Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಲಂಚ ಪಡೆದು ‘ಲೋಕಾ’ ಬಲೆಗೆ ಬಿದ್ದಿದ್ದ ಪೊಲೀಸ್ ಇನ್‌ಸ್ಪೆಕ್ಟರ್, ಸಿಬ್ಬಂದಿಗೆ ಜಾಮೀನು
    ಇತ್ತೀಚಿನ ಸುದ್ದಿ

    ಮಂಗಳೂರು: ಲಂಚ ಪಡೆದು ‘ಲೋಕಾ’ ಬಲೆಗೆ ಬಿದ್ದಿದ್ದ ಪೊಲೀಸ್ ಇನ್‌ಸ್ಪೆಕ್ಟರ್, ಸಿಬ್ಬಂದಿಗೆ ಜಾಮೀನು

    February 7, 2025
    Share

    ಮಂಗಳೂರು: ನ್ಯಾಯಾಲಯದ ಆದೇಶದಂತೆ ಠಾಣೆಯಲ್ಲಿರುವ ವಾಹನ ಬಿಡಿಸಲು ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರಿಂದ ಬಂಧಿತರಾಗಿದ್ದ ಉತ್ತರ ಸಂಚಾರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಸಿಬ್ಬಂದಿ ಪ್ರವೀಣ್ ನಾಯ್ಕ್‌ಗೆ ಜಾಮೀನು ಲಭಿಸಿದೆ. ಜ.27 ರಂದು ವಾಹನ ಬಿಡಿಸಲು ಹೋದ ವಾಹನ ಮಾಲಕನಿಗೆ ಉತ್ತರ ಪೋಲಿಸ್ ಠಾಣೆಯ ಇನ್ಸ್‌ಪೆಕ್ಟರ್ ಮುಹಮ್ಮದ್ ಶರೀಫ್ ಲಂಚದ ಬೇಡಿಕೆ ಇಟ್ಟಿದ್ದರು. ದೂರುದಾರ ಲಂಚವನ್ನು ನೀಡದಿದ್ದ ಹಿನ್ನೆಲೆಯಲ್ಲಿ ವಾಹನ ಬಿಡಿಸಲು ಸತಾಯಿಸಲಾಗಿತ್ತು. ಆದ್ದರಿಂದ ಅವರು ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದರು. ಬಳಿಕ ಆ ವ್ಯಕ್ತಿಯಿಂದ ಮುಹಮ್ಮದ್ ಶರೀಫ್ ಮತ್ತು ಸಿಬ್ಬಂದಿ ಪ್ರವೀಣ್ ನಾಯ್ಕ 3000ರೂ. ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ಇಬ್ಬರನ್ನು ಜ.28ರಂದು ಬಂಧಿಸಿದ್ದರು. ಆರೋಪಿ ಪರ ವಕೀಲರು ಜಾಮೀನು ಅರ್ಜಿಯನ್ನು ಸಲ್ಲಿಸಿದ್ದು ಅರ್ಜಿಯನ್ನು ಪರಿಗಣಿಸಿದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸಂಧ್ಯಾ ಅವರು ಇಬ್ಬರಿಗೂ ಆರೋಪಿಗಳನ್ನು ಜಾಮೀನು ಮೇಲೆ ಬಿಡುಗಡೆ ಮಾಡುವಂತೆ ಆದೇಶಿಸಿದ್ದಾರೆ. ಆರೋಪಿಗಳ ಪರವಾಗಿ ಖ್ಯಾತ ವಕೀಲರಾದ ಬಿ. ಅರುಣ್ ಬಂಗೇರ ಮತ್ತು ರಿಹಾನಾ ಪರ್ವಿನ್ ವಾದ ಮಂಡಿಸಿದ್ದಾರೆ.

    Post Views: 218

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.