Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಲೇಡಿಗೋಷನ್ ಆಸ್ಪತ್ರೆಯ ಮಹಡಿಯಿಂದ ಹಾರಿ ಬಾಣಂತಿ ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಮಂಗಳೂರು : ಲೇಡಿಗೋಷನ್ ಆಸ್ಪತ್ರೆಯ ಮಹಡಿಯಿಂದ ಹಾರಿ ಬಾಣಂತಿ ಆತ್ಮಹತ್ಯೆ..!

    November 11, 2024
    Share

    ಮಂಗಳೂರು : ಬಾಣಂತಿಯೊಬ್ಬಳು ಮಂಗಳೂರು ನಗರದ ಲೇಡಿಗೋಷನ್ ಆಸ್ಪತ್ರೆಯ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಗೊಂಡಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳದ ರಂಜಿತಾ ಆಚಾರ್ಯ (28) ಮೃತ ಮಹಿಳೆಯಾಗಿದ್ದಾಳೆ.

    ರಂಜಿತಾ ಅವರಿಗೆ ಅವಧಿ ಪೂರ್ವ ಪ್ರಸವವಾಗಿತ್ತು. ಅ.30ರಂದು ಸಿಸೇರಿಯನ್ ಮೂಲಕ ಹೆರಿಗೆ ನಡೆದಿತ್ತು. ಎನ್ ಐಸಿಯುವಿನಲ್ಲಿ ಅರೈಕೆಯಲ್ಲಿದ್ದ ಶಿಶು ನ.3ರಂದು ಮೃತಪಟ್ಟಿತ್ತು. ರಂಜಿತಾ ಅವರು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಗೊಳ್ಳಬೇಕಿತ್ತು. ಅಷ್ಟರಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

    ರಂಜಿತಾ ಅವರನ್ನು ಆಸ್ಪತ್ರೆಯಿಂದ ಕರೆದೊಯ್ಯಲು ಮನೆಯವರು ಕೂಡ ಲೇಡಿಗೋಷನ್‌ ಆಸ್ಪತ್ರೆಗೆ ಬಂದಿದ್ದರು. ಆದರೆ ರಂಜಿತಾ ಏಕಾಏಕಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಹಾರಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ರಂಜಿತಾ ಅವರನ್ನು ಹೆರಿಗೆಗಾಗಿ ಮೊದಲು ಕಾರ್ಕಳದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಕೆಲವು ಗಂಭೀರ ಆರೋಗ್ಯ ಸಮಸ್ಯೆ ಇದ್ದುದರಿಂದ ಇಲ್ಲಿನ ಲೇಡಿಗೋಷನ್ ಆಸ್ಪತ್ರೆಗೆ ಅ.28ರಂದು ದಾಖಲು ಮಾಡಲಾಗಿತ್ತು.

    Post Views: 226

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.