Facebook Twitter Instagram
    Monday, September 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಕಾರು ಢಿಕ್ಕಿಯಾಗಿ ಪಾದಚಾರಿ ಯುವತಿ ಸಾವು
    ಇತ್ತೀಚಿನ ಸುದ್ದಿ

    ಬಂಟ್ವಾಳ: ಕಾರು ಢಿಕ್ಕಿಯಾಗಿ ಪಾದಚಾರಿ ಯುವತಿ ಸಾವು

    December 29, 2023
    Share

    ಬಂಟ್ವಾಳ: ಪಾದಚಾರಿ ಯುವತಿಯೋರ್ವಳಿಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಳು ಮಧ್ಯರಾತ್ರಿ ವೇಳೆ ಮೃತಪಟ್ಟ ಘಟನೆ ನಡೆದಿದೆ.

    ಬಿಸಿರೋಡಿನ ಕೈಕಂಬ ‌ಸಮೀಪದ ಪಚ್ಚಿನಡ್ಕ ಎಂಬಲ್ಲಿ ರಾತ್ರಿ 8 ಗಂಟೆ ವೇಳೆ ಅಪಘಾತ ನಡೆದಿತ್ತು.
    ಇಲ್ಲಿನ ಸ್ಥಳೀಯ ‌ನಿವಾಸಿ ಚೈತ್ರ (22 ) ಮೃತಪಟ್ಟ ಯುವತಿ.ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಚೈತ್ರ ಅವರು ಸಂಜೆ ಕೆಲಸ ಬಿಟ್ಟು ಬಸ್ ನಿಂದ ಇಳಿದು ತಾಯಿ ಜೊತೆಗೆ ಮನೆಯ ಕಡೆಯ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದೆ ಎಂದು ಆರಂಭದಲ್ಲಿ ಹೇಳಲಾಗಿತ್ತು. ಸ್ನೇಹಿತೆಯೋರ್ವಳ ಮದುವೆಯ ರೋಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿನ್ನಲೆಯಲ್ಲಿಈಕೆ ಕೆಲಸಕ್ಕೆ ರಜೆ ಪಡೆದುಕೊಂಡು ಸಂಜೆ ವೇಳೆ ಮನೆಯಿಂದ ತಾಯಿ ಜೊತೆ ನಡೆದುಕೊಂಡು ಹೋಗುತ್ತಿದ್ದಳು ಎಂದು ಸಂಬಂಧಿಕರು ತಿಳಿಸಿದ್ದಾರೆ.ತಾಯಿ ಜೊತೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದ ಸ್ವಿಪ್ಟ್ ಕಾರು ಇವಳಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಇವಳನ್ನು ಖಾಸಗಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಟ್ರಾಫಿಕ್ ಎ.ಎಸ್.ಐ.ಸುರೇಶ್ ಪಡಾರ್, ಹಾಗೂ ಹೆಚ್.ಸಿ.ರಮೇಶ್ ಅವರು ಖಾಸಗಿ ವಾಹನದ ಮೂಲಕ ಗಾಯಳು ಚೈತ್ರಳನ್ನು ಮಂಗಳೂರು ‌ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.ಗಂಭೀರವಾಗಿ ಗಾಯಗೊಂಡಿರುವ ಈಕೆ ತುರ್ತು ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು,ಆದರೆ ಮಧ್ಯ ರಾತ್ರಿ ಸುಮಾರು 1 ಗಂಟೆಗೆ ಈಕೆ ಮೃತಪಟ್ಟ ಬಗ್ಗೆ ವೈದ್ಯರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.ಪಾದಾಚಾರಿಗೆ ಡಿಕ್ಕಿ ಹೊಡೆದ ಕಾರು ಬಳಿಕ ನಿಯಂತ್ರಣ ಕಳೆದುಕೊಂಡು ಅಲ್ಲಿ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದು ,ಮನೆಯೊಂದರ ಕಾಂಪೌಂಡ್ ಗೆ ಕೂಡ ಗುದ್ದಿ ನಿಂತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕಾರು ಚಾಲಕ ಹಾಗೂ ಹಾಗೂ ಇವನ ಜೊತೆ ಇದ್ದ ಮೂವರು ಸಹಪ್ರಯಾಣಿಕ ಪರಾರಿಯಾಗಿದ್ದಾರೆ. ಮಲ್ಲೂರು ಕಡೆ ಹೋಗುವವರು ಎಂದು ಹೇಳಲಾಗಿದೆ.ಮೆಲ್ಕಾರ್ ಟ್ರಾಫಿಕ್ ಪೋಲಿಸರು ಸ್ಥಳಕ್ಕೆ ‌ಬೇಟಿ ನೀಡಿದ್ದು,ಪ್ರಕರಣ ದಾಖಲಿಸಿಕೊಂಡಿದ್ದಾರೆ.
    ಮದುವೆಗೆ ನಿಶ್ಚಿತಾರ್ಥ ನಡೆದಿತ್ತು. ಚೈತ್ರ ಅವಳು ಖ್ಯಾತ ಮೇಕಪ್ ಆರ್ಟಿಸ್ಟ್ ದಿ. ಭಾಸ್ಕರ್ ಆಚಾರ್ಯ ಅವರ ಮಗಳು. ಚೈತ್ರ ಮಂಗಳೂರಿನ‌ ಪ್ರಸಿದ್ದ ಬಟ್ಟೆ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ನಿನ್ನೆ ರಜಾ ಪಡೆದುಕೊಂಡಿದ್ದಳು. ಇವಳ ಸ್ನೇಹಿತಳ ರೋಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಉದ್ದೇಶದಿಂದ ತಾಯಿ ಜೊತೆ ಅವಳ ಮನೆಗೆ ಹೋಗುತ್ತಿದ್ದ ವೇಳೆ ಯಮಸ್ವರೂಪಿ ಕಾರು ಇವಳಿಗೆ ಡಿಕ್ಕಿ ಹೊಡೆದಿದೆ. ಚೈತ್ರಳಿಗೆ ನಿಶ್ಚಿತಾರ್ಥ ನಡೆದು ಮದುವೆಗೆ ದಿನ ನಿಗದಿಯಾಗಿದೆ. ಮಾ.3 ರಂದು ಕೊಡ್ಯಡ್ಕದ ಯುವಕನ ಜೊತೆ ಮದುವೆ ನಿಗದಿಯಾಗಿತ್ತು. ಇದೀಗ ಮದುವೆಯಾಗಿ ಗಂಡನ ಮನೆಗೆ ಹೋಗಬೇಕಿದ್ದ ಯುವತಿಯನ್ನು ಕಾರೊಂದು ಮಸಣ ಸೇರುವಂತೆ ಮಾಡಿದೆ.

    ಗಾಂಜಾ ಸೇವಸಿದ್ದರಾ?
    ಗಾಂಜಾ ಸೇವನೆ ಮಾಡಿ ಕಾರು ಓಡಿಸುತ್ತಿದ್ದುದೇ ಅಪಘಾತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಈ ಬಗ್ಗೆ ಪೊಲೀಸರಿಗೆ ಸಂಬಂಧಿಕರು ದೂರು ನೀಡಿದ್ದು,ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

    Post Views: 325

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.