Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ : ಪರಂಗಿಪೇಟೆಯಲ್ಲಿ ಅರಣ್ಯ ಇಲಾಖೆ ವಾಹನ ಡಿಕ್ಕಿ, ಪಾದಚಾರಿ ಮೃತ್ಯು..!
    ಇತ್ತೀಚಿನ ಸುದ್ದಿ

    ಬಂಟ್ವಾಳ : ಪರಂಗಿಪೇಟೆಯಲ್ಲಿ ಅರಣ್ಯ ಇಲಾಖೆ ವಾಹನ ಡಿಕ್ಕಿ, ಪಾದಚಾರಿ ಮೃತ್ಯು..!

    March 6, 2024
    Share

    ಬಂಟ್ವಾಳ: ಸರಕಾರಿ ಇಲಾಖೆಗೆ ಸೇರಿದ ವಾಹನವೊಂದು ಪಾದಾಚಾರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ  ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಪರಂಗಿಪೇಟೆ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.

    ಪುತ್ತೂರು ಅರಣ್ಯ ಇಲಾಖೆಗೆ ಸೇರಿದ ವಾಹನ ಇದಾಗಿದ್ದು, ಬಿಸಿರೋಡು ಕಡೆಯಿಂದ ಮಂಗಳೂರು ‌ಕಡೆಗೆ ಸಂಚಾರ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
    ಪುತ್ತೂರು ಅರಣ್ಯ ಇಲಾಖೆಯ ಆರ್.ಎಫ್.ಓ ಸಂಚಾರ ಮಾಡುತ್ತಿದ್ಧ ಬೊಲೆರೋ ವಾಹನ ಪರಂಗಿಪೇಟೆಯ ರಿಕ್ಷಾ ಪಾರ್ಕ್ ನ ಎದುರು ಪಾದಚಾರಿಗೆ ಡಿಕ್ಕಿಹೊಡೆದಿದೆ. ಕೂಡಲೇ ಆತನನ್ನು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿದಾಖಲಿಸಿದ್ರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಲಕ್ಷಾಂತರ ರೂ ಹಣದ ಕಟ್ಟು ಇಲಾಖಾ ವಾಹನದಲ್ಲಿ:

    ಅರಣ್ಯ ಇಲಾಖೆಯ ವಾಹನ ಅಪಘಾತ ಸಂಭವಿಸಿದ ಕೂಡಲೇ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದ. ರಕ್ತಸಿಕ್ತವಾಗಿ ಒದ್ದಾಡುತ್ತಿದ್ದಾತನನ್ನು ಅಲ್ಲೇ ಇದ್ದ ರಿಕ್ಷಾ ಚಾಲಕರಿಬ್ಬರು ಅದೇ ಸರಕಾರಿ ಇಲಾಖೆಯ ವಾಹನದಲ್ಲಿ ಹಾಕಿಕೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಪಾದಾಚಾರಿಯನ್ನು ಬದುಕಿಸುವ ಪ್ರಯತ್ನ ಫಲ ನೀಡಲಿಲ್ಲ. ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಅನಾಮಿಕನ ಜೀವ ಉಳಿಸುವ ನಿಟ್ಟಿನಲ್ಲಿ ಇಲ್ಲಿನ ನಿವಾಸಿಗಳಿಬ್ಬರು ಸರಕಾರಿ ವಾಹನದಲ್ಲಿ ಆಸ್ಪತ್ರೆಗೆ ಸೇರಿಸಿ ವಾಪಾಸು ಬರುತ್ತಿದ್ದ ವೇಳೆ ವಳಚ್ಚಿಲ ಎಂಬಲ್ಲಿಗೆ ಇಲಾಖೆಯ ಚಾಲಕ ಆಗಮಿಸಿ ವಾಹನದೊಳಗಿದ್ದ ಕಡತಗಳನ್ನು ಪಡೆದುಕೊಂಡು ಹೋಗಿದ್ದಾರೆ.
    ಅದರೆ ಈ ಇಲಾಖಾ ವಾಹನದಲ್ಲಿ ಲಕ್ಷಾಂತರ ರೂ ಹಣದ ಕಂತೆ ಇತ್ತು ಎಂದು ಹೇಳಲಾಗಿದೆ. ಚಾಲಕನ ಸೀಟಿನ ಬಳಿಯಲ್ಲಿ ಇತ್ತು ಎನ್ನಲಾಗಿರುವ ಹಣದ ಕಂತೆಯನ್ನು ವಳಚ್ಚಿಲ್ ನಿಂದ ಎಸ್ಕೇಪ್ ಮಾಡಲಾಗಿದೆಯೆ? ಹೀಗೊಂದು ಸಂಶಯ ಇದೀಗ ಸ್ಥಳೀಯವಾಗಿ ಉಂಟಾಗಿದ್ದು, ಇಷ್ಟೊಂದು ಹಣವನ್ನು ಇಲಾಖಾ ವಾಹನದಲ್ಲಿ ರಾತ್ರಿ ವೇಳೆ ಎಲ್ಲಿಗೆ ಕೊಂಡುಹೋಗಲಾಗುತ್ತಿತ್ತು ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಮೇಲಾಧಿಕಾರಿಗಳ ತನಿಖೆಯ ಬಳಿಕವಷ್ಟೇ ಸತ್ಯ ಹೊರಬರಲಿದೆ.

    Post Views: 233

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.