Facebook Twitter Instagram
    Thursday, June 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಕ್ಕಳು ಆಟವಾಡುವಾಗ ಕುಸಿದುಬಿದ್ದ ಗೇಟ್; 5 ವರ್ಷದ ಮಗು ಸಾವು
    ಇತ್ತೀಚಿನ ಸುದ್ದಿ

    ಮಕ್ಕಳು ಆಟವಾಡುವಾಗ ಕುಸಿದುಬಿದ್ದ ಗೇಟ್; 5 ವರ್ಷದ ಮಗು ಸಾವು

    June 18, 2026
    Share

    ಬೆಂಗಳೂರು: ರಾಜಧಾನಿಯ ಉತ್ತರ ತಾಲೂಕಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ನೆರೆಮನೆಯ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಮನೆಯೊಂದರ ಕಾಂಪೌಂಡ್ ಗೋಡೆ ಮತ್ತು ಗೇಟ್ ಬಿದ್ದ ಪರಿಣಾಮ 5 ವರ್ಷದ ಪುಟಾಣಿ ಮಗು ಮೃತಪಟ್ಟಿದ್ದು, ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದೆ.

    ಮೃತಪಟ್ಟ ದುರ್ದೈವಿ ಮಗುವನ್ನು ಯಾದಗಿರಿ ಮೂಲದ ದಾವಲ್ ಸಾಬ್ ಅವರ ಪುತ್ರ ಅಫೀನ್ (5) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕ್ಯಾಬ್ ಚಾಲಕರಾಗಿರುವ ದಾವಲ್ ಸಾಬ್ ಅವರು ಬೆಂಗಳೂರಿನಲ್ಲಿ ಹೊಸ ಕೆಲಸದ ಹುಡುಕಾಟದಲ್ಲಿದ್ದರು. ಅವರ ಪತ್ನಿ ಹಾಗೂ ಮಗು ಅಫೀನ್ ಕೇವಲ ಐದು ದಿನಗಳ ಹಿಂದಷ್ಟೇ ಬಾಗಲೂರು ವ್ಯಾಪ್ತಿಯ ಬಂಡಿಕೊಡಿಗೇಹಳ್ಳಿಯಲ್ಲಿರುವ ತಮ್ಮ ತಂಗಿಯ ಮನೆಗೆ ಬಂದಿದ್ದರು.

    ಬುಧವಾರ ಸಂಜೆ ಸುಮಾರು 6:30ರ ವೇಳೆಗೆ, ಅಫೀನ್ ಪಕ್ಕದ ಮನೆಯ ಮಕ್ಕಳಾದ ಸಮನ್ವಿ ಹಾಗೂ ಮತ್ತೊಂದು ಮಗುವಿನೊಂದಿಗೆ ಬಿ.ಸಿ. ನರಸಪ್ಪ ಎಂಬುವರ ಮನೆಯ ಕಾಂಪೌಂಡ್ ಗೇಟ್ ಬಳಿ ಆಟವಾಡುತ್ತಿದ್ದನು. ಮಕ್ಕಳು ಆಟದ ಭರದಲ್ಲಿ ಕಬ್ಬಿಣದ ಗೇಟ್ ಹಿಡಿದು ಜೀಕಾಡುತ್ತಿದ್ದಾಗ, ಗೇಟ್‌ನ ಭಾರ ತಾಳಲಾರದೆ ಕಾಂಪೌಂಡ್ ಗೋಡೆಯು ಗೇಟ್ ಸಮೇತ ಒಮ್ಮೆಲೇ ಮಕ್ಕಳ ಮೇಲೆ ಕುಸಿದು ಬಿದ್ದಿದೆ.ಈ ಘಟನೆಯನ್ನು ನೋಡಿ ಸ್ಥಳೀಯರು ತಕ್ಷಣವೇ ಓಡಿ ಬಂದು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಮಕ್ಕಳಿಬ್ಬರನ್ನು ಹೊರತೆಗೆದು ಖಾಸಗಿ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದರು. ಆದರೆ, ತಲೆ ಹಾಗೂ ಎದೆಯ ಭಾಗಕ್ಕೆ ತೀವ್ರವಾಗಿ ಪೆಟ್ಟಾಗಿದ್ದ ಅಫೀನ್ ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಮತ್ತೊಂದು ಮಗು ಸಮನ್ವಿಗೆ ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಬಾಗಲೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಂಪೌಂಡ್ ಗೋಡೆಯ ಅವೈಜ್ಞಾನಿಕ ನಿರ್ಮಾಣದ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

    Post Views: 2

    karnataka PoliceInvestigation

    Related Posts

    ವಾಹನ ದೋಷ ಪರಿಶೀಲನೆ ವೇಳೆ ಭೀಕರ ಘಟನೆ; ತನ್ನದೇ ಟಿಪ್ಪರ್ ಹರಿದು ಚಾಲಕ ಬಲಿ

    June 18, 2026

    ಬಂಟ್ವಾಳ: ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ 5 ವರ್ಷದ ಬಾಲಕಿ ಸಾವು..!!

    June 18, 2026

     ವಿಟ್ಲ: ಟಿಪ್ಪರ್ ಲಾರಿ ಹರಿದು ಚಾಲಕ ಸ್ಥಳದಲ್ಲೇ ಸಾವು..!!

    June 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಕ್ಕಳು ಆಟವಾಡುವಾಗ ಕುಸಿದುಬಿದ್ದ ಗೇಟ್; 5 ವರ್ಷದ ಮಗು ಸಾವು

    June 18, 2026

    ವಾಹನ ದೋಷ ಪರಿಶೀಲನೆ ವೇಳೆ ಭೀಕರ ಘಟನೆ; ತನ್ನದೇ ಟಿಪ್ಪರ್ ಹರಿದು ಚಾಲಕ ಬಲಿ

    June 18, 2026

    ಬಂಟ್ವಾಳ: ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ 5 ವರ್ಷದ ಬಾಲಕಿ ಸಾವು..!!

    June 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.