ಬಂಟ್ವಾಳ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಶಿವಕುಮಾರ್ ಅವರನ್ನು ಬೈಂದೂರು ಪೊಲೀಸ್ ಠಾಣೆಗೆ ವರ್ಗಾವಣೆಗೊಳಿಸಲಾಗಿದೆ.
ಮೂಲತಃ ಸಾಗರ ತಾಲೂಕಿನ ನಿವಾಸಿಯಾಗಿರುವ ಶಿವಕುಮಾರ್ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಅನೇಕ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.
ಈ ಹಿಂದೆ ಬೆಳ್ತಂಗಡಿಯಿ0ದ ವರ್ಗಾವಣೆಯಾಗಿ ಬಂದಿದ್ದ ಅವರು ಕಳೆದ ಎರಡು ವರ್ಷಗಳಿಂದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು.




