Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ಮಾಡರ್ನ್​ ಡ್ರೆಸ್​​​ಗೆ ಆಕ್ಷೇಪ: ಪತ್ನಿಯ ಬರ್ಬರ ಹತ್ಯೆ
    ಕ್ರೈಂ ಸ್ಟೋರಿ

    ಮಾಡರ್ನ್​ ಡ್ರೆಸ್​​​ಗೆ ಆಕ್ಷೇಪ: ಪತ್ನಿಯ ಬರ್ಬರ ಹತ್ಯೆ

    December 31, 2023
    Share

    ಹಾಸನ: ಪತ್ನಿಯು ಯಾವಾಗಲೂ ತುಂಡುಡುಗೆ ಧರಿಸುತ್ತಾಳೆ ಎಂಬ ಕಾರಣಕ್ಕೆ ಪತಿಯೇ ಪತ್ನಿಯನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.

    ಧಾರವಾಡ ಮೂಲದ ಜ್ಯೋತಿ (22) ಹತ್ಯೆಗೀಡಾದವರು. ಪತಿ ಜೀವನ್‌ ಎಂಬಾತ ಪತ್ನಿಯ ಕತ್ತು ಸೀಳಿ ಕೊಂದು ಪರಾರಿಯಾಗಿದ್ದಾನೆ. ಪತ್ನಿಯನ್ನು ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋದ ಜೀವನ್‌, ಆಕೆಯ ಕತ್ತು ಕುಯ್ದು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಈತನ ಬಂಧನಕ್ಕೆ ಇದೀಗ ಪೊಲೀಸರು ಬಲೆ ಬೀಸಿದ್ದಾರೆ.ಜೀವನ್‌ ಹಾಗೂ ಜ್ಯೋತಿ ಪ್ರೀತಿಸಿ ಮದುವೆಯಾಗಿದ್ದರು. ಒಂದು ವರ್ಷದ ಹಿಂದಷ್ಟೇ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ, ಜ್ಯೋತಿ ಅವರು ಮಾಡರ್ನ್‌ ಉಡುಪುಗಳನ್ನು ಧರಿಸುವುದು ಜೀವನ್‌ಗೆ ಇಷ್ಟವಿರಲಿಲ್ಲ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ಮಧ್ಯೆಯೂ ಜಗಳಗಳು ನಡೆಯುತ್ತಿದ್ದವು. ಪತಿಯ ಆಕ್ಷೇಪದ ನಡುವೆಯೂ ಜ್ಯೋತಿ ಅವರು ತುಂಡುಡುಗೆ ಧರಿಸುತ್ತಿದ್ದರು.ಇದರಿಂದ ಕುಪಿತಗೊಂಡ ಜೀವನ್‌, ಈ ರೀತಿ ಬಟ್ಟೆ ಧರಿಸಿ ಹೊರಗೆ ಹೋಗಬೇಡ ಎಂದು ಗದರಿದ್ದಾರೆ. ಆದರೂ, ಜ್ಯೋತಿ ಅದೇ ಬಟ್ಟೆಯಲ್ಲಿ ತೆರಳಲು ಮುಂದಾಗಿದ್ದಾರೆ. ಆಗ ಕೋಪದಲ್ಲಿದ್ದ ಜೀವನ್‌, ಸರಿ ನಾನೇ ನಿನ್ನನ್ನು ಬಿಟ್ಟು ಬರುತ್ತೇನೆ ಎಂದು ಕರೆದುಕೊಂಡು ಹೋಗಿದ್ದಾನೆ. ರಾಂಪುರ ಬಳಿಯ ಅರಣ್ಯ ಪ್ರದೇಶದಲ್ಲಿ ವಾಹನ ನಿಲ್ಲಿಸಿ, ಪತ್ನಿಯನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಈ ಕುರಿತು ಅರಸೀಕೆರೆ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 495

    Related Posts

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಪೊಲೀಸರನ್ನು ಬಿಡದ ಕಳ್ಳರು: ಕಾನ್ಸ್ಟೇಬಲ್ ಮನೆಗೆ ನುಗ್ಗಿ, ಚಿನ್ನಾಭರಣ ದರೋಡೆ!

    February 27, 2026

    ಸ್ನೇಹಮಯಿ ಕೃಷ್ಣ ವಿರುದ್ಧ ಇನ್ನೊಂದು ಕೇಸ್‌..!!

    February 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.