Facebook Twitter Instagram
    Friday, August 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು- ಟಿಪ್ಪರ್ ಚಾಲಕ ವಶಕ್ಕೆ
    ಇತ್ತೀಚಿನ ಸುದ್ದಿ

    ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು- ಟಿಪ್ಪರ್ ಚಾಲಕ ವಶಕ್ಕೆ

    August 7, 2026
    Share

    ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

    ಗುರುವಾರ ಸಂಜೆ ಸುಮಾರು 6.30 ಗಂಟೆಗೆ ಕಲ್ಲಡ್ಕ ಕಡೆಯಿಂದ ಲೊರೆಟ್ಟೊ ಕಡೆಗೆ ತೆರಳುತ್ತಿದ್ದ KA-19-AF-8073 ನೋಂದಣಿಯ ಟಿಪ್ಪರ್ ಲಾರಿಯನ್ನು ಪಲ್ಲಮಜಲು ನಿವಾಸಿ ಸಲ್ಮಾನ್ ಫಾರುಕ್ (33) ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು, ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ KA-70-H-5059 ನೋಂದಣಿಯ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ.

    ಅಪಘಾತದ ತೀವ್ರತೆಗೆ ಸ್ಕೂಟರ್ ಸವಾರ ಪಾಣೆಮಂಗಳೂರು ಸಮೀಪದ ಬೋರುಗುಡ್ಡೆ ದಯಾನಂದ ಹಾಗೂ ಹಿಂಬದಿಯಲ್ಲಿ ಪ್ರಯಾಣಿಸುತ್ತಿದ್ದ ನಾಯಿಲ ನಿವಾಸಿ ಯಶ್ವಂತ್ ಕುಲಾಲ್ ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರ ನೆರವಿನಿಂದ ಇಬ್ಬರನ್ನೂ ತಕ್ಷಣ ಮಂಗಳೂರು ಜಿಲ್ಲಾ ಸರ್ಕಾರಿ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಹಸವಾರ ಯಶ್ವಂತ್ ಕುಲಾಲ್ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದರು. ಬಳಿಕ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ದಯಾನಂದ ಕೂಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದರಿಂದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಇಬ್ಬರಿಗೆ ಏರಿಕೆಯಾಗಿದೆ.ಇವರಿಬ್ಬರು ಕೂಡ ಸಂಬಂಧಿಗಳಾಗಿದ್ದಾರೆ.

    ಘಟನೆ ಸಂಬಂಧ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 99/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 281, 125(ಎ) ಹಾಗೂ 106(1) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಟಿಪ್ಪರ್ ಚಾಲಕ ಸಲ್ಮಾನ್ ಫಾರುಕ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಪ್ರಕರಣದ ಕುರಿತು ಮುಂದಿನ ತನಿಖೆ ಹಾಗೂ ಕಾನೂನು ಕ್ರಮ ಮುಂದುವರಿದಿದೆ. ಈ ದುರ್ಘಟನೆ ಬಿ.ಸಿ.ರೋಡ್ ಪ್ರದೇಶದಲ್ಲಿ ಆತಂಕ ಮೂಡಿಸಿದ್ದು, ಎನ್.ಜಿ. ಸರ್ಕಲ್‌ನಲ್ಲಿ ಭಾರೀ ವಾಹನಗಳ ಅತಿವೇಗ ಮತ್ತು ನಿರ್ಲಕ್ಷ್ಯ ಚಾಲನೆಗೆ ಕಡಿವಾಣ ಹಾಕುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

    Post Views: 8

    Related Posts

    ಪಡುಬಿದ್ರಿ: ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಗೆ ಗುಂಡಿಕ್ಕಿ ಹತ್ಯೆ

    August 7, 2026

    ಮಂಗಳೂರು: ಮಾದಕವಸ್ತು ಸೇವನೆ ಆರೋಪ- 6 ಮಂದಿಯ ಬಂಧನ

    August 7, 2026

    ಉಡುಪಿ: ರೂಪದರ್ಶಿ ಕೃತಿ ಬಂಗೇರ ಆತ್ಮಹತ್ಯೆ..!!

    August 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಡುಬಿದ್ರಿ: ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಗೆ ಗುಂಡಿಕ್ಕಿ ಹತ್ಯೆ

    August 7, 2026

    ಮಂಗಳೂರು: ಮಾದಕವಸ್ತು ಸೇವನೆ ಆರೋಪ- 6 ಮಂದಿಯ ಬಂಧನ

    August 7, 2026

    ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು- ಟಿಪ್ಪರ್ ಚಾಲಕ ವಶಕ್ಕೆ

    August 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.