ಮಂಗಳೂರು: ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಕಾರ್ಯಕ್ರಮ ನಡೆಯುತ್ತಿದ್ದ ರಾಮ ಲಕ್ಷ್ಮೀ ನಾರಾಯಣ ಸಭಾಭವನದ ಮೊದಲನೇ ಮಹಡಿಯ ಬಾಲ್ಕನಿ ತಡೆಗೋಡೆ ಏಕಾಏಕಿ ಕುಸಿದು ಬಿದ್ದ ಘಟನೆ ನಡೆದಿದೆ.

ಬಾಲ್ಕನಿ ತಡೆಗೋಡೆ ಕುಸಿದ ಪರಿಣಾಮ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಅವರಲ್ಲಿ ಓರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.




