Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬ್ಯಾಂಕ್ ಹಣ ದುರ್ಬಳಕೆ ಮಾಡಿದ ಉದ್ಯೋಗಿಗೆ ಮೂರು ವರ್ಷಗಳ ಕಾರಾಗೃಹ ಶಿಕ್ಷೆ
    ಇತ್ತೀಚಿನ ಸುದ್ದಿ

    ಮಂಗಳೂರು: ಬ್ಯಾಂಕ್ ಹಣ ದುರ್ಬಳಕೆ ಮಾಡಿದ ಉದ್ಯೋಗಿಗೆ ಮೂರು ವರ್ಷಗಳ ಕಾರಾಗೃಹ ಶಿಕ್ಷೆ

    July 21, 2022
    Share

    ಮಂಗಳೂರು: ಉದ್ಯೋಗಿಯಿಂದಲೇ ಬ್ಯಾಂಕ್ ಹಣ ದುರುಪಯೋಗ ದೇರಳಕಟ್ಟೆಯ ವಿಜಯಾಬ್ಯಾಂಕ್ ಯೆನೆಪೊಯ ಯುನಿವರ್ಸಿಟಿಯ ಬ್ರ್ಯಾಂಚ್ ನೌಕರ ವಿಕಾಸ್ ವಿ. ಶೆಟ್ಟಿಗೆ 2ನೇ ಜಿಲ್ಲಾ ಹೆಚ್ಚುವರಿ ಹಾಗೂ ಸತ್ರ ನ್ಯಾಯಾಲಯ 3 ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದೆ.

    ಬ್ಯಾಂಕ್ ಮ್ಯಾನೇಜರ್ ಸಂದೀಪ್ ಗದ್ದೆಯವರು 2017ರ ಡಿಸೆಂಬರ್ 28-30 ರವರೆಗೆ ರಜೆಯಲ್ಲಿದ್ದರು. ಈ ವೇಳೆ ವಿಕಾಸ್ ವಿ. ಶೆಟ್ಟಿ ಪ್ರಭಾರದಲ್ಲಿದ್ದರು. ಆದರೆ 2017ರ ಡಿಸೆಂಬರ್ 29ರಂದು ಸಂಜೆ ಬ್ಯಾಂಕ್ ಸಿಬ್ಬಂದಿ ಕ್ಲೋಸಿಂಗ್‌ ಕ್ಯಾಶ್‌ನ್ನು ಬ್ಯಾಂಕ್‌ನ ಫಿನಾಕಲ್ ಸ್ವಾಫ್ಟ್ ವೇರ್‌ನಲ್ಲಿ ಟ್ಯಾಲಿ ಮಾಡಿದಾಗ ಕ್ಲೋಸಿಂಗ್ ಕ್ಯಾಶ್ ಟ್ಯಾಲಿಯಾಗದೆ 27,29,875 ರೂ. ಕಡಿಮೆ ಇತ್ತು. ಈ ಬಗ್ಗೆ ವಿಕಾಸ್ ವಿ.ಶೆಟ್ಟಿಯಲ್ಲಿ ವಿಚಾರಿಸಿದಾಗ, ಈ ಹಣವನ್ನು ತಾನು ತೆಗೆದಿರುವುದಾಗಿ ಒಪ್ಪಿಕೊಂಡಿದ್ದನು. ಹಾಗೂ ಈ ಹಣವನ್ನು ಡಿಸೆಂಬರ್ 31ರಂದು ಬ್ಯಾಂಕಿಗೆ ಮರು ಪಾವತಿ ಮಾಡಿದ್ದಾನೆ. ಆದರೆ ಆರೋಪಿ ಸಾರ್ವಜನಿಕ ಹಣವನ್ನು ತನ್ನ ಸ್ವಂತ ಉಪಯೋಗಕ್ಕೆ ದುರುಪಯೋಗ ಪಡಿಸಿ ನಂಬಿಕೆ ದ್ರೋಹ ಎಸಗಿರುವುದಾಗಿ ಮಂಗಳೂರು ಇಕಾನಮಿಕ್ & ನಾರ್ಕೋಟಿಕ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

    ಈ ಪ್ರಕರಣದಲ್ಲಿ ವಿಚಾರಣೆಯನ್ನು ನಡೆಸಿ ವಾದ ವಿವಾದವನ್ನು ಆಲಿಸಿರುವ 2ನೇ ಸಿ.ಜೆ.ಎಂ ನ್ಯಾಯಾಲಯದ ನ್ಯಾಯಾಧೀಶ ಮಧುಕರ ಪಿ. ಭಾಗವತ್ ಕೆ.ಯವರು ವಿಕಾಸ್.ವಿ.ಶೆಟ್ಟಿ ತಪ್ಪಿತಸ್ಥನೆಂದು ನಿರ್ಣಯಿಸಿ 406 ರಡಿಯ ಅಪರಾಧಕ್ಕಾಗಿ 1 ವರ್ಷ ಜೈಲು ಶಿಕ್ಷೆ ಮತ್ತು 5,000 ರೂ. ದಂಡ, 409ರಡಿಯ ಅಪರಾಧಕ್ಕಾಗಿ 3 ವರ್ಷಗಳ ಕಾಲ ಜೈಲು ಶಿಕ್ಷೆ ಮತ್ತು 5000 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಸರಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಮೋಹನ್ ಕುಮಾರ್ ಬಿ. ವಾದ ಮಂಡಿಸಿದ್ದರು.

    Post Views: 224

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.