶರತ್ ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ. ಈ ಬಗ್ಗೆ ಮನೋಜ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ: ಬೈಕಿನಲ್ಲಿ ಆಗಮಿಸಿದ ತಂಡವೊಂದು ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ಧರ್ಮಸ್ಥಳದ ಕನ್ಯಾಡಿಯಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮದ ನಿವಾಸಿಗಳಾದ ಅಬ್ದುಲ್ ಫಾರೂಕ್, ಮೈಮುನಾ, ಸೌಧಾ, ಮೈಮುನಾ ಸಿದ್ದಿಕ್ ಹಾಗೂ ಮಕ್ಕಳು ಉಜಿರೆಯ ಸಂಬಂಧಿಕರ ಮನೆಗೆ ಹೋಗಿ ರಾತ್ರಿ 11:30ರ ಸುಮಾರಿಗೆ ಧರ್ಮಸ್ಥಳಕ್ಕೆ ಹಿಂತಿರುಗುತ್ತಿದ್ದ ವೇಳೆ ಕನ್ಯಾಡಿ ಶಾಲೆಯ ಸಮೀಪ ಎರಡು ಬೈಕ್‌ಗಳಲ್ಲಿ ಬಂದ ಮೂವರು ಕಾರನ್ನು ತಡೆದು ಕಾರು ಚಾಲಕನಿಗೆ ಹಲ್ಲೆ ನಡೆಸಿ ಕಾರಿನ ಕೀಯನ್ನು ಕಸಿದುಕೊಂಡಿದ್ದಾರೆ. ಕಾರಿನ ಇನ್ನೊಂದು ಬದಿಯ ಡೋರ್ ನ್ನು ಬಲವಂತವಾಗಿ ತೆರೆದ ಆರೋಪಿಗಳು ಮಹಿಳೆಯರ ಮೇಲೆ ಕೈಮಾಡಿ ಮಾನಕ್ಕೆ ಕುಂದುಂಟಾಗುವ ರೀತಿಯಲ್ಲಿ ವರ್ತಿಸಿದ್ದಲ್ಲದೆ ಕಾರಿನಲ್ಲಿದ್ದವರ ಕೈಯಲ್ಲಿದ್ದ ಮೊಬೈಲ್‌ನ್ನು ಕಸಿದುಕೊಂಡು ಎಸೆದು ಹಾನಿಗೊಳಿಸಿದ್ದಾರೆ. ಈ ವೇಳೆ ಕಾರಿನಲ್ಲಿದ್ದವರು ಬೊಬ್ಬೆ ಹಾಕಿದ್ದು ದಾರಿಯಲ್ಲಿ ಬಂದ ಪರಿಚಯದವರು ವಾಹನ ನಿಲ್ಲಿಸಿ ಜಗಳ ಬಿಡಿಸಿದ್ದಾರೆ.” ಈ ವೇಳೆ ಮೂವರು ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ಪೊಲೀಸರಿಗೆ ದೂರು ನೀಡಿದರೆ ಕೊಲ್ಲದೆ ಬಿಡುವುದಿಲ್ಲ ಎಂದು…
ಕುಂದಾಪುರ: ತಾಯಿಯ ಶವದೊಂದಿಗೆ ಅನ್ನ ನೀರು ಇಲ್ಲದೆ ಮೂರ್ನಾಲ್ಕು ದಿನ ಕಳೆದು ತೀವ್ರ ಅಸ್ವಸ್ಥಗೊಂಡಿದ್ದ ಬುದ್ಧಿಮಾಂದ್ಯ ಮಗಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಹೃದಯವಿದ್ರಾವಕ ಘಟನೆ ಕುಂದಾಪುರ ತಾಲ್ಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ಸಂಭವಿಸಿದೆ. ತಾಯಿ ಜಯಂತಿ ಶೆಟ್ಟಿ (62) ಹಾಗೂ ಪುತ್ರಿ ಪ್ರಗತಿ ಶೆಟ್ಟಿ (32) ಮೃತರು. ತೀವ್ರ ರಕ್ತದೊತ್ತಡ ಹಾಗೂ ಮಧುಮೇಹ ಕಾಯಿಲೆದಿಂದ ಬಳಲುತ್ತಿದ್ದ ಜಯಂತಿ ಶೆಟ್ಟಿ ಅವರು, ಹುಟ್ಟಿನಿಂದಲೇ ಬುದ್ಧಿಮಾಂದ್ಯಳಾಗಿದ್ದ ಪುತ್ರಿ ಪ್ರಗತಿ ಶೆಟ್ಟಿ ಜತೆ ವಾಸವಿದ್ದರು. ಈಚೆಗೆ ಜಯಂತಿ ಶೆಟ್ಟಿ ಮೃತಪಟ್ಟಿದ್ದಾರೆ. ಈ ವೇಳೆ ಬುದ್ಧಿಮಾಂದ್ಯ ಪುತ್ರಿ ಏನು ಮಾಡಬೇಕು ಎಂದು ತೋಚದೆ ತಾಯಿಯ ಶವದ ಜತೆಗೆ ಮೂರ್ನಾಲ್ಕು ದಿನ ಕಳೆದಿದ್ದಾರೆ. ಮನೆಯ ಸುತ್ತಲೂ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿ ಅನುಮಾನಗೊಂಡ ಸ್ಥಳೀಯರು, ಕಿಟಕಿ ತೆರೆದು ನೋಡಿದಾಗ ಜಯಂತಿ ಶೆಟ್ಟಿ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಜತೆಗೆ ಮಗಳು ಪ್ರಗತಿ ಶೆಟ್ಟಿ ಕೂಡ ತೀವ್ರ ಅಸ್ವಸ್ಥಗೊಂಡಿದ್ದರು. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಕುಂದಾಪುರ ಪೊಲೀಸರು ಮನೆಯ ಬಾಗಿಲು ಒಡೆದು ಪ್ರಜ್ಞಾಹೀನ…
ಬೆಳ್ತಂಗಡಿ: ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್ ಮಾಡಿದ್ದರು. ಈ ಹಿನ್ನಲೆ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ರಾತ್ರೋರಾತ್ರಿ ಧರಣಿ ನಡೆಸಿದ್ದು, ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿಯ ಮೆಲಂತಬೆಟ್ಟು ಎಂಬಲ್ಲಿ ಕಲ್ಲಿನ ಕೋರೆ ನಡೆಯುತ್ತಿದ್ದಲ್ಲಿಗೆ ಶನಿವಾರ ಸಂಜೆ ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ, ಕೋರೆಯನ್ನು ಬಿಜೆಪಿ ಯುವಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ನಡೆಸುತ್ತಿದ್ದಾರೆ ಎಂಬ ಮಾಹಿತಿ ಪಡೆದು ಪೊಲೀಸರು ರಾತ್ರಿಯೇ ಮನೆಗೆ ನುಗ್ಗಿ ಆತನನ್ನು ವಶಕ್ಕೆ ಪಡೆದಿದ್ದಾರೆ ಈ ಹಿನ್ನಲೆ ಕಾರ್ಯಕರ್ತರ ಜೊತೆಗೆ ತಡರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದ ಶಾಸಕ ಹರೀಶ್ ಪೂಂಜ, ಪೊಲೀಸರನ್ನು ಏರು ಸ್ವರದಲ್ಲಿ ದಬಾಯಿಸಿದ್ದಾರೆ. ನೀವು ಕಾಂಗ್ರೆಸ್ ಏಜಂಟರ ರೀತಿ ವರ್ತಿಸ್ತೀರಿ, ನೀವು ಯಾರ ಒತ್ತಡದಲ್ಲಿ ಕೆಲಸ ಮಾಡ್ತಿದೀರಿ ಅಂತ ಗೊತ್ತಿದೆ. ಕಾಂಗ್ರೆಸ್ ಸರ್ಕಾರ…
ಮಂಗಳೂರು: ಶಬರಿಮಲೆ ಯಾತ್ರೆಗೆ ತೆರಳಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಕೇರಳದಲ್ಲಿ ನಡೆದಿದೆ. ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ ಕಾಟಿಪಳ್ಳ ಗಣೇಶಪುರ ನಿವಾಸಿ ಸಂದೀಪ್ ಕಾಟಿಪಳ್ಳ (35) ಎಂದು ಗುರುತಿಸಲಾಗಿದೆ. ಸಂದೀಪ್ ತನ್ನ ಒಬ್ಬ ಮಗನ ಹೆಸರಿನಲ್ಲಿ ಮಾಡಿದ ಪ್ರತಿಜ್ಞೆಯನ್ನು ಪೂರ್ಣಗೊಳಿಸಲು ಶಬರಿಮಲೆಗೆ ತೆರಳಿದ್ದರು. ಶನಿವಾರದಂದು ಗರ್ಭಗುಡಿಯಲ್ಲಿರುವ ಅಯ್ಯಪ್ಪನ ದರ್ಶನ ಪಡೆಯಲು ಹದಿನೆಂಟು ಮೆಟ್ಟಿಲು ಹತ್ತುತ್ತಿದ್ದ ವೇಳೆ ಮೆಟ್ಟಿಲುಗಳ ಮೇಲೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸಂದೀಪ್ ಅವರು ನಿತ್ಯಾನಂದ ಭಜನಾ ಮಂದಿರದ ಪ್ರಧಾನ ಕಾರ್ಯದರ್ಶಿಯಾಗಿದ್ದು, ಸೇವಾ ಟ್ರಸ್ಟ್ ಹಾಗೂ ಕೇಸರಿ ಗೆಳೆಯರ ಬಳಗದ ಸದಸ್ಯರಾಗಿ ಸಮಾಜಮುಖಿ ಕಾರ್ಯದಲ್ಲಿ ಸಕ್ರಿಯರಾಗಿದ್ದರು. ಎಂಆರ್‌ಪಿಎಲ್‌ನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಉಡುಪಿ: ಭಾರತೀಯ ಹವಾಮಾನ ಇಲಾಖೆಯು ನೀಡಿರುವ ಮುನ್ಸೂಚನೆಯಂತೆ ಮೇ 18ರಿಂದ 22ರವರೆಗೆ ಬಂಗಾಳಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಯಿರುವುದರಿಂದ ಸಮುದ್ರದಲ್ಲಿ ಹೆಚ್ಚಿನ ಗಾಳಿ (ಗಂಟೆಗೆ ಸುಮಾರು 45ರಿಂದ 55 ಕಿ.ಮಿ.ವೇಗ) ಬೀಸುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಕೆ ನೀಡಿದೆ. ಅಲ್ಲದೇ ಮುಂದಿನ 5 ದಿನಗಳ ಕಾಲ ಹಳದಿ ಅಲರ್ಟ್ ಇರುವುದರಿಂದ ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ ಮತ್ತು ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಹಾಗೂ ಈಗಾಗಲೇ ತೆರಳಿರುವ ಮೀನುಗಾರರು ಕೂಡಲೇ ದಡ ಸೇರು ವಂತೆ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳು ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ ಈ ಕುರಿತು ಯಾವುದೇ ಅಗತ್ಯಗಳಿಗೆ ದೂರವಾಣಿ ಸಂಖ್ಯೆ: 0820-2574802 ಹಾಗೂ ತುರ್ತು ಸೇವೆಗೆ ಶುಲ್ಕರಹಿತ ನಂ. 1077ನ್ನು ಸಂಪರ್ಕಿಸುವಂತೆ ಕೋರಲಾಗಿದೆ.
ಬ್ರಹ್ಮಾವರ : ಬ್ರಹ್ಮಾವರ ತಾಲೂಕು ವ್ಯಾಪ್ತಿಗೆ ಸೇರಿರುವ ಸಾಸ್ತಾನ ಟೋಲ್ ಗೇಟ್ ಬಳಿ ಹೆದ್ದಾರಿ ಹೋರಾಟ ಸಮಿತಿ ವತಿಯಿಂದ ಸ್ಥಳೀಯರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಇಲ್ಲಿ ಕಾರ್ಯನಿರ್ವಹಿಸುತ್ತಿರುವ ನವಯುಗ ಟೋಲ್ ಗೇಟ್ ನಲ್ಲಿ ಸ್ಥಳೀಯರ ವಾಹನಗಳಿಗೆ ವಿನಾಯಿತಿ ನೀಡುತ್ತಿಲ್ಲ ಮತ್ತು ಫಾಸ್ಟ್ ಟ್ಯಾಗ್ ನ ಹಣಕ್ಕೆ ಕತ್ತರಿ ಹಾಕಲಾಗುತ್ತಿದೆ ಎಂಬುದು ಸ್ಥಳೀಯರ ಆರೋಪವಾಗಿದೆ. ಈ ಹಿನ್ನೆಲೆಯಲ್ಲಿ ದಿಢೀರ್ ಪ್ರತಿಭಟನೆ ಹಮ್ಮಿಕೊಂಡು ಆಕ್ರೋಶ ಹೊರ ಹಾಕಿದರು. ಈ ಹಿಂದೆ ಸ್ಥಳೀಯ ವಾಹನಗಳಿಗೆ ಇಲ್ಲಿ ಟೋಲ್ ವಿನಾಯಿತಿ ಇತ್ತು. ಆದರೆ, ಹೊಸ ಆಡಳಿತ ಮಂಡಳಿ ಬಂದ ಹಿನ್ನೆಲೆಯಲ್ಲಿ ನಿಯಮ ಬದಲಾಯಿಸಲಾಗಿದೆ. ಇದನ್ನು ರದ್ದಪಡಿಸಿ ಹಿಂದಿನಂತೆ ವಿನಾಯಿತಿ ನೀಡಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.
ಮಂಗಳೂರು: ಜಿಲ್ಲಾಧಿಕಾರಿಯ ಬಳಿಯೇ ಭಿಕ್ಷುಕನೊಬ್ಬ ಭಿಕ್ಷೆ ಬೇಡಿದ ಪ್ರಸಂಗವೊಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಸಭೆಯ ಹಿನ್ನೆಲೆಯಲ್ಲಿ ಮೇ.16ರಂದು ದ.ಕ ಜಿಲ್ಲಾಧಿಕಾರಿ ಮುಗಿಲನ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದರು. ಆದಿಶೇಷ ವಸತಿ ಗೃಹದ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಹೊರಬರುವ ವೇಳೆ ಆದಿ ಸುಬ್ರಹ್ಮಣ್ಯದ ಬಳಿ ಭಿಕ್ಷುಕ ಎದುರುಗೊಂಡಿದ್ದಾನೆ. ಜಿಲ್ಲಾಧಿಕಾರಿಯವರು ಕಾರಿನತ್ತ ಬರುತ್ತಿದ್ದಂತೆ ಭಿಕ್ಷುಕ ಕೈ ಚಾಚಿದರೂ ಗಮನಿಸಲಿರಲಿಲ್ಲ. ಹೀಗಾಗಿ, ಕಾರಲ್ಲಿ ಕುಳಿತ ಬಳಿಕವೂ ಮತ್ತೆ ಶಾಲು ಒಡ್ಡಿದ್ದಾನೆ. ಈ ವೇಳೆ ಡಿಸಿಯವರು ಕೈಸನ್ನೆಮೂಲಕವೇ ಇಲ್ಲವೆಂದು ಸೂಚಿಸಿದಾಗ ಮತ್ತೆ ಕೈಚಾಚಿದ್ದು ಈ ವೇಳೆ ಎರಡು ಕೈ ಜೋಡಿಸಿ ನಮಸ್ಕರಿಸಿದ್ದಾನೆ. ಈ ಕುರಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಉಡುಪಿ: ಹೆಲ್ಮೆಟ್ ಧರಿಸದೆ ಬೈಕ್ ಸವಾರಿ ಮಾಡುತ್ತಿದ್ದವರನ್ನು ಪ್ರಶ್ನಿಸಿದ ಪೊಲೀಸರ ಮೇಲೆಯೇ ಎಗರಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿದ್ಯಾರ್ಥಿಗಳಾದ ಶ್ರೀವತ್ಸ ಮತ್ತು ಗಣೇಶ್ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ. ಉಡುಪಿ ಸಂಚಾರ ಪೊಲೀಸ್ ಠಾಣೆಯ ಉಪನಿರೀಕ್ಷಕ ಸುದರ್ಶನ್ ದೊಡ್ಡಮನಿ ಅವರು ಸಿಬಂದಿ ಸತೀಶ್ ಅವರೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದರು. ಈ ವೇಳೆ ಸಿಟಿ ಬಸ್ ನಿಲ್ದಾಣದ ಕಡೆಯಿಂದ ಕಲ್ಸಂಕ ಕಡೆ ಹೋಗುತ್ತಿರುವಾಗ ಓರ್ವ ವ್ಯಕ್ತಿ ತನ್ನ ಬೈಕ್‌ನಲ್ಲಿ ಕಲ್ಸಂಕ ಕಡೆಗೆ ಹೆಲ್ಮೆಟ್ ಧರಿಸದೇ ಮೊಬೈಲ್‌ನಲ್ಲಿ ಮಾತನಾಡುತ್ತಾ ಚಲಾಯಿಸುತ್ತಿದ್ದ. ನಿಲ್ಲಿಸುವಂತೆ ಸೂಚಿಸಿದಾಗ ಆತ ವೈನ್‌ಗೇಟ್ ಬಳಿ ಹೋಗಿ ನಿಲ್ಲಿಸಿದ್ದಾನೆ. ಬಳಿಕ ಆತನಿಗೆ ದಂಡ ಕಟ್ಟುವಂತೆ ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಆತ “ನೀವು ನೋಟೀಸ್ ನೀಡಿ’ ಎಂದು ಹೇಳಿದ್ದಾನೆ. ಅದಕ್ಕೆ ಪೊಲೀಸರು ನಿಮ್ಮ ಮನೆಯ ವಿಳಾಸ ಹೊಂದಿರುವ ಯಾವುದಾದರೊಂದು ದಾಖಲೆ ತೋರಿಸಲು ಕೇಳಿಕೊಂಡಾಗ ವಾಹನ ಸವಾರ ನಿರಾಕರಿಸಿದ್ದಾನೆ. ಇದೇ ವೇಳೆ ಬುಲೆಟ್‌ನಲ್ಲಿ ಮತ್ತೊಬ್ಬ ಆರೋಪಿ ಬಂದು “ದಂಡ ಹಾಕುತ್ತೀಯಾ’ ಎಂದು ಏರು ಧ್ವನಿಯಲ್ಲಿ ಮಾತನಾಡಿ ಗದ್ದಲ…