Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ : ಸುಳ್ಳು ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಬಂಟ್ವಾಳ : ಸುಳ್ಳು ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲು

    August 28, 2025
    Share

    ಬಂಟ್ವಾಳ : ಸಜೀಪ ನಡು ಗ್ರಾಮದ ನಿವಾಸಿ ಉಮರ್ ಪಾರೂಕ್ (48) ಎಂಬವರು, ದಿನಾಂಕ 11.06.2025 ರಂದು ಮುಂಜಾನೆ, ಜೀಪ್ ನಲ್ಲಿ ನಂದಾವರದಿಂದ ದೇರಳಕಟ್ಟೆ ಕಡೆಗೆ ತೆರಳುತ್ತಿದ್ದಾಗ, ಸಜೀಪನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ಇಬ್ಬರು ಅಪರಿಚಿತರು, ತನ್ನ ಮೇಲೆ ತಲವಾರು ಬೀಸಿ ತನ್ನನ್ನು ಕೊಲೆ ಮಾಡಲು ಯತ್ನಿಸಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ .68/2025 ಕಲಂ: 109, 324(4) ಜೊತೆ 3(5) BNS-2023 ರಂತೆ ಪ್ರಕರಣ ದಾಖಲಾಗಿರುತ್ತದೆ.

    ಪ್ರಕರಣವನ್ನು ತನಿಖೆ ನಡೆಸಿದಾಗ, ಇದೊಂದು ಸುಳ್ಳು ಪ್ರಕರಣವೆಂದು ಸಾಬೀತಾಗಿದ್ದು, ಈ ಬಗ್ಗೆ ಮಾನ್ಯ ನ್ಯಾಯಾಲಯಕ್ಕೆ ವರದಿ ನೀಡಲಾಗಿರುತ್ತದೆ. ಮುಂದುವರಿದಂತೆ, ಸದ್ರಿ ಉಮರ್ ಪಾರೂಕ್ (48) ರವರು ಸಾರ್ವಜನಿಕರನ್ನು ಪ್ರಚೋದಿಸಿ, ಗಲಭೆ ಉಂಟಾಗುವಂತೆ ಪ್ರಚೋದಿಸಿದ್ದು, ಸಾರ್ವಜನಿಕ ವಲಯದಲ್ಲಿ ಭಯಭೀತಿಯನ್ನು ಸೃಷ್ಟಿಸಿರುವುದಲ್ಲದೇ, ಉದ್ದೇಶಪೂರ್ವಕವಾಗಿ ಸುಳ್ಳು ಆಪಾದನೆ ಮಾಡಿ, ಸುಳ್ಳು ದೂರು ನೀಡಿರುವ ಹಿನ್ನೆಲೆಯಲ್ಲಿ, ಆತನ‌ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ ಕ್ರ : 128/2025, ಕಲಂ:192, 353(1)(b), 230(1), 248(A) BNS ರಂತೆ ಪ್ರಕರಣ ದಾಖಲಿಸಲಾಗಿರುತ್ತದೆ.

    ಪ್ರಕರಣದ ಆರೋಪಿ ಉಮರ್ ಪಾರೂಕ್ ನನ್ನು ದಸ್ತಗಿರಿ ಮಾಡಿ ಎಸಿಜೆ ಮತ್ತು ಜೆಎಂಎಪ್ ಸಿ ನ್ಯಾಯಾಲಯ ಬಂಟ್ವಾಳರವರ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯವು 06.09.2025 ರವರೆಗೆ ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.

    Post Views: 126

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.