Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆಟೊ ರಿಕ್ಷಾ ವಶಪಡಿಸಿಕೊಂಡ ಪೊಲೀಸರು ಮನನೊಂದು ಚಾಲಕ ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಆಟೊ ರಿಕ್ಷಾ ವಶಪಡಿಸಿಕೊಂಡ ಪೊಲೀಸರು ಮನನೊಂದು ಚಾಲಕ ಆತ್ಮಹತ್ಯೆ..!

    October 9, 2024
    Share

    ಮಂಗಳೂರು:ಆಟೊ ರಿಕ್ಷಾವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿರುವು ದರಿಂದ ಮನ ನೊಂದು ಚಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗಡಿಭಾಗದ ಕಾಸರಗೋಡು ನಗರದಲ್ಲಿ ನಡೆದಿದೆ ಮೃತರನ್ನು ಕರ್ನಾಟಕ ಮೂಲದ ಅಬ್ದುಲ್ ಸತ್ತಾರ್ (55) ಎಂದು ಗುರುತಿಸಲಾಗಿದೆ. ಇವರು ಮೂರು ವರ್ಷಗಳಿಂದ ಕಾಸರಗೋಡು ರೈಲ್ವೆ ನಿಲ್ದಾಣ ರಸ್ತೆಯ ಸಮೀಪ ಬಾಡಿಗೆ ಕ್ವಾಟ್ರಸ್‌ನಲ್ಲಿ ವಾಸ್ತವ್ಯ ಹೂಡಿ ನಗರದಲ್ಲಿ ಆಟೊ ರಿಕ್ಷಾ ಬಾಡಿಗೆ ನಡೆಸುತ್ತಿದ್ದರು. ಡಿವೈಎಸ್ಪಿ ಕಚೇರಿಗೆ ತೆರಳಿ ಮನವಿ ಮಾಡಿದ್ದು, ಭರವಸೆ ನೀಡಿದ್ದರೂ ನಗರ ಠಾಣಾ ಪೊಲೀಸರು ಹಲವು ಕಾರಣ ನೀಡಿ ಆಟೊ ರಿಕ್ಷಾ ಬಿಟ್ಟು ಕೊಡಲು ಮುಂದಾಗಲಿಲ್ಲ ಎಂದು ಆರೋಪ ಕೇಳಿ ಬಂದಿತ್ತು.

    ಈ ನಡುವೆ ಸತ್ತಾರ್ ಸೋಮವಾರ ಸಂಜೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನೆ ಬಳಿಕ ನಗರದಲ್ಲಿ ಆಟೊ ಚಾಲಕರು ಸಂಚಾರ ಸ್ಥಗಿ ತಗೊಳಿಸಿ ಮುಷ್ಕರ ನಡೆಸಿ, ನಗರ ಠಾಣೆಗೆ ಮುತ್ತಿಗೆ ಹಾಕಿದರು. ನಾಲ್ಕು ದಿನಗಳ ಹಿಂದೆ ಸಂಜೆ ನಗರದ ಗೀತಾ ಜಂಕ್ಷನ್ ಬಳಿ ಅಬ್ದುಲ್ ಸತ್ತಾರ್‌ರ ಆಟೊ ರಿಕ್ಷಾ ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ನಿಲುಗಡೆಗೊಳಿಸಲಾಗಿದೆ ಎಂದು ಆರೋಪಿಸಿ ನೋಟಿಸ್‌ ನೀಡಿ ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಸಾಲ ಪಡೆದು ಆಟೊ ರಿಕ್ಷಾ ಖರೀದಿಸಿದ್ದು, ಬಿಟ್ಟುಕೊಡುವಂತೆ ಹಲವು ಬಾರಿ ಠಾಣೆಗೆ ತೆರಳಿ ಪೊಲೀಸರಲ್ಲಿ ಮನವಿ ಮಾಡಿದರೂ ಪೊಲೀಸರು ಬಿಟ್ಟುಕೊಡಲು ಮುಂದಾಗಲಿಲ್ಲ ಎನ್ನಲಾಗಿ ದೆ. ಬಳಿಕ ಉಳಿದ ಆಟೊ ರಿಕ್ಷಾ ಚಾಲಕರು ಕಾಸರಗೋಡು ಆಟೊ ರಿಕ್ಷಾ ಚಾಲಕ ಅಬ್ದುಲ್ ಸತ್ತಾರ್ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ಆರೋಪಕ್ಕೆ ಸಿಲುಕಿರುವ ಕಾಸರಗೋಡು ನಗರ ಠಾಣಾ ಸಬ್ ಇನ್‌ಸ್ಪೆಕ್ಟರ್ ಪಿ.ಅನೂಪ್ ರನ್ನು ಚಂದೇರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಡಿ.ಶಿಲ್ಪಾ ವರ್ಗಾವಣೆ ಆದೇಶವನ್ನು ನೀಡಿದ್ದಾರೆ. ಅನೂಪ್‌ರ ವಿರುದ್ಧ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

    Post Views: 186

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.