Author: main-admin

ಮೂಡುಬಿದಿರೆ: ನಸುಕಿನ ಜಾವ ಕಾರಿನಲ್ಲಿ ಬಂದ ಅಪರಿಚಿತರು ರಿಕ್ಷಾವನ್ನು ಅಡ್ಡಗಟ್ಟಿ ಹಣ್ಣಿನ ವ್ಯಾಪಾರಿ ಬಳಿಯಿದ್ದ.19 ಸಾವಿರ ರೂ.ವನ್ನು ದೋಚಿ ಪರಾರಿಯಾಗಿರುವ ಘಟನೆ ಮಾಂಟ್ರಾಡಿಯಲ್ಲಿ ಗುರುವಾರ ವರದಿಯಾಗಿದೆ. ಈದು ಗ್ರಾಮದ ಮುಹಮ್ಮದ್ ಹಣ ಕಳೆದುಕೊಂಡವರು ಎಂದು ತಿಳಿದು ಬಂದಿದೆ. ಮೂಡುಬಿದಿರೆ ಮಾರುಕಟ್ಟೆಯಲ್ಲಿ ಹಣ್ಣು ಹಂಪಲು ವ್ಯಾಪಾರಿಯಾಗಿರುವ ಮುಹಮ್ಮದ್ ಮಂಗಳೂರಿನಿಂದ ಹಣ್ಣು ಖರೀದಿಸಲು ಗುರುವಾರ ನಸುಕಿನ ಜಾವ ಈದುನಿಂದ ರಿಕ್ಷಾದಲ್ಲಿ ಹೊರಟಿದ್ದರು. ಮಾಂಟ್ರಾಡಿ ತಲುಪಿದಾಗ ಕಾರಿನಲ್ಲಿ ಬಂದ ಅಪರಿಚಿತರ ತಂಡ ಇವರ ರಿಕ್ಷಾವನ್ನು ಅಡ್ಡಗಟ್ಟಿ, ಬೆದರಿಸಿ 19 ಸಾವಿರ ರೂ. ನಗದು ಲೂಟಿ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ಇರುವ ಅಡಿಕೆ ಹಾಗೂ ಕಾಡುತ್ಪತ್ತಿ ಖರೀದಿ ಅಂಗಡಿಯಿAದ ನಗದು ಕಳ್ಳತನ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.  ಮೂಡಿಗೆರೆ ನಿವಾಸಿ ಮುಹಮ್ಮದ್ ಶಹಬಾದ್(26) ಹಾಗೂ ಜಂಶೀದ್(25) ಬಂಧಿತ ಆರೋಪಿಗಳು. ಚಿಕ್ಕಮಗಳೂರಿನ ಎನ್.ಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಡಿಯೊOದರಿOದ ನಗದು ಕಳವುಗೈದ ಪ್ರಕರಣದಲ್ಲಿ ಈ ಇಬ್ಬರು ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ಠಾಣಾ ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಉಪ್ಪಿನಂಗಡಿಯಲ್ಲಿ ಕಳ್ಳತನ ಮಾಡಿರುವುದನ್ನು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಅ.27ರಂದು ಉಪ್ಪಿನಂಗಡಿ ಗಾಂಧಿಪಾರ್ಕ್ ಬಳಿಯ ಅಡಿಕೆ ಹಾಗೂ ಕಾಡುತ್ಪತ್ತಿ ಕೇಂದ್ರದಿOದ 5 ಲಕ್ಷ ರೂಪಾಯಿ ನಗದು ಕಳವಾಗಿತ್ತು. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎನ್.ಆರ್ ಪುರ ಪೊಲೀಸರು ಆರೋಪಿಗಳನ್ನು ಉಪ್ಪಿನಂಗಡಿ ಠಾಣೆಗೆ ಕರೆತಂದಿದ್ದಾರೆ., ಉಪ್ಪಿನಂಗಡಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಮಹಜರು ನಡೆಸಿದ್ದಾರೆ. 

Read More

ಬೆಳಗಾವಿ ಸುವರ್ಣಸೌಧ : ಡ್ರಗ್ಸ್ ತಡೆಗೆ ಮತ್ತು ಅಂತಹ ದಂಧೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ರಾಜ್ಯ ಸರ್ಕಾರವು ಕಠಿಣ ನಿರ್ಧಾರ ತೆಗೆದುಕೊಂಡಿದೆ. ಡ್ರಗ್ಸ್ ಕಂಟ್ರೋಲ್ ಆಗುವವರೆಗೆ ದಂಧೆಕೋರರ ವಿರುದ್ಧ ಸಮರ ನಡೆಯಲಿದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಹೇಳಿದರು. ವಿಧಾನ ಪರಿಷತ್ತಿನಲ್ಲಿ ಡಿ.11ರಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಕೆ ಅಬ್ದುಲ್ ಜಬ್ಬರ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮಾದಕ ವಸ್ತುಗಳ ಉತ್ಪಾದನೆ, ಮಾರಾಟ ಮತ್ತು ಅವುಗಳ ಬಳಕೆ ಜಾಗತಿಕವಾಗಿ ದಿನೇ ದಿನೇ ಹೆಚ್ಚುತ್ತಿದೆ. ಮಾದಕ ವಸ್ತುಗಳ ಮಾರಾಟವು ಮಾರಾಟಗಾರರಿಗೆ ಅತೀ ಹೆಚ್ಚಿನ ಲಾಭಾಂಶ ತರುವ ಉದ್ಯಮವಾಗಿ ಪರಿವರ್ತನೆಯಾಗಿದೆ. ಅತೀ ಹೆಚ್ಚಿನ ಲಾಭಕ್ಕಾಗಿ ಅಂತರ್ ರಾಜ್ಯ/ ಅಂತರ್ ರಾಷ್ಟ್ರೀಯ ಜಾಲಗಳು ಕಾರ್ಯನಿರ್ವಹಿಸುತ್ತಿವೆ. ಈ ಜಾಲಗಳು ಜಗತ್ತಿನಾದ್ಯಾಂತ ಬಹುತೇಕ ಎಲ್ಲಾ ರಾಷ್ಟ್ರಗಳಲ್ಲಿ ಸಕ್ರೀಯವಾಗಿರುವುದರಿಂದ ಈ ಡಗ್ಸ್ ಸಮಸ್ಯೆಯು ಸಾರ್ವತ್ರಿಕವಾಗಿದೆ. ರಾಜ್ಯದಲ್ಲಿ ಮಾದಕ ವಸ್ತುಗಳ ಸೇವನೆ, ಮಾರಾಟ ತಡೆಗಟ್ಟಲು ರಾಜ್ಯ ಸರ್ಕಾರವು ನಾನಾ ಕ್ರಮ ತೆಗೆದುಕೊಂಡಿದೆ. ರಾಜ್ಯದಲ್ಲಿ ಮಾದಕ ದ್ರವ್ಯಗಳ ಹಾವಳಿಯನ್ನು ಎದುರಿಸಲು ಹಾಗೂ…

Read More

ಬೆಳಗಾವಿ: ಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ, ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ, ಕ್ರೀಡಾ ಮೂಲಸೌಕರ್ಯ ವೃದ್ಧಿ ಹಾಗೂ ಕಬ್ಬಡಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಬಗ್ಗೆ ಮಾಹಿತಿ ಕೋರಿದ್ದರು. ರಾಜ್ಯ ಸರ್ಕಾರ ಒಲಂಪಿಕ್ಸ್, ಪಾರಾಒಲಂಪಿಕ್ಸ್, ಕಾಮನ್ವೆಲ್ತ್, ಏಷಿಯನ್ ಗೇಮ್ಸ್ ಕ್ರೀಡಾಕೂಟಗಳಲ್ಲಿ ಪದಕವಿಜೇತರಾದ 13 ಕ್ರೀಡಾಪಟುಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಯಲ್ಲಿ 70 ಕಾನ್ಸ್ಟೇಬಲ್ ಗಳಿಗೆ ನೇರ ನೇಮಕಾತಿ ಹಾಗೂ 14 ಪಿಎಸ್ ಐ ಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಅಲ್ಲದೇ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ…

Read More

ವಾಹನ ತಪಾಸಣಾ/ಪರೀಶೀಲನೆ ಸಮಯದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ವಾಹನ ಚಾಲಕರಿಗೆ ಕಿರುಕುಳ ಹಲ್ಲೆ. ಅವಾಚ್ಯ ಶಬ್ದಗಳ ಬಳಕೆ ಮಾಡಿ ದುರ್ನಡತೆ ತೋರುವುದನ್ನು ಕಡಿವಾಣ ಹಾಕಲು ಸೂಕ್ತ ಸುತ್ತೋಲೆ ಹೊರಡಿಸಲಾಗಿದೆ. ಈ ಮೇಲ್ಕಂಡ ವಿಷಯಕ್ಕೆ ಸಂಬಂದಿಸಿದಂತೆ ರಾಜ್ಯ ಪೊಲೀಸ್ ಇಲಾಖೆಯು ಶಿಸ್ತಿನ ಇಲಾಖೆಯಾಗಿದ್ದು ಕೆಲವು ಅಧಿಕಾರಿ ಸಿಬ್ಬಂದಿಗಳು ತೋರುತ್ತಿರುವ ದುರ್ನಡತೆ, ಅಧಿಕಾರ ದುರ್ಬಳಕೆಯಿಂದ ಸಂಪೂರ್ಣ ಪೊಲೀಸ್ ಇಲಾಖೆಯ ಗೌರವಕ್ಕೆ ಧಕ್ಕೆ ಉಂಟಾಗುತ್ತಿದ್ದು ಕಾಲಕಾಲಕ್ಕೆ ಇಲಾಖೆಯಿಂದ ಹಲವಾರು ಸುತ್ತೋಲೆ ಜ್ಞಾಪನಗಳನ್ನು ಹೊರಡಿಸಿದ್ದರು ಕೆಲವು ಪೊಲೀಸ್ ಸಿಬ್ಬಂದಿಗಳು ವಾಹನ ತಪಾಸಣಾ ಸಂದರ್ಭದಲ್ಲಿ ವಾಹನ ಚಾಲಕರ ಮೇಲೆ ದೌರ್ಜನ್ಯ, ಹಲ್ಲೆ, ಕಿರುಕುಳ, ಅವಹೇಳನಕಾರಿ ಅವಾಚ್ಯ ಶಬ್ದಗಳ ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ವಾಗ್ವಾದಕ್ಕಿಳಿದು ಅವಮಾನ ಮಾಡುವಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ವರದಿಯಾಗುತ್ತಿರುತ್ತವೆ. ಕೆಲವು ದಿನಗಳ ಹಿಂದೆ ಮಂಡ್ಯ ಜಿಲ್ಲೆಯಲ್ಲಿ ಸಂಚಾರಿ ಪೊಲೀಸರು ವಾಹನ ತಪಾಸಣಾ ಸಂದರ್ಭದಲ್ಲಿ ಮಗು ಮೃತಪಟ್ಟ ಪ್ರಕರಣ ಹಾಗೂ ವಿಜಯನಗರ ಜಿಲ್ಲೆ ಕೂಡ್ಲಿಗಿಯಲ್ಲಿ ಸಾರಿಗೆ ಬಸ್ ಚಾಲಕನ ಮೇಲೆ…

Read More

ಕಾಸರಗೋಡು: ಮಂಗಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಯಾಬಜಾರ್‌ ಬಳಿಯ ಚೆರುಗೋಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ 19 ವರ್ಷದ ಐಟಿಐ ವಿದ್ಯಾರ್ಥಿ ಅಬ್ದುಲ್ ಶಿಹಾಬ್ ಬುಧವಾರ ಶವವಾಗಿ ಪತ್ತೆಯಾಗಿದ್ದಾರೆ. ಮೂಲತಃ ಕರ್ನಾಟಕದವರಾದ ಶಿಹಾಬ್ ಕಳೆದ ನಾಲ್ಕು ತಿಂಗಳಿನಿಂದ ಇಲ್ಲಿ ವಾಸಿಸುತ್ತಿದ್ದರು. ಅವರ ತಂದೆ ಬಶೀರ್ ದುಬೈನಲ್ಲಿ ಉದ್ಯೋಗದಲ್ಲಿದ್ದಾರೆ. ಬೆಳಿಗ್ಗೆ ಕುಟುಂಬ ಸದಸ್ಯರು ಕೋಣೆಗೆ ತೆರಳಿದಾಗ ಆತ ಭಾವನಾತ್ಮಕ ತೊಂದರೆ ಅನುಭವಿಸಿರುವ ಸುಳಿವುಗಳು ಗೋಚರಿಸಿದವು ಎಂದು ತಿಳಿಸಲಾಗಿದೆ. ವೈಯಕ್ತಿಕ ಸಂಬಂಧಕ್ಕೆ ಸಂಬಂಧಿಸಿದ ಮಾನಸಿಕ ಒತ್ತಡದಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಘಟನೆಯ ಕುರಿತು ಮಾಜಿ ಪಂಚಾಯತ್ ಸದಸ್ಯ ರಫೀಕ್ ಅಹಮದ್ ಹೇಳಿಕೆ ನೀಡಿ, “ಶೀಹಾಬ್‌ ಫೋನ್‌ಗೆ ಒಂದೇ ಹುಡುಗಿಯಿಂದ ಪದೇ ಪದೇ ಹಲವು ಸಂದೇಶಗಳು ಬಂದಿವೆ. ಮರಣದ ನಂತರವೂ ಆಕೆಯಿಂದ ಕರೆ ಮಾಡುವಂತೆ, ಮೆಸೇಜ್‌ಗೆ ಉತ್ತರಿಸುವಂತೆ ಕೇಳುವ ಸಂದೇಶಗಳು ಬರುತ್ತಿವೆ. ಆ ಹುಡುಗಿ ಎರ್ನಾಕುಲಂ ಜಿಲ್ಲೆಯವರು ಎಂಬ ಮಾಹಿತಿ ಇದೆ” ಎಂದು ಅವರು ಹೇಳಿದರು. ಶಿಹಾಬ್‌ ಮೊಬೈಲ್‌ ಫೋನ್ ಅನ್ನು ವಿಧಿವಿಜ್ಞಾನ ಪರೀಕ್ಷೆಗೆ…

Read More

ಬೆಂಗಳೂರು : ರಾಜ್ಯದ ಜೈಲುಗಳಲ್ಲಿನ ಅಕ್ರಮಗಳಿಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಮುಂಬಡ್ತಿ ನೀಡಲಾಗಿದ್ದು, ತಕ್ಷಣವೇ ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಡಿಜಿಪಿಯಾಗಿ‌ ನೇಮಕಗೊಳಿಸಲಾಗಿದೆ.​ ಈ ಹಿಂದೆ ಕಾರಾಗೃಹ ಇಲಾಖೆಯ ಎಡಿಜಿಪಿಯಾಗಿದ್ದ ಬಿ.ದಯಾನಂದ್ ಅವರನ್ನು ತರಬೇತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇತ್ತೀಚೆಗೆ, ಪರಪ್ಪನ ಅಗ್ರಹಾರ ಕಾರಾಗೃಹದೊಳಗೆ ಮಾದಕ ವಸ್ತು ಹಾಗೂ ಸಿಗರೇಟ್‌ ಪ್ಯಾಕ್‌ಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಜೈಲಿನ ವಾರ್ಡನ್‌ನನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (KSESF) ಅಧಿಕಾರಿಗಳು ವಶಕ್ಕೆ ಪಡೆದು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು.

Read More

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಸ್ಮರಣಿಕೆ ಮತ್ತು ಟ್ರೋಫಿಗಳನ್ನು ಕಡ್ಡಾಯವಾಗಿ ನಿಷೇಧಿಸಿ ಸರ್ಕಾರ ಮಹತ್ವದ ಆದೇಶ ಮಾಡಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದೆಂದು ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬಹುದೆಂದು ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ಸದರಿ ಸುತ್ತೋಲೆಗೆ ಹಲವು ಅಂಶಗಳನ್ನು ಸೇರ್ಪಡೆಗೊಳಿಸಬೇಕಿರುವ ಅವಶ್ಯಕತೆಯನ್ನು ಮನಗಂಡು ಈ ಸುತ್ತೋಲೆಯನ್ನು ಕೆಳಂಕಂಡಂತೆ ಸೇರಿಸಲಾಗಿದೆ ಎಂದಿದ್ದಾರೆ. ಸರ್ಕಾರಿ ಪ್ರಾಯೋಜಿತ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಗಣ್ಯರಿಗೆ ಸ್ಮರಣಿಕೆ, ಟ್ರೋಫಿ ಮತ್ತು ಇನ್ನಿತರೇ ಸ್ಮರಣಾರ್ಥ ವಸ್ತುಗಳನ್ನು ನೀಡುವುದು ನಿಯಮಿತ ಅಭ್ಯಾಸವಾಗಿರುತ್ತದೆ. ಈ ಪದ್ಧತಿಯು ಆರಂಭದಲ್ಲಿ ಸದ್ಭಾವನೆ ಮತ್ತು ಮೆಚ್ಚುಗೆಯ ಸಂಕೇತದ ಉದ್ದೇಶವಾಗಿದ್ದರೂ ಸಹ ಗಣ್ಯರನ್ನು ಸನ್ಮಾನಿಸುವ ಇಂತಹ ಅಭ್ಯಾಸವು ಆರ್ಥಿಕ ಮಿತವ್ಯಯ, ಪರಿಸರ…

Read More

ಬೆಳಗಾವಿ ಸುವರ್ಣಸೌಧ : ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡಿದರೆ ಆರ್ಟಿಓ ಕಚೇರಿಗಳ ಅಧಿಕಾರಿಗಳನ್ನೇ ಹೊಣೆಯಾಗಿಸಿ, ಶಿಸ್ತುಕ್ರಮಕ್ಕೆ ಗುರಿಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿ ಕ್ರಮವಹಿಸಲಾಗುತ್ತಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು. ಮೇಲ್ಮನೆಯಲ್ಲಿ ಡಿ.10ರಂದು ಸದಸ್ಯರಾದ ಡಾ.ಉಮಾಶ್ರೀ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 342ರ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸಚಿವರು, ಆರ್ಟಿಓ ಕಚೇರಿಗಳಲ್ಲಿ ಶಿಸ್ತು ತರಲು ಅನೇಕ ಕ್ರಮವಹಿಸಲಾಗಿದೆ. ಕಚೇರಿಯಲ್ಲಿ ಸ್ವೀಕೃತವಾಗುವ ಎಲ್ಲಾ ಅರ್ಜಿ /ಸ್ವೀಕೃತಿಗಳನ್ನು ನಿಗದಿಪಡಿಸಿದ ನಮೂನೆಯಲ್ಲಿ ಕಡ್ಡಾಯವಾಗಿ ವಹಿಗಳನ್ನು ವಿಷಯ ನಿರ್ವಾಹಕರು ನಿರ್ವಹಿಸುವುದು. ಅಧೀಕ್ಷಕರುಗಳು ಪ್ರತಿ ವಾರಕ್ಕೊಮ್ಮೆ ವಹಿಗಳನ್ನು ಪರಿಶೀಲಿಸುವುದು ಹಾಗೂ ತಿಂಗಳಿಗೊಮ್ಮೆ ಮೇಜು ತಪಾಸಣೆಯನ್ನು ನಡೆಸಿ ಮೇಲಾಧಿಕಾರಿಗಳಿಗೆ ವರದಿಯನ್ನು ಸಲ್ಲಿಸುವಂತೆ ಸಾರಿಗೆ ಆಯುಕ್ತರು ಸುತ್ತೋಲೆ ಹೊರಡಿಸಿ ಸೂಚನೆ ನೀಡಿದ್ದಾರೆ. ಕಚೇರಿಗಳಲ್ಲಿ ಮಧ್ಯವರ್ತಿಗಳಿಗೆ ಯಾವುದೇ ರೀತಿಯ ಅವಕಾಶ ಕಲ್ಪಿಸದಂತೆ ಕರ್ತವ್ಯ ನಿರ್ವಹಿಸುವಂತೆ ಒಂದು ವೇಳೆ ಯಾವುದೇ ಕಚೇರಿಯಲ್ಲಿ ಮಧ್ಯವರ್ತಿಗಳು ಕಂಡುಬಂದಲ್ಲಿ ಆಯಾ ಕಚೇರಿಯ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದು…

Read More

ಮಂಗಳೂರು: ಪೊಲೀಸರ ಕಟ್ಟುನಿಟ್ಟಿನ ಕ್ರಮದ ಬಳಿಕ ಸೋಷಿಯಲ್‌ ಮೀಡಿಯಾದಲ್ಲಿ ಗಲಭೆ, ಹಿಂಸೆಗೆ ದುಷ್ಪ್ರೇರಣೆ ನೀಡುವ ಪೋಸ್ಟ್‌ಗಳು ಕಡಿಮೆಯಾಗಿದ್ದವು. ಇದೀಗ ಮತ್ತೆ ಸೋಷಿಯಲ್‌ ಮೀಡಿಯಾದಲ್ಲಿ ಇಂತಹಾ ಪೋಸ್ಟ್‌ಗಳು ಕಾಣಿಸಿದ್ದು ಆತಂಕಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಬಗ್ಗೆ ಸಂದೇಶಗಳು ಓಡಾಡುತ್ತಿದ್ದು, Target 900, Team Target Boys, Immu Bai ಇನ್ಸ್ಟಾಗ್ರಾಮ್ ಪೇಜ್​​ಗಳಲ್ಲಿ ಭಯ ಹುಟ್ಟಿಸುತ್ತಿರುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. 2017ರಲ್ಲಿ ನಡೆದ ಎಸ್​ಡಿಪಿಐ ಮುಖಂಡ ಕಲಾಯಿ ಅಶ್ರಫ್ ಹತ್ಯೆ ಪ್ರಮುಖ ಆರೋಪಿ, ಹಿಂದೂ ಸಂಘಟನೆಯ ಮುಖಂಡ ಭರತ್ ಕುಮ್ಡೇಲ್​​​ಗೆ ಈ ಮೂಲಕ ಎಚ್ಚರಿಕೆ ನೀಡಲಾಗಿದೆ. Revange Is Loading , Target Set One By One ಎಂಬ ಸಂದೇಶ ಇರುವ ಪೋಸ್ಟ್​​ ಮಾಡಲಾಗಿದ್ದು, ಕೈಯಲ್ಲಿ ತಲವಾರು ಮತ್ತು ಪಿಸ್ತೂಲ್ ಹಿಡಿದು ಮುಖ ಮರೆಮಾಚಿ ಮಾಡಿರುವ ರೀಲ್ಸ್ ಕೂಡ ಪೋಸ್ಟ್​​ ಮಾಡಲಾಗಿದೆ. ಇತ್ತೀಚೆಗೆ ಕೇರಳದಲ್ಲಿ ಹತ್ಯೆಯಾದ ರೌಡಿಶೀಟರ್ ನೌಫಾಲ್ ಸಾವಿಗೂ ಪ್ರತೀಕಾರದ‌ ಎಚ್ಚರಿಕೆ ನೀಡಲಾಗಿದೆ. ಭರತ್ ಕುಮ್ಡೇಲ್…

Read More