Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಾಳೆ ‘ಬೆಂಗಳೂರು’ ಬಂದ್ : ಏನಿರುತ್ತೆ, ಏನಿರಲ್ಲ .? ಇಲ್ಲಿದೆ ಸಂಪೂರ್ಣ ಮಾಹಿತಿ
    ಇತ್ತೀಚಿನ ಸುದ್ದಿ

    ನಾಳೆ ‘ಬೆಂಗಳೂರು’ ಬಂದ್ : ಏನಿರುತ್ತೆ, ಏನಿರಲ್ಲ .? ಇಲ್ಲಿದೆ ಸಂಪೂರ್ಣ ಮಾಹಿತಿ

    September 10, 2023
    Share

    ಬೆಂಗಳೂರು : ‘ಶಕ್ತಿ ಯೋಜನೆ’ ವಿರೋಧಿಸಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸೆ.11 ರಂದು ನಾಳೆ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಬಂದ್ ಗೆ ಕರೆ ನೀಡಿದ್ದು, ಖಾಸಗಿ ವಾಹನಗಳ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಪ್ರಯಾಣಿಕರಿಗೆ ಬಂದ್ ಬಿಸಿ ತಟ್ಟಲಿದೆ.

    ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಒಕ್ಕೂಟದ ಸದಸ್ಯರ ನಡುವೆ ನಿನ್ನೆ ನಡೆದ ಸಂಧಾನ ಸಭೆ ವಿಫಲವಾಗಿದ್ದು, ಈ ಹಿನ್ನೆಲೆ ಸೆ.11 ರಂದು ಖಾಸಗಿ ಒಕ್ಕೂಟಗಳ ಬೆಂಗಳೂರು ಬಂದ್ ಖಚಿತವಾಗಿದೆ.

    ನಾಲೆ ಟ್ಯಾಕ್ಸಿ, ಆಟೋ, ಮ್ಯಾಕ್ಸಿ ಕ್ಯಾಬ್, ಖಾಸಗಿ ಬಸ್ ಗಳು ಸಂಪೂರ್ಣ ಬಂದ್ ಆಗಲಿದ್ದು, ಶಾಲಾ ವಾಹನಗಳು ಕೂಡ ಬಂದ್ ಆಗಲಿದೆ. ಆಟೋ, ಟ್ಯಾಕ್ಸಿ, ಖಾಸಗಿ ಬಸ್, ಸ್ಕೂಲ್ ಬಸ್ ಗಳನ್ನು ರಸ್ತೆಗೆ ಇಳಿಸದಿರಲು ಖಾಸಗಿ ಸಾರಿಗೆ ಒಕ್ಕೂಟ ನಿರ್ಧರಿಸಿದೆ. ಈ ಹಿನ್ನೆಲೆ ಸೆ.11 ರಂದು ಪ್ರಯಾಣಿಕರಿಗೆ ತೊಂದರೆಯಾಗುವ ಸಾಧ್ಯತೆಯಿದೆ.

    ಸರ್ಕಾರಿ ಬಸ್ ಗಳಾದ ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ನಾಳೆ ಎಂದಿನಂತೆ ಸಂಚಾರ ಮಾಡಲಿದ್ದು, ಪ್ರಯಾಣಿಕರಿಗೆ ತೊಂದರೆ ಇರುವುದಿಲ್ಲ. ಆದರೆ ಆಟೋ, ಟ್ಯಾಕ್ಸಿ, ಕ್ಯಾಬ್ ಗಳು ಮಾತ್ರ ಸಿಗೋದಿಲ್ಲ. ಕರ್ನಾಟಕ ಖಾಸಗಿ ಶಾಲಾ ವಾಹನಗಳ ಯೂನಿಯನ್ ವತಿಯಿಂದ ಖಾಸಗಿ ಸಾರಿಗೆ ಮುಷ್ಕರಕ್ಕೆ ಬೆಂಬಲ ನೀಡಿದ್ದು, ಈಗಾಗಲೇ ಅನೇಕ ಶಾಲೆಗಳು ರಜೆ ಘೋಷಣೆ ಮಾಡಿವೆ.

    ಸೋಮವಾರ ಐಟಿ ಉದ್ಯೋಗಿಗಳು ಮತ್ತು ಇತರ ಪ್ರಯಾಣಿಕರಿಗೆ ಕೆಲಸದ ದಿನವಾಗಿರುವುದರಿಂದ, ಮುಷ್ಕರದ ಮಧ್ಯೆ ಬೇಡಿಕೆಯನ್ನು ಪೂರೈಸಲು ಹೆಚ್ಚುವರಿ ಬಸ್ಸುಗಳನ್ನು ನಿಯೋಜಿಸಲು ಬಿಎಂಟಿಸಿ ಯೋಜಿಸುತ್ತಿದೆ.
    ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ, ಖಾಸಗಿ ಸಾರಿಗೆ ಸಂಘಟನೆಗಳು ಸೆಪ್ಟೆಂಬರ್ 11 ರಂದು ಒಂದು ದಿನದ ಮುಷ್ಕರ ನಡೆಸಲು ನಿರ್ಧರಿಸಿದವು.

    ಏನಿರುತ್ತದೆ..?

    1) ತುರ್ತು ಸೇವೆಗಳು
    2)ಆಂಬ್ಯುಲೆನ್ಸ್ ಗಳು , ಫಾರ್ಮಾ ವಾಹನಗಳು ಮತ್ತು ಇತರ ಪ್ರಮುಖ ಸರಕು ಸಾಗಿಸುವ ವಾಹನಗಳಂತಹ ಎಲ್ಲಾ ತುರ್ತು ಸೇವೆಗೆ ಸಂಬಂಧಿಸಿದ ವಾಹನಗಳು ಕಾರ್ಯನಿರ್ವಹಿಸುತ್ತವೆ.
    3) ಆಹಾರ ಮತ್ತು ವಿತರಣಾ ವಾಹನಗಳು : ಆಹಾರ, ದಿನಸಿ ಮತ್ತು ಇತರ ದೈನಂದಿನ ಅಗತ್ಯ ಸಾರಿಗೆಯನ್ನು ನಿಲ್ಲಿಸಲಾಗುವುದಿಲ್ಲ ಮತ್ತು ಅವು ಎಂದಿನಂತೆ ಕಾರ್ಯನಿರ್ವಹಿಸುತ್ತವೆ.

    ಸಾರ್ವಜನಿಕ ಸಾರಿಗೆ.
    ಬಿಎಂಟಿಸಿ ಬಸ್ಸುಗಳು ಮತ್ತು ಮೆಟ್ರೋ ರೈಲುಗಳು ಸೇರಿದಂತೆ ಎಲ್ಲಾ ಸಾರ್ವಜನಿಕ ಸಾರಿಗೆ ಯಾವುದೇ ಅಡೆತಡೆಗಳಿಲ್ಲದೆ ಎಂದಿನಂತೆ ಕಾರ್ಯನಿರ್ವಹಿಸುತ್ತದೆ. ಬಿಎಂಟಿಸಿ ಸೋಮವಾರ ಹೆಚ್ಚುವರಿ ಬಸ್ಸುಗಳನ್ನು ಓಡಿಸಲು ಯೋಜಿಸುತ್ತಿದೆ.

    ಏನಿರಲ್ಲ…?

    1) ಏರ್ ಪೋರ್ಟ್ ಟ್ಯಾಕ್ಸಿ ಸಂಪೂರ್ಣ ಸ್ಥಗಿತ
    2)ನಿಮ್ಮ ಮಕ್ಕಳನ್ನು ಶಾಲೆಗೆ ಕರೆದುಕೊಳ್ಳಲು ಖಾಸಗಿ ಬಸ್ ಬರಲ್ಲ
    3)ಓಲಾ, ಊಬರ್, ಟ್ಯಾಕ್ಸಿ ಬಂದ್
    4)ಕಾರ್ಪೊರೇಟ್ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡಿರುವ ಬಸ್ ಗಳಿಂದಲೂ ಬೆಂಬಲ
    5)ಗೂಡ್ಸ್ ವಾಹನಗಳು ಬಂದ್ ಆಗುವ ಸಾಧ್ಯತೆ
    6)ನಗರದಲ್ಲಿ 3 ಲಕ್ಷ ಆಟೋ, 1.5 ಲಕ್ಷ ಟ್ಯಾಕ್ಸಿ, 20 ಸಾವಿರ ಗೂಡ್ಸ್ ವಾಹನಗಳು ಬಂದ್
    7)5 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲಾ ವಾಹನಗಳ ಸಂಚಾರ ಸ್ಥಗಿತ
    8)80 ಸಾವಿರ ಸಿಟಿ ಟ್ಯಾಕ್ಸಿ, ಕಾರ್ಪೊರೇಟ್ ಕಂಪನಿಗಳ ಬಸ್ ಸ್ಥಗಿತವಾಗಲಿದೆ.

    9) 32 ಸಂಘಟನೆಯಡಿ 7 ಲಕ್ಷಕ್ಕೂ ಹೆಚ್ಚು ಖಾಸಗಿ ವಾಹನಗಳು ಬಂದ್

    Post Views: 261

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.