Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ : ಅಗ್ನಿ ಅವಘಡ ಮನೆ ಸಂಪೂರ್ಣ ಭಸ್ಮ
    ಇತ್ತೀಚಿನ ಸುದ್ದಿ

    ಬಂಟ್ವಾಳ : ಅಗ್ನಿ ಅವಘಡ ಮನೆ ಸಂಪೂರ್ಣ ಭಸ್ಮ

    March 31, 2024
    Share

    ಬಂಟ್ವಾಳ : ಆಕಸ್ಮಿಕ‌ ಅಗ್ನಿ ಅವಘಡದಲ್ಲಿ ಕೂಲಿ ಕಾರ್ಮಿಕಯೊಬ್ಬರ ಮನೆ ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ಕುಕ್ಕಿಪಾಡಿ ಗ್ರಾಪಂ ವ್ಯಾಪ್ತಿಯ ಎಲಿಯನಡುಗೋಡು ಎಂಬಲ್ಲಿ ನಡೆದಿದೆ. ಎಲಿಯನಡುಗೋಡು ಗ್ರಾಮದ ಉಪ್ಪಿರ ನಿವಾಸಿ ಮೋನಮ್ಮ ಅವರು ತಮ್ಮಿಬ್ಬರು ಮಕ್ಕಳೊಂದಿಗೆ ಪೂಂಜಾ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರೆಗೆ ತೆರಳಿದ್ದರು. ಜಾತ್ರೆಯಿಂದ ವಾಪಸ್ ಬಂದಾಗ ಮನೆ ಸಂಪೂರ್ಣ ಭಸ್ಮವಾಗಿತ್ತು. ಮನೆಯೊಳಗಿನಿಂದ ಹೊಗೆ ಬರುತ್ತಿರುವುದನ್ನು ಕಂಡ ಸ್ಥಳೀಯರು ಬೆಂಕಿಯನ್ನು ನಂದಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಅದಾಗಲೇ ಬೆಂಕಿ ಮನೆಯನ್ನು ಆವರಿಸಿ ಸಂಪೂರ್ಣ ಭಸ್ಮವಾಗಿತ್ತು. ಮೋನಮ್ಮ ಅವರು ಬಡವರಾಗಿದ್ದು, ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು ತಗಡು ಶೀಟಿನ ಮನೆಯಲ್ಲಿ ‌ವಾಸವಾಗಿದ್ದರು. ಇವರಿಗೆ ಇಬ್ಬರು ಪುತ್ರಿಯರಿದ್ದು, ಓರ್ವಳು ಪದವಿ ವ್ಯಾಸಂಗ ಮಾಡುತ್ತಿದ್ದರೆ, ಇನ್ನೊಬ್ಬಳು ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯಾಗಿದ್ದಾಳೆ. ಮನೆ ಸಂಪೂರ್ಣ ಬೆಂಕಿಗೆ ಆಹುತಿಯಾದ ಪರಿಣಾಮ ಮನೆಯೊಳಗಿನ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿದೆ. ಪದವಿ ವಿದ್ಯಾರ್ಥಿನಿಯ ಪರೀಕ್ಷೆಯ ಪ್ರವೇಶ ಪತ್ರ ಕೂಡ ಬೆಂಕಿಗೆ ಭಸ್ಮವಾಗಿದೆ ಎಂದು ತಿಳಿದು ಬಂದಿದೆ.

    Post Views: 194

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.