ಬಂಟ್ವಾಳ:ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ನಾರಾಯಣ (42) ಬಂಧಿತ ಆರೋಪಿ.
ದಿನಾಂಕ:22-09-2025 ರಂದು ದೂರುದಾರರು ಮನೆಯಿಂದ ಕೆಲಸಕ್ಕೆ ಹೋಗಿದ್ದಾಗ ಮನೆಯಲ್ಲಿದ್ದ ಅಪ್ರಾಪ್ತ ವಯಸ್ಸಿನ ಮಗಳಿಗೆ ಬಂಟ್ವಾಳ ತಾಲೂಕು ಎಂಬ ವ್ಯಕ್ತಿಯು ಲೈಂಗಿಕ ಕಿರುಕುಳ ನೀಡಿದ ದೂರಿಗೆ ಸಂಬಂದಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದಿನಾಂಕ 22-09-2025 ರಂದು ಪೋಕ್ಸೋ ಪ್ರಕರಣ ದಾಖಲಾಗಿತ್ತು. ಅದರಂತೆ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.




