ಮಂಗಳೂರು: ವಂಚನೆ ಪ್ರಕರಣವೊಂದಕ್ಕೆ ಸಂಬOಧಿಸಿದOತೆ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳದ ಕೊಲ್ಲಂ ನಿವಾಸಿ ಜಯಚಂದ್ರ (66) ಎಂದು ಗುರುತಿಸಲಾಗಿದೆ. ಆರೋಪಿ ಜಯಚಂದ್ರ ವಿರುದ್ಧ 2019ರಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಅಂದಿನಿOದ ಆತ ನಾಪತ್ತೆಯಾಗಿದ್ದನು. ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಕಾರಣ ಆತನ ವಿರುದ್ಧ ವಾರಂಟ್ ಜಾರಿಯಾಗಿತ್ತು. ಆತ ಪತ್ತೆಯಾಗದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಎನ್ನುವ ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಆರೋಪಿಯ ಬಗ್ಗೆ ಖಚಿತ ಮಾಹಿತಿ ಪಡೆದ ಕಂಕನಾಡಿ ನಗರ ಪೊಲೀಸ್ ಸಿಬ್ಬಂದಿಗಳಾದ ಬಾಲರಾಜ್ ಮತ್ತು ರವಿಕುಮಾರ್ ಅವರು, ಕೇರಳದ ಕೊಲ್ಲಂ ನಗರದ ವಟ್ಟಕುಟ್ಟು ಲಲಿತಾ ಮಂದಿರದಲ್ಲಿರುವ ಆತನ ನಿವಾಸಕ್ಕೆ ತೆರಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Author: main-admin
ಬೆಂಗಳೂರು: ‘ಸಾಕು ನಾಯಿಗಳನ್ನು ಅವುಗಳ ಮಾಲೀಕರು ಸರಿಯಾಗಿ ನಿಯಂತ್ರಣ ಮಾಡದೆ ಬೇಕಾಬಿಟ್ಟಿ ತಿರುಗಲು ಬಿಡುತ್ತಿರುವ ಕಾರಣ ಗಲಾಟೆಗಳು ನಡೆಯುತ್ತಿವೆ. ಕ್ಷುಲ್ಲಕ ಆರೋಪಗಳನ್ನು ಹೊತ್ತ ಕ್ರಿಮಿನಲ್ ಪ್ರಕರಣಗಳು ಕೋರ್ಟ್ ಮೆಟ್ಟಿಲೇರುತ್ತಿರುವುದು ಹೆಚ್ಚಾಗುತ್ತಿದೆ’ ಎಂದು ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ. ನಮ್ಮ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಮತ್ತು ಇದಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಯನ್ನು ರದ್ದುಪಡಿಸಬೇಕು’ ಎಂದು ಕೋರಿ ದಾಸರಹಳ್ಳಿಯ ‘ಕೆಎಸ್‌ಆರ್ ಕಾರ್ಡೇಲಿಯಾ ಅಪಾರ್ಟ್‌ಮೆಂಟ್’ ನಿವಾಸಿಗಳಾದ ವಕೀಲ ಅಭಿಷೇಕ್, ಕೀಲು ಮೂಳೆ ತಜ್ಞ ಡಾ.ಅಲೋಕ್, ಎಂಜಿನಿಯರ್ ಋಷಿಕೇಶ್ ಮತ್ತು ನಿವೃತ್ತ ಸರ್ಕಾರಿ ನೌಕರ ಅಶೋಕ್ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಸಾಕು ನಾಯಿಗಳನ್ನು ಮನೆಯಿಂದ ಹೊರಗೆ ಕರೆದುಕೊಂಡು ಬಂದಾಗ ಅವು ಎಲ್ಲೆಂದರಲ್ಲಿ ಮಲ-ಮೂತ್ರ ವಿಸರ್ಜನೆ ಮಾಡುವ ಕಾರಣದಿಂದ ಮನಸ್ತಾಪಗಳು ಉಂಟಾಗುತ್ತಿವೆ. ಸಾಕು ನಾಯಿಗಳ ಮಾಲೀಕರು ಅವುಗಳನ್ನು ನಿಯಂತ್ರಿಸದೆ ಇರುವುದು ತರವಲ್ಲ. ಕಡೆಗೆ ಕ್ಷುಲ್ಲಕ ಕಾರಣಗಳೇ ದೊಡ್ದದಾಗಿ…
ಮಂಗಳೂರು : ನಗರದ ನಂತೂರು ವೃತ್ತದ ಬಳಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿಯಾಗಿದ್ದು ಹಿಂಬದಿ ಸವಾರೆಯಾಗಿದ್ದ ಯುವತಿಯ ಮೇಲೆ ಬಸ್ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬಳ್ಳಾಲ್ ಬಾಗ್ ನಿವಾಸಿ ದೀಪ್ತಿ (26) ಮೃತಪಟ್ಟ ಯುವತಿ. ಈಕೆ ತನ್ನ ಭಾವೀ ಪತಿಯೊಂದಿಗೆ ಶಿವಭಾಗ್ ಕಡೆಯಿಂದ ಸ್ಕೂಟರ್ ನಲ್ಲಿ ವಾಮಂಜೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ, ಕದ್ರಿ ಶಿವಭಾಗ್ ಕಡೆಯಿಂದ ನಂತೂರು ಕಡೆಗೆ ಸಾಗುತ್ತಿದ್ದ ಬಸ್ ತಾಗಿದ್ದು ಹಿಂಬದಿಯಿದ್ದ ಸವಾರೆ ನೆಲಕ್ಕೆ ಬಿದ್ದಿದ್ದಾರೆ. ಈ ವೇಳೆ, ಬಸ್ ಆಕೆಯ ಹೊಟ್ಟೆಯ ಮೇಲೆ ಹರಿದಿದ್ದು ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಎಜೆ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಆಕೆ ಅಸುನೀಗಿದ್ದಾರೆ. ಸ್ಕೂಟರ್ ಸವಾರನಾಗಿದ್ದ ಯುವಕ ಅಪಾಯದಿಂದ ಪಾರಾಗಿದ್ದಾನೆ. ನಂತೂರು ಬಳಿಯ ಬಸ್ ನಿಲ್ದಾಣ ಎದುರಲ್ಲೇ ಘಟನೆ ನಡೆದಿದ್ದು ಕುಡುಪು ಭಾಗಕ್ಕೆ ತೆರಳುತ್ತಿದ್ದ 22 ನಂಬರಿನ ಖಾಸಗಿ ಬಸ್ ಡಿಕ್ಕಿಯಾಗಿದೆ. ಬಸ್ ವೇಗವಾಗಿತ್ತೇ, ಸ್ಕೂಟರ್ ಬಲ ಭಾಗದಿಂದ ಎದುರಿಗೆ ಬಂದಿತ್ತೇ ಎನ್ನುವುದು ಗೊತ್ತಾಗಿಲ್ಲ ಎಂದು…
ಮಂಗಳೂರು : ಕಳೆದ 14 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುಕ್ಕಚೇರಿ ಉಳ್ಳಾಲದ ಮಹಮ್ಮದ್ ಸಂಶೀರ್ ಎಂದು ತಿಳಿಯಲಾಗಿದೆ. ಉಳ್ಳಾಲ ಠಾಣಾ ಮೊ.ನಂ 312/2011 ಕಲಂ 8(c) (ii) r/w 20(b) NDPS ACT ಹಾಗೂ ಮಾನ್ಯ JMFC II ನೇ ನ್ಯಾಯಾಲಯದ CC ನಂ 1757/13 ಪ್ರಕರಣದಲ್ಲಿ ಆರೋಪಿ ತಲೆ ಮರೆಸಿಕೊಂಡಿದ್ದ ಎನ್ನಲಾಗಿದೆ. ಆರೋಪಿಯನ್ನು ಪೊಲೀಸರು ಅಪಾರ್ಟ್ಮೆಂಟ್ ರೂಮ್ ನಂ 07 ತೋಯಿಬ್ ಮಸೀದಿ ಎದುರುಗಡೆ, ಮುಕ್ಕಚೇರಿ ಉಳ್ಳಾಲದ ಬಳಿ ನ ಪತ್ತೆ ಹಚ್ಚಲಾಯಿತು. ಇದೀಗ ನ್ಯಾಯಾಲಯವು ಆರೋಪಿತನಿಗೆ LPC ವಾರಂಟ್ ಹೊರಡಿಸಿ, 14 ವರ್ಷಗಳ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ.
ಸುಳ್ಯ: ಸುಳ್ಯ ತಾಲೂಕಿನ ಕಲ್ಲುಗುಂಡಿ ನಿವಾಸಿ ಶ್ರೀಮತಿ ಸಾಹಿತ್ಯಾ ರೈ (27) ಅವರ ಮೇಲೆ ಪತಿ ಹಾಗೂ ಮಾವರು ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಸಾಹಿತ್ಯಾ ರೈ ಅವರ ಪತಿ ಯಶಸ್ವಿ ರೈ (30) ಹಾಗೂ ಮಾವ ನಿತ್ಯಾನಂದ ರೈ (58) ಇಬ್ಬರೂ ಸೇರಿ ಮುಖಕ್ಕೆ ಕಚ್ಚಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಸಾಹಿತ್ಯಾ ರೈ ಅವರು ಈ ವಿಚಾರವನ್ನು ತಕ್ಷಣವೇ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದಲ್ಲಿರುವ ತಮ್ಮ ಪೋಷಕರಿಗೆ ದೂರವಾಣಿ ಮೂಲಕ ತಿಳಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಪೋಷಕರು ರಾತ್ರಿಯೇ ಕಾರಿನಲ್ಲಿ ಸುಳ್ಯಕ್ಕೆ ತೆರಳಿ ಗಾಯಾಳು ಸಾಹಿತ್ಯಾ ರೈ ಹಾಗೂ ಅವರ ಮಗುವನ್ನು ಕರೆತಂದು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಗಾಯಾಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಜೆಪಿ ಚುನಾವಣಾ ಉಸ್ತುವಾರಿ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ, ಬಿಜೆಪಿ ತಮಿಳುನಾಡು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅಣ್ಣಾಮಲೈ ಪ್ರಮುಖ ಜವಾಬ್ದಾರಿಗಳು ನೀಡಿರಲಿಲ್ಲ. ಇತ್ತೀಚೆಗೆ ಚುನಾವಣಾ ಉಸ್ತುವಾರಿ ಜವಾಬ್ದಾರಿ ನೀಡಲಾಗಿತ್ತು. ಇದೀಗ ಈ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಫೈರ್ ಬ್ರಾಂಡ್ ಆಗಿ ಗುರುತಿಸಿಕೊಂಡಿರುವ ನಾಯಕ ಅಣ್ಣಾಮಲೈ ನಿರ್ಧಾರ ಹಲವರಿಗೆ ಶಾಕ್ ಕೊಟ್ಟಿದೆ. ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಅಣ್ಣಾಮಲೈಗೆ ಚುನಾವಣಾ ಉಸ್ತುವಾರಿ ಜವಾಬ್ದಾರಿ ನೀಡಲಾಗಿತ್ತು. ಇದೀಗ ಅಣ್ಣಾಮಲೈ ತಮ್ಮ ಚುನಾವಣಾ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮಿಳುನಾಡಿನ 6 ವಿಧಾನಸಭಾ ಕ್ಷೇತ್ರಗಳ ಚನಾವಣಾ ಉಸ್ತುವಾರಿ ಜವಾಬ್ದಾರಿಯನ್ನು ಅಣ್ಣಾಮಲೈಗೆ ವಹಿಸಲಾಗಿತ್ತು. ಆದರೆ ಅಣ್ಣಾಮಲೈ ರಾಜೀನಾಮೆ ನೀಡಿ ಜವಾಬ್ದಾರಿಯಿಂದ ಹೊರಬಂದಿದ್ದಾರೆ. ಅಣ್ಣಾಮಲೈ ರಾಜೀನಾಮೆಗೆ ಕಾರಣವೇನು? ರಾಜೀನಾಮೆ ಕುರಿತು ಸುದ್ದಿಗೋಷ್ಠಿ ನಡೆಸಿದ ಅಣ್ಣಾಮಲೈ ಮಹತ್ವದ ವಿಚಾರ ಬಹಿರಂಗಪಡಿಸಿದ್ದಾರೆ. 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 6 ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ಪಕ್ಷ ನೀಡಿದೆ. ಆದರೆ ಈ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಇದಕ್ಕೆ ಮುಖ್ಯ ಕಾರಣ ನನ್ನ…
ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆಯ ಅ.ಕ್ರ. 69/2019 ಪ್ರಕರಣದಲ್ಲಿ 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಕೇರಳ ರಾಜ್ಯದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದರಿ ಪ್ರಕರಣವು ಐಪಿಸಿ ಕಲಂ 409, 420, 507 ಹಾಗೂ 34 ಅನ್ವಯ ದಾಖಲಾಗಿತ್ತು. ಪ್ರಕರಣ ದಾಖಲಾಗಿದ ದಿನದಿಂದಲೇ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೇ ಇದ್ದ ಹಿನ್ನೆಲೆ, ಮಾನ್ಯ ನ್ಯಾಯಾಲಯವು ಆತನ ವಿರುದ್ಧ ದಸ್ತಗಿರಿ ವಾರಂಟ್ ಹೊರಡಿಸಿತ್ತು. ಆದರೂ ಆರೋಪಿ ಪತ್ತೆಯಾಗದೆ ತಲೆಮರೆಸಿಕೊಂಡಿದ್ದರಿಂದ, ಈ ಪ್ರಕರಣದಲ್ಲಿ absconding charge sheet ಕೂಡ ಸಲ್ಲಿಸಲಾಗಿತ್ತು.ಇಂದು (03/02/2026) ಮಾನ್ಯ ಸಹಾಯಕ ಪೊಲೀಸ್ ಆಯುಕ್ತರು, ದಕ್ಷಿಣ ಉಪವಿಭಾಗ ಹಾಗೂ ಕಂಕನಾಡಿ ನಗರ ಠಾಣೆಯ ಪೊಲೀಸ್ ನಿರೀಕ್ಷಕರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪನಿರೀಕ್ಷಕರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಠಾಣಾ ಸಿಬ್ಬಂದಿಗಳಾದ HC 944 ಬಾಲರಾಜ್ ಮತ್ತು PC 3046 ರವಿಕುಮಾರ್ ರವರು ಕೇರಳ ರಾಜ್ಯದ ಕೊಲ್ಲಂ ನಗರದ ವಟ್ಟಕುಟ್ಟು ಪ್ರದೇಶದ ಲಲಿತ ಮಂದಿರಂ ಎಂಬ ಮನೆಯಲ್ಲಿ ಆರೋಪಿಯನ್ನು ಬಂಧಿಸಿದರು.ಬಂಧಿತ ಆರೋಪಿಯನ್ನು…
ಮಂಗಳೂರು: ನಗರದ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ಹಾವೇರಿ ಜಿಲ್ಲೆಯ ಮಾರುತಿ ಲಮಾಣಿ (36) ಅವರು ತೀವ್ರ ರಕ್ತದೊತ್ತಡದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಮಾರುತಿ ಲಮಾಣಿ ಅವರು ಕಳೆದ ಆರು ವರ್ಷಗಳಿಂದ ಮಂಗಳೂರು ನಗರದ ಸಶಸ್ತ್ರ ನಗರ ಮೀಸಲು ಪಡೆ (ಸಿಎಆರ್)ಯಲ್ಲಿ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದು, ಸಂಚಾರಿ ಉತ್ತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದಕ್ಕೂ ಮೊದಲು ಕದ್ರಿ ಠಾಣೆ ಸೇರಿದಂತೆ ನಗರದ ಸಿಎಆರ್ ಕಚೇರಿಯಲ್ಲಿ ಹೆಚ್ಚಿನ ಅವಧಿಗೆ ಕರ್ತವ್ಯ ನಿರ್ವಹಿಸಿದ್ದರು. ಎರಡು ದಿನಗಳ ಹಿಂದೆ ರಾತ್ರಿ ಪಾಳೆಯ ಕರ್ತವ್ಯ ಮುಗಿಸಿ ಬಿಕರ್ನಕಟ್ಟೆಯಲ್ಲಿರುವ ತಮ್ಮ ನಿವಾಸಕ್ಕೆ ವಾಪಸ್ಸಾದ ಅವರು, ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಶ್ರಾಂತಿ ಪಡೆದಿದ್ದರು. ನಂತರ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಮನೆಯವರು ತಕ್ಷಣ ನಗರದ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ತೀವ್ರ ರಕ್ತದೊತ್ತಡ ಪತ್ತೆಯಾಗಿದ್ದು, ಕಳೆದ ಎರಡು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. 2016ನೇ ಬ್ಯಾಚ್‌ನ…
ಮಂಗಳೂರು: “ಜಯಕಿರಣ ಫಿಲಂಸ್ ಲಾಂಛನದಲ್ಲಿ , ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಹಾಗೂ ಕೆ. ಸೂರಜ್ ಶೆಟ್ಟಿ ನಿರ್ದೇಶನದಲ್ಲಿ ಅದ್ಭುತವಾಗಿ ಸಿದ್ಧಗೊಂಡಿರುವ ನಾನ್ ವೆಜ್ ತುಳು ಸಿನಿಮಾ ಫೆಬ್ರವರಿ 6 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ, ಈ ಸಿನಿಮಾವನ್ನು ಎಲ್ಲ ಮಲ್ಟಿಪ್ಲೆಕ್ಸ್‌ನಲ್ಲೂ ಕೇವಲ 99 ರೂ.ಗೆ ನೋಡಬಹುದಾಗಿದೆ. ದುಬಾರಿ ಟಿಕೆಟ್ ಕೊಟ್ಟು ಸಿನಿಮಾ ನೋಡಲು ಸಾಧ್ಯವಾಗದವರು ಇಂಥದ್ದೊಂದು ಸುಂದರ ಹಾಗೂ ಅತ್ಯುತ್ತಮ ಸಿನಿಮಾವನ್ನು ನೋಡದೆ ಇರಬಾರದು ಎಂಬ ಉದ್ದೇಶದಿಂದ ಕೇವಲ 99 ರೂ. ಟಿಕೆಟ್ ನಿಗದಿಪಡಿಸಿದ್ದು, ಇದು ತುಳುಚಿತ್ರರಂಗದಲ್ಲಿ ಒಂದು ಹೊಸ ಸಂಚಲನ ಉಂಟು ಮಾಡಿದೆ. ಸಿಂಗಲ್ ಥಿಯೇಟರ್‌ಗಿಂತಲೂ ಕಡಿಮೆ ದರದಲ್ಲಿ ಈ ಸಿನಿಮಾವನ್ನು ತುಳು ಪ್ರೇಮಿಗಳು ಮಲ್ಟಿಫ್ಲೆಕ್ಸ್ ಗಳಲ್ಲಿ ನೋಡುವಂತಹ ಅವಕಾಶ ಇದಾಗಿದೆ“ ಎಂದು ಚಿತ್ರದ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ”ಕರಾವಳಿಯ ಪ್ರತಿಭೆಗಳಿಂದಲೇ ಸಿದ್ಧವಾಗಿರುವ ನಾನ್‌ವೆಜ್ ಒಂದು ಅತ್ಯುತ್ತಮ ಹಾಗೂ ಭಿನ್ನ ಕಥಾವಸ್ತುವನ್ನು ಹೊಂದಿದೆ. ಸು ಫ್ರಂ ಸೋ ಸಿನಿಮಾದ ಹೆಚ್ಚಿನ ಕಲಾವಿದರು ನಾನ್‌ವೆಜ್ ಸಿನಿಮಾದಲ್ಲೂ ಇದ್ದಾರೆ.…
ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪೆನಿ, ಕಚೇರಿಗಳು, ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಫೆ 2 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ಗಳು ವಾಣಿಜ್ಯ ಸಂಸ್ಥೆಗಳಿಗೆ ಟ್ರೇಡ್ ಲೈಸೆನ್ಸ್ ಮಂಜೂರು ಮಾಡುವಾಗಲೇ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಎಂಬ ಶರತ್ತು ವಿಧಿಸಿ ಮಂಜೂರು ಮಾಡಬೇಕು. ಈ ಬಗ್ಗೆ ಆಗ್ಗಿಂದಾಗೆ ಪರಿಶೀಲನೆ ನಡೆಸಬೇಕು ಎಂದರು. ರಾಷ್ಟ್ರ್ರೀಯ ಹೆದ್ದಾರಿಗಳಲ್ಲಿ ವಿವಿಧ ಸೂಚನಾ ಫಲಕಗಳಲ್ಲಿ ಕನ್ನಡದಲ್ಲಿ ಮಾಹಿತಿ ನಮೂದಿಸಲು ರಾಷ್ಟ್ರ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚಿಸಲಾಗುವುದು. ಬ್ಯಾಂಕುಗಳಲ್ಲಿ ಅರ್ಜಿ ನಮೂನೆಗಳನ್ನು ಕನ್ನಡದಲ್ಲಿಯೂ ಒದಗಿಸಲು ಬ್ಯಾಂಕುಗಳ ಸಮಿತಿ ಸಭೆಯಲ್ಲಿ ನಿರ್ದೇಶಿಸಲಾಗುವುದು ಎಂದ ಅವರು, ಇಂಗ್ಲಿಷ್ ಮೀಡಿಯಂ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಬೋಧಿಸುತ್ತಿದ್ದರೂ, ಶಾಲೆಯ ನಾಮಫಲಕಗಳಲ್ಲಿ ಕನ್ನಡದಲ್ಲಿಯೂ…










