ವಿಟ್ಲ: ಸ್ಕೂಟಿ ಮತ್ತು ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಆಟೋ ಪ್ರಯಾಣಿಕ ಮೃತಪಟ್ಟ ಘಟನೆ ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ನಡೆದಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಆಟೋ ಪ್ರಯಾಣಿಕ ಪೆರುವೋಡಿ ನಿವಾಸಿ ನಾಗೇಶ್ ಮೃತ ದುರ್ದೈವಿ.ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟಿ ಮತ್ತು ಆಟೋರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ಆಟೋ ಪ್ರಯಾಣಿಕ ನಾಗೇಶ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.