ಉಪ್ಪಿನಂಗಡಿ: ಅಪ್ರಾಪ್ತ ಬಾಲಕನಿಗೆ ಅನ್ಯ ಕೋಮಿನ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಕ್ಕಳ ಸಹಾಯವಾಣಿಯ ಮೂಲಕ ಸಲ್ಲಿಸಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ದೋರ್ಮೆ ಎಂಬಲ್ಲಿನ ಅಬ್ದುಲ್ಲಾ ಬಿಳಿಯೂರು (36 ವ.) ಎಂದು ಗುರುತಿಸಲಾಗಿದೆ. ಎರಡು ಮಕ್ಕಳ ತಂದೆಯಾಗಿರುವ ಈತ 13 ವರ್ಷದ ಬಾಲಕನನ್ನು ಮನೆಯಲ್ಲಿ ಕೆಲಸವಿದೆ ಎಂದು ಹಾಗೂ ಸ್ಕೂಟಿ ಸವಾರಿ ಹೇಳಿ ಕೊಡುತ್ತೇನೆಂದು ಕರೆಸಿ ವಿವಿಧ ದಿನಗಳಲ್ಲಿ ಲೈಂಗಿಕ ಕಿರುಕುಳ ನೀಡಿರುವುದಾಗಿ ನೊಂದ ಬಾಲಕ ಶಾಲೆಯಲ್ಲಿ ನೀಡಿದ ಮಾಹಿತಿಯಂತೆ ಮಕ್ಕಳ ಸಹಾಯವಾಣಿಗೆ ಕರೆಮಾಡಿ ತಿಳಿಸಿದ್ದರು. ಅವರ ಸಲಹೆಯಂತೆ ತನ್ನ ತಾಯಿಯೊಂದಿಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ ತನ್ನ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಬಗ್ಗೆ ಬಾಲಕ ದೂರು ಸಲ್ಲಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
Author: main-admin
ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಉಡುಪಿ ಅಂಬಾಗಿಲು ಬಿರಿಯಾನಿ ಸ್ಪಾಟ್ ಹೋಟೆಲ್ ಎದುರುಗಡೆ ರಾಹೆ-66 ರಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಜಯರಾಮ್ (67) ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಸಂತೆಕಟ್ಟೆ ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ರಸ್ತೆ ದಾಟುತ್ತಿದ್ದ ಜಯರಾಮ್ ಅವರಿಗೆ ಢಿಕ್ಕಿ ಹೊಡೆದಿದ್ದು, ಇದರಿಂದ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡ ಅವರು, ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ : ಪ್ರವಾಸಿ ಬಸ್ಸೊಂದು ಚಾಲಕ ಅಜಾಗರೂಕ ಚಾಲನೆಯಿಂದ ರಸ್ತೆಯ ಬಲಬದಿಯ ಧರೆಗೆ, ಮರಕ್ಕೆ ಮತ್ತು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲದ್ದವರೆಲ್ಲರೂ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕು ಮುಂಡಾಜೆ ಗ್ರಾಮದಮುಂಡಾಜೆ ಶೀಟ್ ಎಂಬಲ್ಲಿ ನಡೆದಿದೆ. ಬೆಂಗಳೂರು ನಿವಾಸಿ ಯಲ್ಲಪ್ಪರವರು ದಿನಾಂಕ:09/05/2024 ರಂದು ತನ್ನ ಮನೆಯವರ ಜೊತೆಯಲ್ಲಿ KA51AA6033 ನೇ ಬಸ್ ನಲ್ಲಿ ಬೆಂಗಳೂರಿನಿಂದ ಹೊರಟು ಮುರುಡೇಶ್ವರ, ಶೃಂಗೇರಿ, ಎಡಗುಂಜಿ, ಹೊರನಾಡು, ಕಡೆಗಳಲ್ಲಿ ದೇವರ ದರ್ಶನ ಮಾಡಿ ಬಳಿಕ ದಿನಾಂಕ:12/05/2024 ಧರ್ಮಸ್ಥಳ ದೇವಸ್ಥಾನಕ್ಕೆ ಹೊರಟು ಚಾರ್ಮಾಡಿ ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಾ ಸಮಯ ಸುಮಾರು ರಾತ್ರಿ 9:45 ಗಂಟೆಗೆ ಬೆಳ್ತಂಗಡಿ ತಾಲೂಕು ಮುಂಡಾಜೆ ಗ್ರಾಮದ ಮುಂಡಾಜೆ ಶೀಟ್ ಬಳಿ ತಲುಪುತ್ತಿದ್ದಂತೆ ಬಸ್‌ನ್ನು ಅದರ ಚಾಲಕ ದುಡುಕುತನದಿಂದ ಚಲಾಯಿಸಿ ರಸ್ತೆಯ ಬಲಬದಿಯ ಧರೆಗೆ, ಮರಕ್ಕೆ ಮತ್ತು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ರಾಕೇಶ್ ಮತ್ತು ಕ್ಲೀನರ್ ಮನೋಜ್ ಸಹಿತ ಯಲ್ಲಪ್ಪ, ತನುಶ್ರಿ,.ಮಿಥುನ್,ರೂಪ,ಯಲ್ಲಮ್ಮ,.ಪವನ್,.ವೆಂಕಟಸ್ವಾಮಪ್ಪ,ಯಶವಂತ್,ರತ್ನಮ್ಮ, ಮಂಜುಳ,.ವಿಕಾಸ್,ಹಂಸ,ಕೀರ್ತನ,.ಅಖಿಲ,ಮನೋಜ,ರೂಪ ಟಿ ಅರ್,ಪ್ರೀತಮ್,ರಾಕೇಶ್,ತನಿಷ್ಕ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು…
ಬೆಳ್ತಂಗಡಿ: ಪಶುವೈದ್ಯನೋರ್ವ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಗೆ ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಜೋಡುಮಾರ್ಗ ಸರ್ಕಲ್‌ನಲ್ಲಿ ಸೋಮವಾರ ನಡೆದಿದೆ.ಪಟ್ರಮೆ ಗ್ರಾಮದ ಕೃಷ್ಣ ಯಾನೆ ಕಿಟ್ಟ (58) ಹಲ್ಲೆಗೊಳಗಾಗಿ ಸಾವನ್ನಪ್ಪಿದವರು. ಕೃಷ್ಣ ಅವರು ವಿಪರೀತ ಜ್ವರದಿಂದ ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡದ್ದರಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಕೊಕ್ಕಡಕ್ಕೆ ಬಂದಿದ್ದಾರೆ. ಈ ಸಂದರ್ಭ ತನ್ನ ಪರಿಚಿತರೇ ಆದ ಕೊಕ್ಕಡದ ಪಶು ವೈದ್ಯ ಡಾ| ಕುಮಾರ್ ಅವರು ಕೃಷ್ಣ ಅವರಲ್ಲಿ ಮಾತನಾಡುತ್ತ ಜ್ವರ ಇದ್ದು ಇಷ್ಟು ಬೇಗ ಆಸ್ಪತ್ರೆಯಿಂದ ಯಾಕೆ ಬಂದೆ. ಆರೋಗ್ಯ ಸುಧಾರಿಸಿ ಬರಬೇಕಿತ್ತು ಎಂದು ಬುದ್ದಿ ಮಾತು ಹೇಳಿ ಒಂದು ಏಟು ಹೊಡೆದಿದ್ದಾರೆ ಎನ್ನಲಾಗಿದೆ. ಪಶು ವೈದ್ಯರು ಹೊಡೆದ ರಭಸಕ್ಕೆ ಕೃಷ್ಣ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಕೆಲ ಹೊತ್ತಿನಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನು ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ…
ಬೆಳ್ತಂಗಡಿ : ಕುಡಿದ ಮತ್ತಿನಲ್ಲಿ ಪಶು ವೈದ್ಯನೋರ್ವ ಹಲ್ಲೆ ನಡೆಸಿದ ಪರಿಣಾಮ ಸ್ಥಳೀಯ ನಿವಾಸಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಕ್ಕಡದಲ್ಲಿ ಸಂಭವಿಸಿದ್ದು, ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪಶು ವೈದ್ಯ ಕುಮಾರ್ ಎಂದು ಗುರುತಿಸಲಾಗಿದೆ. ಪಟ್ರಮೆ ಗ್ರಾಮದ ಮೈಕೆ ನಿವಾಸಿ ಕೃಷ್ಣ ಯಾನೆ ಕಿಟ್ಟ (55) ಮೃತರು ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಮೇ 13ರಂದು ಕೊಕ್ಕಡಕ್ಕೆ ಬಂದ ಕೃಷ್ಣ ಅವರಿಗೆ ಅಲ್ಲೇ ಕುಡಿದ ಮತ್ತಿನಲ್ಲಿದ್ದ ಕೊಕ್ಕಡದ ಪಶು ವೈದ್ಯ ಕುಮಾರ್ ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣ ಅವರು ಅಸ್ವಸ್ಥಗೊಂಡು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಧರ್ಮಸ್ಥಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
ಮಂಗಳೂರು: ಮನೆಮಂದಿ ಪ್ರವಾಸಕ್ಕೆ ಹೋದ ವೇಳೆ ಮನೆಯಲ್ಲಿದ್ದ ಚಿನ್ನಾಭರಣ ಕಳವಾಗಿರುವ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ 5ರಂದು ಮನೆಮಂದಿ ಮೈಸೂರಿಗೆ ಪ್ರವಾಸಕ್ಕೆ ಹೋಗಿದ್ದರು. ಮೇ 7ರಂದು ಮನೆಗೆ ಬಂದಾಗ ಮನೆಯಲ್ಲಿದ್ದ ಸುಮಾರು 28 ಗ್ರಾಂ ತೂಕದ ಒಂದು ಚಿನ್ನದ ಬಳೆ, 3 ಚಿನ್ನದ ಉಂಗುರ ಸಹಿತ ಅಂದಾಜು 1.60 ಲ.ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿದ್ದು ದೂರಿನ ಅನ್ವಯ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಗೇಟ್ ಬಳಿ ಇಂದು ಬೆಳಗ್ಗೆ ಖಾಸಗಿ ಬಸ್ಸು ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಪ್ರಯಾಣಿಕರನ್ನು ಇಳಿಸಲು ರಸ್ತೆ ಬದಿ ನಿಲ್ಲಿಸಿದ್ದ ಬಸ್ಸಿಗೆ ಇನ್ನೊಂದು ವಾಹನವನ್ನು ಹಿಂದಿಕ್ಕುವ ರಭಸದಲ್ಲಿ ಕಂಟೈನರ್ ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಬಸ್ಸು ಚಾಲಕ ಉಪ್ಪಳದ ಅಶ್ರಫ್ ಹಾಗೂ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ಸಿನ ಮುಂಭಾಗ ನಜ್ಜು ಗುಜ್ಜಾಗಿದ್ದು, ಸಿಲುಕಿದ್ದ ಚಾಲಕನನ್ನು ನಾಗರಿಕರು ಹರಸಾಹಸ ದಿಂದ ಹೊರ ತೆಗೆದರು. ಅಪಘಾತದ ಬಳಿಕ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತ ಗೊಂಡಿತುಸ್ಥಳಕ್ಕೆ ಆಗಮಿಸಿದ ಮಂಜೇಶ್ವರ ಠಾಣಾ ಪೊಲೀಸರು ಸಂಚಾರ ಸುಗಮ ಗೊಳಿಸಿದರು. ಬಸ್ಸು ತಲಪಾಡಿಯಿಂದ ಕಾಸರಗೋಡಿಗೆ ಹಾಗೂ ಲಾರಿ ಮಂಗಳೂರು ಕಡೆಗೆ ತೆರಳುತ್ತಿತ್ತು . ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಪದ್ಮುಂಜದಿಂದ ಕುಪ್ಪೆಟ್ಟಿ ಕಡೆಗೆ ಪಿಕಪ್ ವಾಹನವೊಂದರಲ್ಲಿ ಜಾನುವಾರು ಸಾಗಾಟ ಮಾಡುತ್ತಿರುವುದನ್ನು ಮೇ .11ರಂದು ಮಧ್ಯಾಹ್ನ ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಠಾಣಾ ಪಿಎಸ್‌ಐ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಪದ್ಮುಂಜ ಕಡೆಯಿಂದ ಕುಪ್ಪೆಟ್ಟಿ ಕಡೆಗೆ ಹೋಗುತ್ತಿದ್ದ ಪಿಕಪ್( ಕೆಎ 21, ಪಿ 8892) ವಾಹನವನ್ನು ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಅದರಲ್ಲಿ ಮೂರು ಜಾನುವಾರುಗಳ ಕೈ ಕಾಲುಗಳನ್ನು ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ.ಈ ಬಗ್ಗೆ ಪಿಕಪ್ ಚಾಲಕ ರಕ್ಷಿತ್(25)ನನ್ನು ವಿಚಾರಣೆ ನಡೆಸಿದ ವೇಳೆ ಜಾನುವಾರುಗಳನ್ನು ಪದ್ಮುಂಜ ದೊಂಬ ಗೌಡ ಎಂಬವರಿಂದ ಖರೀದಿ ಮಾಡಿ ಉರುವಾಲುಪದವಿನ ಶಾಕೀರ್ ಎಂಬವರಿಗೆ ಕಡಿದು ಮಾಂಸಮಾಡಲು ಸಾಗಾಟ ಮಾಡುವುದಾಗಿ ತಿಳಿಸಿರುವುದಾಗಿ ವರದಿಯಾಗಿದೆ.ಪಿಕಪ್ ವಾಹನದಲ್ಲಿದ್ದ ಹಸು, ಹೋರಿ ಹಾಗೂ ಕರುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಬಂಟ್ವಾಳ: ಖೋಟಾನೋಟು ಚಲಾವಣೆಗೆ ಯತ್ನಿಸುತ್ತಿದ್ದ ಕಾಸರಗೋಡು ಮೂಲದ ಮಹಿಳೆ ಹಾಗೂ ಓರ್ವ ಪುರುಷನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಓರ್ವ ಪರಾರಿಯಾಗಿದ್ದಾನೆ. ಬಂಧಿತರಿಂದ 500 ರೂ. ಮುಖಬೆಲೆಯ 46 ಖೋಟಾನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾಸರಗೋಡು, ಕೂಡ್ಲು ಗ್ರಾಮದ ಚೂರಿ ಎಂಬಲ್ಲಿನ ನಿವಾಸಿಗಳಾದ ಮೊಹಮ್ಮದ್ ಸಿ.ಎ. (61), ಕಮರುನ್ನೀಸಾ (41) ಬಂಧಿತ ಆರೋಪಿಗಳು. ಶರೀಫ್ ಎಂಬಾತ ಓಡಿ ಪರಾರಿಯಾಗಿದ್ದಾನೆ. ಈತನ ಬಂಧನಕ್ಕೆ ಪೊಲೀಸರು ಬಲೆ ಬಳಸಿದ್ದಾರೆ. ಮೇ 10ರಂದು ರಾತ್ರಿ ಬಂಟ್ವಾಳದ ಬಿ.ಸಿ.ರೋಡ್ ಸೋಮಯಾಜಿ ಆಸ್ಪತ್ರೆಯ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಪರಿಶೀಲನೆ ಮಾಡಲು ತೆರಳಿದ್ದಾರೆ. ಆಗ ಕಾರಿನ ಚಾಲಕ ಸೀಟಿನಲ್ಲಿದ್ದವ ಹಾಗೂ ಇನ್ನೋರ್ವ ವ್ಯಕ್ತಿ ಪರಾರಿಯಾಗಲು ಯತ್ನಿಸಿದ್ದಾರೆ. ಪರಾರಿಯಾಗುತ್ತಿದ್ದವರ ಪೈಕಿ, ಓರ್ವನನ್ನು ಪೊಲೀಸರು ತಮ್ಮ ಖೆಡ್ಡಾಕ್ಕೆ ಕೆಡವಿ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಮತ್ತೋರ್ವನು ಪರಾರಿಯಾಗಿರುತ್ತಾನೆ. ಅಲ್ಲದೆ ಈ ಕಾರಿನಲ್ಲಿ ಓರ್ವ ಮಹಿಳೆಯಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ವಿಚಾರಣೆಯ ವೇಳೆ ಖೋಟಾ ನೋಟುಗಳನ್ನು ವಿನಿಮಯ ಮಾಡಲು ಬಂದಿರುವುದಾಗಿ…
ಬೆಳ್ತಂಗಡಿ: ರಸ್ತೆಯಲ್ಲಿ ವಾಹನಕ್ಕೆ ಒಂಟಿ ಸಲಗ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬೊಲೇರೊವೊಂದು ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಘಾಟ್ ನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಳೆದೊಂದು ವಾರದಿಂದ ಒಂಟಿ ಸಲಗ ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಂದು ವಾಹನ ಸಂಚಾರಕ್ಕೆ ಅಡ್ಡಿಪಡಿಸುತ್ತಿತ್ತು. ನಿನ್ನೆ ಚಾರ್ಮಾಡಿ ಘಾಟ್ ಒಂದನೇ ತಿರುವಿನಲ್ಲಿ ಒಂಟಿ ಸಲಗ ಮತ್ತೆ ಪ್ರತ್ಯಕ್ಷವಾಗಿದೆ. ಬೊಲೇರೊ ವಾಹನಕ್ಕೆ ಒಂಟಿ ಸಲಗ ಅಡ್ಡ ಬಂದಿದ್ದು, ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದೆ. ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬೊಲೇರೊ ವಾಹನ ಚಾಲಕ ಒಂಟಿ ಸಲಗವನ್ನು ನೋಡಿ ನಿಯಂತ್ರಣ ಕಳೆದುಕೊಂಡಿದ್ದಾನೆ. ಪರಿಣಾಮ ಬೊಲೇರೊ ಚರಂಡಿಗೆ ಬಿದ್ದಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಸ್ಥಳೀಯರು ಬಂದು ವಾಹನವನ್ನು ಮೇಲಕ್ಕೆತ್ತಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಅರಣ್ಯ ಇಲಾಖೆಯವರು ಭೇಟಿ ನೀಡಿದ್ದಾರೆ.