ಮಂಗಳೂರು:ಅಬ್ದುಲ್ ರಹಮಾನ್ ಹತ್ಯೆ ಪ್ರಕರಣದಲ್ಲಿ ಪ್ರಕರಣದ ಪ್ರಮುಖ ಅರೋಪಿಗೆ ನ್ಯಾಯಾಲಯ ಜಾಮೀನು ನೀಡಿರುವ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, “ಇದು ನ್ಯಾಯಾಲಯದ ತೀರ್ಪು. ನ್ಯಾಯಾಂಗದ ಆದೇಶಗಳಲ್ಲಿ ನಾನು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ನಾನು ನನ್ನ ವಾದವನ್ನು ಮಾತ್ರ ಮಂಡಿಸಬಹುದು. ಈ ಕುರಿತು ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ. ಏನಾದರೂ ಲೋಪಗಳಿದ್ದರೆ ಅಡ್ವೊಕೇಟ್ ಜನರಲ್ (ಎಜಿ) ಅವರೊಂದಿಗೆ ಚರ್ಚಿಸಿ ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳುತ್ತೇನೆ” ಎಂದು ತಿಳಿಸಿದ್ರು..




