ಸುರತ್ಕಲ್: ಜೂಜಾಟ ಆಡುತ್ತಿದ್ದ ಆರೋಪದಲ್ಲಿ 9 ಮಂದಿಯನ್ನು ಸಿಸಿಬಿ ಮತ್ತು ಪಣಂಬೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬೈಕಂಪಾಡಿ ರೈಲು ಮಾರ್ಗದ ಸಮೀಪದಿಂದ ಬಂಧಿಸಿದ್ದಾರೆ. ಆರೋಪಿಗಳನ್ನು ಮುಹಮ್ಮದ್ ಹನೀಫ್, ಝಾಕಿರ್ ಅಹ್ಮದ್, ವಿಲ್ಫ್ರೆಡ್ ಡಿಸೋಜ, ಅನಿಲ್ ಕುಮಾರ್, ಮುರ್ತೋಝ ಇಮಾಮ್ ಸಾಬ್, ಶಶಿ ದೇವಾಡಿಗ, ಮೈಲಾರಪ್ಪ, ರಾಯ್ ಡಯಾಸ್, ಜೋನ್ ರಾಬರ್ಟ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಆಟಕ್ಕೆ ಬಳಸಿದ್ದ 11,265 ರೂ. ನಗದು ಹಾಗೂ ಇತರ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
Author: main-admin
ಮಂಗಳೂರು: ನಗರದಲ್ಲಿ ಮಹಿಳೆಯೊಬ್ಬರು ಬೈಕಿನಿಂದ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸಂಭವಿಸಿದೆ. ಸಾವನ್ನಪ್ಪಿದವರು ಗೋರಿಗುಡ್ಡ ನಿವಾಸಿ ಕವಿತಾ (30) ಎಂದು ತಿಳಿಯಲಾಗಿದೆ. ರಾತ್ರಿ ಅಭಿಷೇಕ್ ಅವರು ಕವಿತಾ ಹಾಗೂ ನವ್ಯಾ (15) ಅವರನ್ನು ಪಲ್ಸರ್ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಬಂದು ಗೋರಿಗುಡ್ಡ ವೆಲೆನ್ಸಿಯಾ ಚರ್ಚ್ ರಸ್ತೆಯಲ್ಲಿರುವ ತರಕಾರಿ ಅಂಗಡಿಯಿಂದ ಎಳನೀರು ಖರೀದಿಸಿದ್ದರು. ಬಳಿಕ ಅಲ್ಲಿಂದ ಮನೆಯ ಕಡೆಗೆ ಹೋಗುತ್ತಿದ್ದಾಗ ಕವಿತಾ ರಸ್ತೆಗೆ ಬಿದ್ದರು. ಅವರನ್ನು ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಕದ್ರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ಮೂಲತಃ ಮಂಗಳೂರು ನಿವಾಸಿ, ಮುಂಬೈಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (70) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ಮುಂಬೈಯಲ್ಲಿ ನಿಧನರಾದರು. ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ತನ್ನ 14ನೇ ವಯಸ್ಸಿನಲ್ಲೇ ಮುಂಬೈಗೆ ತೆರಳಿದ್ದ ರಘುನಂದನ್ ಕಾಮತ್ ತನ್ನ ಸಹೋದರನ ರೆಸ್ಟೋರೆಂಟ್ ನಲ್ಲಿ ಕೆಲಸಕ್ಕೆ ಸೇರಿದರು. 1984 ರಲ್ಲಿ ಕೇವಲ 4 ಮಂದಿ ಸಿಬ್ಬಂದಿ ಜತೆ ನ್ಯಾಚುರಲ್ ಐಸ್ ಕ್ರೀಂ ಸಂಸ್ಥೆಯನ್ನು ಆರಂಭಿಸಿದರು. ಪ್ರಸ್ತುತ ನ್ಯಾಚುರಲ್ ಸಂಸ್ಥೆ ದೇಶದಲ್ಲೇ ಪ್ರತಿಷ್ಠಿತ ಐಸ್ ಕ್ರೀಂ ಉದ್ಯಮವಾಗಿ ಸಾವಿರಾರು ಮಂದಿಗೆ ಉದ್ಯೋಗ ನೀಡುತ್ತಿದೆ. ದೇಶಾದ್ಯಂತ 156 ಔಟ್ ಲೆಟ್ ಹೊಂದಿದ್ದು, ವರ್ಷಕ್ಕೆ 400 ಕೋಟಿ ರೂ.ಗೂ ಅಧಿಕ ವ್ಯವಹಾರ ಮಾಡುತ್ತಿದೆ.
ಮಂಗಳೂರು : ಪೊಲೀಸ್ ವಾಹನವೊಂದರ ವಿಮೆ ಮುಕ್ತಾಯವಾಗಿದೆ ಎಂಬ ವಿಡಿಯೋ ಇಂದು ಬೆಳಗ್ಗಿನಿಂದ ಮಂಗಳೂರು ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿತ್ತು. ಇದೀಗ ಪೊಲೀಸ್ ಕಮಿಷನರ್ ವಿಡಿಯೋ ಮಾಡಿದವನಿಗೆ ದಂಡದ ಬಿಸಿ ಮುಟ್ಟಿಸಿ, ವಿಮೆ ಮುಕ್ತಾಯವಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಮೇ 16ರಂದು ಸಂಜೆ ನಗರದ ಕುಂಟಿಕಾನ ಬಳಿ ಕೆಎ-19-ಜಿ-1023 ನೋಂದಣಿಯ ಹೆದ್ದಾರಿ ಗಸ್ತು ವಾಹನ ಕರ್ತವ್ಯದಲ್ಲಿತ್ತು. ಈ ವೇಳೆ ವ್ಯಕ್ತಿಯೋರ್ವನಿಗೆ ಟ್ರಾಫಿಕ್ ಪೊಲೀಸ್ ವಾಯುಮಾಲಿನ್ಯ ತಪಾಸಣಾ ಪತ್ರ ತೋರಿಸಿಲ್ಲ ಎಂದು ದಂಡ ವಿಧಿಸಿದ್ದರು. ಇದರಿಂದ ಕುಪಿತನಾದ ಆತ ಹೆದ್ದಾರಿ ಗಸ್ತು ವಾಹನದ ವಿಡಿಯೋ ಚಿತ್ರೀಕರಣ ಮಾಡಿ ಅದರ ವಿಮಾ ಅವಧಿಯು ಮುಕ್ತಾಯವಾಗಿದೆ. ಪೊಲೀಸ್ ಇಲಾಖೆ ವಿಮಾ ಕಂತು ಪಾವತಿಸದ ವಾಹನಗಳನ್ನು ಬಳಸುತ್ತಿದೆ ಎಂದು ಸೋಶಿಯಲ್ ಮೀಡಿಯಾಗಳಲ್ಲಿ ವಿಡಿಯೋ ವೈರಲ್ ಮಾಡಿದ್ದಾನೆ. ವಿಡಿಯೋ ವೈರಲ್ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಇದು ತಪ್ಪು ಮಾಹಿತಿ, ಪೊಲೀಸ್ ಇಲಾಖೆಯ ಎಲ್ಲಾ ವಾಹನಗಳು ಕಡ್ಡಾಯವಾಗಿ ಕರ್ನಾಟಕ ಗವರ್ನಮೆಂಟ್ ಇನ್ಯುರೆನ್ಸ್…
ಮಂಗಳೂರು: ಮನೆಯೊಂದರ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಚಿನ್ನಾಭರಣ, ನಗದು ಕಳವು ಮಾಡಿರುವ ಘಟನೆ ನಗರದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಾಗುರಿ ಗುಡ್ಡೆತೋಟದಲ್ಲಿ ನಡೆದಿದೆ. ಮೇ 10ರಂದು ಸಂಜೆ ಮನೆಯವರು ಮುಲ್ಕಿಗೆ ಯಕ್ಷಗಾನ ನೋಡಲೆಂದು ಹೋಗಿ ಮರುದಿನ ಸಂಜೆ ಮನೆಗೆ ವಾಪಸಾಗಿದ್ದರು. ಆವಾಗ ಮನೆಯಲ್ಲಿದ್ದ 16 ಗ್ರಾಂ ತೂಕದ ಅಂದಾಜು 95,000 ರೂ. ಮೌಲ್ಯದ ಚಿನ್ನದ ಬಳೆ, ಎಚ್‌ಪಿ ಕಂಪೆನಿಯ ಲ್ಯಾಪ್ಟಾಪ್, 10,000 ರೂ. ನಗದು, ಬೆಳ್ಳಿಯ ತಟ್ಟೆ, ಬ್ರೇಸ್ ಲೆಟ್ ಮೊದಲಾದವುಗಳನ್ನು ಕಳವು ಮಾಡಿರುವುದು ಗಮನಕ್ಕೆ ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಉಳ್ಳಾಲ : ಎರಡು ಸ್ಕೂಟರ್‌ಗಳ ಮಧ್ಯೆ ನಡೆದ ಅಪಘಾತದಲ್ಲಿ ಸಹ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ನಗರದ ಹೊರವಲಯದ ಕಲ್ಲಾಪು ಜಂಕ್ಷನ್ ನಲ್ಲಿ ನಡೆದಿದೆ. ಉಳ್ಳಾಲ ಕೋಟೆಪುರ, ಕೋಡಿ ನಿವಾಸಿ ಅಹಮ್ಮದ್ ನಿಷಾದ್ (22) ಮೃತಪಟ್ಟ ಯುವಕ. ನಿಷಾದ್ ಮುಂಜಾನೆ 4ಗಂಟೆಯ ವೇಳೆಗೆ ಸಯ್ಯದ್ ಹಫೀಜ್ ಎಬುವರೊಂದಿಗೆ ಸ್ಕೂಟರ್ ನಲ್ಲಿ ಸಹ ಸವಾರನಾಗಿ ಮಂಗಳೂರಿನಿಂದ ತೊಕ್ಕೊಟ್ಟಿಗೆ ಬರುತ್ತಿದ್ದರು. ಈ ವೇಳೆ ಕಲ್ಲಾಪು ಜಂಕ್ಷನ್ ನಲ್ಲಿ ತೊಕ್ಕೊಟ್ಟಿನಿಂದ ಬಂದು ಗ್ಲೋಬಲ್ ಮಾರ್ಕೆಟ್ ಗೆ ಕ್ರಾಸ್ ಆಗುತ್ತಿದ್ದ ಸ್ಕೂಟರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ಸ್ಕೂಟರ್ ಸವಾರರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಗಂಭೀರ ಗಾಯಗೊಂಡ ನಿಷಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಸ್ಕೂಟರ್ ಸವಾರ ಹಫೀಜ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮತ್ತೋರ್ವ ಸ್ಕೂಟರ್ ಸವಾರ ಕುತ್ತಾರು ಪದವು ನಿವಾಸಿ ಅಬೂಬಕ್ಕರ್ ಸಿದ್ದೀಕ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬಂಟ್ವಾಳ: ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ ಘಟನೆ ಸರಪಾಡಿಯ ಹಂಚಿಕಟ್ಟೆಯಲ್ಲಿ ನಡೆದಿದೆ. ಇದೀಗ ಈ ಯುವಕನ ಕುರಿತು ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.ಹಂಚಿಕಟ್ಟೆಯ ನೋಣಯ್ಯ ನಾಯ್ಕ ಅವರ ಮನೆಯ ಅಂಗಳದಲ್ಲಿ ಬಾವಿಯೊಂದಿದ್ದು, ಅದಕ್ಕೆ ಕಸ ಬೀಳದಂತೆ ಹಸಿರು ಬಣ್ಣದ ನರ್ಸರಿ ಕಟ್ಟಿದ್ದರು. ಮೇ 14ರಂದು ಸಂಜೆ 6ರ ಸುಮಾರಿಗೆ ಅವರ ಪುತ್ರ ಅಭಿಷೇಕ್ (3) ಮನೆಯ ಅಂಗಳದಲ್ಲಿ ಆಟ ಆಡುತ್ತಿದ್ದನು. ತಾಯಿ ಮನೆಯೊಳಗೆ ಇದ್ದು, ತಂದೆ ನೋಣಯ್ಯ ಅವರು ಕೆಲಸ ಮುಗಿಸಿ ಬಂದು ಹೊರಗೆ ಹೋಗಿದ್ದರು. ಆಡುತ್ತಿದ್ದ ಅಭಿಷೇಕ್ ಬಾವಿಯ ಕಟ್ಟೆಯನ್ನು ಹತ್ತಿ ಹಸಿರು ಬಣ್ಣದ ನರ್ಸರಿ ಹೋಗಿದ್ದು, ಮಧ್ಯಕ್ಕೆ ತಲುಪುವ ವೇಳೆ ಅದು ಭಾರದಿಂದ ಹರಿದಿದೆ. ಈ ವೇಳೆ ಮಗು ಏಕಾಏಕಿ ಬಾವಿಗೆ ಬಿದ್ದಿದೆ.ನೀರಿಗೆ ಏನೋ ಬಿದ್ದ ಶಬ್ದ ಕೇಳಿ ಓಡಿ ಬಂದು ನೋಡಿದಾಗ ಮಗು ನೀರಿಗೆ ಬಿದ್ದಿದೆ. ಬಳಿಕ ಬೊಬ್ಬೆ ಹಾಕಿದಾಗ ಮನೆಗೆ ಹೋಗುತ್ತಿದ್ದ ಉಮೇಶ್ ಮಠದಬೆಟ್ಟು ಎಂಬ…
ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ 6 ಜನರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ. ಪ್ರಜ್ವಲ್ (21), ಆರ್ಯನ್ (20), ಪ್ರಧುಮಾನ್ (21), ಹೆಮಾನ್ಯ (20), ಸುಭಾಸ್ (23), ನಿಶಾಂತ್ (22), ಅಮಿತ್ (20)ನನ್ನು ವಶಕ್ಕೆ ಪಡೆಯಲಾಗಿದೆ. ಫಾರೆನ್ಸಿಕ್ ವರದಿಯ ಪ್ರಕಾರ 6 ಮಂದಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಇನ್ನು ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಬೆಂಗಳೂರು : ಪತಿಯಿಂದ ಬೆಸರಿಸಿಕೊಂಡು ತವರು ಮನೆ ಸೇರಿದ್ದ ಪತ್ನಿಯನ್ನು ಮತ್ತೆ ಕರೆತರಲು ಪತಿಯೊಬ್ಬ ಆತ್ಮಹತ್ಯೆ ನಾಟಕವಾಡಲು ಹೋಗಿ ನೀಜವಾಗಿಯೂ ಸಾವನಪ್ಪಿದ ಘಟನೆ ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಬಿಹಾರ ಮೂಲದ ಅಮಿತ್ ಕುಮಾರ್ (28) ಮೃತ ವ್ಯಕ್ತಿ. 10 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಅಮಿತ್ ಕುಮಾರ್, ಜಿಮ್ ಟ್ರೈನರ್ ಆಗಿ ಕೆಲಸ ಮಾಡಿಕೊಂಡಿದ್ದ. ಕಳೆದ ಒಂದು ವರ್ಷದ ಹಿಂದೆ ಯುವತಿಯೊಬ್ಬಳನ್ನು ಪ್ರೀತಿಸಿ, ಪೋಷಕರ ವಿರೋಧದ ನಡುವೆಯೂ ವಿವಾಹವಾಗಿದ್ದ. ಆದರೆ, ಇತ್ತೀಚೆಗೆ ಪತ್ನಿ ನರ್ಸಿಂಗ್ ಕೋರ್ಸ್ ಸೇರಿದ ಬಳಿಕ ತನಗೆ ಸಮಯ ನೀಡುತ್ತಿಲ್ಲ, ಸ್ನೇಹಿತರೊಂದಿಗೆ ಸದಾ ಫೋನ್ ಕರೆಯಲ್ಲಿರುತ್ತಾಳೆ ಎಂಬ ವಿಚಾರಕ್ಕೆ ಇಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು. ಇದರಿಂದ ಬೇಸತ್ತ ಪತ್ನಿ, ಅಮಿತ್ ಕುಮಾರ್ನನ್ನು ತೊರೆದು ಬೇರೆಡೆ ವಾಸವಿದ್ದಳು ಎಂದು ತಿಳಿದುಬಂದಿದೆ. ಪತ್ನಿಗೆ ಕರೆ ಮಾಡುತ್ತಿದ್ದ ಅಮಿತ್ ಕುಮಾರ್ ಮನೆಗೆ ಬರುವಂತೆ ಪದೇ ಪದೇ ಮನವಿ ಮಾಡುತ್ತಿದ್ದ. ಬುಧವಾರವೂ ಕೂಡ ಪತ್ನಿಗೆ ವಿಡಿಯೋ ಕಾಲ್ ಮಾಡಿರುವ ಆತ,…
ಬೆಂಗಳೂರು : ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯೊಬ್ಬಳ ಮೃತದೇಹ ಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತರನ್ನು 21 ವರ್ಷ ವಯಸ್ಸಿನ ಪ್ರಭುದ್ಧ ಎಂದು ಗುರುತಿಸಲಾಗಿದೆ. ಪ್ರಭುದ್ಧ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು. ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಈಕೆಯ ಶವ ಪತ್ತೆಯಾಗಿದೆ. ನಿನ್ನೆ ಸಂಜೆ ನಡೆದಿರುವ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ನಡೆದ ವೇಳೆ ಮನೆಯಲ್ಲಿ ಯಾರು ಇರಲಿಲ್ಲ. ತಾಯಿ ಹೊರಗೆ ಕೆಲಸಕ್ಕೆ ಹೋಗಿದ್ರು. ಮೃತಳ ತಮ್ಮ ಮನೆಗೆ ಬಂದು ನೋಡಿದಾಗ ಸಹೋದರಿ ಪ್ರಭುದ್ಧ ಸಾವನ್ನಪ್ಪಿರೋದು ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಸುಬ್ರಹ್ಮಣ್ಯಪುರ ಪೊಲೀಸರಿಂದ ಅನುಮಾನಾಸ್ಪದ ಸಾವು ಕೇಸ್ ದಾಖಲಾಗಿದೆ. ಸದ್ಯ ಪೊಲೀಸರು ಮೃತ ಯುವತಿಯ ಮೊಬೈಲ್ ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ. ವಿದ್ಯಾಭ್ಯಾಸದ ವಿಚಾರಕ್ಕೆ ಸಾವನ್ನಪ್ಪಿದ್ದಾಳಾ ಅಥವಾ ಬೇರೆ ಕಾರಣ ಇದೆಯಾ? ಅನ್ನೋ ಆಯಾಮದಲ್ಲಿ ತನಿಖೆ ನಡೆಯುತ್ತಿದೆ.