Facebook Twitter Instagram
    Friday, July 31
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ದುಬೈಗೆ ತೆರಳುವ ಮುನ್ನವೇ ಎಂಡಿಎಂಎ ಜಾಲದಲ್ಲಿ ಸಿಕ್ಕಿಬಿದ್ದ ಯುವಕ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ದುಬೈಗೆ ತೆರಳುವ ಮುನ್ನವೇ ಎಂಡಿಎಂಎ ಜಾಲದಲ್ಲಿ ಸಿಕ್ಕಿಬಿದ್ದ ಯುವಕ

    July 31, 2026
    Share

    ಬೆಳ್ತಂಗಡಿ: ಬುಧವಾರ ಸಂಜೆ ಉದ್ಯೋಗಕ್ಕಾಗಿ ದುಬೈಗೆ ಹೋಗಲು ಸಿದ್ಧನಾಗಿದ್ದ 21 ವರ್ಷದ ಯುವಕನೊಬ್ಬ ಜೈಲುಪಾಲಾಗಿದ್ದಾನೆ. ಮಾದಕ ದ್ರವ್ಯ ಜಾಲಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಆತನನ್ನು ಬಂಧಿಸಿ  15.41 ಲಕ್ಷ ರೂ. ಮೌಲ್ಯದ  ಎಂಡಿಎಂಎ, ಗಾಂಜಾ ವಶಪಡಿಸಿಕೊಂಡಿದ್ದಾರೆ.

    ಬಂಧಿತ ಆರೋಪಿಯನ್ನು ಕುವೆಟ್ಟು ಕುವೆಟ್ಟು ಗ್ರಾಮದ ಸುಣ್ಣತ್ ಕೆರೆ ನಿವಾಸಿ ತ್ವಲಹ್ @ ಅನ್ಸಾರ್ (21) ಎಂದು ಗುರುತಿಸಲಾಗಿದೆ.

    ಪೊಲೀಸರ ಪ್ರಕಾರ, ಸಬ್ ಇನ್ಸ್‌ಪೆಕ್ಟರ್ ಆನಂದ್ ಎಂ ಮತ್ತು ಅವರ ತಂಡ ಜುಲೈ 29 ರಂದು ರಾತ್ರಿ 8 ಗಂಟೆ ಸುಮಾರಿಗೆ ದಿನನಿತ್ಯದ ಗಸ್ತು ತಿರುಗುತ್ತಿದ್ದಾಗ, ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಖಾಸಗಿ ಕಟ್ಟಡದ ಮುಂದೆ ನಿಲ್ಲಿಸಿದ್ದ ಆಟೋರಿಕ್ಷಾ (ಕೆಎ -18-ಎ -7203) ಬಳಿ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ವರ್ತಿಸುತ್ತಿರುವುದನ್ನು ಗಮನಿಸಿದ್ದಾರೆ. ಪೊಲೀಸ್ ವಾಹನವನ್ನು ಗಮನಿಸಿದ ಶಂಕಿತ ವ್ಯಕ್ತಿ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ. ಆದರೆ ಪೊಲೀಸರು ಆತನನ್ನು ತಡೆದು ವಶಕ್ಕೆ ಪಡೆದಿದ್ದಾರೆ.

    ವಿಚಾರಣೆಯ ಸಮಯದಲ್ಲಿ, ಕುವೆಟ್ಟು ಗ್ರಾಮದ ಆಲಾದಿಕೊಟ್ಟಿಗೆ ನಿವಾಸಿ ಹಮ್ಜತ್ ಕರಾರ್(31) ಎಂಬಾತನಿಗೆ 20 ಸಾವಿರ ಮುಂಗಡ ಹಣ ನೀಡಿ ಗಾಂಜಾ ಖರೀದಿಸಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡಲು ಯತ್ನಿಸುತ್ತಿರುವುದಾಗಿ ತಿಳಿಸಿದ್ದಾನೆ. ಹಮ್ಜತ್ ಕರಾರ್ KA-21-MA-4990 ಕಾರಿನಲ್ಲಿ ಬಂದು 500 ಗ್ರಾಂ ಗಾಂಜಾವನ್ನು ನೀಡಿದ್ದು, ಪೊಲೀಸರು ಬರುತ್ತಿರುವುದನ್ನು ಕಂಡು ಕಾರನ್ನು ಬಿಟ್ಟು ಪರಾರಿಯಾಗಿರುವುದಾಗಿ ತಿಳಿಸಿದ್ದಾನೆ.

    ಬಳಿಕ ಕಾರನ್ನು ತಪಾಸಣೆ ನಡೆಸಿದಾಗ ಕಾರಿನೊಳಗೆ 7 ಲಕ್ಷದ 60 ಸಾವಿರ ಮೌಲ್ಯದ 76 ಗ್ರಾಂ ಎಮ್.ಡಿ.ಎಮ್.ಎ ಮಾದಕ ವಸ್ತು ಪತ್ತೆಯಾಗಿದೆ. ಆರೋಪಿ ತ್ವಲಹ್ @ಅನ್ಸಾರ್ ಎಂಬಾತನನ್ನು ತಪಾಸಣೆ ಮಾಡಿದಾಗ ಆತನ ಬಳಿ ಸುಮಾರು 1,498 ರೂಪಾಯಿ ಮೌಲ್ಯದ 20 ಗ್ರಾಂ ಗಾಂಜಾ, 30 ಸಾವಿರ ಮೌಲ್ಯದ ಒಂದು ಮೊಬೈಲ್, 200 ರೂಪಾಯಿ ಮೌಲ್ಯದ ಇತರ ವಸ್ತುಗಳು ಪತ್ತೆಯಾಗಿದೆ.

    ಆರೋಪಿಗಳಿಂದ‌ ಒಟ್ಟು 20 ಗ್ರಾಂ ಗಾಂಜಾ, 76 ಗ್ರಾಂ MDMA ಮಾದಕವಸ್ತು, ಒಂದು KA-21-MA-4990 ಕಾರು, ಒಂದು KA-18-A-7203 ಆಟೋ ರಿಕ್ಷಾ, ಒಂದು ಮೊಬೈಲ್ ಫೋನ್ ಸೇರಿ ಒಟ್ಟು 15 ಲಕ್ಷದ 41 ಸಾವಿರದ 698 ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(C), 20(b)(ii)(A) ಹಾಗೂ 27Aರ ಅಡಿಯಲ್ಲಿ ಹಮ್ಜತ್ ಕರಾರ್ (31) ಮತ್ತು ತ್ವಲಹ್ @ ಅನ್ಸಾರ್(21) ವಿರುದ್ಧ ಜು.29 ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

    ಆರೋಪಿ ತ್ವಲಹ್ @ ಅನ್ಸಾರ್(21) ನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ನ್ಯಾಯಾಧೀಶರ ಮನೆಗೆ ಜು.30 ರಂದು ಸಂಜೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    ದುಬೈಗೆ ಹೋಗಬೇಕಾದವ ಜೈಲಿಗೆ

    ಗಾಂಜಾ ಮತ್ತು ಎಮ್.ಡಿ.ಎಮ್.ಎ ಮಾರಾಟ ಮಾಡಲು ಯತ್ನಿಸಿ ಬೆಳ್ತಂಗಡಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಆರೋಪಿ ಕುವೆಟ್ಟು ಗ್ರಾಮದ ಸುಣ್ಣತ್ ಕೆರೆ ತ್ವಲಹ್ @ ಅನ್ಸಾರ್(21) ಎಂಬಾತ ಜು.30 (ಇಂದು) ಸಂಜೆ ದುಬೈ ಉದ್ಯೋಗಕ್ಕಾಗಿ ಹೊಗಲು ತಯಾರಿ ಮಾಡಿದ್ದಾ ಆದ್ರೆ ಮಾದಕವಸ್ತು ಪ್ರಕರಣದಲ್ಲಿ ಸಿಕ್ಕಿಬಿದ್ದು ಸಂಜೆ ಜೈಲುಪಾಲಾಗುವಂತಾಗಿದೆ.

    ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮತ್ತು ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಆನಂದ್.ಎಂ ಮತ್ತು ಸಿಕಂದರ್ ಪಾಷ ನೇತೃತ್ವದಲ್ಲಿ ಸಿಬ್ಬಂದಿ ಸತೀಶ್ ನಾಯ್ಕ್,ಪ್ರಕಾಶ್ ಪೂಜಾರಿ,ಶ್ರೀನಿವಾಸ್ ,ಹನುಮಂತ, ನಂದ, ಜಗದೀಶ್ ಅತ್ತಾಜೆ, ಪ್ರಮೋದ್,ದುಂಡಪ್ಪ ಪೂಜಾರಿ,ಶ್ರೀನಿವಾಸ್, ಚಾಲಕ ಸತೀಶ್ ಹಾಗೂ ಸೋಕೋ ತಂಡದ ಕಾವ್ಯಶ್ರೀ, ಅರ್ಪಿತಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

    Post Views: 10

    Related Posts

    ಅಂಬ್ಯಲೆನ್ಸ್‌ನಲ್ಲೇ ಡ್ರಗ್ಸ್ ಪೂರೈಕೆ ದಂಧೆ; ಎಸ್ಕೇಪ್ ಆಗಿರುವ ಜಲೀಲ್ ಬಾಬಾ ವಿದೇಶಕ್ಕೆ ಪರಾರಿ ಶಂಕೆ!

    July 31, 2026

    ಉಡುಪಿ: ನಡುರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ!!

    July 31, 2026

    ಆಗಸ್ಟ್ 7 ಮತ್ತು 8ರಂದು 16ನೇ ಆವೃತ್ತಿಯ ಆಳ್ವಾಸ ಪ್ರಗತಿ 2026

    July 30, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಅಂಬ್ಯಲೆನ್ಸ್‌ನಲ್ಲೇ ಡ್ರಗ್ಸ್ ಪೂರೈಕೆ ದಂಧೆ; ಎಸ್ಕೇಪ್ ಆಗಿರುವ ಜಲೀಲ್ ಬಾಬಾ ವಿದೇಶಕ್ಕೆ ಪರಾರಿ ಶಂಕೆ!

    July 31, 2026

    ಬೆಳ್ತಂಗಡಿ: ದುಬೈಗೆ ತೆರಳುವ ಮುನ್ನವೇ ಎಂಡಿಎಂಎ ಜಾಲದಲ್ಲಿ ಸಿಕ್ಕಿಬಿದ್ದ ಯುವಕ

    July 31, 2026

    ಉಡುಪಿ: ನಡುರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ!!

    July 31, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.