ಉಡುಪಿ: ಭಾರತೀಯ ಹವಾಮಾನ ಇಲಾಖೆಯು ನೀಡಿರುವ ಮುನ್ಸೂಚನೆಯಂತೆ ಮೇ 18ರಿಂದ 22ರವರೆಗೆ ಬಂಗಾಳಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಯಿರುವುದರಿಂದ ಸಮುದ್ರದಲ್ಲಿ ಹೆಚ್ಚಿನ ಗಾಳಿ (ಗಂಟೆಗೆ ಸುಮಾರು 45ರಿಂದ 55 ಕಿ.ಮಿ.ವೇಗ) ಬೀಸುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಕೆ ನೀಡಿದೆ. ಅಲ್ಲದೇ ಮುಂದಿನ 5 ದಿನಗಳ ಕಾಲ ಹಳದಿ ಅಲರ್ಟ್ ಇರುವುದರಿಂದ ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ ಮತ್ತು ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಹಾಗೂ ಈಗಾಗಲೇ ತೆರಳಿರುವ ಮೀನುಗಾರರು ಕೂಡಲೇ ದಡ ಸೇರು ವಂತೆ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳು ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ ಈ ಕುರಿತು ಯಾವುದೇ ಅಗತ್ಯಗಳಿಗೆ ದೂರವಾಣಿ ಸಂಖ್ಯೆ: 0820-2574802 ಹಾಗೂ ತುರ್ತು ಸೇವೆಗೆ ಶುಲ್ಕರಹಿತ ನಂ. 1077ನ್ನು ಸಂಪರ್ಕಿಸುವಂತೆ ಕೋರಲಾಗಿದೆ.