Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯ ಔಷಧೀಯ ಖರ್ಚಿಗಾಗಿ ಧನ ಸಹಾಯ ಮಾಡಿದ ಬಂಟ್ವಾಳ ಪೊಲೀಸರು
    ಇತ್ತೀಚಿನ ಸುದ್ದಿ

    ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯ ಔಷಧೀಯ ಖರ್ಚಿಗಾಗಿ ಧನ ಸಹಾಯ ಮಾಡಿದ ಬಂಟ್ವಾಳ ಪೊಲೀಸರು

    September 16, 2023
    Share

    ಬಂಟ್ವಾಳ:ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಪೊಲೀಸರ ಮಾನವೀಯ ಗುಣಗಳ ದರ್ಶವಾಗಿದ್ದು ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯ ಔಷಧೀಯ ಖರ್ಚಿಗಾಗಿ ಧನ ಸಹಾಯ ಮಾಡಿದ್ದಾರೆ.

    ಠಾಣೆಯ ಕೆಲಸಕ್ಕಾಗಿ ಬರುತ್ತಿದ್ದ ವನಿತಾ ಎಂಬ ಮಹಿಳೆಗೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ನೇತ್ರತ್ವದಲ್ಲಿ ಸುಮಾರು ರೂ. 27,000 ಸಾವಿರ ನಗದು ಹಣವನ್ನು ನೀಡಿದ್ದಾರೆ. ಬಂಟ್ವಾಳ ಪೇಟೆ ನಿವಾಸಿಯಾಗಿರುವ ವನಿತ ಅವರು ತೀರಾ ಬಡತನದ ಕುಟುಂಬದಲ್ಲಿ ಜೀವನ ಮಾಡುವವರು. ಅವರು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಶುಚಿತ್ವದ ಕೆಲಸಕ್ಕಾಗಿ ಬರುತ್ತಿದ್ದರು. ಆದರೆ ಇತ್ತೀಚೆಗೆ ಮನೆಯ ಸಮೀಪ ಬಿದ್ದ ಕೈಯ ಮೂಳೆ ಮುರಿತಕ್ಕೆ ಒಳಗಾಗಿ ಕೆಲಸಕ್ಕೆ ಬರಲು ಅಸಾಧ್ಯವಾಗಿತ್ತು.

    ತೀರಾ ಬಡತನದಲ್ಲಿರುವ ವನಿತಾ ಅವರಿಗೆ ಕೆಲಸ ಮಾಡಿದರೆ ಮೂರು ಹೊತ್ತು ಊಟ ಎಂಬ ಪರಿಸ್ಥಿತಿ .ಹಾಗಾಗಿ ಕಳೆದ ಕೆಲವು ತಿಂಗಳ ಕಾಲ ದುಡಿಮೆ ಇಲ್ಲದೆ ಕಷ್ಟದ ಸ್ಥಿತಿಯಲ್ಲಿರುವ ವಿಚಾರ ಪೋಲೀಸರ ಗಮನಕ್ಕೆ ಬಂದಿತು. ಇವರ ಕಷ್ಟವನ್ನು ತಿಳಿದ ಬಂಟ್ವಾಳ ಪೋಲೀಸರು ವನಿತಾ ಅವರ ಮನೆಯ ಖರ್ಚಿಗಾಗಿ ಠಾಣೆಯಲ್ಲಿ ಸಿಬ್ಬಂದಿಗಳಿಂದ ಒಟ್ಟುಗೂಡಿಸಿದ ನಗದು ಹಣವನ್ನು ಅವರಿಗೆ ಹಸ್ತಾಂತರ ಮಾಡಿ ಮಾನವೀಯತೆ ಮೆರೆದಿದ್ದಾರೆ.

    Post Views: 261

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.