ಕಾಣಿಯೂರು;ಬೈತಡ್ಕ ಮಸೀದಿಯ ಬಳಿಯಿರುವ ಕಿರುಸೇತುವೆಯಿಂದ ಕಾರೊಂದು ಕೆಳಗೆ ಬಿದ್ದು ಯುವಕರಿಬ್ಬರು ನಾಪತ್ತೆಯಾದ ಘಟನೆ ಕುರಿತಂತೆ ಇದೀಗ ಮತ್ತೊಂದು ಮಾಹಿತಿ ಲಭ್ಯವಾಗಿದೆ.
ನಾಪತ್ತೆಯಾಗಿರುವ ಯುವಕರನ್ನು ಬಂಟ್ವಾಳ ತಾಲೂಕಿನ ವಿಟ್ಲಮುಡ್ನೂರು ಗ್ರಾಮದ ಕುಂಡಡ್ಕದ ಧನುಷ್ (25) ಹಾಗೂ ವಿಟ್ಲ ಕನ್ಯಾನ ನಿವಾಸಿ ಧನುಷ್ (21) ಎಂದು ಗುರುತಿಸಲಾಗಿದೆ. ಸವಣೂರಿನಲ್ಲಿ ಪೊಲೀಸ್ ಚೆಕ್ ಪೋಸ್ಟ್‌ನಲ್ಲಿ ರಾತ್ರಿ 11.53 ಕ್ಕೆ ತಪಾಸಣೆಗೆ ಒಳಪಟ್ಟು ಮುಂದೆ ಸಾಗಿ 12. 02 ನಿಮಿಷಕ್ಕೆ ಕಾರು ಸೇತುವೆಗೆ ಢಿಕ್ಕಿಯಾಗಿ ತಡೆಗೋಡೆ ಮುರಿದು ಕೆಳಕ್ಕೆ ಬಿದ್ದಿದೆ. ನಾಪತ್ತೆಯಾಗಿರುವ ಪೈಕಿ ವಿಟ್ಲ ಕನ್ಯಾನ ನಿವಾಸಿ ಧನುಷ್ ಕುಂಡಡ್ಕ ನಿವಾಸಿ ಧನುಷ್ ಅವರ ತಾಯಿಗೆ ಕರೆ ಮಾಡಿ ನಮ್ಮ ಕಾರು ಹಳೆಯಂಗಡಿಯಲ್ಲಿ ಲಾರಿಗೆ ಢಿಕ್ಕಿಯಾಗಿದೆ, ನಾವು ಬದುಕಿ ಉಳಿದಿರುವುದೇ ಹೆಚ್ಚು, ಏನೂ ತೊಂದರೆಯಿಲ್ಲ, ನಾವು ಮನೆಗೆ ಮುಟ್ಟುವಾಗ ಬೆಳಿಗ್ಗೆ ಆಗಬಹುದು ಎಂದು ಹೇಳಿದ್ದಾರೆ. ಪೊಲೀಸರು ತನಿಖೆ ನಡೆಸಿದಾಗ ಧನುಷ್ ತಾಯಿಗೆ ಕರೆ ಮಾಡಿರುವುದು 11.52 ಕ್ಕೆ ಎಂದು ಸ್ಪಷ್ಟವಾಗಿ ತಿಳಿದು ಬಂದಿದೆ. ಕಾರು ಹೊಳೆಗೆ ಬಿದ್ದಿರುವುದು 12.02 ನಿಮಿಷಕ್ಕೆ. ಹಾಗಾಗಿ ಕಾರು ಹೊಳಗೆ ಬೀಳುವ ಮುಂಚೆ ಕರೆ ಮಾಡಲಾಗಿದೆ ಎಂದು ನಿರ್ಧಾರಕ್ಕೆ ಬರಲಾಗಿದೆ.