Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಬಂಟ್ವಾಳ : ಖೋಟಾ ನೋಟು ಚಲಾವಣೆ – ಆರೋಪಿ ಬಂಧನ
    ಕರಾವಳಿ ಸುದ್ದಿ

    ಬಂಟ್ವಾಳ : ಖೋಟಾ ನೋಟು ಚಲಾವಣೆ – ಆರೋಪಿ ಬಂಧನ

    February 27, 2025
    Share

    ಬಂಟ್ವಾಳ: ಲಕ್ಷಾಂತರ ರೂ ಖೋಟಾ ನೋಟು ಚಲಾವಣೆಗೆ ತಂದು, ಪೊಲೀಸರಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಇದೀಗ ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    2024 ರಲ್ಲಿ ಬಿ.ಸಿ.ರೋಡಿನ ಪೇಟೆಯ ಅಂಗಡಿಗಳಲ್ಲಿ ಖೋಟಾ ನೋಟನ್ನು ಚಲಾವಣೆಗೆ ತಂದು ಪೊಲೀಸರ ಕೈಗೆ ಇಬ್ಬರು ಆರೋಪಿಗಳು ಸಿಕ್ಕಿಬಿದ್ದರೆ ಓರ್ವ ಆರೋಪಿ ಪರಾರಿಯಾಗಿದ್ದ. ಕೇರಳ ನಿವಾಸಿಗಳಾದ ಮಹಮ್ಮದ್ ಸಿ.ಎ. ಮತ್ತು ಖಮರುನ್ನೀಶ ಪೊಲೀಸರ ಕೈಗೆ ಸಿಕ್ಕಿಕೊಂಡಿದ್ದರು. ಆದರೆ ತಲೆಮರೆಸಿಕೊಂಡಿದ್ದ ಇನ್ನೋರ್ವ ಪ್ರಮುಖ ಆರೋಪಿಯಾಗಿದ್ದ ಕೇರಳ ಚೆಂಗಳ ನಿವಾಸಿ ಶರೀಫ್ ಪಿ.ಎ. ಎಂಬಾತನನ್ನು ಇದೀಗ ಬಂಟ್ವಾಳ ಪೊಲೀಸರ ತಂಡ ಕಾಸರಗೋಡಿನ ವಿದ್ಯಾನಗರದಲ್ಲಿ ಬಂಧಿಸಿದೆ.

    ಇವರ ತಂಡ ಕಾರಿನಲ್ಲಿ ಬಂದು ಅಂಗಡಿಗಳಲ್ಲಿ 500 ಮುಖ ಬೆಲೆಯ ಖೋಟಾ ನೋಟುಗಳನ್ನು ಬಹಳ ನಾಜೂಕಾಗಿ ಚಲಾವಣೆ ಮಾಡುತ್ತಿದ್ದರು. 10 ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚು ಅಂದರೆ 100 ರೂಪಾಯಿಗಿಂತ ಕಡಿಮೆ ಬೆಲೆಯ ಸಾಮಾಗ್ರಿಗಳನ್ನು ಪಡೆದು ಚಿಲ್ಲರೆ ಹಣವನ್ನು ಪಡೆದು ನಕಲಿ ಹಣವನ್ನು ಅಸಲಿಯಾಗಿ ಪರಿವರ್ತನೆ ಮಾಡಿ ಹೊರಟು ಹೋಗುತ್ತಿದ್ದರು. ಆದರೆ ಇವರ ಅಸಲಿ ಕಥೆಯ ಬಗ್ಗೆ ಅಂಗಡಿಯ ಮಾಲಕರುಗಳಿಗೆ ಸಂಶಯ ಬಂದು ಪೋಲೀಸರಿಗೆ ಮಾಹಿತಿ ನೀಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಮತ್ತು ಎಸ್.ಐ.ರಾಮಕೃಷ್ಣ ಅವರ ತಂಡ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

    Post Views: 201

    Related Posts

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.