Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕುಂಬಳೆ: ಆಟೋರಿಕ್ಷಾ ಮಗುಚಿ ಬಿದ್ದು ಚಾಲಕ ಮೃತ್ಯು
    ಇತ್ತೀಚಿನ ಸುದ್ದಿ

    ಕುಂಬಳೆ: ಆಟೋರಿಕ್ಷಾ ಮಗುಚಿ ಬಿದ್ದು ಚಾಲಕ ಮೃತ್ಯು

    July 9, 2023
    Share

    ಕುಂಬಳೆ: ಇಂಟರ್‌ಲಾಕ್‌ ಲೋಡ್‌ಗೆ ರಿಕ್ಷಾ ಡಿಕ್ಕಿ ಹೊಡೆದು, ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಪೆರ್ಮುದೆಯ ರಸ್ತೆಯಲ್ಲಿ ಮಲೆನಾಡು ಹೈವೇ ನಿರ್ಮಾಣಕ್ಕಾಗಿ ಇಳಿಸಿದ್ದ ಇಂಟರ್‌ಲಾಕ್‌ ಲೋಡಿಗೆ ರಿಕ್ಷಾ ಬಡಿದು ಕವುಚಿ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಚೇವಾರು ಮಿತ್ತಡ್ಕದ ರಾಮ ಎಂಬವರ ಪುತ್ರ, ರಿಕ್ಷಾ ಚಾಲಕ ಕಿಶೋರ್ ಯಾನೆ ಪ್ರಕಾಶ್ ಸಿ. ಎಚ್ (34) ಮೃತಪಟ್ಟ ಯುವಕ. ಇಂದು (ಜು.9) ಬೆಳಿಗ್ಗೆ 11 ಗಂಟೆಯ ವೇಳೆಗೆ ಅಪಘಾತ ಸಂಭವಿಸಿದೆ. ಪ್ರತಿದಿನ ಚೇವಾರು ರಿಕ್ಷಾ ಸ್ಟ್ಯಾಂಡಿನಲ್ಲಿ ಇರಿಸಿ ಬಾಡಿಗೆ ನಡೆಸುತ್ತಿದ್ದ ಕಿಶೋರ್ ಇಂದು ಪೆರ್ಮುದೆಗೆ ಔಷಧಿಗಾಗಿ ತೆರಳಿರುವ ವೇಳೆ ದುರ್ಘಟನೆ ಸಂಭವಿಸಿರುವುದಾಗಿ ತಿಳಿದು ಬಂದಿದೆ. ಗಾಯಗೊಂಡ ಕಿಶೋರ್‌ನನ್ನು ಬಂದ್ಯೋಡಿನ ಖಾಸಗೀ ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಿಲ್ಲ. ಮೃತರು ಸ್ಥಳೀಯ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು. ಈ ಬಗ್ಗೆ ಕುಂಬಳೆ ಪೊಲೀಸ ರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 173

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.