Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರ್ತವ್ಯನಿರತ ಸಂಚಾರಿ ಪೊಲೀಸ್ ಸಿಬ್ಬಂದಿಗೆ ಗಾಯಗೊಳಿಸಿ ಪರಾರಿಯಾದ ಆರೋಪಿ ಬಂಟ್ವಾಳದ ನಝೀರ್ ಬಂಧನ..!
    ಇತ್ತೀಚಿನ ಸುದ್ದಿ

    ಕರ್ತವ್ಯನಿರತ ಸಂಚಾರಿ ಪೊಲೀಸ್ ಸಿಬ್ಬಂದಿಗೆ ಗಾಯಗೊಳಿಸಿ ಪರಾರಿಯಾದ ಆರೋಪಿ ಬಂಟ್ವಾಳದ ನಝೀರ್ ಬಂಧನ..!

    October 26, 2024
    Share

    ಕರ್ತವ್ಯನಿರತ ಸಂಚಾರಿ ಪೊಲೀಸ್ ಸಿಬ್ಬಂದಿಯ ಸೂಚನೆಯನ್ನು ನಿರ್ಲಕ್ಷಿಸಿ ಕಾರು ಚಲಾಯಿಸುವ ಮೂಲಕ ಪೊಲೀಸ್‌ಗೆ ಗಾಯಗೊಳಿಸಿ ಪರಾರಿಯಾದ ಆರೋಪದಡಿ ಕೊಡಗು ಪೊಲೀಸರು ಕೃತ್ಯಕ್ಕೆ ಬಳಸಿದ್ದ ಕಾರು ಸಹಿತ ಚಾಲಕನನ್ನು ಬಂಧಿಸಿದ್ದಾರೆ.

    ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಮುನ್ನೂರು ಗ್ರಾಮದ ನಂದವಾರಕೋಟೆ ನಿವಾಸಿ ನಝೀರ್ (27) ಎಂದು ಗುರುತಿಸಲಾಗಿದೆ.

    ಅ.20 ರಂದು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದ ಬಳಿ ಎರಡು ವಾಹನಗಳ ನಡುವೆ ಡಿಕ್ಕಿಯಾಗಿ ವಾಹನದಟ್ಟಣೆ ಹೆಚ್ಚಾಗಿತ್ತು. ಈ ಸಂದರ್ಭ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಸಂಜು.ಎ.ಜಿ (27) ಅವರು ಡಿಕ್ಕಿಪಡಿಸಿದ ನಝೀರ್ ನ ಕಾರನ್ನು ಪಕ್ಕಕ್ಕೆ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಇದನ್ನು ನಿರ್ಲಕ್ಷಿಸಿದ ನಝೀರ್ ಕಾರನ್ನು ಚಲಾಯಿಸಿ ಪರಾರಿಯಾಗಿದ್ದಾನೆ. ಈ ಸಂದರ್ಭ ಸಂಜು ಅವರ ಬಲಗಾಲಿಗೆ ಗಾಯವಾಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

    ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ಮಹೇಶ್ ಕುಮಾರ್, ಮಡಿಕೇರಿ ನಗರ ಸಿಪಿಐ ರಾಜು.ಪಿ.ಕೆ, ಪಿಎಸ್‌ಐ ಲೋಕೇಶ್ ಹಾಗೂ ಸಿಬ್ಬಂದಿಗಳ ತನಿಖಾ ತಂಡ ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.

    Post Views: 182

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.