ಉಡುಪಿ: ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತಕ್ಕೆ ನುಗ್ಗಿದ್ದ ಹತ್ತು ಮಂದಿ ವಲಸಿಗರಿಗೆ ಉಡುಪಿ ನ್ಯಾಯಾಲಯವು ಎರಡು ವರ್ಷದ ಜೈಲು ಮತ್ತು ತಲಾ ₹10,000 ದಂಡ ವಿಧಿಸಿದೆ. 2024ರ ಅಕ್ಟೋಬರ್ 11ರಂದು ಸಂಜೆ ಸುಮಾರು 7 ಗಂಟೆ ವೇಳೆಗೆ ಮಲ್ಪೆ PSI ಪ್ರವೀಣ್ ಕುಮಾರ್ ಆರ್. ಮತ್ತು ಸಿಬ್ಬಂದಿಗಳು ವಡಭಾಂಡೇಶ್ವರ ಬಸ್ ನಿಲ್ದಾಣದ ಬಳಿ ಶಂಕಾಸ್ಪದವಾಗಿ ಲಗೇಜ್‌ಗಳೊಂದಿಗೆ ಸುತ್ತಾಡುತ್ತಿದ್ದ ಏಳು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಅವರು ಯಾವುದೇ ಮಾನ್ಯ ಅನುಮತಿ ದಾಖಲೆಗಳಿಲ್ಲದೆ ಅಕ್ರಮವಾಗಿ ದೇಶ ಪ್ರವೇಶಿಸಿದ್ದರೊಂದಿಗೆ, ನಕಲಿ ಆಧಾರ್ ಕಾರ್ಡ್‌ಗಳನ್ನು ಸೃಷ್ಟಿಸಿ ವಂಚನೆ ಮಾಡಲು ಯತ್ನಿಸುತ್ತಿದ್ದ ಮಾಹಿತಿ ಬಹಿರಂಗಗೊಂಡಿತು. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 138/2025ರಂತೆ BNS ಮತ್ತು Foreigners Act ಸೇರಿದಂತೆ ಸಂಬಂಧಿತ ಕಲಂಗಳನ್ನು ದಾಖಲಿಸಿ ತನಿಖೆ ಕೈಗೊಳ್ಳಲಾಯಿತು. ಮಲ್ಪೆ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ನಡೆದ ಮುಂದಿನ ಕಾರ್ಯಾಚರಣೆಯಲ್ಲಿ ಉಳಿದ ಮೂವರನ್ನೂ ಬಂಧಿಸಿ ಒಟ್ಟು 10 ಮಂದಿಯನ್ನು ಕಾನೂನು ಕ್ರಮಕ್ಕೆ ಒಳಪಡಿಸಲಾಯಿತು. ಹಕೀಮ್…
Author: main-admin
ಪಡುಬಿದ್ರೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಹಸರಾಂತ ಗೌಜಿ ಈವೆಂಟ್ಸ್ ಮಾಲಕ ಅಭಿಷೇಕ್ ಮೃತಪಟ್ಟಿದ್ದಾರೆ. ತಡರಾತ್ರಿ 2.20ರ ಸುಮಾರಿಗೆ ಪಡುಬಿದ್ರೆ ಹೆದ್ದಾರಿ ಬಳಿ ಕಾರು ಅಪಘಾತಕ್ಕೀಡಾಗಿತ್ತು. ಗಂಭೀರ ಗಾಯಗೊಂಡ ಅಭಿಷೇಕ್ ಅವರನ್ನು ಮುಕ್ಕದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರು: ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿಯಲ್ಲಿ ತಯಾರಾದ, ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿಯವರ ಕಥೆ, ಪರಿಕಲ್ಪನೆ ನಿರ್ದೇಶನದ, ವಿಭಿನ್ನ ತಂತ್ರಜ್ಞಾನದ ಬಹುತಾರಾಗಣದ “ಪಿಲಿಪಂಜ” ತುಳು ಸಿನಿಮಾ ಡಿಸೆಂಬರ್ 12 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ಸಿನಿಮಾದ ಕಾರ್ಯಕಾರಿ ನಿರ್ಮಾಪಕ, ನಟ ರಮೇಶ್ ರೈ ಕುಕ್ಕುವಳ್ಳಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಬಳಿಕ ಮಾತನಾಡಿದ ನಿರ್ದೇಶಕ ಭರತ್ ಶೆಟ್ಟಿ, “ಈಗಾಗಲೇ ಸಿನಿಮಾದ ಮೂರು ಪ್ರೀಮಿಯರ್ ಶೋಗಳು ನಡೆದಿದ್ದು, ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 2 ಗಂಟೆ 5 ನಿಮಿಷಗಳ ಅವಧಿಯಲ್ಲಿ ಸಿನಿಮಾ ಇರಲಿದ್ದು ಪ್ರೇಕ್ಷಕರಿಗೆ ಯಾವುದೇ ರೀತಿಯಲ್ಲಿ ಬೋರ್ ಆಗದಂತೆ ಸಿನಿಮಾ ಮೂಡಿಬಂದಿದೆ. ಸಿನಿಮಾಕ್ಕೆ ರಾತ್ರಿಯ ಸನ್ನಿವೇಶ ಅಗತ್ಯವಿದ್ದ ಕಾರಣ ಹೆಚ್ಚಿನ ಶೂಟಿಂಗ್ ರಾತ್ರಿಯ ವೇಳೆ ಮಾಡಲಾಗಿದೆ. ಕಲಾವಿದರು ನಿರ್ಮಾಪಕರು ಸಿನಿಮಾಕ್ಕೆ ಸಾಕಷ್ಟು ಶ್ರಮವಹಿಸಿ ದುಡಿದಿದ್ದಾರೆ. ಎಲ್ಲರೂ ಡಿ.12ರಂದು ಥಿಯೇಟರ್ ನಲ್ಲಿ ಸಿನಿಮಾ ನೋಡಿ” ಎಂದರು. ಪಿಲಿಪಂಜ ಸಿನಿಮಾ ಮಂಗಳೂರಿನಲ್ಲಿ ಪಿವಿಆರ್, ಸಿನಿಪೊಲಿಸ್,…
ಪುತ್ತೂರು: ಕಂಪನಿಯೊಂದಕ್ಕೆ ತಲಾ 60 ಕೆಜಿ ತೂಕದ ಕಾಫಿ ಬೀಜ ತುಂಬಿದ 320 ಗೋಣಿಚೀಲಗಳನ್ನು ಸಾಗಿಸುತ್ತಿದ್ದ ಲಾರಿಯೊಂದರಿಂದ ಸುಮಾರು 21,44,000 ರೂ. ಮೌಲ್ಯದ 80 ಗೋಣಿ ಚೀಲಗಳನ್ನು ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಕೃತ್ಯಕ್ಕೆ ಬಳಸಿದ ಎರಡು ಆಟೋ, ಒಂದು ಗೂಡ್ಸ್ ಟೆಂಪೋಗಳನ್ನು ಹಾಗೂ ಕಳುವಾದ 60 ಕೆಜಿ ತೂಕದ ಕಾಫಿ ತುಂಬಿದ 80 ಚೀಲಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಆರೋಪಿ ಆಶ್ಲೇಷ ಭಟ್ ಹಾಗೂ ಆತನ ಸಹಚರರಾದ ನಾರಾಯಣ ಶೆಟ್ಟಿಗಾರ್, ಮಿಥುನ್ ಕುಮಾರ್, ವಿಜಯ ಶೆಟ್ಟಿ, ಮಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ದೂರುದಾರರು ಹಾಗೂ ಲಾರಿಯ ಮಾಲಕ ಮತ್ತು ಚಾಲಕ ಪುತ್ತೂರು ಕಬಕ ನಿವಾಸಿ ತೃತೇಶ್ (29) ಎಂಬವರ ದೂರಿನಂತೆ, ಡಿ.3ರಂದು ಪಿರಿಯಾ ಪಟ್ಟಣದ ಕಾಫಿ ಕ್ಯೂರಿಂಗ್ ಕಂಪೆನಿಯೊಂದರಿಂದ ತಲಾ 60 ಕೆಜಿ ತೂಕದ 320 ಗೋಣಿ ಚೀಲ ಬ್ಯಾಗ್‌ಗಳನ್ನು ಲೋಡ್ ಮಾಡಿಕೊಂಡು ಮಂಗಳೂರಿಗೆ ತೆರಳುತ್ತಿದ್ದರು. ಅದೇ ದಿನ ರಾತ್ರಿ ಪುತ್ತೂರಿಗೆ ತಲುಪಿ, ಕಬಕ…
ಮಂಗಳೂರು ನಗರಕ್ಕೆ ನಿಷೇಧಿತ ಮಾದಕದ್ರವ್ಯ ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಐವರು ಆರೋಪಿಗಳಿಗೆ 12 ರಿಂದ 14 ವರ್ಷಗಳ ಕಠಿಣ ಸಜೆ ಮತ್ತು ದಂಡ ವಿಧಿಸಲು ದ.ಕ. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿ, ಸಾಕ್ಷ್ಯಾಧಾರಗಳನ್ನು ನ್ಯಾಯಾಲಯದ ಮುಂದೆ ಸಾಬೀತುಪಡಿಸುವಲ್ಲಿ ಮಹತ್ತರ ಪಾತ್ರ ವಹಿಸಿದ ಸರಕಾರಿ ಅಭಿಯೋಜಕರಾದ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ಅವರನ್ನು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸನ್ಮಾನಿಸಲಾಯಿತು. ಸರಕಾರಿ ಅಭಿಯೋಜಕಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ಅವರನ್ನು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಡಿಸಿಪಿ ಮಿಥುನ್ , ಸೆನ್ ಪೊಲೀಸ್ ಠಾಣೆ ಎಸಿಪಿ ರವೀಶ್ ನಾಯಕ್, ಉಪಸ್ಥಿತರಿದ್ದರು. 2022ರ ಜೂನ್ 14ರಂದು ಮಂಗಳೂರು ಸಿಸಿಬಿ ಘಟಕದ ಅಧಿಕಾರಿ, ಸಿಬ್ಬಂದಿ ಪತ್ತೆ ಮಾಡಿ ಮಾದಕವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ದಸ್ತಗಿರಿ ಮಾಡಿದ್ದರು. ಈ ಬಗ್ಗೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಮಂಗಳೂರಿನ ಪ್ರಧಾನ…
ಬೆಂಗಳೂರು : ಋತುಚಕ್ರ ರಜೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಇದೀಗ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಹೈಕೋರ್ಟ್ ಪೀಠದಿಂದ ತಡೆಯಾಜ್ಜೆ ನೀಡಲಾಗಿದೆ. ನವೆಂಬರ್ 20ರಂದು 1 ದಿನದ ಋತು ಚಕ್ರ ರಜೆ ಸಂಬಂಧ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶ ಪ್ರಶ್ನಿಸಿ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆಯ ವೇಳೆ ಕಾಯ್ದೆಯಲ್ಲಿ ಇಲ್ಲದ ನಿಯಮವನ್ನು ಸರ್ಕಾರಿ ಆದೇಶದ ಮೂಲಕ ಜಾರಿಗೊಳಿಸಲಾಗಿದೆ. ಸರ್ಕಾರದ ಏಕಪಕ್ಷ ಆದೇಶದಿಂದ ಹೋಟೆಲ್ ಗಳಿಗೆ ಸಮಸ್ಯೆ ಆಗಿದೆ ಎಂದು ಅಸೋಸಿಯೇಷನ್ ಪರ ವಕೀಲರು ವಾದಿಸಿದರು. ಆದೇಶಕ್ಕೆ ಮುನ್ನ ಸಂಘಟನೆಗಳ ಅಭಿಪ್ರಾಯ ಪಡೆಯಲಾಗಿದೆಯ? ಎಂದು ಜಡ್ಜ್ ಪ್ರಶ್ನಿಸಿದರು. ಈ ವೇಳೆ ಅಸೋಸಿಯೇಷನ್ ಪರ ವಕೀಲರು ಇಲ್ಲ ಎಂದು ಉತ್ತರಿಸಿದರು. ಬಳಿಕ ಹೈಕೋರ್ಟ್ ಮುಂದಿನ ವಿಚಾರಣೆಯವರೆಗೆ ಸರ್ಕಾರದ ಆದೇಶಕ್ಕೆ ತಡೆ ನೀಡಿತು. ಮಧ್ಯಂತರ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸಲು ಸರ್ಕಾರ ಸ್ವತಂತ್ರ ಎಂದು ಇದೆ ವೇಳೆ ಹೈಕೋರ್ಟ್ ಏಕ ಸದಸ್ಯ…
ಮಂಗಳೂರು : 2024ರ ಫೆಬ್ರವರಿ ತಿಂಗಳಲ್ಲಿ ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹರಿಯಬಿಟ್ಟು ಸಾಮರಸ್ಯ ಕೆಡಿಸುವ ಯತ್ನ ಮಾಡಿದ್ದು ಘಟನೆ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿದೇಶದಲ್ಲಿ ಅಡಗಿದ್ದ ಆರೋಪಿಯನ್ನು ಇದೀಗ ಅಲ್ಲಿಂದ ಬರುವಾಗಲೇ ಮುಂಬೈ ಏರ್ಪೋರ್ಟ್ ನಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ಮುಂಬೈನ ಚಾರ್ಕೋಪ್ ಎಂಬಲ್ಲಿನ ನಿವಾಸಿ ಫೆಲಿಕ್ಸ್ ಎಡ್ವರ್ಡ್ ಮಥಾಯಿಸ್ (56) ಎಂದು ಗುರುತಿಸಲಾಗಿದೆ. ಅವಹೇಳನ ಪೋಸ್ಟ್ ವೈರಲ್ ಮಾಡಿದ ಬಗ್ಗೆ ಮಂಗಳೂರಿನ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿ ಫೆಲಿಕ್ಸ್ ಆ ಸಮಯದಲ್ಲಿ ಸೌದಿ ಅರೇಬಿಯಾದಲ್ಲಿದ್ದು, ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ಬಳಿಕ ಫೆಲಿಕ್ಸ್ ಸೌದಿಯಲ್ಲಿ ಉದ್ಯೋಗದಲ್ಲಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ, ಆರೋಪಿ ವಿರುದ್ದ ಲುಕ್ ಔಟ್ ಸರ್ಕುಲರ್ ಹೊರಡಿಸಲಾಗಿತ್ತು. ಆರೋಪಿ ಫೆಲಿಕ್ಸ್ ಮುಂಬೈನ ಸಹರಾ ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಬಂದು ಇಳಿದ ಕೂಡಲೇ ಇಮಿಗ್ರೇಶನ್ ಅಧಿಕಾರಿಗಳು ತಡೆಹಿಡಿದಿದ್ದು, ಡಿ. 5ರಂದು ಮುಂಬೈಯ ಸಹರಾ ಏರ್ಪೋರ್ಟ್ ನಲ್ಲಿ ದಸ್ತಗಿರಿ ಮಾಡಿ ತನಿಖೆಗೆ…
ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರವು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ತಟಸ್ಥವಾಗಿರುವ ಕುರಿತು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಶೂನ್ಯ ವೇಳೆಯಲ್ಲಿ ಸದನದ ಗಮನ ಸೆಳೆದರು. ಈ ವೇಳೆ ಉತ್ತರಿಸಿದ ಸಚಿವ ಡಿ.ಸುಧಾಕರ್ ಅವರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಹಾಲಿ ನಿರ್ವಹಿಸುತ್ತಿರುವ ಕಾರ್ಯಗಳ ಜೊತೆಗೆ ಅದರ ಕಾರ್ಯಚಟುವಟಿಕೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅನುವಾಗುವಂತೆ ಅದರ ಕಾರ್ಯಚಟುವಟಿಕೆಯನ್ನು ವಿಸ್ತರಿಸಿ ಕೆಳಕಂಡ ಪ್ರಕಾರ್ಯಗಳನ್ನು ನಿರ್ವಹಿಸಲು ತಕ್ಷಣದಿಂದ ಜಾರಿಗೆ ಬರುವಂತೆ ಮಂಜೂರಾತಿ ನೀಡಿ ಆದೇಶಿಸಿದ್ದಾಗಿ ತಿಳಿಸಿದ್ದಾರೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ರಸ್ತೆ, ನೀರು ಒಳಚರಂಡಿ ಇತ್ಯಾದಿ ಮೂಲ ಸೌಲಭ್ಯಗಳನ್ನು ಒದಗಿಸಲು ಹಾಗೂ ಈ ಪ್ರದೇಶಗಳ ವ್ಯಾಪ್ತಿಯಲ್ಲಿ ಕೈಗಾರಿಕೆ, ಪ್ರವಾಸೋದ್ಯಮ ಬಂದರು ಇತ್ಯಾದಿ ಕ್ಷೇತ್ರಗಳ ಸರ್ವೋತ್ತಮ ಅಭಿವೃದ್ಧಿಗಾಗಿ ಹಾಗೂ ಸಮಗ್ರ ಅಭಿವೃದ್ಧಿ ಹಾಗೂ ಸಮನ್ವಯತೆಯನ್ನು ಸಾಧಿಸುವ ಉದ್ದೇಶದಿಂದ ಸರ್ಕಾರಕ್ಕೆ ಸೂಕ್ತ ಸಲಹೆ/ಅಭಿಪ್ರಾಯಗಳನ್ನು ನೀಡಲು ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲಾಗಿತ್ತು. ಮೀನು ಮಾರುಕಟ್ಟೆ ನಿರ್ಮಾಣಕ್ಕೆ…
ನವದೆಹಲಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (ಸಿಎಪಿಎಫ್‌ಗಳು) ಮತ್ತು ಸೆಕ್ರೆಟರಿಯೇಟ್ ಸೆಕ್ಯುರಿಟಿ ಫೋರ್ಸ್ (ಎಸ್‌ಎಸ್‌ಎಫ್) ಮತ್ತು ರೈಫಲ್‌ಮ್ಯಾನ್ (ಜನರಲ್ ಡ್ಯೂಟಿ) ಅಸ್ಸಾಂ ರೈಫಲ್ಸ್ ಪರೀಕ್ಷೆ, 2026 ರಲ್ಲಿ ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಗಾಗಿ ಆನ್‌ಲೈನ್ ನೋಂದಣಿ ಪ್ರಕ್ರಿಯೆಯನ್ನು ತೆರೆದಿದೆ. ಕೈಗಾರಿಕಾ ಭದ್ರತಾ ಪಡೆ (CISF), ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF), ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP), ಸಶಸ್ತ್ರ ಸೀಮಾ ಬಾಲ್ (SSB), ಅಸ್ಸಾಂ ರೈಫಲ್ಸ್ (AR) ಮತ್ತು ಸೆಕ್ರೆಟರಿಯೇಟ್ ಭದ್ರತಾ ಪಡೆ (SSF). ಆನ್‌ಲೈನ್ ಅರ್ಜಿ ನಮೂನೆಯು ಅಧಿಕೃತ ವೆಬ್‌ಸೈಟ್ ssc.gov.in ನಲ್ಲಿ ಲಭ್ಯವಿದೆ. 1 ಡಿಸೆಂಬರ್ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು 1 ಡಿಸೆಂಬರ್ ಮತ್ತು 31 ಡಿಸೆಂಬರ್ 2025 (23:00 ಗಂಟೆಗಳು) ನಡುವೆ ಸಲ್ಲಿಸಬಹುದು. ಆನ್‌ಲೈನ್ ಶುಲ್ಕ ಪಾವತಿಯ ಅಂತಿಮ ದಿನಾಂಕ 1 ಜನವರಿ 2026 (23:00 ಗಂಟೆಗಳು). ಆಯೋಗವು 8 ಜನವರಿಯಿಂದ 10…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿಕನ್ ಪಾಕ್ಸ್ ಪ್ರಕರಣಗಳು ದಾಖಲಾಗುತ್ತಿದ್ದು, ಸ್ಥಳೀಯವಾಗಿ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸಲು ಆರೋಗ್ಯ ಇಲಾಖೆ ಸೂಚಿಸಿದೆ. ಶಾಲಾ ಮಕ್ಕಳಲ್ಲಿ ಅಥವಾ ಸಾರ್ವಜನಿಕರಲ್ಲಿ ಖಾಯಿಲೆಯ ಲಕ್ಷಣಗಳು ಕಂಡುಬ0ದಲ್ಲಿ ತಕ್ಷಣಕ್ಕೆ ಚಿಕಿತ್ಸೆಯನ್ನು ಪಡೆಯುವುದರೊಂದಿಗೆ ಸೋಂಕು ಹರಡದಂತೆ ಕ್ರಮವಹಿಸಬೇಕು ಎಂದು ಸೂಚನೆ ನೀಡಲಾಗಿದೆ. ಚಿಕನ್ ಪಾಕ್ಸ್ ಮಕ್ಕಳಲ್ಲಿ, ಯಾವುದೇ ತೊಂದರೆ ಇಲ್ಲದೆ ಸಂಪೂರ್ಣವಾಗಿ ಗುಣವಾಗುತ್ತದೆ. ಒಮ್ಮೆ ಚಿಕನ್ ಪಾಕ್ಸ್ನಿಂದ ಬಳಲಿದ ವ್ಯಕ್ತಿ ಜೀವಿತಾವಧಿಯವರೆಗೂ ಅದರ ವಿರುದ್ಧ ರೋಗ ನಿರೋಧಕ ಶಕ್ತಿಯನ್ನು ಹೊಂದುತ್ತಾನೆ. ಪೌಷ್ಠಿಕ ಆಹಾರ ಸೇವನೆಯಿಂದ ದೇಹದ ರೋಗ ನಿರೋಧಕ ವ್ಯವಸ್ಥೆಯನ್ನು ಸದೃಢಗೊಳಿಸಿಕೊಳ್ಳುವುದೂ ರೋಗ ನಿಯಂತ್ರಣದಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತದೆ. ಸೋಂಕಿತ ರೋಗಿಯ ಬೊಕ್ಕೆಗಳನ್ನು ಮುಟ್ಟಿದಾಗ ಕೈಗಳನ್ನು ಸೋಪು ಮತ್ತು ನೀರಿನಿಂದ ಸ್ವಚ್ಛ ಮಾಡಿಕೊಳ್ಳಬೇಕು. ಮನೆ,ಶಾಲೆ, ಕಿಂಡರ್ ಗಾರ್ಡನ್ ಮುಂತಾದ ಸ್ಥಳಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಸೋಂಕಿತ ಮಕ್ಕಳ ಜೊತೆಗೆ ಹತ್ತಿರದ ಸಂಪರ್ಕವನ್ನು ಇಡಬಾರದು. ಸೋಂಕಿತ ಜಾಗವನ್ನು ಅಥವಾ ಮಕ್ಕಳ ಆಟಿಕೆಗಳನ್ನು ಸೋಪು ಮತ್ತು ನೀರಿನಿಂದ ಸ್ವಚ್ಛ ಮಾಡಿಕೊಳ್ಳಬೇಕು. ಅನಾರೋಗ್ಯವಿದ್ದರೆ ಹತ್ತಿರದ ಸರ್ಕಾರಿ…










