Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಡಿವೈಡರ್‌ಗೆ ಬೈಕ್‌ ಢಿಕ್ಕಿ- ಸವಾರ ಸ್ಥಳದಲ್ಲೇ ಮೃತ್ಯು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಡಿವೈಡರ್‌ಗೆ ಬೈಕ್‌ ಢಿಕ್ಕಿ- ಸವಾರ ಸ್ಥಳದಲ್ಲೇ ಮೃತ್ಯು

    October 11, 2024
    Share

    ಬೆಳ್ತಂಗಡಿ : ಡಿವೈಡರ್‌ಗೆ ಬೈಕ್‌ ಢಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾಯನಕೆರೆ ಶಕ್ತಿನಗರದ ಬಳಿ ಅ. 10 ರಂದು ಸಂಭವಿಸಿದೆ.

    ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್‌ (30) ಮೃತ ದುರ್ದೈವಿ.ಸುಧೀಶ್‌ ಅವರು ಯಾವುದೋ ಕಾರ್ಯನಿಮಿತ್ತ ಉಪ್ಪಿನಂಗಡಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ನಡೆದಿದೆ. ಈ ಅವಘಡದಲ್ಲಿ ಸುಧೀಶ್ ಅವರ ತಲೆಗೆ ಪೆಟ್ಟಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದಲ್ಲಿ ಡಿವೈಡರ್‌ನ ಎರಡು ವಿದ್ಯುದ್ದೀಪಕ್ಕೆ ಹಾನಿಯುಂಟಾಗಿದೆ ಎಂದು ತಿಳಿದು ಬಂದಿದೆ.ಸುಧೀಶ್‌ ಅವರು ಪೈಂಟಿಂಗ್‌ ವೃತ್ತಿ ನಡೆಸುತ್ತಿದ್ದರು. ಸುಧೀಶ್ ಅವರು ತಂದೆ, ಇಬ್ಬರು ಸಹೋದರಿಯರು, ಇಬ್ಬರು ಸಹೋದರರನ್ನು ಅಗಲಿದ್ದಾರೆ.

    Post Views: 182

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.